karavali

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ಶಾಲನ್ನು ಕೊರಳಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ದಿವ್ಯಾ ಎಂದು ಗುರುತಿಸಲಾಗಿದೆ. ಆದಿತ್ಯವಾರದಂದು ರಜೆ ಹಿನ್ನೆಲೆ ಪತಿ ಜಯರಾಮ ಮತ್ತು ಮಕ್ಕಳು ಬೆಳಂದೂರಿನಲ್ಲಿರುವ ತಂಗಿಯ ಮನೆಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ಹಿಂದಿರುಗುವಾಗ ಮನೆಯಲ್ಲಿ ದಿವ್ಯಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮೃತರ ತಾಯಿ ನೀಡಿದ […]

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಬಾಲಕರ ವಿದ್ಯಾರ್ಥಿ ನಿಲಯದಿಂದ ಶಾಲೆಗೆಂದು ತೆರಳಿದ್ದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್(15) ಮತ್ತು ಗಗನ್(14) ಎಂದು ಗುರುತಿಸಲಾಗಿದೆ. ಇವರಿಬ್ಬರು ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲಿ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನಲೆ ವಿದ್ಯಾರ್ಥಿ

ಶಾಲೆಗೆಂದು ತೆರಳಿದ್ದ ಇಬ್ಬರು ಹಾಸ್ಟೆಲ್ ವಿದ್ಯಾರ್ಥಿಗಳು ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 22. ತಾಲೂಕಿನ ಗೃಹರಕ್ಷಕ ದಳದ ನೂತನ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಮತ್ತು ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಭೂಮಿ ಪೂಜೆಯ ವೈದಿಕ ವಿಧಿವಿಧಾನವನ್ನು ಪ್ರಸಾದ್ ಕೆದಿಲಾಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಮಾಂಡೆಂಟ್ ಮಾತನಾಡಿ, ಇನ್ನು ಆರು ತಿಂಗಳ ಒಳಗೆ ಕಟ್ಟಡ ನಿರ್ಮಾಣವಾಗಿ ಗೃಹರಕ್ಷಕರ ಉಪಯೋಗಕ್ಕೆ ದೊರಕುವಂತಾಗಬೇಕು ಎಂದು ಶುಭ ಹಾರೈಸಿದರು. ಇನ್ನು ಮುಂದೆ

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಕರಾವಳಿ

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಂಪ್ ವೆಲ್ ಬಳಿ ಭಾನುವಾರದಂದು ರಾತ್ರಿ ಸಂಭವಿಸಿದೆ. ಮೃತರನ್ನು ಮೆಫಿನ್ ಥಾಮ್ಸ್ (25) ಎಂದು ಗುರುತಿಸಲಾಗಿದೆ. ಬೈಕೊಂದು ಇನ್ನೊಂದು ಬೈಕ್ ಗೆ ಹಿಂಬದಿನಿಂದ ಢಿಕ್ಕಿ ಹೊಡೆದಿದ್ದು, ಈ ವೇಳೆ ಮೆಫಿನ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಇಂದು ಕರಾವಳಿಯಾದ್ಯಂತ ನಾಗರ ಪಂಚಮಿ ಹಬ್ಬವನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ವಿವಿಧ ಕುಟುಂಬಗಳ ಮನೆಗಳಲ್ಲೇ ನಾಗಾರಾಧನೆ ನಡೆಯುತ್ತದೆ. ಕರಾವಳಿಯಲ್ಲಿ ನಾಗಾರಾಧನೆಗೆ ತನ್ನದೇ ಆದ ಮಹತ್ವವಿದ್ದು, ತುಳುನಾಡ ಜನರ ಪಾಲಿನ ಶ್ರಾವಣ ಮಾಸದ ಮೊದಲ ಹಬ್ಬವೇ ನಾಗರ ಪಂಚಮಿ. ಮಂಗಳೂರಿನ ನಗರ ವ್ಯಾಪ್ತಿಯಲ್ಲಿ ಕುಡುಪು ಅನಂತಪದ್ಮನಾಭ ದೇವಸ್ಥಾನ, ಉರ್ವ ಮಾರಿಯಮ್ಮ, ಕದ್ರಿ ಹಾಗೂ ಶ್ರೀ ಕ್ಷೇತ್ರ ಮಂಗಳಾದೇವಿ ಸಹಿತ ವಿವಿಧ ದೇವಸ್ಥಾನಗಳಲ್ಲಿ ನಾಗರ ಪಂಚಮಿ ಆಚರಣೆ ನಡೆಯಲಿದೆ.

ಕರಾವಳಿಯಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ Read More »

ಕರಾವಳಿ

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಂಜ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ ಕಳೆದ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಮುಡಿಪು ನಿವಾಸಿ ಮುಡಿಪು ರಫೀಕ್ (36) ಎಂದು ಕರೆಯಲ್ಪಡುವ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಪೊಲೀಸರು ರಫೀಕ್ ನನ್ನು ಬೆಂಗಳೂರಿನ ಹೊಸಕೋಟೆಯಲ್ಲಿ ಬಂಧಿಸಿ, ಅನಂತರ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ರಫೀಕ್ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ, ಬರ್ಕೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕೊಣಾಜೆ ಗ್ರಾ.ಪಂ.ಚುನಾವಣೆ – ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ನವೀನ್ ಎಂ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 20. ಕೊಣಾಜೆ ಗ್ರಾಮ ಪಂಚಾಯತ್ ನ 2ನೇ ಅವಧಿಗೆ ಅಧ್ಯಕ್ಷೆಯಾಗಿ ರುಕ್ಮಿಣಿ ಹಾಗೂ ಉಪಾಧ್ಯಕ್ಷರಾಗಿ ನವೀನ್ ಎಂ. ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ರುಕ್ಮಿಣಿ ಹಾಗೂ ಮೈತ್ರಿ, ಉಪಾಧ್ಯಕ್ಷ ಸ್ಥಾನಕ್ಕೆ ನವೀನ್ ಎಂ. ಹಾಗೂ ಸರೋಜಿನಿ ಅವರು ನಾಮಪತ್ರ ಸಲ್ಲಿಸಿದ್ದರು. ಮತದಾನದ ವೇಳೆ ರುಕ್ಮಿಣಿಯವರು 3 ಮತ ಹಾಗೂ ಮೈತ್ರಿಯವರು 2 ಮತಗಳನ್ನು ಪಡೆದು ರುಕ್ಮಿಣಿಯವರು ಗೆಲುವು ಸಾಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನವೀನ್

ಕಡಬ: ಕೊಣಾಜೆ ಗ್ರಾ.ಪಂ.ಚುನಾವಣೆ – ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ನವೀನ್ ಎಂ ಆಯ್ಕೆ Read More »

ಕರಾವಳಿ

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಡ್ರಿಂಕ್ಸ್ ಬಿಲ್ ನ ಮೊತ್ತ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಫೋಲ್ಡಿಂಗ್ ಬ್ಲೇಡ್ ನಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೈಸೂರು ಮೂಲದ ಆರೋಪಿ ಮೊಹಮ್ಮದ್ ಹನೀಫ್ ಅಲಿಯಾಸ್ ಚಾಕು(30) ಎಂದು ಗುರುತಿಸಲಾಗಿದೆ. ಆಗಸ್ಟ್ 18ರಂದು ರಾತ್ರಿ ನಗರದ ಸರ್ವಿಸ್ ಬಸ್ ನಿಲ್ದಾಣದ ಗೂಡಂಗಡಿ ಎದುರು ಈರಪ್ಪ ಕುರಿ ಎಂಬಾತ ಆರೋಪಿ ಹನೀಫ್ ನೊಂದಿಗೆ ಡ್ರಿಂಕ್ಸ್ ಮಾಡಿರುವ ಬಿಲ್ ಮೊತ್ತ ಕೊಡುವಂತೆ ಕೇಳಿದ್ದು, ಆಗ ಆರೋಪಿ

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾನುವಾರು ಕಳ್ಳತನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.‌ 20. ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಜ್ಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ದಡ್ಡಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮಲಾರ್, ಪಾವೂರು ಗ್ರಾಮದ ಬದ್ರಿಯಾ ನಗರದ ನಿವಾಸಿ ಇರ್ಫಾನ್ (30) ಮತ್ತು ಬಂಟ್ವಾಳದ ಸಿದ್ದಕಟ್ಟೆ ಗ್ರಾಮದ ಸಂಗಬೆಟ್ಟು ಗ್ರಾಮದ ಮೊಹಮ್ಮದ್ ಆರಿಫ್ ಅಲಿಯಾಸ್ ಪುಚ್ಚೇರಿ ಆರಿಫ್ (32) ಎಂದು ಗುರುತಿಸಲಾಗಿದೆ. ಆ. 14ರಂದು ರಾತ್ರಿ ಬಡಗ ಎಡಪದವು ಎಂಬಲ್ಲಿ ಮೂರು ಹಸುಗಳನ್ನು ಕಳವು ಮಾಡಿರುವ ಬಗ್ಗೆ

ಜಾನುವಾರು ಕಳ್ಳತನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top