karavali

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಸಂಚಾರಿ ಠಾಣಾ ಸಿಬ್ಬಂದಿ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಸೆ. 17 ರಂದು ಬಂಟ್ವಾಳದ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ. 19 ರಂದು ಅವರನ್ನು ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಅವರು ಮಲಗಿದ್ದ ವೇಳೆ ಟೇಬಲ್‌ ಮೇಲೆ ಇರಿಸಲಾಗಿದ್ದ ಎರಡು ಮೊಬೈಲ್ ಫೋನ್ […]

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಮನೆಯ ಕೋಣೆಯಲ್ಲಿ ಮಲಗಿದ್ದ ಯುವತಿಗೆ ಕೋಣೆಯ ಕಿಟಕಿ ಬಾಗಿಲು ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ತಾಲೂಕಿನ ಕಲ್ಲಡ್ಕ ಸಮೀಫದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ವಿಶ್ವನಾಥ ಎಂದು ಗುರುತಿಸಲಾಗಿದೆ. ದೂರುದಾರರ ಪ್ರಕಾರ, ಮನೆಯ ಕೋಣೆಯ ಕಿಟಕಿಯ ಪರದೆಯನ್ನು ಸರಿಸಿ ಬಳಿಕ ಕಿಟಕಿ ಮೂಲಕ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ವಿಶ್ವನಾಥ ಇಣುಕಿ ನೋಡುತ್ತಿದ್ದ. ಈತ

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಎಚ್‍.ಡಿ.ಎಫ್‍.ಸಿ “ಚಕ್ರಗಳ ಮೇಲೆ ಬ್ಯಾಂಕ್” ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಎಚ್.ಡಿ.ಎಫ್.ಸಿ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ “ಚಕ್ರಗಳ ಮೇಲೆ ಬ್ಯಾಂಕ್” ಯೋಜನೆಗೆ ಗುರುವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕ್ ಗಳ ಉಗಮ ಸ್ಥಳವಾಗಿದ್ದು ಎಚ್.ಡಿ.ಎಫ್.ಸಿ ಬ್ಯಾಂಕ್ ಚಕ್ರಗಳ ಮೇಲೆ ಬ್ಯಾಂಕ್ ಸೇವೆಯ ಮೂಲಕ ಹಳ್ಳಿ ಹಳ್ಳಿಗಳ ಜನರನ್ನು ತಲುಪಲು ಮುಂದಾಗಿರುವುದು ಶ್ಲಾಘನೀಯ. ಈ ಮೂಲಕ ಹಳ್ಳಿಭಾಗಗಳ ಜನರು

ಮಂಗಳೂರು: ಎಚ್‍.ಡಿ.ಎಫ್‍.ಸಿ “ಚಕ್ರಗಳ ಮೇಲೆ ಬ್ಯಾಂಕ್” ಲೋಕಾರ್ಪಣೆ Read More »

ಕರಾವಳಿ

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2023ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ಮೈದಾನದ ಎದುರಿನಲ್ಲಿರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಆರಂಭವಾಗಿದೆ. ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೊಡಿಯಾಳ, ಆಲೆಟ್ಟಿ

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ Read More »

ಕರಾವಳಿ

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಯಾವ ಕ್ರೀಡೆಯಲ್ಲಿಯೂ ಸಹ ಧರ್ಮ ಪಂಥ ಮೇಲು ಕೀಳು ಎಂಬ ಭಾವನೆ ಇಲ್ಲ. ಕ್ರೀಡೆಯಲ್ಲಿ ಇದನ್ನು ನೋಡಲು ಸಾಧ್ಯವಿಲ್ಲ. ಕ್ರೀಡೆ ಒಂದು ಒಗ್ಗಟ್ಟಿನ ಮಂತ್ರ. ನಮ್ಮ ಮಕ್ಕಳ ಶೈಕ್ಷಣಿಕದೊಂದಿಗೆ ಸಾಮರಸ್ಯವನ್ನು ಮೂಡಿಸಲು ಕ್ರೀಡೆಯು ಪ್ರಧಾನ ಅಂಗವಾಗಿದೆ. ನಾವೆಲ್ಲರೂ ಎಲೆ ಮರೆ ಕಾಯಿಯಂತೆ ಪ್ರಾಥಮಿಕ ಶಾಲಾ ಮಕ್ಕಳಂತೆ ಕ್ರೀಡೆಗೆ ಬಂದಿದ್ದೇವೆ. ನಿಮ್ಮಲ್ಲಿ ಯಾವ ಪ್ರತಿಭೆ ಇದೆಯೋ ಅದು ನಿಮ್ಮನ್ನು ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಹಾಗೂ ದೇಶವನ್ನೇ ಪ್ರತಿನಿಧಿಸಲಿಕ್ಕೆ ಸಾಧ್ಯವಾಗಬಹುದು.

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ Read More »

ಕರಾವಳಿ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಶಾಲಾ ಶಿಕ್ಷಣ ಇಲಾಖೆ ಸುಳ್ಯ ದ.ಕ. ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಶಾಲಾ ಮೈದಾನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷ ಸುರೇಶ್ ಉಳುವಾರು ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ಗ್ರಾಮ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ (ಲಿ.) ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆ ಒಟ್ಟು 88 ಲಕ್ಷ ರೂ. ಪಾವತಿಸುವಂತೆ ನ್ಯಾಯಾಲಯ ತೀರ್ಪು ನೀಡಿತ್ತು. ಅದರಂತೆ ಹಣ ಪಾವತಿಗೆ ವಿಫಲರಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆ, ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 21. ಮನೆ ಮೇಲೆ ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದ ಘಟನೆ ನರಿಕೊಂಬು‌ ಗ್ರಾಮದಿಂದ ವರದಿಯಾಗಿದೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಎಂಬವರ ಮನೆಗೆ ಸೋಮವಾರದಂದು ಸಿಡಿಲು ಬಡಿದಿದ್ದು, ಅಪಾರ ನಷ್ಟ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಪಿಡಿಓ. ಮಾಜಿ ಅಧ್ಯಕ್ಷೆ ಉಪಾಧ್ಯಕ್ಷರು ಪ್ರಮುಖರು ಬೇಟಿ ನೀಡಿದ್ದಾರೆ.

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಆಟೋದಲ್ಲಿ ಬಂದು ಪ್ರಯಾಣಿಕನಿಗೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ತಾಲೂಕಿನ ಹಳೆಗೇಟು ಬಳಿ‌ ನಡೆದಿದೆ. ಹಲ್ಲೆಗೊಳಗಾದವರನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾರುಗುಂದ ಗ್ರಾಮದ ನಿವಾಸಿ ದರ್ಶನ್‌ ‌ಎಂದು ಗುರುತಿಸಲಾಗಿದೆ. ದರ್ಶನ್ ವೈಯಕ್ತಿಕ ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದು, ಮಂಗಳವಾರ ರಾತ್ರಿ 11.15ರ ಸುಮಾರಿಗೆ ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳುವ ಉದ್ದೇಶದಿಂದ ಸುಳ್ಯ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿ ರಸ್ತೆ ಬದಿ ಬಾಡಿಗೆ

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 16 ಎಎಸ್ಐ ಗಳಿಗೆ ಪಿಎಸ್ಐ ಆಗಿ ಭಡ್ತಿ – ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಹಲವು ವರ್ಷಗಳಿಂದ ಮುಂಭಡ್ತಿಗೆ ಕಾಯುತ್ತಿದ್ದ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರದಂದು ಆದೇಶ ಹೊರಡಿಸಿದ್ದಾರೆ. ಭಡ್ತಿ ಪಡೆದಿರುವವರನ್ನು ವಿವಿಧ ಪೊಲೀಸ್ ಠಾಣೆಗಳಿಗೆ ನಿಯೋಜಿಸಲಾಗಿದೆ. ಪಿಎಸ್‌ಐ ಆಗಿ ಭಡ್ತಿಯಾಗಿರುವ ಕಂಕನಾಡಿ ನಗರ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್ಪಿಯ ಆನಂದ ಬಿ.

ಮಂಗಳೂರು: 16 ಎಎಸ್ಐ ಗಳಿಗೆ ಪಿಎಸ್ಐ ಆಗಿ ಭಡ್ತಿ – ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ Read More »

ಕರಾವಳಿ, ಕರ್ನಾಟಕ
Scroll to Top