ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ರಮೇಶ್ ಪಾಳ್ಯ ಆಯ್ಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಈ ಸಂಜೆ ಪತ್ರಿಕೆಯ ಹಿರಿಯ ವರದಿಗಾರ ರಮೇಶ್ ಎಂ.ಪಾಳ್ಯ ಅವರು ಆಯ್ಕೆಯಾಗಿದ್ದಾರೆ. ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ರಮೇಶ್ ಪಾಳ್ಯ ಅವರು 7 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ವಿನೋದ್ ಕುಮಾರ್ ಅವರನ್ನು ಒಂದು ಮತಗಳ ಅಂತರದಿಂದ ಸೋಲಿಸಿದ್ದಾರೆ. ಉಪಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಹಿರಿಯ ಛಾಯಾಗ್ರಾಹಕ ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ರಮೇಶ್ ಪಾಳ್ಯ ಆಯ್ಕೆ Read More »
ಕರ್ನಾಟಕ