karavali

ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 16. ನಿಲ್ಲಿಸಿದ ಲಾರಿಯೊಂದು ಮುಂದಕ್ಕೆ ಚಲಿಸಿ ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ಹಾಜರಾ (20) ಹಾಗೂ ಖತೀಜಾತುಲ್ ಆಫಿಯಾ (18) ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ನಲ್ಲಿ ‌ಸರ್ವೀಸ್ ರಸ್ತೆಯಲ್ಲಿ ಚಾಲಕನೋರ್ವ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ […]

ನಿಲ್ಲಿಸಿದ್ದ ಲಾರಿ ಹಠಾತ್ ಚಲಿಸಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಢಿಕ್ಕಿ- ಇಬ್ಬರಿಗೆ ಗಾಯ Read More »

ಕರಾವಳಿ

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14. ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಒಡಿಶಾ ಮೂಲದ  ಬಾಬುಲ್ಲ(38) ಮತ್ತು ಭಾಸ್ಕರ್(40) ಎಂದು ಗುರುತಿಸಲಾಗಿದೆ. ಇವರಿಬ್ಬರು ಮನೆಯೊಂದಕ್ಕೆ ತಂದ ಗ್ರಾನೈಟ್ ನ್ನು ಲಾರಿಯಿಂದ ಖಾಲಿ ಮಾಡುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13. ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರದಂದು ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿಯೋರ್ವರು ಬೆಂಗಳೂರು ನಗರದ ಬಂಡೇಪಾಳ್ಯ ಠಾಣೆಗೆ ದೂರು ನೀಡಿದ್ದರು. ಇದಕ್ಕೆ

ಉದ್ಯಮಿಗೆ ವಂಚನೆ ಆರೋಪ – ಚೈತ್ರಾ ಕುಂದಾಪುರ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ – ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ

(ನ್ಯೂಸ್ ಕಡಬ) newskadaba.com. ಮಂಗಳೂರು, ಆ. 30. ಧರ್ಮಸ್ಥಳದ ಸೌಜನ್ಯಾ ಹತ್ಯೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಸೆ. 11ರಿಂದ 13ರ ವರೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ‘ಸೌಜನ್ಯಾ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಬಾಲಕೃಷ್ಣ ಡಿ.ಬಿ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಧರಣಿ ಸತ್ಯಾಗ್ರಹ ಸೆ. 11ರಂದು ಬೆಳಗ್ಗೆ 10ಕ್ಕೆ ಆರಂಭಗೊಂಡು ಮೂರು ದಿನಗಳ ಕಾಲ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಬಳಿಕ ಪ್ರಕರಣದ ಮರುತನಿಖೆ ನಡೆಸುವಂತೆ ಜಿಲ್ಲಾಧಿಕಾರಿ

ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ – ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರ ಜೊತೆ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಝೀರ್ ಹಂಸ ಎಂಬಾತನು ಗಲಾಟೆ ಮಾಡಿ ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಬಳಿಕ ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಉರುಳಿಗೆ ಬಿದ್ದು ಚಿರತೆ ಮೃತಪಟ್ಟ ಪ್ರಕರಣ – ಇಬ್ಬರ ಬಂಧನ

(ನ್ಯೂಸ್ ಕಡಬ) newdkadaba.com ಸುಳ್ಯ, ಆ. 30. ಸುಮಾರು ಒಂದೂವರೆ ವರ್ಷದ ಚಿರತೆ ಮರಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾದ ಘಟನೆ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿಂದ ವರದಿಯಾಗಿದೆ. ಬಂಧಿತರನ್ನು ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂದು ಗುರುತಿಸಲಾಗಿದೆ. ಮಂಗಳವಾರದಂದು ಮಧ್ಯಾಹ್ನದ ವೇಳೆಗೆ ಚಿರತೆ ಉರುಳಿಗೆ ಬಿದ್ದಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೊರೆತ ಮಾಹಿತಿಯಂತೆ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಚಿರತೆ

ಸುಳ್ಯ: ಉರುಳಿಗೆ ಬಿದ್ದು ಚಿರತೆ ಮೃತಪಟ್ಟ ಪ್ರಕರಣ – ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರಪಾಲಾಗಿದ್ದ ಯುವಕರಿಬ್ಬರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaa.com ಬೈಂದೂರು, ಆ. 28. ಇಲ್ಲಿನ ಶಿರೂರು ಅಳ್ವೆಗದ್ದೆ ಎಂಬಲ್ಲಿ ರವಿವಾರದಂದು ಸಂಜೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಇಂದು ಪತ್ತೆಯಾಗಿದೆ. ದೋಣಿ ಮಗುಚಿ ಬಿದ್ದ 300 ಮೀಟರ್ ವ್ಯಾಪ್ತಿಯಲ್ಲಿ ಗಂಗೊಳ್ಳಿ ಮುಸ್ತಾಫಾ ಅವರ ಮಗ ಮುಹಮ್ಮದ್ ಮುಸಾಬ್ (22) ಹಾಗೂ ಬಾವು ನೂರುಲ್ ಅಮೀನ್ ಅವರ ಮಗ ನಝಾನ್ (24) ಅವರ ಮೃತದೇಹವು ದೊರೆತಿದೆ.

ಸಮುದ್ರಪಾಲಾಗಿದ್ದ ಯುವಕರಿಬ್ಬರ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆ. 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ. 31ರ ಗುರುವಾರ ಸಂಜೆ 4 ಗಂಟೆಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್

ಆ. 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »

ಕರಾವಳಿ

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಬಿಜೈ ಬಳಿ ನಡೆದಿದೆ. ಬಂಧಿತರನ್ನು ಚಿದಾನಂದ ಹಾಗೂ ಸ್ವಾಮಿ ಗೌಡ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 5,750 ರೂ. ಮೌಲ್ಯದ 90 ಎಮ್ ಎಲ್ ನ 128 ಮದ್ಯದ ಪ್ಯಾಕೇಟ್ ಮತ್ತು 2,500 ರೂ. ನಗದನ್ನು ವಶಕ್ಕೆ ಪಡೆಯಲಾಗಿದ್ದು, ಉರ್ವ ಠಾಣೆಯಲ್ಲಿ ಅಬಕಾರಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ.

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿನಗರ ನಾಲ್ಯಪದವಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹರ್ಷದ್‌ ಕೌಶಲ್‌ (17) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಈತ ಕರಾಟೆ ಪಟುವೂ ಆಗಿದ್ದ. ಗುರುವಾರದಂದು ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಕೌಶಲ್‌ ಈ ಕೃತ್ಯವೆಸಗಿದ್ದಾನೆ‌. ಇನ್ನು ಮನೆಯಲ್ಲಿ ಕೌಶಲ್‌ ಹಾಗೂ ಅಜ್ಜಿ ಮಾತ್ರ ಇದ್ದು, ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆಯ ವೇಳೆ

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top