karavli

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯ ದರ್ಶನ ಪಡೆದ ನಟ ಸೂರ್ಯ, ಜ್ಯೋತಿಕಾ ದಂಪತಿ

(ನ್ಯೂಸ್ ಕಡಬ) newskadaba.com ಉಡುಪಿ, ನ. 26. ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಕಾಲಿವುಡ್ ಕ್ಯೂಟ್ ಜೋಡಿ ಸೂರ್ಯ ಹಾಗೂ ಜ್ಯೋತಿಕಾ ಆಗಮಿಸಿದ್ದಾರೆ. ತಮಿಳು ಸಿನಿಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ. ದೇಗುಲದಲ್ಲಿ ನಡೆಸುವ ವಿಶೇಷ ಚಂಡಿಕಾಯಾಗದಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದರು. ಶಕ್ತಿ ದೇವತೆ ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಕೆ ಮಾಡಿ ತೆರಳಿದ್ದಾರೆ. ಈ ವೇಳೆ, ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು […]

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯ ದರ್ಶನ ಪಡೆದ ನಟ ಸೂರ್ಯ, ಜ್ಯೋತಿಕಾ ದಂಪತಿ Read More »

ಕರಾವಳಿ

ಕೆರೆಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 19.  ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕ ಬುಧವಾರ ರಾತ್ರಿ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ (28) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್ ಮೊಬೈಲ್ ಲೊಕೇಶನ್ ಕೋಟೇಶ್ವರ ಕೆರೆ ಬಳಿಯಲ್ಲಿ ತೋರಿಸುತ್ತಿತ್ತು ಎನ್ನಲಾಗಿದೆ. ಅಲ್ಲಿ ಹೋದಾಗ

ಕೆರೆಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03.  ಇಲ್ಲಿನ ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ‌ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸಿನಾನ್ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗುತ್ತಿದ್ದು, ಈ ಹಿಂದೆಯೂ ಆತ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಸುಳ್ಯಕ್ಕೆ ತೆರಳಿದ್ದ ಈತ ಮನೆಗೆಮರುಳುವ ಸಂದರ್ಭದಲ್ಲಿ ಕಾಂತಮಂಗಲ ಸೇತುವೆಯಿಂದ ನದಿಗೆ ಧುಮುಕಿದ್ದಾನೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಶಾಂಕ್ ರೈ ಪಟ್ಟೆ ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 03.  ಇಂಡೋ-ನೇಪಾಳ ಅಂತರಾಷ್ಟ್ರೀಯ ಆಹ್ವಾನಿತ ಪುರುಷರ ಮತ್ತು ಮಹಿಳೆಯರ ಕ್ರೀಡಾ ಚಾಂಪಿಯನ್‌ಶಿಪ್-2024 ನ ಕಿರಿಯ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡ ಪ್ರಥಮ ಸ್ಥಾನ ಗಳಿಸಿದೆ. ಈ ಪಂದ್ಯಾಕೂಟದಲ್ಲಿ ಭಾರತ ತಂಡವನ್ನು ಪುತ್ತೂರಿನ ಶಶಾಂಕ್ ರೈ ಪಟ್ಟೆ(19) ಅವರು ಪ್ರತಿನಿಧಿಸಿರುತ್ತಾರೆ. ಸೆಪ್ಟೆಂಬರ್ 2 ರಂದು ನೇಪಾಳದಲ್ಲಿ ನಡೆದ ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಸದಾನಂದ ರೈ ಹಾಗೂ

ಪುತ್ತೂರು: ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಶಾಂಕ್ ರೈ ಪಟ್ಟೆ ಪ್ರಥಮ Read More »

ಕ್ರೀಡಾ ನ್ಯೂಸ್

ತಮಿಳುನಾಡು ಮೂಲದ ದಂಪತಿ ಸುಳ್ಯದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 22. ತಮಿಳುನಾಡು ಮೂಲದ ದಂಪತಿ ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಾಜನ್ ಎಂದು ಗುರುತಿಸಲಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಸ್ವತಃ ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು ಇಂದು

ತಮಿಳುನಾಡು ಮೂಲದ ದಂಪತಿ ಸುಳ್ಯದಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ- ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು

(ನ್ಯೂಸ್ ಕಡಬ) newskadaba.com ಉಡುಪಿ, ಜು. 29. ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎಂಬ ಹೆಸರನ್ನು ಬಳಸಿ ಖರ್ಗೆಯವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಗಳನ್ನು ಹರಿಯ ಬಿಟ್ಟಿದ್ದು, ಈ ಹೇಳಿಕೆಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಸ್ಪಷ್ಟೀಕರಣ ನೀಡಿದೆ. ಈ ಹಿನ್ನೆಲೆಯಲ್ಲಿ ಸಚಿವರ ವರ್ಚಸ್ಸಿಗೆ ಧಕ್ಕೆ ತರಲು

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ- ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ದೂರು Read More »

ಕರಾವಳಿ
Scroll to Top