karnataka

ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಜೂ. 08. ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತಾವರೆಕೆರೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕೃಷ್ಣೇಗೌಡ ಹಾಗೂ ರಾಧಾ ದಂಪತಿಯ ಪುತ್ರಿ ಎಂಇಎಸ್ ಶಾಲೆಯ ವಿದ್ಯಾರ್ಥಿ ಲಿಸ್ಮಿತಾ ಎಂದು ಗುರುತಿಸಲಾಗಿದೆ. ಈಕೆ ಶಾಲೆಯಿಂದ ಮನೆಗೆ ವಾಪಸ್ ಆಗಿ ಬಸ್‌ನಿಂದ ಇಳಿಯುತ್ತಿದ್ದ ವೇಳೆ ಬಸ್ ಬಾಲಕಿ ಮೇಲೆ ಹರಿದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಲಿಸ್ಮಿತಾಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದು, ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. […]

ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 08. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಶುಗರ್ ಹಾಗೂ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದ ಅಶೋಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಕಪಿಲ್

ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಕಡಬ: ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಜೂ. 07 ರ ಬುಧವಾರದಂದು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುದೀರ್ಘ ಮಾತುಕತೆ ನಡೆಸಿದರು. ತಾಲೂಕು ಕೇಂದ್ರವಾಗಿರುವ ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಿ, ಮೂರು ಡಯಾಲಿಸಿಸ್

ಕಡಬ: ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Read More »

ಕರಾವಳಿ, ಕರ್ನಾಟಕ

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

(ನ್ಯೂಸ್ ಕಡಬ) newskadba.com ಮಂಗಳೂರು, ಜೂ. 08. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ಮಕ್ಕಳನ್ನು ನೀರು ಇರುವ ತಗ್ಗು ಪ್ರದೇಶ,

ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ Read More »

ಕರಾವಳಿ, ಕರ್ನಾಟಕ

ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಹಾವೇರಿ, ಜೂ. 07. ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಸ್ಲೀಪರ್ ಕೋಚ್ ಬಸ್‌‌ನಲ್ಲಿ ವಿಷ ಸೇವಿಸಿದ್ದು, ಈ ಪೈಕಿ ಯುವತಿ ಮೃತಪಟ್ಟು, ಯುವಕ ಅಸ್ವಸ್ಥಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಬೆಂಗಳೂರು ಮೂಲದ ವಿದ್ಯಾರ್ಥಿನಿ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಎಂದು ಗುರುತಿಸಲಾಗಿದೆ. ಮುಂಬೈಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿ ಬಸ್ ನಿಲ್ಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಬಾಡಿಗೆದಾರರಿಗೂ ಉಚಿತ ವಿದ್ಯುತ್‌’ ➤ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba@gmail.comಬೆಂಗಳೂರು ,( ಜೂ 06) ರಾಜ್ಯದಲ್ಲಿ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ 200 ಯೂನಿಟ್ವರೆಗೆ ಉಚಿತ  ವಿದ್ಯುತ್ ನೀಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಕೆಲವರು50, ಇನ್ನು ಕೆಲವರು 70, 150, 200ಯೂನಿಟ್‌ ವಿದ್ಯುತ್‌ ಬಳಕೆ ಮಾಡುತ್ತಿರಬಹುದು. ಇದರ ವ್ಯಾಪ್ತಿಯಲ್ಲಿ ಬರುವ ಯಾವುದೇ ಗ್ರಾಹಕರು ವಿದ್ಯುತ್‌ ದರವನ್ನು ಪಾವತಿಸುವ ಅಗತ್ಯವಿಲ್ಲ. ಆದರೆ, ಈ ಉಚಿತ ವಿದ್ಯುತ್‌ ಯೋಜನೆ ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಹೀಗಾಗಿ, ಬಾಡಿಗೆದಾರರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಇಷ್ಟೆಲ್ಲಾ ಆದರೂ ಒಂದೇ ಮಾಲೀಕರ ಹೆಸರಿನಲ್ಲಿ

‘ಬಾಡಿಗೆದಾರರಿಗೂ ಉಚಿತ ವಿದ್ಯುತ್‌’ ➤ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಬಾಡಿಗೆ ದಾರರಿಗೂ ವಿದ್ಯುತ್ ಉಚಿತ ➤ಇಂಧನ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ)newskadaba@gmail.com ಬೆಂಗಳೂರು:(ಜೂ.06) ಇಂಧನ ಸಚಿವರಿಂದ ಸ್ಪಷ್ಟನೆ ಬಾಡಿಗೆ ದಾರರಿಗು 200ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಎಷ್ಟು ವರ್ಷದಿಂದ ಬಾಡಿಗೆ ಮನೆಯಲ್ಲಿ ಇದ್ದೇವೆ ಎಂಬ ದಾಖಲೆಗಳು ಇರಬೇಕು. ಮನೆ ಮಾಲೀಕ ತೆರಿಗೆ ಕಟ್ಟಿರಬೇಕು ಹಾಗೂ ಕರೆಂಟ್‌ ಬಿಲ್‌ ಮತ್ತು ಅಗ್ರಿಮೆಂಟ್‌ ಇರಬೇಕು.ಈ ಎಲ್ಲ ಷರತ್ತುಗಳು ಅನ್ವಯ ವಾಗುತ್ತದೆ. ಪ್ರಯೋಜನವನ್ನು  ಪಡೆಯಲು ಇಚ್ಚಿಸುವ ಗ್ರಾಹಕರು ‘ಸೇವಾ ಸಿಂಧು’ ಮೂಲಕ ಅರ್ಜಿ ಸಲ್ಲಿಸಬೇಕು. 2022-2023ರ ಹಣಕಾಸು

ಬಾಡಿಗೆ ದಾರರಿಗೂ ವಿದ್ಯುತ್ ಉಚಿತ ➤ಇಂಧನ ಸಚಿವರಿಂದ ಸ್ಪಷ್ಟನೆ Read More »

ಕರ್ನಾಟಕ

ಜುಲೈ 07ರಂದು ರಾಜ್ಯ ಬಜೆಟ್ ಮಂಡನೆ ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 05. ಬರುವ ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜು. 07ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ, ಹಣಕಾಸು ಇಲಾಖೆ ಸಚಿವ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುವರು. ರಾಜ್ಯಪಾಲರ ಭಾಷಣದ ಕುರಿತು ಚರ್ಚೆ ನಡೆದ ಬಳಿಕ ಜು. 07 ರ ಶುಕ್ರವಾರದಂದು ಬಜೆಟ್ ಮಂಡನೆ ಮಾಡಲಾಗುವುದು ಎಂದರು. ಇನ್ನು ಈ

ಜುಲೈ 07ರಂದು ರಾಜ್ಯ ಬಜೆಟ್ ಮಂಡನೆ ➤ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಹೋಗುತ್ತಿದ್ದ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ದ್ವಿಚಕ್ರ ವಾಹನ ಸವಾರ

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top