karavali

ಎಸ್‌ವೈಎಸ್ ಮಾಣಿ ಸರ್ಕಲ್ ವತಿಯಿಂದ C-ಮೀಟ್ 2k23 ಕ್ಯಾಂಪ್ – ಪರಸ್ಪರ ಕೈಜೋಡಿಸಿ ಕಾರ್ಯಾಚರಿಸಿರಿ ಪರಾಜಯ ಹೊಂದಲಾರಿರಿ- ಬಹು| ಅಬ್ದುಲ್ ಅಝೀಝ್ ಮಿಸ್ಬಾಹಿ

(ನ್ಯೂಸ್ ಕಡಬ) newskadaba.com ಮಾಣಿ, ಜು. 21. ಸಂಘಟನಾ ಚಟುವಟಿಕೆಗಳನ್ನು ಬಲಿಷ್ಠಗೊಳಿಸಲು ಪರಸ್ಪರ ಕೈಜೋಡಿಸಿ ಕಾರ್ಯಾಚರಿಸಿರಿ. ನೀವು ಎಂದಿಗೂ ಪರಾಜಯ ಹೊಂದಲಾರಿರಿ ಎಂದು ಎಸ್‌ವೈಎಸ್ ದಕ ಈಸ್ಟ್ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಹೇಳಿದರು. ಅವರು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ(ರಿ.) ಎಸ್‌ವೈಎಸ್ ಮಾಣಿ ಸರ್ಕಲ್ ವತಿಯಿಂದ ನಡೆದ C-ಮೀಟ್ 2k23 ಎಂಬ ಕ್ಯಾಂಪ್‌ನ ಆಧ್ಯಾತ್ಮಿಕ ತರಗತಿಯಲ್ಲಿ ಮಾತನಾಡಿದರು. ಎಸ್‌ವೈಎಸ್ ಪುತ್ತೂರು ಝೋನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಸಖಾಫಿ ಅಲ್ ಹಿಕಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. […]

ಎಸ್‌ವೈಎಸ್ ಮಾಣಿ ಸರ್ಕಲ್ ವತಿಯಿಂದ C-ಮೀಟ್ 2k23 ಕ್ಯಾಂಪ್ – ಪರಸ್ಪರ ಕೈಜೋಡಿಸಿ ಕಾರ್ಯಾಚರಿಸಿರಿ ಪರಾಜಯ ಹೊಂದಲಾರಿರಿ- ಬಹು| ಅಬ್ದುಲ್ ಅಝೀಝ್ ಮಿಸ್ಬಾಹಿ Read More »

ಕರಾವಳಿ

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜು. 21. ಈಗಾಗಲೇ ನೈಜ ಘಟನೆಯಾಧಾರಿತ ಸಿನೆಮಾಗಳು ಮೂಡಿಬಂದಿತ್ತು. ಇದೀಗ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದನ್ನೇ ನೆಪವಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಎಂಬಾಕೆಯನ್ನು 2012ರ ಅಕ್ಟೋಬರ್ 9ರಂದು ಅಪಹರಿಸಲಾಗಿತ್ತು. ಅಂದು ರಾತ್ರಿ ಮಿಸ್ಸಿಂಗ್ ಕೇಸ್ ಕೂಡಾ ದಾಖಲಾಗಿತ್ತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಮಣ್ಣಸಂಖ

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ Read More »

ಕರಾವಳಿ

ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಚೂರಿ ಎಸೆತ – ಬಾಲಕ ಬಾಲನ್ಯಾಯ ಮಂಡಳಿ ಮುಂದೆ ಹಾಜರ್

(ನ್ಯೂಸ್ ಕಡಬ) newskadaba.com ಮಂಗಳೂರು. ಜು. 21. ಇಲ್ಲಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ವೊಂದರಲ್ಲಿ ಸಾಂಬಾರ್ ವಿಚಾರವಾಗಿ ಗಲಾಟೆ ನಡೆದು ಸಹಪಾಠಿಯ ಮೇಲೆ ವಿದ್ಯಾರ್ಥಿಯೊಬ್ಬ ಚೂರಿ ಎಸೆದ ಪರಿಣಾಮ ಗಾಯಗೊಂಡ ವಿದ್ಯಾರ್ಥಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಚೂರಿ ಎಸೆದ ವಿದ್ಯಾರ್ಥಿಯನ್ನು ಪೊಲೀಸರು ಬಾಲನ್ಯಾಯ ಮಂಡಳಿಯ ಮುಂದೆ ಗುರುವಾರದಂದು ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಚೂರಿ ಎಸೆದ ವಿದ್ಯಾರ್ಥಿಗೆ ಮೊದಲ ಸುತ್ತಿನ ಆಪ್ತ ಸಮಾಲೋಚನೆಯನ್ನು ಪೊಲೀಸರ ವರದಿ ಆಧಾರದಲ್ಲಿ ನಡೆಸಲಾಗಿದ್ದು, ಘಟನೆಯ ಬಗ್ಗೆ ವಿದ್ಯಾರ್ಥಿ ಪಶ್ಚಾತ್ತಾಪ ಹೊಂದಿರುವಂತೆ ತೋರುತ್ತದೆ.

ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಚೂರಿ ಎಸೆತ – ಬಾಲಕ ಬಾಲನ್ಯಾಯ ಮಂಡಳಿ ಮುಂದೆ ಹಾಜರ್ Read More »

ಕರಾವಳಿ

ಫುಟ್ ಪಾತ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಗುದ್ದಿ ಜಖಂಗೊಂಡ ಘಟನೆ ಗುರುವಾರದಂದು ನಗರದ ಪಿವಿಎಸ್‌ ಬಳಿಯ ಎಂ.ಜಿ. ರೋಡ್‌ನ‌ಲ್ಲಿ ನಡೆದಿದೆ. ಕಾಸರಗೋಡು- ಮಂಗಳೂರು ನಡುವೆ ಸಂಚರಿಸುತ್ತಿದ್ದ ಬಸ್‌, ಇನ್ನೊಂದು ಕೆಎಸ್‌ಆರ್‌ಟಿಸಿಯ ಬಸ್ ನ್ನು ಹಿಂದಿಕ್ಕುವ ಭರದಲ್ಲಿ ಕಾಂಪಿಟೀಶನ್‌ ಮಾಡಿಕೊಂಡು ಪಿವಿಎಸ್‌ ಜಂಕ್ಷನ್‌ ನಿಂದ ಎಂ.ಜಿ ರಸ್ತೆಗೆ ನಿರ್ಲಕ್ಷ್ಯ ಮತ್ತು ಅತೀ ವೇಗದಿಂದ ಬಂದಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಢಿಕ್ಕಿಯಾಗಿದೆ. ಈ ಸಂದರ್ಭ

ಫುಟ್ ಪಾತ್ ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು. 23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಾಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ23ರ ಬೆಳಿಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ

ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ

ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ಮತದಾನ ನಡೆಯಲಿದೆ. ಈ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಜು.21ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು

ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ Read More »

ಕರಾವಳಿ

ಸುಗಮ ಸಂಚಾರಕ್ಕೆ ಪರ್ಯಾಯ ನಿಲುಗಡೆಗೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ನಗರದಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನವಭಾರತ್ ಸರ್ಕಲ್ ನಿಂದ ಡೊಂಗರಕೇರಿ ಕಟ್ಟೆವರೆಗಿನ ಸುಮಾರು 75 ಮೀಟರ್ ಉದ್ದದ ರಸ್ತೆಯನ್ನು ಪರ್ಯಾಯ ನಿಲುಗಡೆ (ಆಲ್ಟರ್ನೇಟಿವ್ ಪಾರ್ಕಿಂಗ್)ಯನ್ನಾಗಿ ಘೋಷಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅವರು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ 116ರಂತೆ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.

ಸುಗಮ ಸಂಚಾರಕ್ಕೆ ಪರ್ಯಾಯ ನಿಲುಗಡೆಗೆ ಆದೇಶ Read More »

ಕರಾವಳಿ

ಮಾದಕ ವಸ್ತು ಮಿಶ್ರಿತ ಚಾಕೋಲೆಟ್ ಮಾರಾಟ- ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿಯಷ್ಟು ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಹಾಗೂ ನಗರದ ಫಳ್ನೀರ್ ನ ಗೂಡಂಗಡಿ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬಾತ ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ

ಮಾದಕ ವಸ್ತು ಮಿಶ್ರಿತ ಚಾಕೋಲೆಟ್ ಮಾರಾಟ- ವಶಕ್ಕೆ Read More »

ಕರಾವಳಿ

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಚಿನ್ನಾಭರಣ ಅಂಗಡಿ ಮಾಲೀಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ನೊಂದಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರೂ ಆಗಿದ್ದ  ಅವರು ಪತ್ನಿಯನ್ನು ಅಗಲಿದ್ದಾರೆ.

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲಾ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಕರೆ ನೀಡಿದ್ದಾರೆ. ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರಬಾರದು ಫಲಾನುಭವಿಯು ನೋಂದಣಿಯನ್ನು

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ Read More »

ಕರಾವಳಿ
Scroll to Top