karavali

ನೇತ್ರಾವತಿ ನದಿಯ 3ನೇ ಸೇತುವೆ ಸಂಪೂರ್ಣ- ವಾಹನ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ದೊರಕುತ್ತಿದ್ದಂತೆಯೇ ಬಿ.ಸಿ.ರೋಡ್ ನಲ್ಲಿ ನೇತ್ರಾವತಿ ನದಿಗೆ ಕಟ್ಟಲಾದ ಮೂರನೇ ಸೇತುವೆ ಸಂಪೂರ್ಣಗೊಂಡು ವಾಹನ ಸಂಚಾರ ಆರಂಭಗೊಂಡಿದೆ. ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್ ಭಾಗದಿಂದ ಹಳೆ ಸೇತುವೆ ಕಡೆಗೆ ತಿರುಗುವ ಭಾಗವನ್ನು ಕಲ್ಲುಗಳಿಂದ ಮುಚ್ಚಿ ಡಿವೈಡರ್ ರೀತಿ ಮಾಡಲಾಗಿದೆ. ಆದಾಗ್ಯೂ ಸೇತುವೆ ಸಾಗರ್ ಹಾಲ್ […]

ನೇತ್ರಾವತಿ ನದಿಯ 3ನೇ ಸೇತುವೆ ಸಂಪೂರ್ಣ- ವಾಹನ ಸಂಚಾರ ಆರಂಭ Read More »

ಕರಾವಳಿ

ಡಿವೈಡರ್‌- ಕಾರು ಡಿಕ್ಕಿ – ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 18. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.  

ಡಿವೈಡರ್‌- ಕಾರು ಡಿಕ್ಕಿ – ಓರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇಂದು SJM ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ

(ನ್ಯೂಸ್ ಕಡಬ) newskadaba.com ನ. 16.  ಚಿಣ್ಣರ ಸಂಭ್ರಮ, ಪ್ರತಿಭಾ ಸಂಗಮʼ ಎಂಬ ಸಂದೇಶದೊಂದಿಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಾ ಸಂಗಮದ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರತಿಭಾ ಸಂಗಮವು ಶನಿವಾರ (ಇಂದು) ಸಂಜೆ ಹಯಾತುಲ್ ಇಸ್ಲಾಂ ಮದ್ರಸ ಬಜಾಲ್ ನಂತೂರುನಲ್ಲಿ ನಲ್ಲಿ ಆರಂಭಗೊಂಡು ರವಿವಾರ ಸಂಜೆಯ ವರೆಗೆ ನಡೆಯಲಿದೆ. ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಇದರ ಅಧ್ಯಕ್ಷ, ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯರೂ ಆದ ಅಬ್ದುಲ್ ರವೂಫ್ ಇವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಮಂಗಳೂರು: ಇಂದು SJM ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ Read More »

ಕರಾವಳಿ

ನ.19ರಂದು ಯಕ್ಷಗಾನ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನ. 16.  ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ನ.19 ರಂದು ನಡೆಯಲಿದೆ. ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿ, ಮಧ್ಯಾಹ್ನ

ನ.19ರಂದು ಯಕ್ಷಗಾನ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ Read More »

ಕರಾವಳಿ

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ

(ನ್ಯೂಸ್ ಕಡಬ) newskadaba.com ನ. 16.  ಅತಿ ವೇಗದಿಂದ ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಇದರಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಗುರುವಾರ ರಾತ್ರಿ ಮಿನಿ ಇನ್ಸುಲೇಟರ್‌ ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮಧ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಆರೋಪ: ಸುಳ್ಯ, ಬೈಂದೂರು ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನ. 16. ಸುಬ್ರಹ್ಮಣ್ಯ, ಕಸ್ತೂರಿ ರಂಗನ್ ವಿರೋಧಿಸಿ ನ.15ರ ಗುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ. ಈ ರೀತಿ ಅಕ್ರಮ

ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಆರೋಪ: ಸುಳ್ಯ, ಬೈಂದೂರು ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಳಲಿ ಮಸೀದಿ ವಿವಾದ: ಹಿಂದೂ ಪರಿಷತ್‌ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ನ. 16. ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ. ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖೀಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಸ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದಿನ ದಾಖಲೆ ಬದಲಾಯಿಸಬಾರದು. ಈ ಬಗ್ಗೆ ಸಿವಿಲ್ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ

ಮಳಲಿ ಮಸೀದಿ ವಿವಾದ: ಹಿಂದೂ ಪರಿಷತ್‌ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ

ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ

(ನ್ಯೂಸ್ ಕಡಬ) newskadaba.com ನ. 16. ಪತ್ರಕರ್ತ ಪ್ರಭಾಕರ ಆಚಾರ್ಯ ಅವರಿಗೆ ಪ್ರಶಸ್ತಿ ಸಿಕ್ಕಿದ್ದು, ಅವರು ಗ್ರಾಮೀಣ ಭಾಗದ ಚಿತ್ತೂರಿನಲ್ಲಿ ಹುಟ್ಟಿ ಬ್ರಹ್ಮಾವರದಲ್ಲಿ ಪತ್ರಿಕೋದ್ಯಮ ಆರಂಭಿಸಿದರು. ಅವರು ಸಾತ್ವಿಕ ಬರವಣಿಗೆಯ ಮೂಲಕ ಹೆಸರು ಪಡೆದು, ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮಾರಣಕಟ್ಟಿ ಶ್ರೀ ಬ್ರಹ್ಮಲಿಂಗೇಶ್ವರ ಸಭಾ ಭವನದಲ್ಲಿ ಚಿತ್ತೂರು ಗ್ರಾಮಸ್ಥರು ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ನೇತ್ರತ್ವದಲ್ಲಿ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ Read More »

ಕರಾವಳಿ

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ರಜತ ಮಹೋತ್ಸ ಆಚರಣೆ

(ನ್ಯೂಸ್ ಕಡಬ) newskadaba.com ನ. 16. ವೈದ್ಯಕೀಯ ಶಿಕ್ಷಣದಲ್ಲಿ 25 ವರ್ಷಗಳ ಸ್ಮರಣಾರ್ಥ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವದ ಸಮಾರೋಪ ಸಮಾರಂಭವು ಶುಕ್ರವಾರದಂದು ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜರಗಿತು. ಈ ಸಂದರ್ಭದಲ್ಲಿ, ಫಾದರ್ ಮುಲ್ಲರ್ ಅವರು ಡೀಮ್ಡ್-ಟು-ಬಿ ವಿಶ್ವವಿದ್ಯಾಲಯವಾಗಲು ಪ್ರಕ್ರಿಯೆಯ ಪ್ರಾರಂಭವನ್ನು ಗಣ್ಯರು ಅನುಮೋದಿಸಿದರು. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲೊ, ಎಫ್‌ಎಂಎಂಸಿಯ ಆಡಳಿತಾಧಿಕಾರಿ ಫಾ.ಅಜಿತ್ ಬಿ ಮೆನೆಜಸ್, ಡೀನ್ ಡಾ.ಆಂಟೋನಿ ಸಿಲ್ವನ್ ಡಿಸೋಜಾ ಮತ್ತು ಬಿಷಪ್

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ರಜತ ಮಹೋತ್ಸ ಆಚರಣೆ Read More »

ಕರಾವಳಿ

ಪತಿ ತೀರಿಕೊಂಡ ಬಳಿಕ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ನ. 14. ಕಳೆದ ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು ಆತ್ಮಹತ್ಯೆಗೆ ಶರಣಾದವರು. ಮಿಯ್ಯಾರು ಚರ್ಚ್ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಸೌಮ್ಯ ಮನೆ ಸಮೀಪದ

ಪತಿ ತೀರಿಕೊಂಡ ಬಳಿಕ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top