karnataka

ಮಂಗಳೂರು: ಪ್ರತಿಭಟನೆ ಮೊಟಕುಗೊಳಿಸಲು ಅಣಬೆ ಫ್ಯಾಕ್ಟರಿ ಗೆ ಕಲ್ಲು ತೂರಾಟ ನಡೆಸಿ ಗಲಭೆಗೆ ಯತ್ನ- ಆರೋಪ

(ನ್ಯೂಸ್ ಕಡಬ) newskadaba.com ವಾಮಂಜೂರು, ಜೂ. 13. ತಿರುವೈಲು ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿರುವ ವೈಟ್‌ ಗ್ರೋ ಎಗ್ರಿ ಎಲ್‌ ಎಲ್‌ ಪಿ ಅಣಬೆ ಉತ್ಪಾದನಾ ಘಟಕವನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಯ ದಾರಿ ತಪ್ಪಿಸಲು ಗಲಭೆ ನಡೆಸಲು‌ ಮುಂದಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸದಿದ್ದಲ್ಲಿ ವಾಮಂಜೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಹೋರಾಟ‌ ಸಮಿತಿ ಎಚ್ಚರಿಸಿದೆ. ಕಳೆದ ಕೆಲವು ದಿನಗಳಿಂದ ವಾಮಂಜೂರಿನಲ್ಲಿ ಅಣಬೆ ಫ್ಯಾಕ್ಟರಿ ವಿರುದ್ಧ ಶಾಂತಿಯುತ ರೀತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸುವ ಸಲುವಾಗಿ […]

ಮಂಗಳೂರು: ಪ್ರತಿಭಟನೆ ಮೊಟಕುಗೊಳಿಸಲು ಅಣಬೆ ಫ್ಯಾಕ್ಟರಿ ಗೆ ಕಲ್ಲು ತೂರಾಟ ನಡೆಸಿ ಗಲಭೆಗೆ ಯತ್ನ- ಆರೋಪ Read More »

ಕರಾವಳಿ

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಜೂ .13 . ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ ಆರಂಭಿಸಲಾಗಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಭಿಫರ್ ಜಾಯ್ ಎಫೆಕ್ಟ್ ತಟ್ಟುವ ಸಾಧ್ಯತೆ ಹಿನ್ನೆಲೆ ತುರ್ತಾಗಿ ಕಲ್ಲುಗಳನ್ನು ಹಾಕಲಾಗುತ್ತಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಹಿನ್ನೆಲೆ ಕಾಮಗಾರಿ ಆರಂಭಿಸಲಾಗಿದೆ. ಜೆಸಿಬಿ ಮತ್ತು

ಉಳ್ಳಾಲ: ಬಿಫರ್ ಜಾಯ್ ಚಂಡಮಾರುತದ ಭೀತಿ  ಹಿನ್ನೆಲೆ ➤ ತುರ್ತು ಕಾಮಗಾರಿ ಆರಂಭ Read More »

ಕರಾವಳಿ, ಕರ್ನಾಟಕ

ಮುರುಡೇಶ್ವರ ಬೀಚ್ ಗೆ ತೆರಳಿದ್ದ ಓರ್ವ ಸಮುದ್ರ ಪಾಲು   ➤ ಓರ್ವ ಸಮುದ್ರ ಪಾಲು

(ನ್ಯೂಸ್ ಕಡಬ)newskadaba.com  ಭಟ್ಕಳ, ಜೂ . 13. ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದ ತಂಡವೊಂದು ಕಡಲಿಗೆ ಇಳಿದ ವೇಳೆ ಓರ್ವ ನೀರು ಪಾಲಾದ ಘಟನೆ ನಡೆದಿದೆ. ಮೃತ ಯುವಕನನ್ನು ಸಂತೋಷ ಹುಲಿಗುಂಡೆ (19) ಎಂದು ಗುರುತಿಸಲಾಗಿದೆ, ಹಸನ್ ಮಜಗಿಗೌಡ (21) ಹಾಗೂ ಸಂಜೀವ ಹೆಬ್ಬಳ್ಳಿ (20) ಎನ್ನುವರನ್ನು ರಕ್ಷಣೆ ಮಾಡಲಾಗಿದೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಜನರ ಗುಂಪೊಂದು ಸಿಗಂದೂರು, ಕೊಲ್ಲೂರು ಪ್ರವಾಸ ಮುಗಿಸಿ ಮುರುಡೇಶ್ವರಕ್ಕೆ ಆಗಮಿಸಿದ್ದ ವೇಳೆ ಸಮುದ್ರದ ಅಲೆಯನ್ನು ಲೆಕ್ಕಿಸದೇ ಸಮುದ್ರಕ್ಕಿಳಿದು ಆಟವಾಡುವ ವೇಳೆ ಮೂವರು ಅಲೆಯ

ಮುರುಡೇಶ್ವರ ಬೀಚ್ ಗೆ ತೆರಳಿದ್ದ ಓರ್ವ ಸಮುದ್ರ ಪಾಲು   ➤ ಓರ್ವ ಸಮುದ್ರ ಪಾಲು Read More »

ಕರಾವಳಿ, ಕರ್ನಾಟಕ

ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ಕೇಸ್ ನಲ್ಲಿಟ್ಟು ಠಾಣೆಗೆ ತಂದ ಪುತ್ರಿ ➤ ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಪುತ್ರಿಯೋರ್ವಳು ಹೆತ್ತ ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ ಕೇಸ್ ನಲ್ಲಿಟ್ಟು ಠಾಣೆಗೆ ತಂದ ಭೀಕರ ಘಟನೆಯ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹತ್ಯೆಗೊಳಗಾದವರನ್ನು ಬೀವಾ ಪಾಲ್ (70) ಎಂದು ಗುರುತಿಸಲಾಗಿದೆ. ಇವರು ಮೈಕೋ ಲೇಔಟ್ ಪೊಲೀಸ್ ಠಾಣೆಯ ಬಿಳೇಕಹಳ್ಳಿಯ ಎಂಎಸ್ ಆರ್ ಅಪಾರ್ಟ್ ಮೆಂಟ್ ನಲ್ಲಿ ಮಗಳು ಸೆನಾಲಿ ಸೇನ್‌, ಹಾಗೂ ಸೆನಾಲಿ ಅತ್ತೆ ವಾಸವಾಗಿದ್ದರು. ದಿನನಿತ್ಯವೂ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ನಡುವೆ ಜಗಳವಾಗುತ್ತಿತ್ತು.

ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ಕೇಸ್ ನಲ್ಲಿಟ್ಟು ಠಾಣೆಗೆ ತಂದ ಪುತ್ರಿ ➤ ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ 12. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತ್ರಾಸಿ ರಾ.ಹೆ. 66ರಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತರನ್ನು ಸಾಸ್ತಾನ ಮೂಲದ ರಾಜು ಪೋಜಾರಿ ಎಂದು ಗುರುತಿಸಲಾಗಿದೆ. ಇವರು ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾ.ಹೆ.66ರ ರಸ್ತೆಯ ಡಿವೈಡರ್ ಬಳಿ ರಸ್ತೆಯ ಅಂಚಿನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ಬಂದ ಬಸ್ ಢಿಕ್ಕಿ

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಮುಂಗಾರು ಪ್ರವೇಶದ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಗಟಿಪುರ ಗ್ರಾಮದಲ್ಲಿ ಸಿಡಿಲಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಇದೇ ವೇಳೆ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಮಂಗಳೂರಿನ ಪಣಂಬೂರು, ಉಳ್ಳಾಲ, ಸೋಮೇಶ್ವರ, ಬಟಪಾಡಿಗಳಲ್ಲಿ ಭಾನುವಾರ ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಉಡುಪಿ ಜಿಲ್ಲೆ ಮಲ್ಪೆ ಬೀಚಿನಲ್ಲಿ ಪ್ರವಾಸಿಗರು

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು Read More »

ಕರಾವಳಿ, ಕರ್ನಾಟಕ

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ

(ನ್ಯೂಸ್ ಕಡಬ)newskadaba.com   ಮೈಸೂರು, ಜೂ 10. ಊಟಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು  ಬಿಜೆಪಿ ನಾಯಕ ಸ್ವಾಮಿಗೌಡ ಎಂದು ಗುರುತಿಸಲಾಗಿದೆ. ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದ ಇವರು, ಕುಟುಂಬದ ಜೊತೆ ಊಟಿಗೆ ಪ್ರವಾಸಕ್ಕೆ ತೆರಳುತ್ತಿದ್ದ  ವೇಳೆ  ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ  ಈ ದುರ್ಘಟನೆ ಸಂಭವಿಸಿದೆ.        

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ Read More »

ಕರ್ನಾಟಕ

ಮಂಗಳೂರು: ಮನೆಮೇಲೆ ಬೃಹತ್ ಮರಬಿದ್ದು ಮನೆಗೆ ಸಂಪೂರ್ಣ ಹಾನಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಇಲ್ಲಿನ ಬಿ.ಜಿ.ಎಸ್ ಶಾಲಾ ಹಿಂಭಾಗದ ಮನೆಯೊಂದರ ಮೇಲೆ ಇಂದು ಬೆಳ್ಳಂಬೆಳಗ್ಗೆ ಬೃಹತ್‌ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಮೂವರಿಗೆ ಗಾಯಗಳಾದ ಘಟನೆ ಕಾವೂರಿನಿಂದ ವರದಿಯಾಗಿದೆ. ಭಾರೀ ಮಳೆಯಿಂದಾಗಿ ಬೃಹತ್‌ ಗಾತ್ರದ ಮರವೊಂದು ಮನೆಯ ಮೇಲೆ ಉರುಳಿ ಬಿದ್ದಿದ್ದು, ಪರಿಣಾಮ ಮನೆಯ ಮೇಲ್ಛಾವಣಿ ಸಂಪೂರ್ಣ ನಾಶವಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಮನೆಯ ಒಳಗೆ ಒಟ್ಟು 5 ಮಂದಿ ಮಲಗಿದ್ದು, ಅವರ ಪೈಕಿ ಮೂವರು ಹಂಚು ಮತ್ತು ಮರದ

ಮಂಗಳೂರು: ಮನೆಮೇಲೆ ಬೃಹತ್ ಮರಬಿದ್ದು ಮನೆಗೆ ಸಂಪೂರ್ಣ ಹಾನಿ ➤ ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆಯಿಂದ ಶಕ್ತಿ ಯೋಜನೆಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 10. ನಾಳೆ (ಜೂ.11) ಭಾನುವಾರ ಮಧ್ಯಾಹ್ನ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ನಾಳೆ ಸಿಎಂ ‘ಶಕ್ತಿ ಯೋಜನೆ’ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಒಂದು ರೌಂಡ್ ಬಸ್ ನಲ್ಲಿ ಹೋಗಿ, ನಂತರ ಸ್ಮಾರ್ಟ್ ಕಾರ್ಡ್ ಸಾಂಕೇತಿಕವಾಗಿ ಕೆಲವರಿಗೆ ಕೊಡುತ್ತೇವೆ ಎಂದರು. ಇನ್ನು ಎಲ್ಲರೂ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಮೂರು ತಿಂಗಳು ಅವಧಿ ನೀಡಲಾಗಿದ್ದು,

ನಾಳೆಯಿಂದ ಶಕ್ತಿ ಯೋಜನೆಗೆ ಸಿಎಂ ಚಾಲನೆ Read More »

ಕರ್ನಾಟಕ

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್‍ಗಳಲ್ಲಿ ಶೇಕಡಾ 60% ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು ಆಯಾ ತಾಲೂಕುಗಳ

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top