karavali

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅಡ್ಯಾರ್ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಈತ ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತ ಸ್ರಾವವಾಗಿದ್ದು, ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 25. ಲೋನ್ ಆ್ಯಪ್ ಮೂಲಕ ಸಾಲ ಪಡೆದ ಯುವತಿಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟು, ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿರೋರ್ವಳು ಗೂಗಲ್ ಪ್ಲೇ ಸ್ಟೋರ್‌ನ ‘ಕ್ವಿಕ್ ಮನಿ’ ಎಂಬ ಲೋನ್ ಆ್ಯಪ್ ಮೂಲಕ 10,000 ರೂ. ಸಾಲಕ್ಕೆ ಅರ್ಜಿ ಹಾಕಿದ್ದಳು. ತಕ್ಷಣ ಆಕೆಯ ಖಾತೆಗೆ 7,500 ರೂ. ಜಮೆಯಾಗಿತ್ತು. ಕೆಲವು ದಿನಗಳ ಬಳಿಕ ಸಾಲ ಮರುಪಾವತಿ ಮಾಡಿದ್ದಳು.

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಹಾಡಹಗಲೇ ಯುವಕನೊಬ್ಬನ ಚೂರಿಯಿರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯು ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ. ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನುಗಾರಿಕೆ ಅಭಿವೃದ್ಧಿಯಲ್ಲಿ ತಾಂತ್ರಿಕ ತರಬೇತಿ ಮುಖ್ಯ- ಚೇತನ್ ಬೇಂಗ್ರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಮೀನುಗಾರಿಕೆ ಚಟುವಟಿಕೆಗಳಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದ್ದು, ಜಿಲ್ಲೆಯ ಬೋಟ್ ಮಾಲೀಕರು ಮತ್ತು ಮೀನುಗಾರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಟ್ರಾಲ್ ಬೋಟ್ ಅಸೋಸಿಯೇಷನ್ ನ ಅಧ್ಯಕ್ಷ ಚೇತನ್ ಬೆಂಗ್ರೆ ಅವರು ಕರೆ ನೀಡಿದರು. ಅವರು ಇತ್ತೀಚೆಗೆ ನಗರದ ಮೀನುಗಾರಿಕೆ ಕಾಲೇಜಿನಲ್ಲಿ ತಾಂತ್ರಿಕ ಮತ್ತು ತಂತ್ರಜ್ಞಾನ ವಿಭಾಗ ಹಾಗೂ ಹೈದರಾಬಾದ್ ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 3 ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ

ಮೀನುಗಾರಿಕೆ ಅಭಿವೃದ್ಧಿಯಲ್ಲಿ ತಾಂತ್ರಿಕ ತರಬೇತಿ ಮುಖ್ಯ- ಚೇತನ್ ಬೇಂಗ್ರೆ Read More »

ಕರಾವಳಿ

ಆ. 27ರಂದು ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಆ. 27ರಂದು ನಗರದ ಬಾವುಟಗುಡ್ಡೆಯ ಸೈಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇತ್ತೀಚಿಗೆ ಸೈನ್ಯದಿಂದ ಸೇವಾ ನಿವೃತ್ತಿ ಪಡೆದವರು ಹಾಗೂ ಇದುವರೆಗೆ ಸದಸ್ಯತ್ವವನ್ನು ಪಡೆಯದ ಇತರೆ ಮಾಜಿ ಸೈನಿಕರು ಈ ಸಂದರ್ಭದಲ್ಲಿ ಸದಸ್ಯತ್ವ ಪಡೆಯಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್: 9739875269, 9844611608 ಸಂಪರ್ಕಿಸುವಂತೆ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ. 27ರಂದು ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ Read More »

ಕರಾವಳಿ

ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಆ. 24. ಆಲಂಕಾರು ಗ್ರಾಮದ ನೆಕ್ಕರೆ ಅಂಗನವಾಡಿ ಕೇಂದ್ರದಲ್ಲಿ 9 ವರ್ಷ ಕಾರ್ಯಕರ್ತೆಯಾಗಿ ಸೇವೆಸಲ್ಲಿಸಿ ಇದೀಗ ಕಡಬ ಪಿಜಕ್ಕಳ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆಯಾಗಿರುವ ಶ್ರೀಮತಿ ನಯನಾಕ್ಷಿ ಅವರನ್ನು ನೆಕ್ಕರೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಮಕ್ಕಳ ಪೋಷಕರು ಮತ್ತು ಸ್ತ್ರೀಶಕ್ತಿ ಗುಂಪಿನ ಸದಸ್ಯರ ಸಹಯೋಗದಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅನಿತಾ ಇವರು ವಹಿಸಿದ್ದರು ಮತ್ತು ಅಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ

ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ Read More »

ಕರಾವಳಿ

ಬೆಳ್ಳಾರೆ: ಐತಿಹಾಸಿಕ ಬಂಗ್ಲೆಗುಡ್ಡೆಯಲ್ಲಿ ಬುಶ್ರಾ ವಿದ್ಯಾಸಂಸ್ಥೆ ಕಾವು ಹಾಗೂ ಸ್ನೇಹಿತರ ಕಲಾ ಸಂಘದ ವತಿಯಿಂದ ಅಮರಕ್ರಾಂತಿಯ ನೆನಪು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 24. ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಮತ್ತು ಸ್ನೇಹಿತರ ಕಲಾ ಸಂಘ(ರಿ.) ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ 1837ರಲ್ಲಿ ನಡೆದ ಅಮರ ಸುಳ್ಯದ ರೈತಾಪಿ ಜನರು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವ ಅಮರ ಕ್ರಾಂತಿಯ ನೆನಪು ಕಾರ್ಯಕ್ರಮವು ಬುಧವಾರದಂದು ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆ ಬೆಳ್ಳಾರೆಯಲ್ಲಿ ನಡೆಯಿತು. ಐತಿಹಾಸಿಕ ಸ್ಥಳ ಮತ್ತು ಮುಂದಿನ ಯೋಜನೆ ಬಗ್ಗೆ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ

ಬೆಳ್ಳಾರೆ: ಐತಿಹಾಸಿಕ ಬಂಗ್ಲೆಗುಡ್ಡೆಯಲ್ಲಿ ಬುಶ್ರಾ ವಿದ್ಯಾಸಂಸ್ಥೆ ಕಾವು ಹಾಗೂ ಸ್ನೇಹಿತರ ಕಲಾ ಸಂಘದ ವತಿಯಿಂದ ಅಮರಕ್ರಾಂತಿಯ ನೆನಪು ಕಾರ್ಯಕ್ರಮ Read More »

ಕರಾವಳಿ

ಯುವಕ ಕಾಣೆ- ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ಸುರತ್ಕಲ್ ಶ್ರೀನಿವಾಸ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದ ವೆಂಕಟ ಮುರಳಿ ಕೃಷ್ಣ (22) ಎಂಬಾತ ಆ. 11ರಿಂದ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: ಎತ್ತರ 5.6 ಅಡಿ, ಗೋಧಿ ಮೈಬಣ್ಣ, ಸಪೂರ ಶರೀರ, ಎಡ ಮೂಗಿನ ಬಳಿಕಪ್ಪು ಎಳ್ಳು ಮಚ್ಚೆ ಇರುತ್ತದೆ. ಕಾಣೆಯಾಗುವಾಗ ಟೀ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ, ತೆಲುಗು, ಇಂಗ್ಲೀಷ್ ಮಾತಾನಾಡುತ್ತಾರೆ. ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ 0824-9480805360, 2220540 ಅಥವಾ

ಯುವಕ ಕಾಣೆ- ಪತ್ತೆಗೆ ಕೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆಯ ಚಂದ್ರಯಾನ-3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿ ದಿನದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಲಾಯಿತು.   ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ-3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಿ ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ

ಚಂದ್ರಯಾನ-3 ಯಶಸ್ಸಿಗೆ ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ ವಿಶೇಷ ಸೇವೆ Read More »

ಕರಾವಳಿ

ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 22. ನಾಗಾರಾಧನೆಯ ಪುಣ್ಯ ಕ್ಷೇತ್ರವಾದ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡಾದಿಂದ 5 ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಮಂಗಳೂರು ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಝೋನಲ್ ಹೆಡ್ ಶ್ರೀಮತಿ ಗಾಯತ್ರಿ ಆರ್ ಅವರು ಕುಕ್ಕೇ ಶ್ರೀ ದೇವಳಕ್ಕೆ ಸುಮಾರು 1 ಲಕ್ಷದ 25 ಸಾವಿರ ರೂ. ಮೌಲ್ಯದ 5 ಕಂಪ್ಯೂಟರ್‌ಗಳನ್ನು ಮಂಜೂರಾತಿಗೊಳಿಸಿದ್ದರು. ಅದರಂತೆ ಸೋಮವಾರದಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ

ಬ್ಯಾಂಕ್ ಆಫ್ ಬರೋಡಾದಿಂದ ಕುಕ್ಕೇ ಶ್ರೀ ದೇವಳಕ್ಕೆ ಕಂಪ್ಯೂಟರ್ ಕೊಡುಗೆ Read More »

ಕರಾವಳಿ
Scroll to Top