karavali

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

(ನ್ಯೂಸ್ ಕಡಬ) newskadaba.com ನ. 23. ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ. ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ […]

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ Read More »

ಕರ್ನಾಟಕ

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ತಾಯಿ ನೀಡಿರುವ ದೂರಿನ ಪ್ರಕಾರ ಬಾಲಕಿ ಆಟವಾಡುತ್ತಿದ್ದಾಗ ಅಡಿಕೆ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಅಂಗಡಿಯವನು ಮುಡಂಗಾರುಕಟ್ಟೆ ನಿವಾಸಿ ಅಹ್ಮದ್ ಕುಂಞಿ ಎಂಬವರ ಪುತ್ರ ಅಬ್ದುಲ್ಲ (70) ಎಂದು ಗುರುತಿಸಲಾಗಿದ್ದು, ಮಗುವಿನೊಂದಿಗೆ ಅನುಚಿತ ದೈಹಿಕ ಸಂಪರ್ಕ ಹೊಂದಿದ್ದ ಆರೋಪವಿದೆ. ಕೊಣಾಜೆ ಪೊಲೀಸರು

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 23. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಸದಸ್ಯರಾದ ಕೋಣಿ ಗ್ರಾಮದ ನಿವಾಸಿ ವನಜಾ ಅವರು ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಮೃತಪಟ್ಟಿದ್ದು, ಮೃತರ ವಾರಸುದಾರರಾದ ಪತಿ ವಾಸು ಪೂಜಾರಿ ಅವರಿಗೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ಧನ ರೂ.8 ಲಕ್ಷ ದೊರಕಿದೆ. ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಮುರ್ಡೇಶ್ವರದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ವಾಸು ಪೂಜಾರಿ ಅವರಿಗೆ

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 21. ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಇಂದು ಬೆಳಗ್ಗೆ 8:30ರ ಸುಮಾರಿಗೆ ತನ್ನ ಇಬ್ಬರು ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ ರನ್ನು ಶಿಬಾಜೆ ಗ್ರಾಮದ ಪೆರ್ಲ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಭಯದಿಂದ ತನ್ನ ಬೈಕನ್ನು ಸಡನ್ನಾಗಿ ಬ್ರೇಕ್ ಹಾಕಿ

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ Read More »

ಕರಾವಳಿ

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ನ. 21. ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಎಂದು ಗುರುತಿಸಲಾಗಿದೆ. ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ

ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಚಿನ್ನಾಭರಣ ಕಳವು: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ನ. 21. ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದ 31,17,100 ರೂ.ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿದ್ದ ಹೋಮ್ ನರ್ಸ್ ಒಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 19 ರಂದು ಕೊಪ್ಪಳ ಜಿಲ್ಲೆ ಕುಸ್ತಗಿ ತಾಲೂಕಿನ ನಿವಾಸಿ ಸಿದ್ದಪ್ಪ ಕೆ ಕೋಡ್ಲಿ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಹೆಚ್ಚಿನ ತನಿಖೆಯ ನಂತರ, ತಂಡವು 374.45 ಗ್ರಾಂ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳು ಸೇರಿದಂತೆ ಅಂದಾಜು 30,00,000 ರೂ

ಚಿನ್ನಾಭರಣ ಕಳವು: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪಕ್ಷದ ಕಾರ್ಯಕರ್ತರೊಂದಿಗೆ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಿಸಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಗೋಧ್ರಾ ರೈಲು ದುರಂತವನ್ನು ಆಧರಿಸಿ ನಿರ್ಮಾಣಗೊಂಡಿರುವ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಬಿಜೆಪಿ ಕಾರ್ಯಕರ್ತರ ಜತೆಗೆ ಇಂದು ನಗರದ ಭಾರತ್ ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡಿದ್ದಾರೆ. ʼಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಣೆ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ ಅವರು “ನಮ್ಮ ಶತಮಾನದ ಪ್ರಮುಖ ಘಟನೆಯ ಕುರಿತು ತಿಳಿಸುವ ಈ ಸಿನೆಮಾವನ್ನು ವೀಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕೂ‌ಡ ತಮ್ಮ

ಪಕ್ಷದ ಕಾರ್ಯಕರ್ತರೊಂದಿಗೆ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಿಸಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಸಿನಿಮಾ

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 21. ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಶೇಖಮಲೆಯಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕುರುಳಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.  

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 21. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ನ.20ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ Read More »

ಕರಾವಳಿ
Scroll to Top