karavali

ಪ್ರಧಾನ ಮಂತ್ರಿ ಆವಾಝ್ ಯೋಜನೆ- ಫೆಬ್ರವರಿ 28 ರಂದು ಫಲಾನುಭವಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಇಡ್ಯಾ ಗ್ರಾಮದ ಸರ್ವೆ ನಂ. 16 ಪಿ 1 ರಲ್ಲಿ 600 ಮನೆಗಳನ್ನು ಜಿ+3 ಮಾದರಿಯಲ್ಲಿ ನಿರ್ಮಿಸಿ ವಿತರಿಸುವ ಯೋಜನೆಗೆ ಈಗಾಗಲೇ ಆಯ್ಕೆಯಾಗಿರುವ ಫಲಾನುಭವಿಗಳಿಂದ ವಂತಿಕೆ ಕ್ರೋಡೀಕರಿಸುವ ಬಗ್ಗೆ ಈಗಾಗಲೇ 600 ಫಲಾನುಭವಿಗಳಿಗೆ ನೋಟಿಸ್ ಜಾರಿ ಮಾಡಿದ್ದು 390 ಫಲಾನುಭವಿಗಳು ವಂತಿಕೆಯನ್ನು ನೀಡಿದ್ದು ಉಳಿಕೆ 210 ಫಲಾನುಭವಿಗಳು ವಂತಿಕೆ ಪಾವತಿಸಬೇಕಾಗಿರುತ್ತದೆ. ಸದರಿ ಯೋಜನೆಗೆ ರೂ. 40 ಕೋಟಿ […]

ಪ್ರಧಾನ ಮಂತ್ರಿ ಆವಾಝ್ ಯೋಜನೆ- ಫೆಬ್ರವರಿ 28 ರಂದು ಫಲಾನುಭವಿಗಳ ಸಭೆ Read More »

ಕರಾವಳಿ

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತವಾದ ಸಂವಿಧಾನ. ಭಾರತೀಯರಲ್ಲಿ ಸಮಾನತೆ, ಭಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥವು ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ ಆಧಾರವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಮಂಗಳವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ Read More »

ಕರಾವಳಿ

ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ನಿವಾಸಕ್ಕೆ ಕಸಾಪ ರಾಜ್ಯಾಧ್ಯಕ್ಷ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಕ.ಸಾ.ಪ ಇದರ  ರಾಜ್ಯ ಅಧ್ಯಕ್ಷರಾದ ಶ್ರೀ ನಾಡೋಜ ಡಾ ಮಹೇಶ್ ಜೋಷಿಯವರು  ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ಅವರ ಮಂಗಳೂರಿನ ಕದ್ರಿಯ  ನಿವಾಸಕ್ಕೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು. ಕನ್ನಡ  ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸುವ ಬಗ್ಗೆ ಮತ್ತು ಜನರ ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ ಅನ್ನು ಹೇಗೆ ತಲುಪಬಹುದು ಎಂಬ ವಿಚಾರದ ಬಗ್ಗೆ ಗಹನವಾದ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಕಸಾಪ ಇದರ

ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ನಿವಾಸಕ್ಕೆ ಕಸಾಪ ರಾಜ್ಯಾಧ್ಯಕ್ಷ ಭೇಟಿ Read More »

ಕರಾವಳಿ, ಕರ್ನಾಟಕ

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 22. ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕಾಡುಹಂದಿ ದಾಳಿ ಮಾಡಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಗುರುವಾರ ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಸಂದರ್ಭ, ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಪರ್ಧಾತ್ಮಕ ಪರೀಕ್ಷೆ- ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಫೆಬ್ರವರಿ 20ರಿಂದ ಮಾರ್ಚ್ 7ರ ವರೆಗೆ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಗರದ ಐಓನ್ ಡಿಜಿಟಲ್ ಝೋನ್, ಬೋಂದೆಲ್ ನಲ್ಲಿ ನಡೆಸಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು

ಸ್ಪರ್ಧಾತ್ಮಕ ಪರೀಕ್ಷೆ- ನಿಷೇಧಾಜ್ಞೆ Read More »

ಕರಾವಳಿ

ಪ್ರಚಾರ ಬಯಸದ ಮೌನ ಸಾಧಕ – ಕೆ.ಟಿ ಗಟ್ಟಿ; ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಮೀನಾಕ್ಷಿ ರಾಮಚಂದ್ರ ಅಭಿಪ್ರಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಪ್ರಚಾರ ಬಯಸದ ಸಹೃದಯಿ ಕೆ.ಟಿ ಗಟ್ಟಿಯವರು ಮೌನವಾಗಿಯೇ ನಿರಂತರ ಸಾಧನೆಯಿಂದ ಸಾಹಿತ್ಯ ಲೋಕದ ತಾರೆಯಾದವರು ಎಂದು ಡಾ । ಮೀನಾಕ್ಷಿ ರಾಮಚಂದ್ರ ಅಭಿಪ್ರಾಯಪಟ್ಟರು. ನಮ್ಮನ್ನಗಲಿದ ಖ್ಯಾತ ಕಾದಂಬರಿಕಾರ ಕೆ.ಟಿ ಗಟ್ಟಿಯವರಿಗೆ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕದಿಂದ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಘಟಕದ ಅಧ್ಯಕ್ಷ ಡಾ.ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ, ರಘು ಇಡ್ಕಿದು, ಬೆನೆಟ್ ಜಿ ಅಮ್ಮನ್ನ ನುಡಿ

ಪ್ರಚಾರ ಬಯಸದ ಮೌನ ಸಾಧಕ – ಕೆ.ಟಿ ಗಟ್ಟಿ; ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಮೀನಾಕ್ಷಿ ರಾಮಚಂದ್ರ ಅಭಿಪ್ರಾಯ Read More »

ಕರಾವಳಿ

ಕಂಬಳವನ್ನು ರಾಜ್ಯಕ್ರೀಡೆಯಾಗಿ ಘೋಷಿಸಲು ಮಂಜುನಾಥ ಭಂಡಾರಿ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳು, ಕಂಬಳ ಸಮಿತಿಯ ಸದಸ್ಯರು ಹಾಗೂ ಕಂಬಳ ಆಯೋಜಕರ ಸಭೆ ನಡೆಸಿ ಕಂಬಳ ಸಮಿತಿ ರಚಿಸುವಂತೆ ಸಭಾಪತಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ಈವರೆಗೆ ಸಮಿತಿ ರಚನೆಯಾಗದೇ ಇರುವುದನ್ನು ಸರಕಾರದ ಗಮನಕ್ಕೆ ತಂದು ಶೀಘ್ರವೇ ಸಮಿತಿ ರಚಿಸುವಂತೆ ವಿಧಾನಮಂಡಲದ 2024ರ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಎಂ. ಮಂಜುನಾಥ್ ಭಂಡಾರಿ ಅವರು ಸರಕಾರವನ್ನು ಆಗ್ರಹಿಸಿದರು. ಕಳೆದ ವರ್ಷ ಪುತ್ತೂರು ಶಾಸಕ ಅಶೋಕ ಕುಮಾರ್‌ ರೈ ನೇತೃತ್ವದಲ್ಲಿ

ಕಂಬಳವನ್ನು ರಾಜ್ಯಕ್ರೀಡೆಯಾಗಿ ಘೋಷಿಸಲು ಮಂಜುನಾಥ ಭಂಡಾರಿ ಆಗ್ರಹ Read More »

ಕರಾವಳಿ, ಕರ್ನಾಟಕ

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಇಲ್ಲಿನ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆಯಲಾದ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ದರ್ಬೆ ಬೈಪಾಸ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ನೆಲ್ಲಿಕಟ್ಟೆ ಚಿಕ್ಕಪುತ್ತೂರು ನಿವಾಸಿ ದಿವಾಕರ ಮಡಿವಾಳ ಎಂದು ಗುರುತಿಸಲಾಗಿದೆ. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದಿವಾಕರ ಅವರು ಗಂಭೀರ ಗಾಯಗೊಂಡಿದ್ದರು. ಈ ಸಂದರ್ಭ ಅದೇ ದಾರಿಯಾಗಿ ಹೋಗುತ್ತಿದ್ದ ಅರುಣ್ ಕುಮಾರ್ ಪುತ್ತಿಲರವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ, ಸುಳ್ಯ ತಾಲೂಕಿನ ವಿವಿಧೆಡೆ ಸಂವಿಧಾನ ಜಾಥಾ- ಅದ್ಧೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಮಂಡೆಕೋಲು ಗ್ರಾಮ  ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥವು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮಕ್ಕೆ ಮಂಗಳವಾರದಂದು ಆಗಮಿಸಿದೆ. ಗ್ರಾಮದ ಶಾಲೆಯ ವಿದ್ಯಾರ್ಥಿಗಳು, ಮಹಿಳಾ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಹಾಗೂ ಪೂರ್ಣಕುಂಭ ಸ್ವಾಗತದೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖಾಧಿಕಾರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ನೋಡೆಲ್ ಅಧಿಕಾರಿ, ಗ್ರಾ.ಪಂ. ಅಧ್ಯಕ್ಷರು ಉಪಾಧ್ಯಕ್ಷರು,

ಕಡಬ, ಸುಳ್ಯ ತಾಲೂಕಿನ ವಿವಿಧೆಡೆ ಸಂವಿಧಾನ ಜಾಥಾ- ಅದ್ಧೂರಿ ಸ್ವಾಗತ Read More »

ಕರಾವಳಿ
Scroll to Top