karavali

ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.06. ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ಅಪರಚಿತ ವ್ಯಕ್ತಿಯೋರ್ವ ನುಗ್ಗಿದ ಘಟನೆ ವರದಿಯಾಗಿದೆ. ಕಾವಲುಗಾರ ನನ್ನು ಕಂಡು ಈತ ಪರಾರಿಯಾಗಿದ್ದಾನೆ. ನ್ಯಾಯಾಲಯ ಕಟ್ಟಡದೊಳಗೆ ನುಗ್ಗಿದ ಈತ ಜಿಲ್ಲಾ ನ್ಯಾಯಾಧೀಶ ರವರ ಕಚೇರಿ ತನಕ ತೆರಳಿದ್ದು , ಈತನ ಬಳಿ ಕಬ್ಬಿಣದ ರಾಡ್ ಕಂಡು ಬಂದಿದೆ. ಈತ ಕಳವಿಗಾಗಿ ಬಂದಿದ್ದನೇ ಅಥವಾ ಕಡತಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಒಳನುಗ್ಗಿದ್ದನೇ ಎಂಬ ಬಗ್ಗೆ ಸ್ಪಷ್ಟ ಗೊಂಡಿಲ್ಲ. ವಿದ್ಯಾನಗರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ಆರಂಭಿಸಿದ್ದಾರೆ.  

ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.06. ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಿರಿಯಡ್ಕ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳಾದ ಮಂಜುನಾಥ ಮರಬದ ಹಾಗೂ ಕಸ್ತೂರಿ ಕುಕನೂರು ರವರ ಮಾರ್ಗದರ್ಶನದಂತೆ ಠಾಣೆಯ ಸಿಬ್ಬಂದಿಗಳಾದ ಗುರುರಾಜ್ ದಯಾನಂದ ಪ್ರಭು ಹಾಗೂ ಕೃಷ್ಣ ಪೂಜಾರಿಯವರು ಆರೋಪಿಯನ್ನು ಬಂಧಿಸಿದ್ದಾರೆ. ಕಾಫಿ ಒಂದರಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಮೊಬೈಲ್‌ ನಲ್ಲಿ ಪಬ್‌ಜಿ ಆನ್‌ ಲೈನ್ ಆಟವಾಡುವ ಹವ್ಯಾಸವಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿದ್ದ ಯುವತಿಯನ್ನು ಕೆಲಿಸ್ತಾ ಫೆರಾವೊ (18)ಎಂದು ಗುರುತಿಸಲಾಗಿದ್ದು, ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ ಗೆ ಸೇರ್ಪಡೆಗೊಂಡಿದ್ದರು. ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ

ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ Read More »

ಕರಾವಳಿ

ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಯಾಬುದ್ದೀನ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com. ಕಡಬ, ಆ. 05. ಪಕ್ಷಕ್ಕೆ ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್, ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೆ ಸದಸ್ಯತ್ವ ನೋಂದಾವಣಿ ಹಾಗೂ ಪಕ್ಷದ ಆಂತರಿಕ ಚುನಾವಣೆಯನ್ನು ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. ಅದರಂತೆ ಈ ಬಾರೀ ಸುಳ್ಯ ಕ್ಷೇತ್ರದಿಂದ ಪ್ರಬಲ ಪೈಪೋಟಿಯಾಗಿ ಶಿಹಾಬುದ್ದೀನ್ ರವರು ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆ. 03ರಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಸಿಯಾಬುದ್ದೀನ್ ಅವರು ಪಕ್ಷದ ನಾಯಕರೊಂದಿಗೆ ಒಳ್ಳೆಯ ಸಂಬಂಧ

ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಯಾಬುದ್ದೀನ್ ನಾಮಪತ್ರ ಸಲ್ಲಿಕೆ Read More »

ಕರಾವಳಿ

ಬಂಟ್ವಾಳ; ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.05. ದೇವಸ್ಥಾನದ ಅರ್ಚಕರೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾದ ವ್ಯಕ್ತಿಯನ್ನು ಚೆನ್ನೈತ್ತೋಡಿ ಗ್ರಾಮದ ದೊಡ್ಡದಳಿಕೆ ನಿವಾಸಿ ಹರೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಕೇಶವ ಪೂಜಾರಿ ಅವರು ಹರೀಶ್ ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಹರೀಶ್ ಮೇ 30 ರಂದು ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ವಾಪಸ್ ಬಂದಿಲ್ಲ ಎಂದು ತಿಳಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಬಂಟ್ವಾಳ; ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ          

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಆರೋಪಿಗೆ ಒಟ್ಟು 37 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಆರೋಪಿಯನ್ನು, ಕೋಟ ನಿವಾಸಿ ಸಚಿನ್ ಪೂಜಾರಿ (26)ಎಂದು ಗುರುತಿಸಲಾಗಿದೆ. 42 ಸಾಕ್ಷಿಗಳ ಪೈಕಿ 24 ಮಂದಿಯನ್ನು ವಿಚಾರಣೆಗೊಳಪಡಿಸಿ, 50 ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ, ವಶಪಡಿಸಿಕೊಂಡ ಆಭರಣ ಸೇರಿದಂತೆ ಸಂತ್ರಸ್ತೆಯ ಸಾಕ್ಷ್ಯ ಮತ್ತು ಇತರ

ಉಡುಪಿ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ                   ಆರೋಪಿಗೆ 37 ವರ್ಷ ಜೈಲು ಶಿಕ್ಷೆ           Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತಿಮ ಹಂತ ತಲುಪಿದ ಮಂಗಳೂರು- ಬೆಂಗಳೂರು ರೈಲು ಮಾರ್ಗದ ದುರಸ್ತಿ ಕಾರ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.05. ಬೆಂಗಳೂರು – ಮಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಹಗಲ್‌ ನ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ದುರಸ್ತಿ ಕಾರ್ಯವು ಅಂತಿಮ ಹಂತ ತಲುಪಿದೆ. ಘಟನಾ ಸ್ಥಳದಲ್ಲಿ ರೈಲು ಇಂಜಿನ್ ನ ಪ್ರಾಯೋಗಿಕ ಸಂಚಾರ ಯಶಸ್ವಿ ಕಂಡಿದೆ. ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದಾಗಿನಿಂದ ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದೆ. ಜುಲೈ 3ರಂದು ಭೂಕುಸಿತದ ಸ್ಥಳದಲ್ಲಿ ತಡೆಗೋಡೆ ಗೋಡೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಆದಷ್ಟು ಬೇಗನೆ ರೈಲು

ಅಂತಿಮ ಹಂತ ತಲುಪಿದ ಮಂಗಳೂರು- ಬೆಂಗಳೂರು ರೈಲು ಮಾರ್ಗದ ದುರಸ್ತಿ ಕಾರ್ಯ Read More »

ಕರಾವಳಿ

ಮಾನವೀಯತೆ ಮೆರೆದ ಕರಾವಳಿ ಚಾಲಕ ಮತ್ತು ನಿರ್ವಾಹಕ…!                 ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ                         

(ನ್ಯೂಸ್ ಕಡಬ) newskadaba.com ಉಡುಪಿ, ಆ.05. ಅಸ್ವಸ್ಥಗೊಂಡ ಯುವತಿಗಾಗಿ ಚಾಲಕ ಹಾಗೂ ನಿರ್ವಾಹಕ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ ನಲ್ಲಿ ಈ ಘಟನೆ ನಡೆದಿದ್ದು, ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣವೇ ಬಸ್ ಅನ್ನು ಹತ್ತಿರದ ಖಾಸಗಿ ಆಸ್ಪತ್ರೆಯ

ಮಾನವೀಯತೆ ಮೆರೆದ ಕರಾವಳಿ ಚಾಲಕ ಮತ್ತು ನಿರ್ವಾಹಕ…!                 ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ                          Read More »

ಕರಾವಳಿ

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು      

(ನ್ಯೂಸ್ ಕಡಬ) newskadaba.com ಸುಳ್ಯ, ಆ.05. ಬೈಕ್ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.ಮೃತಪಟ್ಟವರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು       Read More »

ಕರಾವಳಿ, ಕ್ರೈಮ್ ನ್ಯೂಸ್

‘ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’          ವೇದವ್ಯಾಸ ಕಾಮತ್             

(ನ್ಯೂಸ್ ಕಡಬ) newskadaba.com ಮಂಗಳೂರು, ಆ.03.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಸುಮಾರು

‘ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’          ವೇದವ್ಯಾಸ ಕಾಮತ್              Read More »

ಕರಾವಳಿ
Scroll to Top