karnataka

ಜುಲೈ 3 ರಿಂದ 14ರ ವರೆಗೆ ವಿಧಾನ ಮಂಡಲದ ಅಧಿವೇಶನ ➤  ಜುಲೈ 3  ರಾಜ್ಯಪಾಲರಿಂದ  ಭಾಷಣ

(ನ್ಯೂಸ್ ಕಡಬ)newskadaba.com   ಬೆಂಗಳೂರು, ಜೂ. 10. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ವಿಧಾನ ಮಂಡಲದ ಅಧಿವೇಶನ ಜು.3 ರಂದು ಪ್ರಾರಂಭವಾಗಲಿದ್ದು, ಅಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜು.4ರಿಂದ ಉಭಯ ಸದನಗಳ ಅಧಿಕೃತ ಕಾರ್ಯಕಲಾಪಗಳು ಆರಂಭವಾಗಲಿದ್ದು, 14ರವರೆಗೆ ಅಧಿವೇಶನ ನಡೆಯಲಿದೆ. 7ಕ್ಕೆ ಬಜೆಟ್‌ ಮಂಡನೆಯಾಗಲಿದ್ದು, ವಿಧಾನ ಪರಿಷತ್‌ ಅಧಿವೇಶನ ಜು.3ರಿಂದ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಗೆಹ್ಲೋಟ್‌ ಅಧಿಸೂಚನೆ ಹೊರಡಿಸಿದ್ದಾರೆ.   

ಜುಲೈ 3 ರಿಂದ 14ರ ವರೆಗೆ ವಿಧಾನ ಮಂಡಲದ ಅಧಿವೇಶನ ➤  ಜುಲೈ 3  ರಾಜ್ಯಪಾಲರಿಂದ  ಭಾಷಣ Read More »

ಕರ್ನಾಟಕ

➤ ಕರ್ನಾಟಕ  ಹಲವೆಡೆ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆ

(ನ್ಯೂಸ್ ಕಡಬ)newskadaba.com   ಕರ್ನಾಟಕ, ಜೂನ್‌, 10.  ಕೇರಳ ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದೆ. ಹಾಗೆಯೇ ಕರ್ನಾಟಕಕ್ಕೆ ಇನ್ನೂ ಕೆಲವೇ ಕ್ಷಣಗಳಲ್ಲಿ ಮುಂಗಾರು ಎಂಟ್ರಿ ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಬಿಪರ್‌ಜಾಯ್‌ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವೆಡೆ ಇಂದು ಬಿರುಗಾಳಿ  ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್‌ 09) ಬೆಳಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಬಳಿಕ ಜಿನುಗು ಮಳೆ ಪ್ರಾರಂಭ ಆಗಿದ್ದು, ಇದರಿಂದ

➤ ಕರ್ನಾಟಕ  ಹಲವೆಡೆ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆ Read More »

ಕರ್ನಾಟಕ

ಸರಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಣಿಪಾಲ, ಜೂ. 10. ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕೊಡಿಸುವುದಾಗಿ ವ್ಯಕ್ತಿಯೋರ್ವರಿಂದ ಹಣ ಪಡೆದು ವಂಚಿಸಿದ ಘಟನೆ ವರದಿಯಾಗಿದೆ. ಕುಂಜಿಬೆಟ್ಟು ಮನೋಳಿಗುಜ್ಜಿ ನಿವಾಸಿ ನವೀನ್ ರಾವ್ ಎಂಬವರಿಗೆ ಬಾಸ್ಕರ್ ಭಟ್ ಎಂಬಾತ ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕೊಡಿಸುವುದಾಗಿ ಹೇಳಿ ಹಂತ ಹಂತವಾಗಿ 40 ಸಾವಿರ ರೂ. ನಗದು ಪಡೆದು ಫೆ. 20ರ ಒಳಗೆ ಉದ್ಯೋಗದ ಆದೇಶ ಬರುವುದಾಗಿ ಹೇಳಿದ್ದು, ಇದುವರೆಗೂ ಯಾವುದೇ ನೇಮಕಾತಿ ಆದೇಶವು ಬಾರದೆ ವಂಚಿಸಿದ್ದಾರೆ. ಇದೀಗ ನೀಡಿದ ಹಣವನ್ನು ವಾಪಾಸು ಕೊಡಲು

ಸರಕಾರಿ ಹುದ್ದೆ ಕೊಡಿಸುವುದಾಗಿ ವಂಚನೆ ➤ ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 09. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ನೂತನ ರಾಜ್ಯ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದ್ದು, ಬುಧವಾರ ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿಯಿಂದ ಅಲೋಕ್ ಕುಮಾರ್​ ಅವರನ್ನು ಎಡಿಜಿಪಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ Read More »

ಕರ್ನಾಟಕ

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 09. ಬೈಕ್ ಹಾಗೂ ಬಸ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ.   ಮೃತ ವ್ಯಕ್ತಿಯನ್ನು ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೈಲೂರಿನಿಂದ ಜಾರ್ಕಳದ ಕಡೆಗೆ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಮೃತಪಟ್ಟರೆ, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..!

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜೂ. 08. ಇಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತೀ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಮುಂಗಾರು ಆಗಮಿಸಿದೆ. ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ಪ್ರತಿ ವರ್ಷವೂ ಜೂನ್ 1ರಂದು ಮುಂಗಾರು ಮಾರುತಗಳು ಕೇರಳಕ್ಕೆ ಆಗಮಿಸುತ್ತಿದ್ದವು. ಅದಾದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಕೂಡಾ ಮಳೆ ಆರಂಭವಾಗುತ್ತಿತ್ತು. ಆದರೆ ಇದೀಗ

ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..! Read More »

ರಾಷ್ಟ್ರೀಯ ನ್ಯೂಸ್

ಪೊಲೀಸ್ ನಿರೀಕ್ಷಕ ಲಿಂಗರಾಜು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ, ಪ್ರಸ್ತುತ ಚಿತ್ರದುರ್ಗದಲ್ಲಿ ಪೊಲೀಸ್ ನಿರೀಕ್ಷಕರಾಗಿರುವ ಲಿಂಗರಾಜು ಎಂಬವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಅವರು ಇತ್ತೀಚೆಗೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಆದರೆ ಅಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಪೊಲೀಸ್ ನಿರೀಕ್ಷಕ ಲಿಂಗರಾಜು ಹೃದಯಾಘಾತದಿಂದ ನಿಧನ Read More »

ಕರಾವಳಿ

ಗೃಹಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಧಿಕೃತ ಆದೇಶ ಹೊರಬಿದ್ದಿದ್ದು, ಇದರ ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು, ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಸದ್ಯ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಪ್ರಮುಖ ಷರತ್ತುಗಳೇನು?

ಗೃಹಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಆಂಧ್ರ ಪ್ರದೇಶದಲ್ಲಿ ಅಪಘಾತ ➤ ಉಡುಪಿಯ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadba.com ಪಡುಬಿದ್ರಿ, ಜೂ. 08. ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್‌ ಬಳಿ ನಡೆದಿದೆ. ಗಾಯಾಳುವನ್ನು ಮೀನಿನ ಲಾರಿಯ ಚಾಲಕ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಎಂದು ಗುರುತಿಸಲಾಗಿದೆ. ಸರಕು ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಆಂಧ್ರ ಪ್ರದೇಶದಲ್ಲಿ ಅಪಘಾತ ➤ ಉಡುಪಿಯ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮಂಗಳೂರಿನ ಸುಂದರ ಮನಮೋಹಕ ಕಡಲತೀರಕ್ಕೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಇವರಿಗೆ ಸಮುದ್ರದ ಆಳ, ಸೆಳೆತ ಮತ್ತು ಅಪಾಯದ ಅರಿವಿರುವುದಿಲ್ಲ. ಮೋಜು ಮಸ್ತಿಗಾಗಿ ಕಡಲಿಗೆ ಇಳಿದು ಅಪಾಯವನ್ನು ಮೈಗೆಳೆದುಕೊಳ್ಳುತ್ತಾರೆ. ಅವರನ್ನು ಎಚ್ಚರಿಸಿ, ಮಳೆಗಾಲದಲ್ಲಿ ಕಡಲಿಗಿಳಿಯದಂತೆ ಮಾಡುವ ಹೊಣೆಗಾರಿಕೆ ಬೀಚ್‍ ಗಾರ್ಡ್‍ಗಳಾಗಿ ಕೆಲಸ ಮಾಡುವ ಹೋಮ್‍ ಗಾರ್ಡ್‍ಗಳಿಗೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಎಂಟು ಬೀಚ್‍ಗಳಿಗೆ ಜಿಲ್ಲಾಧಿಕಾರಿಯವರ ಆದೇಶದಂತೆ ಬೀಚ್‍ಗಾರ್ಡ್ ನೇಮಕ ಮಾಡಲಾಗಿದೆ ಎಂದು ದ.ಕ ಜಿಲ್ಲಾ

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು Read More »

ಕರಾವಳಿ
Scroll to Top