karnataka

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.09. ಪಿಕಪ್ ವಾಹನ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಉರುವಾಲು ಪದವು ಶುಂಠಿಪಲ್ಕೆ ನಿವಾಸಿ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಉಪ್ಪಿನಂಗಡಿ: ಆ್ಯಕ್ಟಿವಾ ಹಾಗೂ ಪಿಕಪ್ ನಡುವೆ ಢಿಕ್ಕಿ – ಸವಾರ ಮೃತ್ಯು, ಸಹ ಸವಾರೆ ಗಂಭೀರ Read More »

ಕರ್ನಾಟಕ
crime, arrest, suspected

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಮಾಲಕನೇ ಬೆಂಕಿ ಕೊಟ್ಟು ಕ್ರೂರವಾಗಿ ಕೊಂದಿರುವ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯಲ್ಲಿ ಕೆಲಸಕ್ಕಿದ್ದ ಜಗ್ಗು (35) ಎಂಬವರೇ ಮೃತ ದುರ್ದೈವಿ. ಶನಿವಾರದಂದು ಕ್ಷುಲ್ಲಕ ಕಾರಣಕ್ಕೆ ಅಂಗಡಿ ಮಾಲಕ ತೌಸೀಫ್ ಹುಸೈನ್ ಎಂಬಾತ ಜಗ್ಗುವನ್ನು ಕೊಲೆ‌ ಮಾಡುವ ಉದ್ದೇಶದಿಂದ ಬೆಂಕಿ‌ಕೊಟ್ಟಿದ್ದು, ಸುಟ್ಟ ದೇಹದೊಂದಿಗೆ ಚೀರಾಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಜಮಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿದ್ಯುತ್ ಶಾಕ್

ಕ್ಷುಲ್ಲಕ ಕಾರಣಕ್ಕೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಬೆಂಕಿ ಹಚ್ಚಿ ಕೊಂದ ಮಾಲಕ – ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಅಮಾನವೀಯ ಘಟನೆ Read More »

ಕರಾವಳಿ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.09. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೂರು ಯೋಜನೆಗಳು ನೇರವಾಗಿ ಮಹಿಳೆಯರಿಗೆ ಘೋಷಿಸಿರುವ ರಾಜ್ಯ ಸರಕಾರವು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರದ ವತಿಯಿಂದ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯರು, ದೇಶದ ಮೂರು ರಾಜ್ಯಗಳಲ್ಲಿ ಉದ್ಯೋಗಸ್ಥ ಹೆಣ್ಮಕ್ಕಳಿಗೆ ಮುಟ್ಟಿನ ರಜೆ

ಗ್ಯಾರಂಟಿ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ – ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

(ನ್ಯೂಸ್ ಕಡಬ) newskadaba.com ಚೆನ್ನೈ, ಜು.09. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು,

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು – ಹೊಸ ರೈಲಿನ ಫೋಟೋ ಹಂಚಿಕೊಂಡ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ Read More »

ರಾಷ್ಟ್ರೀಯ ನ್ಯೂಸ್

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.8. ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ನಿವಾಸಿ ಶಿವರಾಜ್ ಹೆಚ್.ಕೆ.(37) ಎಂದು ಗುರುತಿಸಲಾಗಿದೆ. ಆರೋಪಿಯು ನಕಲಿ ಟ್ವಿಟರ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಿದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯ ಪದಾಧಿಕಾರಿಗಳು ಮಂಗಳೂರು ಸೆನ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ

ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಟ್ವೀಟ್ – ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ

ಕಡಬದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ಕಡಬದ ಯುವಕನೋರ್ವ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಾಲೂಕಿನ ಕಾಣಿಯೂರು ಕಾಯ್ಮಣ ನಿವಾಸಿ ದಿವಾಕರ್ (36) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ದಿವಾಕರ್ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಶುಕ್ರವಾರದಂದು ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಡಬದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನಾಳೆ (ಜುಲೈ 08) ಶನಿವಾರ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿರಲಿವೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೊಂದರೆಯಾಗುತ್ತಿರುವುದನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಸ್ಥಿತಿಗೆ ಅನುಗುಣವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಶುಕ್ರವಾರ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ Read More »

ಕರಾವಳಿ

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.07. ತುಳುವರು ಎಲ್ಲಿ ಹೋದರೂ, ಯಾವುದೇ ಸ್ಥಾನಕ್ಕೆ ತಲುಪಿದರೂ ತಮ್ಮ ಮಾತೃಭಾಷೆ ತುಳುವನ್ನು ಮಾತನಾಡದೆ ಇರಲ್ಲ ಎನ್ನುವುದಕ್ಕೆ ವಿಧಾನಸಭೆ ಕೂಡಾ ಸಾಕ್ಷಿಯಾಗಿದೆ. ವಿಧಾನಸಭೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಆರೋಪ ಪ್ರತ್ಯಾರೋಪವನ್ನು ನಿಯಂತ್ರಿಸುವ ಸಲುವಾಗಿ ಸಭಾಧ್ಯಕ್ಷ ಯು.ಟಿ. ಖಾದರ್, ಎದ್ದು ನಿಂತಿದ್ದ ಶಾಸಕರನ್ನು ಕುಳಿತುಕೊಳ್ಳುವಂತೆ ಸೂಚಿಸುವ ವೇಳೆ ತುಳುವಿನಲ್ಲಿ ಹೇಳಿ ತುಳುವರು ಎಂದೂ ಮಾತೃಭಾಷೆಯನ್ನು ಬಿಟ್ಟುಕೊಡಲ್ಲ ಎಂಬುವುದನ್ನು ಸಾಬೀತುಪಡಿಸಿದರು. ನೀವು ಕುಳಿತುಕೊಳ್ಳಿ, ನೀವು ಕುಳಿತುಕೊಳ್ಳಿ ಎಂದು ಹೇಳುತ್ತಿದ್ದ ಸ್ಪೀಕರ್ ಯು.ಟಿ.ಖಾದರ್ ಮಧ್ಯದಲ್ಲಿ

ವಿಧಾನಸಭೆಯಲ್ಲೂ ತುಳು ವಿನಲ್ಲೇ ‘ಆಯಡ ಪನ್ಲೆ’ ಎಂದ ಸ್ಪೀಕರ್ ಯು.ಟಿ.ಖಾದರ್ – ತುಳುವರು ಎಲ್ಲಿ ಹೋದರೂ ಮಾತೃಭಾಷೆ ಬಿಡಲ್ಲ ಎಂದ ನೆಟ್ಟಿಗರು Read More »

ಕರಾವಳಿ, ಕರ್ನಾಟಕ

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 05. ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 41,78,000 ರೂ. ವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ವಿನಾಯಕ ಶೆಟ್ಟಿ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆಎಸ್ಆರ್.ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಶಕ್ಕೆ ತೆಗೆದು ಕೊಳ್ಳಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ನಗದು ಹಾಗೂ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನಸಭಾ ಅಧಿವೇಶನ ಜು. 21ರವರೆಗೆ ವಿಸ್ತರಣೆ ➤ ಸ್ಪೀಕರ್ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಹದಿನಾರನೇ ವಿಧಾನ ಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ. ಇಂದು ವಿಧಾನಸಭೆಯ ಕಲಾಪದ ಮಧ್ಯೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಜುಲೈ 05 ರಂದು ಈಗಾಗಲೇ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 06ರಂದು ಬೆಳಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ

ವಿಧಾನಸಭಾ ಅಧಿವೇಶನ ಜು. 21ರವರೆಗೆ ವಿಸ್ತರಣೆ ➤ ಸ್ಪೀಕರ್ ಯುಟಿ ಖಾದರ್ Read More »

ಕರ್ನಾಟಕ
Scroll to Top