karnataka

ವಿಧಾನ ಪರಿಷತ್ ಗೆ ಆಯ್ಕೆಯಾದ 3 ಶಾಸಕರ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 03. ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಸೋಮವಾರದಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರದಂದು ನಡೆದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಪ್ರಮಾಣ ವಚನದ ಬಳಿಕ ನೂತನ ಶಾಸಕರುಗಳಿಗೆ ಸಭಾಪತಿ […]

ವಿಧಾನ ಪರಿಷತ್ ಗೆ ಆಯ್ಕೆಯಾದ 3 ಶಾಸಕರ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 03. ಬೆಂಗಳೂರಿಗೆ ರೈಲಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ ಎಂದು ಗುರುತಿಸಲಾಗಿದೆ.ಇವರು ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆಯ ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು! Read More »

ಕರ್ನಾಟಕ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ನಡೆದಿದೆ. ನೆಟ್ಟಣದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬೈಕ್ ನಡುವೆ ಕೈಕಂಬ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಗಸ್ತಿನಲ್ಲಿದ್ದ ಹೈವೇ ಪಾಟ್ರಲ್ ಸಿಬ್ಬಂದಿಗಳಾದ ಕಡಬ ಠಾಣಾ ಎಎಸ್ಐ

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಕಳೆದ ಎರಡು ತಿಂಗಳ ಹಿಂದೆ ಇಬ್ಬರನ್ನು ಕೊಂದು ಅಟ್ಟಹಾಸ ಮೆರೆದಿದ್ದ ಕಾಡಾನೆಗಳು ಮತ್ತೆ ಕಾಡಿನಿಂದ ರಸ್ತೆಗಿಳಿಯುತ್ತಿದ್ದು, ಕಳೆದ ನಾಲ್ಕೈದು ದಿನಗಳಿಂದ ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯ ಆಸುಪಾಸಿನಲ್ಲಿ ಕಾಡಾನೆಗಳು ಕಂಡು ಬರುತ್ತಿವೆ. ಮರ್ಧಾಳ ಸಮೀಪದ, ಭ್ರಾಂತಿಕಟ್ಟೆ, ಕೊಡೆಂಕೀರಿ, ಐತ್ತೂರು, ಆಜನ ಭಾಗದಲ್ಲಿ ಕಾಡಾನೆಗಳು ಸಂಚರಿಸಿ ಕೃಷಿ ನಾಶ ಮಾಡಿರುವುದಲ್ಲದೆ, ಮರ್ದಾಳ ಪೇಟೆಯ ಸಮೀಪ ಇರುವ ವಿಶೇಷ ಶಾಲೆಯ ಬಳಿಯ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟಿವೆ. ಮೊದಲೆಲ್ಲಾ ಕಾಡಿನಲ್ಲಿದ್ದ ಕಾಡಾನೆಗಳು ಇದೀಗ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 26. ಮಹಿಳೆಯೊಬ್ಬರು ಬಸ್ ನಿಲ್ಲಿಸದ ಕಾರಣ ಸಿಟ್ಟಿಗೆದ್ದು ಸರ್ಕಾರಿ ಬಸ್ ಗೆ ಕಲ್ಲು ಎಸೆದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ನಡೆದಿದೆ. ಇಳಕಲ್ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬವರು ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನ ಪಡೆಯಲು ಹೊಗಿದ್ದ ವೇಳೆ ಹುಲಿಗೆ ಕ್ರಾಸ್ ಬಳಿ ತುಂಬಾ ಹೊತ್ತಿನಿಂದ ಕಾದರೂ ಯಾವುದೇ ಬಸ್ ನಿಲ್ಲಿಸಿರಲಿಲ್ಲ. ಇದರಿಂದ ಕೋಪಗೊಂಡ ಅವರು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗದ ಕೊಪ್ಪಳದಿಂದ-ಹೊಸಪೇಟೆಗೆ ಹೋಗುವ  ಬಸ್ ಗೆ

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಜೂ. 23ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಬಂದರಿನಲ್ಲಿ ಮಂಗಳೂರು ಕೆನರಾ ಛೇಂಬರ್ ಆಫ್ ಕಾಮರ್ಸ್ ಮತ್ತು ವಾಣಿಜ್ಯ ನಿಯೋಗಗಳೊಂದಿಗೆ ಭೇಟಿ ಮಾಡಿ ಉಪಹಾರ ಸೇವಿಸುವರು. 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ ನ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3.30ಕ್ಕೆ

ಇಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ Read More »

ಕರಾವಳಿ

ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ರಾಜ್ಯದ ಹಲವೆಡೆ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.  22. ವಿದ್ಯುತ್ ದರ ಏರಿಕೆ ಖಂಡಿಸಿ KCCI ಯು ಕರ್ನಾಟಕ ಬಂದ್ ಗೆ ಇಂದು ಕರೆ ನೀಡಿದೆ. ಈ ಹಿನ್ನೆಲೆ ಇಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿದ್ದು, ಕೆಸಿಸಿ&ಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ಥಗಿತಗೊಳಿಸಲಿವೆ. ಬಂದ್ ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್ ಗಳಿಂದ ಬೆಂಬಲ ದೊರಕಿದೆ. ದಕ್ಷಿಣ ಕರ್ನಾಟಕದ FKCCI

ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ರಾಜ್ಯದ ಹಲವೆಡೆ ಬಂದ್ Read More »

ಕರ್ನಾಟಕ

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 22. ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಹಾವೇರಿ ಮೂಲದ ಪ್ರಸ್ತುತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ನಿವಾಸಿ ಹೊನ್ನ ಯಾನೆ ಹೊನ್ನಪ್ಪ(55) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಗ್ರಾಮದಲ್ಲಿ 1993ರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಜೂ. 20ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಶಂಕರನಾರಾಯಣ ಪೊಲೀಸರು ಬಂಧಿಸಿ, ಜೂ.21ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನ

30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ 8000 ಕೋಟಿ ಬಂಡವಾಳ ಹೂಡಲು ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿ ಆಸಕ್ತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ವಿದ್ಯುತ್ ಚಾಲಿತ ವಾಹನಗಳಿಗೆ ಅಗತ್ಯವಾದ ಲಿಥಿಯಂ ಕೋಶಗಳ ತಯಾರಿಕೆಗೆ ಹೆಸರಾಗಿರುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯು ರಾಜ್ಯದಲ್ಲಿ 8,000 ಕೋಟಿ ರೂ. ಗಳ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕಂಪನಿ ಪ್ರತಿನಿಧಿಗಳೊಂದಿಗೆ ಮೊದಲ ಹಂತದ ಸಭೆ ನಡೆಸಿದ್ದಾರೆ. ಈ ಕಂಪನಿಯು ದೇವನಹಳ್ಳಿಯ ಐಟಿಐಆರ್ ಪಾರ್ಕ್ ನಲ್ಲಿ 1000 ಎಕರೆ ಜಮೀನು ಕೇಳಿದ್ದು, ಕಂಪನಿ ಕೇಳಿರುವ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು.

ಕರ್ನಾಟಕದಲ್ಲಿ 8000 ಕೋಟಿ ಬಂಡವಾಳ ಹೂಡಲು ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿ ಆಸಕ್ತಿ..! Read More »

ಕರ್ನಾಟಕ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 20. ಅಪ್ರಾಪ್ತ ಬಾಲಕಿಯನ್ನು ಆಟೋ ರಿಕ್ಷಾದಲ್ಲಿ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಿಕ್ಷಾ ಚಾಲಕ ಸಾದಿಕ್ ಮತ್ತು ಕರೀಂ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂತ್ರಸ್ತೆ ಬಾಲಕಿಯು ನೆರೋಲ್ದಪಲ್ಕೆ ಎಂಬಲ್ಲಿ ಜೂನ್ 18 ರಂದು ತನ್ನ ತಾಯಿಯ ಸ್ವಸಹಾಯ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top