karavali

ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ- ವಾಹನ ಸಂಚಾರಕ್ಕೆ ತಡೆ

(ನ್ಯೂಸ್ ಕಡಬ) newskadaba.com ನ. 14. ರಾಜೆಯ ಕಲ್ಬರ್ಪೆ ಬಳಿ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಗುರುವಾರ ರಾತ್ರಿ ಮರ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ತಡೆ ಉಂಟಾಯಿತು. ಒಂದುವರೆ ಗಂಟೆಯ ಬಳಿಕ ಮರವನ್ನು ತೆರವುಗೊಳಿಸಿದ ಹಿನ್ನಲೆಯಲ್ಲಿ ರಸ್ತೆ ವಾಹನಗಳ ಸಂಚಾರಕ್ಕೆ ಮುಕ್ತವಾಯಿತು. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ತಮಿಳುನಾಡು ಮೂಲದ ದೋಸ್ತ್ ವಾಹನವೊಂದು ಸಂಚಾರ ಮಾಡುತ್ತಿದ್ದ ಸಮಯದಲ್ಲಿಯೇ ಈ ಮರ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ […]

ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ- ವಾಹನ ಸಂಚಾರಕ್ಕೆ ತಡೆ Read More »

ಕರಾವಳಿ

ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂ ಅನುದಾನ ಬಿಡುಗಡೆ- ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 15. ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂಪಾಯಿ, ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಸರಕಾರದಿಂದ ಅರುವತ್ತು ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆಯೆಂದು ವಿದಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿಕೆ ನೀಡಿದ್ದಾರೆ. ಅವರು ಉಳ್ಳಾಲ ನಗರಸಭಾ ವ್ಯಾಪ್ತಿಯ ಕೆರೆಬೈಲ್ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಾಂಕ್ರಿಟ್ ರಸ್ತೆ ಮತ್ತು ತಡೆಗೋಡೆ ಕಾಮಗಾರಿಗೆ ಗುರುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ,

ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂ ಅನುದಾನ ಬಿಡುಗಡೆ- ಯು.ಟಿ ಖಾದರ್ Read More »

ಕರಾವಳಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ನ. 14. ಉಡುಪಿ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 13ರಂದು ಲಕ್ಷದೀಪೋತ್ಸವ ಆಚರಿಸಲಾಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ಥಾನ ದ್ವಾದಶಿ ನಿಮಿತ್ತ ಶ್ರೀಕೃಷ್ಣ ಮಠದಲ್ಲಿ ತೆಪ್ಪೋತ್ಸವ ಮತ್ತು ವಾರ್ಷಿಕ ರಥೋತ್ಸವ ಉದ್ಘಾಟನೆಗೊಂಡಿತು. ಬೆಳಿಗ್ಗೆ ತುಳಸಿ ಪೂಜೆ ಮತ್ತು ಸಂಜೆ ಕ್ಷೀರಾಭಿಷೇಕ (ಹಾಲು ವಿಸರ್ಜನೆ) ಪೂಜೆಯೊಂದಿಗೆ ಉತ್ಸವವು ಪ್ರಾರಂಭವಾಯಿತು. ಸಂಜೆಯ ವಿಧಿವಿಧಾನಗಳು ಮಧ್ವ ಸರೋವರದ ಕೇಂದ್ರ ಮಂಟಪದಲ್ಲಿ ಕ್ಷೀರಾಭಿಷೇಕವನ್ನು ಒಳಗೊಂಡಿತ್ತು, ಅಲ್ಲಿ ಶ್ರೀ ಸುಗುಣೇಂದ್ರ ತೀರ್ಥ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವ ಆಚರಣೆ Read More »

ಕರಾವಳಿ

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ನ. 14. ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪ ಆಧಾರರಹಿತವಾದದ್ದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಬುಧವಾರ ಸಿಟಿಜನ್ ಕೌನ್ಸಿಲ್ ವತಿಯಿಂದ ಹಮ್ಮಿಕೊಳ್ಳಲಾದ ಅನೌಪಚಾರಿಕ ಸಂವಾದ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆ ಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್ Read More »

ಕರಾವಳಿ

ಕುಂದಾಪುರ: ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 13.  ವಿನೋದ್ ಕ್ರಾಸ್ಟೋ ಅವರ ತಂದೆ ತಾಯಿ ಜನಸೇವೆಯಲ್ಲಿ ಗುರುತಿಸಿಕೊಂಡವರು. ಇವರು ಕೂಡಾ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದವರು. ಅವರ ಸೇವೆಯನ್ನು ಪಕ್ಷ ಗುರುತಿಸಿದ್ದು, ಕುಂದಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪಕ್ಷದ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೆದೂರು ಸದಾನಂದ

ಕುಂದಾಪುರ: ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ Read More »

ಕರಾವಳಿ

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 13.  ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ. ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಲಾಗಿದ್ದು,

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ Read More »

ಕರಾವಳಿ

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 13.  ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ, ಯುವ ಪ್ರತಿಭೆ ಚಿನ್ಮಯ ಗೌಡ ಪಿ.ಕೆ. (18) ಅವರು ಅನಾರೋಗ್ಯದಿಂದ ನ.12ರಂದು ಕೊನೆಯುಸಿರೆಳೆದಿದ್ದಾರೆ. ಮೂಲತಃ ಮಂಡ್ಯದವರಾದ ಚಿನ್ಮಯ ಗೌಡ ಹಾಸ್ಟೆಲ್‌ನಲ್ಲಿದ್ದು, ಉಜಿರೆ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ. 13. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ವಿಟ್ಲಕ್ಕೆ ಹೋಗುವ ಬಸ್ಸಿಗೆ ಹತ್ತಿಸಲು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯಕ್ಕೀಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಕಾರು ಚಾಲಕ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ಕೊಟ್ಟಾರಿ ಯುವ ವೇದಿಕೆಯ ಆಶ್ರಯದಲ್ಲಿ ಕೊಟ್ಟಾರಿ ಪ್ರೀಮಿಯರ್ ಲೀಗ್ 2024 ಸೀಸನ್ 5ರ ಕ್ರಿಕೆಟ್ ಪಂದ್ಯಾಟ ಎರಡು ದಿನಗಳ ಕಾಲ ನಗರದ ಉರ್ವ ಮೈದಾನದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ನಡೆದ ಪ್ರತೀ ತಂಡಕ್ಕೆ ಆರು ಪಂದ್ಯಾಟವಿತ್ತು. ಕ್ವಾಟರ್ ಫೈನಲ್, ಸೆಮಿ ಫೈನಲ್, ಫೈನಲ್ ಹಂತದಲ್ಲಿ ಪಂದ್ಯಾಟ ನಡೆಯಿತು. ಸೆಮಿ ಫೈನಲ್‌ನಲ್ಲಿ ನಾಲ್ಕು ತಂಡಗಳು ಪ್ರವೇಶ ಪಡೆದು ಪಂದ್ಯಾವಳಿಯ ಫೈನಲ್‌ನಲ್ಲಿ ಕೊಟ್ಟಾರಿ

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ Read More »

ಕರಾವಳಿ, ಕ್ರೀಡಾ ನ್ಯೂಸ್

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 12. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಮುಝೈನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.  

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top