karavali

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಇಲ್ಲಿನ ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಠಾಣೆಗಳಲ್ಲಿ 162 ಮಂದಿ ಡ್ರಗ್ಸ್ ವ್ಯಸನಿಗಳಿಗೆ ಭಾನುವಾರದಂದು ಕೌನ್ಸೆಲಿಂಗ್‌ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ‌. ಮಾನಸಿಕ ಆರೋಗ್ಯ ತಜ್ಞರು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೌನ್ಸೆಲಿಂಗ್ ನಡೆಸಿ ಮಾಹಿತಿ ಪಡೆದುಕೊಳ್ಳಲಾಯಿತು. ವ್ಯಸನದಿಂದ ಹೊರಬರಲು ಬೇಕಾದ ನೆರವು ಒದಗಿಸುವ ಬಗ್ಗೆ ಭರವಸೆ ನೀಡಲಾಯಿತು. ಡ್ರಗ್ಸ್ ವಿರುದ್ದ ಕಾರ್ಯಾಚರಣೆ ಹಾಗೂ ಜಾಗೃತಿ ಅಭಿಯಾನದ ಜತೆಗೆ ವ್ಯಸನಿಗಳ ಕೌನ್ಸೆಲಿಂಗ್ ನಡೆಸುವ ಪ್ರಕ್ರಿಯೆಯನ್ನು […]

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ Read More »

ಕರಾವಳಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 17. ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲಿನಲ್ಲಿ ರವಿವಾರದಂದು ರಾತ್ರಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಮತ್ತು ಅವರ ಮನೆಯವರು ಸಂಬಂಧಿಯೊಬ್ಬರು ನಿಧನರಾದ ಹಿನ್ನೆಲೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು. ರವಿವಾರದಂದು ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಗಮನಿಸಿದ ಕಳ್ಲರು ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿ ಕಳ್ಳರು ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13. ಮಟ್ಕಾ ಆಟವಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಗರದ ಬರ್ಕೆ ಕಂಬಳದ ಬಳಿ ನಡೆದಿದೆ. ಬಂಧಿತರನ್ನು ಮಣ್ಣಗುಡ್ಡದ ಪ್ರಶಾಂತ್, ಅಶೋಕನಗರದ ದಿನೇಶ್ ಕುಮಾರ್, ಉರ್ವ ಹೊಯ್ಗೆಬೈಲ್‌ನ ಅನಿಲ್ ಹಾಗೂ ಮಡಿಕೇರಿಯ ಉದಯ್ (35) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಟ್ಕಾ ಚೀಟಿಗಳು ಸಹಿತ 12,480 ರೂಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಹೊಳೆನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 10. ಹೊಳೆನೀರಿಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ(ಕಿಟ್ಟಣ್ಣ) ಎಂದು ಗುರುತಿಸಲಾಗಿದೆ. ಇವರು ಜು. 09ರಂದು ಮಧ್ಯಾಹ್ನ ಇಚ್ಲಂಪಾಡಿಯ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದಾಗ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ರಾತ್ರಿ ತನಕ ಹೊಳೆ ಬದಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರೆತಿರಲಿಲ್ಲ. ಇದೀಗ ಜು.10ರಂದು

ಕಡಬ: ಹೊಳೆನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ನೀರುಪಾಲಾಗಿದ್ದ ಕಾರ್ಮಿಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಅರಂತೋಡು, ಜು. 09. ನಾಲ್ಕು ದಿನಗಳ ಹಿಂದೆ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಯ ತಪ್ಪಿ ಹೊಳೆಗೆ ಬಿದ್ದಿದ್ದ ಕೂಲಿ ಕಾರ್ಮಿಕನ ಮೃತದೇಹವು ಇಂದು ಪತ್ತೆಯಾಗಿದೆ. ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ಸಮೀಪದ ನಾರಾಯಣನ್ ಎಂಬವರು ಕೂರ್ನಡ್ಕದಲ್ಲಿ ನಾಲ್ಕು ದಿನಗಳ ಹಿಂದೆ ನೀರು ಪಾಲಾಗಿದ್ದು, ಅಂದಿನಿಂದಲೇ ಶೋಧ ಕಾರ್ಯ ಆರಂಭಗೊಂಡಿತ್ತು. ಸುಳ್ಯ ಅಗ್ನಿಶಾಮಕ ದಳ, ಎಸ್.ಡಿ.ಆರ್.ಎಫ್ ತಂಡ, ಪೋಲಿಸ್ ಇಲಾಖೆಯೊಂದಿಗೆ ಅರಂತೋಡು ಕಲ್ಲುಗುಂಡಿ ವಿಖಾಯ ತಂಡ ಹಾಗೂ

ಸುಳ್ಯ: ನೀರುಪಾಲಾಗಿದ್ದ ಕಾರ್ಮಿಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ.  26. ಬೆನ್ನಿನಲ್ಲಿದ್ದ ಅತಿಭಾರದ ಶಾಲಾ ಬ್ಯಾಗನ್ನು ಹೊರಲಾಗದೆ ಒಂದನೇ ತರಗತಿಯ ವಿದ್ಯಾರ್ಥಿನಿ ಬಿದ್ದಿರುವ ಘಟನೆ ಮುಡಿಪಿನಲ್ಲಿ ನಡೆದಿದೆ. ಮಗುವಿನ ಬ್ಯಾಗಿನಲ್ಲಿ ಬರೋಬ್ಬರಿ 19ನೋಟ್‌ ಪುಸ್ತಕಗಳಿದ್ದು 12 ಕೆ.ಜಿ ಭಾರವನ್ನು ಹೊರಲು ಸಾಧ್ಯವಾಗದೆ ಓಡುವ ರಭಸದಲ್ಲಿ ಕೆಳಗೆಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.ಖಾಸಗಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಇಂಟರ್‌ ಲಾಕ್‌ ರಸ್ತೆಗೆ ಬಿದ್ದು ಮೂಗಿಗೆ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ನೋಡಲು ಮಳೆಗೆ ಜಾರಿಬಿದ್ದಿರುವುದಾಗಿ

ಭಾರವಾದ ಶಾಲಾ ಬ್ಯಾಗ್‌ ➤ ಬಿದ್ದು ಗಾಯಗೊಂಡ ಆರು ವರ್ಷದ ವಿದ್ಯಾರ್ಥಿನಿ Read More »

ಕರಾವಳಿ

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ

(ನ್ಯೂಸ್ ಕಡಬ)newskadaba.com  ಮಂಗಳೂರು,ಜೂ 15 . ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಇದೇ ಜೂ.28ರಿಂದ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಪಡಿತರ ಚೀಟಿದಾರರು 2023ರ ಜೂನ್ ತಿಂಗಳ  ಪಡಿತರವನ್ನು ಇದೇ ಜೂ.27ರೊಳಗೆ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯುವಂತೆ ತಿಳಿಸಲಾಗಿದ್ದು , ಜೂ.27ರ ನಂತರ ತಿಂಗಳ ಪಡಿತರವನ್ನು ವಿತರಿಸಲು ಅವಕಾಶವಿರುವುದಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.        

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ Read More »

ಕರಾವಳಿ

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಜೂ .13 . ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ ಆರಂಭಿಸಲಾಗಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಭಿಫರ್ ಜಾಯ್ ಎಫೆಕ್ಟ್ ತಟ್ಟುವ ಸಾಧ್ಯತೆ ಹಿನ್ನೆಲೆ ತುರ್ತಾಗಿ ಕಲ್ಲುಗಳನ್ನು ಹಾಕಲಾಗುತ್ತಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಹಿನ್ನೆಲೆ ಕಾಮಗಾರಿ ಆರಂಭಿಸಲಾಗಿದೆ. ಜೆಸಿಬಿ ಮತ್ತು

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ Read More »

ಕರಾವಳಿ, ಕರ್ನಾಟಕ

ಚಂಡಮಾರುತದ ಭೀತಿ ➤ ಕರಾವಳಿಯಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಂಭವವಿದ್ದು, ಭಾರೀ ಮಳೆಯೂ ಸುರಿಯುವ ಸಾಧ್ಯತೆ ಇದೆ. ಆದುದರಿಂದ ಈ ಅವಧಿಯಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಚಂಡಮಾರುತದ ಭೀತಿ ➤ ಕರಾವಳಿಯಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ Read More »

ಕರಾವಳಿ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.30. ಮಂಗಳೂರು ಮತ್ತು ಕೇರಳಕ್ಕೆ ಆಂಧ್ರ ಪ್ರದೇಶದಿಂದ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 23 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ (35) ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಶಬೀರ್ ವಿಶಾಖಪಟ್ಟಣದಿಂದ ಕಾರಿನ ಮೂಲಕ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದಾಗ ಉಳ್ಳಾಲ ಮುಡಿಪು ಕಾಯಿರಗೋಳಿ ಎಂಬಲ್ಲಿ ಸಿಸಿಬಿ ಪೊಲೀಸರ ತಂಡ ಸೆರೆ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top