karavali

ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಡ್ಯಾಂ ಗಳಿಗೆ ಭರ್ಜರಿ ನೀರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭೂಕುಸಿತ ಕಂಡು ಬಂದಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಸುಳ್ಯ ತಾಲೂಕು, ಉಡುಪಿಯ ಬೈಂದೂರು ವ್ಯಾಪ್ತಿಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆ ಕೆಲಗ್ರಾಮಗಳಲ್ಲಿ […]

ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಆರ್ಭಟ ಡ್ಯಾಂ ಗಳಿಗೆ ಭರ್ಜರಿ ನೀರು..! Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.02.  ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಎಂ ಶಶಿಧರ ಹೆಗ್ಡೆ ನೇತೃತ್ವದಲ್ಲಿ ಚಿಲಿಂಬಿ ಆದರ್ಶನಗರದಲ್ಲಿ ಸನ್ಮಾನ ಮಾಡಲಾಯಿತು. ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಎಚ್ಚೆತ್ತ ಬಸ್‌ನ‌‌ ಚಾಲಕ ಮತ್ತು‌ ನಿರ್ವಾಹಕ ಪ್ರಯಾಣಿಕರಿದ್ದ ಬಸ್ ಅನ್ನು ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆ ಬಾಗಿಲಿಗೆ ತೆಗೆದುಕೊಂಡು ಹೋಗಿ ವಿದ್ಯಾರ್ಥಿಯ ಪ್ರಾಣ ರಕ್ಷಣೆ ಮಾಡಿದ ಬಸ್ ಚಾಲಕ ನಿರ್ವಾಹಕರಾದ ಗಜರಾಜ್ ಕುಂದರ್ ಪೂಜಾರಿ, ಮಹೇಶ್ ಪೂಜಾರಿ,ಸುರೇಶ್ ಬಜ್ಪೆಯವರನ್ನು

ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ ನಿರ್ವಾಹಕರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ

(ನ್ಯೂಸ್ ಕಡಬ) newskadaba.com ಉಡುಪಿ, ಆ.02. ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ ಎನ್ನಲಾಗಿದೆ.  

ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

   ದಕ್ಷಿಣ ಕನ್ನಡಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ನೆರೆ, ಸಾಕಷ್ಟು ಹಾನಿ ಉಂಟಾಗಿದೆ. ಈ ಹಿನ್ನೆಲೆ ಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಳೆ ಹಾನಿ ಪ್ರದೇಶಗಳ ಭೇಟಿ ನೀಡಿದ ನಂತರ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

   ದಕ್ಷಿಣ ಕನ್ನಡಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ Read More »

ಕರಾವಳಿ

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.01. ಮಳೆಯ ಆರ್ಭಟ ಮುಂದುವರಿದಿದ್ದು, ನೆರೆಯಿಂದ ಆವೃತವಾದ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

ಚಾರ್ಮಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ…! ರಸ್ತೆ ಸಂಚಾರ ಬಂದ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಜು.30.    ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಡಿ ಘಾಟ್‌ ನಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ಘಾಟ್ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ ಎನ್ನಲಾಗಿದೆ. ಇನ್ನು ಘಾಟ್

ಚಾರ್ಮಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ…! ರಸ್ತೆ ಸಂಚಾರ ಬಂದ್ Read More »

ಕರಾವಳಿ

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ 

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.29. ಕಡಲ್ಕೊರೆತ ಪರಿಣಾಮ ಬೀಚ್ ರಸ್ತೆ ಕುಸಿಯುವ ಭೀತಿ ಉಂಟಾಗಿದ್ದು, ಸ್ಥಳೀಯರು ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ.ಕಡಲ್ಕೊರೆತ ಉಂಟಾಗುತ್ತಿರುವ ನಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಬಳಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂಫ್ಲ್ಯಾಗ್ ಬೀಚ್‌ಗೆ ತೆರಳುವ ಸಂಪರ್ಕ ರಸ್ತೆಯ ಅಡಿಭಾಗಕ್ಕೆ ಅಲೆಗಳು ಅಪ್ಪಳಿಸುತ್ತಿವೆ. ಹೀಗಾಗಿ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ರಸ್ತೆ ಕುಸಿಯುವ ಸಾಧ್ಯತೆ ಇರುವ ಹಿನ್ನೆಲೆ ಬೀಚ್‌ಗೆ ತೆರಳುವ ರಸ್ತೆಯನ್ನು ಬ್ಯಾರಿಕೇಡ್ ಇಟ್ಟು ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ. ಜುಲೈ 31ವರೆಗೆ ಬ್ಲೂಫ್ಲ್ಯಾಗ್

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ  Read More »

ಕರಾವಳಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರ ಬಂದ್ ಆಗುತ್ತಿವೆ. ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ರದ್ದಾಗಿದೆ. ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿದೆ. ಹಳಿ ದುರಸ್ತಿಪಡಿಸುವ ಕಾರ್ಯ ಮುಂದುವರಿದಿದ್ದು, ಇದರಿಂದ ಕೆಲ ರೈಲುಗಳ ಸಂಚಾರ ಜುಲೈ ೨೯ರವರೆಗೆ ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈಲು ಹಳಿಯ ಕೆಳಭಾಗದಲ್ಲಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ      Read More »

ಕರಾವಳಿ

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರು ಮೇಲಕ್ಕೆತ್ತಿ ರಕ್ಷಣೆ ಮಾಡಿ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಸಂಭವಿಸಿದೆ.ಮಳೆಯಿಂದಾಗಿ ಮೋರಿಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಸ್ವಲ್ಪ ಹೆಚ್ಚು ಕಮ್ಮಿ ಆದರೂ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗುವ ಸಾಧ್ಯತೆ ಇತ್ತು. ಇದನ್ನು ಗಮನಿಸಿದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಮೋರಿಗೆ ಇಳಿದು ವ್ಯಕ್ತಿಯನ್ನು

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು Read More »

ಕರಾವಳಿ

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ. 18 ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ
Scroll to Top