karnataka

108 ಆಂಬ್ಯುಲೆನ್ಸ್​ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ.!

(ನ್ಯೂಸ್ ಕಡಬ)newskadaba.com ಉಡುಪಿ ,ಮೇ.27  108 ಆಂಬ್ಯುಲೆನ್ಸ್​ನಲ್ಲಿಯೇ ಮಹಿಳೆಯೊರ್ವರಿಗೆ ಹೆರಿಗೆ ಆದ ಘಟನೆ ಆದಿ ಉಡುಪಿ ಬಳಿ ನಡೆದಿದೆ. ಆದಿ ಉಡುಪಿಯಿಂದ ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಧ್ಯ ದಾರಿಯಲ್ಲಿ ಸರೋಜಾ (28) ಎಂಬ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸಹಾಯಕರಾದ ಆಂಬುಲೆನ್ಸ್ ಚಾಲಕರು ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದ್ದು, ತಾಯಿ ಮಗು ಆರೋಗ್ಯವಾಗಿ ಇದ್ದಾರೆ.  

108 ಆಂಬ್ಯುಲೆನ್ಸ್​ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ.! Read More »

ಕರ್ನಾಟಕ

ಕಾಂಗ್ರೆಸ್ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.!➤ನಳಿನ್ ಕಮಾರ್ ಕಟೀಲ್

(ನ್ಯೂಸ್ ಕಡಬ)newskadaba.com ಮಂಗಳೂರು,ಮೇ.27 ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ‌ ಅವರಿಗೆ ಈ‌ ಹಿಂದೆ ಬಿಜೆಪಿ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ‌ ಕೊಡಿಸಿತ್ತು.‌ ಇದೀಗ ಕಾಂಗ್ರೆಸ್ ಸರಕಾರದ ಅವರನ್ನು ಉದ್ಯೋಗದಿಂದ ಬಿಡುಗಡೆ ಮಾಡಿದೆ.‌ ಕಾಂಗ್ರೆಸ್ ಈ ರೀತಿಯ ದ್ವೇಷ ಸಾಧಿಸದೆ ಅವರಿಗೆ ಮತ್ತೆ ಕೆಲಸ ನೀಡಬೇಕು.ಒಂದು ವೇಳೆ ಕೆಲಸ ನೀಡದಿದ್ದರೆ ಕೇಂದ್ರ ಸರಕಾರ ಸಾಮ್ಯದ ಸಂಸ್ಥೆಗಳನ್ನು ಕೆಲಸ ಕೊಡಿಸುತ್ತೇವೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

ಕಾಂಗ್ರೆಸ್ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.!➤ನಳಿನ್ ಕಮಾರ್ ಕಟೀಲ್ Read More »

ಕರಾವಳಿ

ಶಾಸಕರು ತಾಳ್ಮೆಯಿಂದರಬೇಕು ಮುಂದೆ ಎಲ್ಲರಿಗೂ ಅವಕಾಶ ಸಿಗಲಿದೆ.!➤ಡಿಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.27 ಸಚಿವ ಸ್ಥಾನ ಸಿಗದೆ ಹೋಗಿರುವುದಕ್ಕೆ ಕಾಂಗ್ರೆಸ್ ಪಕ್ಷದ ಹಲವಾರು ಶಾಸಕರಲ್ಲಿ ಅಸಮಾಧಾನ, ಹತಾಷೆ ಮೂಡಿದೆ. ನೊಂದ ಶಾಸಕರಿಗೆ ಉಪ ಮುಖ್ಯಮಂತ್ರಿ ಡಿಕೆ  ಶಿವಕುಮಾರ್ ‘’ಎಲ್ಲರೂ ತಾಳ್ಮೆಯಿಂದರಬೇಕು ಮುಂದೆ ಎಲ್ಲರಿಗೆ ಅವಕಾಶ ಸಿಗಲಿದೆ’’ ಎಂದು ಎಚ್ಚರಿಕೆ ರೂಪದ ಸಲಹೆ ನೀಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿಗಳು ಹಿಂದೆ, ಧರಂ ಸಿಂಗ್ ಅವರ ಅವಧಿ ಮತ್ತು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ತನಗೂ ಅವಕಾಶ ಸಿಕ್ಕಿರಲಿಲ್ಲ, ಆಗ ತಾನು ತಾಳ್ಮೆಯಿಂದ ಇದ್ದ ಹಾಗೆಯೇ, ಈಗಿನ ಅವಕಾಶವಂಚಿತರು

ಶಾಸಕರು ತಾಳ್ಮೆಯಿಂದರಬೇಕು ಮುಂದೆ ಎಲ್ಲರಿಗೂ ಅವಕಾಶ ಸಿಗಲಿದೆ.!➤ಡಿಕೆ ಶಿವಕುಮಾರ್ Read More »

ಕರ್ನಾಟಕ

ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ನಾಪತ್ತೆ.!➤ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ,ಮೇ.27  ಬಹ್ರೇನ್‌ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದವರನ್ನು ಶುಭ.ಕೆ (38) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.ಈ ಬಗ್ಗೆ ಮಹಿಳೆಯ ಗಂಡ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  

ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ನಾಪತ್ತೆ.!➤ದೂರು ದಾಖಲು Read More »

ಕರ್ನಾಟಕ

ಟೆಕ್ಕಿಗೆ ಆಟೋ ಗುದ್ದಿಸಿ ಚಾಲಕ ಪರಾರಿ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.27  ಆಟೋ ಚಾಲಕ ಕೇಳಿದ ಹೆಚ್ಚುವರಿ ದರವನ್ನು ನೀಡಲು ನಿರಾಕರಿಸಿದ ಟೆಕ್ಕಿ ಓರ್ವನನ್ನು ಚಾಲಕ ಗುದ್ದಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಚ್‌ಎಸ್‌ಆರ್ ಲೇಔಟ್ ಸೆಕ್ಟರ್ ಒಂದರಲ್ಲಿ ಈ ಘಟನೆ ನಡೆದಿದೆ. ಈ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಟೆಕ್ಕಿಗೆ ಆಟೋ ಗುದ್ದಿಸಿ ಚಾಲಕ ಪರಾರಿ.! Read More »

ಕರ್ನಾಟಕ

ಹಾಸನದಲ್ಲಿ ಮಹಿಳಾ PSI ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com ಹಾಸನ, ಮೇ.27. ಮಹಿಳಾ ಸಬ್‌ಇನ್ಸ್‌ ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆಯ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಹಾಸನದಲ್ಲಿ ಮಹಿಳಾ PSI ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು(ಮೇ.27) 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.27. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು ಶನಿವಾರ 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸುಂದರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಇಂದು(ಮೇ.27) 24 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ನೀಡಿದ್ದ ಕುಕ್ಕರ್.!➤ಸ್ಪೋಟಗೊಂಡು ಬಾಲಕಿಗೆ ಗಾಯ

(ನ್ಯೂಸ್ ಕಡಬ)newskadaba.com ರಾಮನಗರ,ಮೇ.27 ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ನೀಡಿದ್ದ ಕುಕ್ಕರ್ ಸಿಡಿದು ಬಾಲಕಿ ಗಾಯಗೊಂಡ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಹಾಲಕ್ಷ್ಮಿ(17) ಗಾಯಗೊಂಡ ಬಾಲಕಿ. ಅಡುಗೆ ಮಾಡುವ ವೇಳೆ ಕುಕ್ಕರ್ ಸಿಡಿದು ಮಹಾಲಕ್ಷ್ಮಿ ಮುಖಕ್ಕೆ ಗಾಯಗಳಾಗಿವೆ. ಆಕೆಯನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಲಕೃಷ್ಣ ಅವರ ಬೆಂಬಲಿಗರು ಮತದಾರರಿಗೆ ಹಂಚಿದ್ದ ಕುಕ್ಕರ್ ಇದಾಗಿದೆ.ಗ್ರಾಮಸ್ಥರು ಕುಕ್ಕರ್ ಗಳನ್ನು ರಸ್ತೆಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ನೀಡಿದ್ದ ಕುಕ್ಕರ್.!➤ಸ್ಪೋಟಗೊಂಡು ಬಾಲಕಿಗೆ ಗಾಯ Read More »

ಕರ್ನಾಟಕ

ವೈದ್ಯರ ‌ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿ ಆರೋಪ ➤ ಆಸ್ಪತ್ರೆ ಮೇಲೆ ಕಲ್ಲು ತೂರಾಟ

(ನ್ಯೂಸ್ ಕಡಬ)newskadaba.com ಗದಗ, ಮೇ.27. ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೋರ್ವರು ಬಲಿಯಾಗಿರುವ ಆರೋಪ ಬೆಟಗೇರಿ ಜರ್ಮನ್ ಆಸ್ಪತ್ರೆಯಲ್ಲಿ ಕೇಳಿ ಬಂದಿದೆ. ಇಸ್ಮಾಯಿಲ್ ಡಂಬಳ ಮೃತ ರೋಗಿ ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಡಂಬಳ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ ನಾಲ್ಕು‌ ದಿನಗಳ ಹಿಂದೆ ಜರ್ಮನ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಅವರಿಗೆ ನಾಲ್ಕು ದಿನಗಳಿಂದ ಐಸಿಯುನಲ್ಲಿ‌ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ರೋಗಿಯನ್ನು ನೋಡಲು ಸಂಬಂಧಿಕರಿಗೆ ಬಿಟ್ಟಿರಲಿಲ್ಲ ಎಂದು ಆಪಾದಿಸಲಾಗಿದೆ.

ವೈದ್ಯರ ‌ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿ ಆರೋಪ ➤ ಆಸ್ಪತ್ರೆ ಮೇಲೆ ಕಲ್ಲು ತೂರಾಟ Read More »

ಕರ್ನಾಟಕ

ಕಾಂಗ್ರೆಸ್ ನಿಂದ ನೂತನ 24 ಸಚಿವರ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.27. ಸಚಿವ ಸಂಪುಟಕ್ಕೆ ಭಾರೀ ಕಸರತ್ತು ನಡೆದು‌ ಕೊನೆಗೆ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈಗಾಗಲೇ ಮುಖ್ಯಮಂತ್ರಿಗಳ ಕಚೇರಿಯಿಂದ ನೂತನ ಸಚಿವರ ಪಟ್ಟಿ ರಾಜಭವನಕ್ಕೆ ರವಾನೆಯಾಗಿದೆ. ನೂತನ ಸಚಿವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿ 10 ಮಂದಿ ಸಂಪುಟದಲ್ಲಿದ್ದು, 34 ಸದಸ್ಯ ಬಲದ ಸಂಪುಟದಲ್ಲಿ ಹಾಲಿ 24 ಸ್ಥಾನಗಳು ಖಾಲಿ ಇತ್ತು. ಸಚಿವ ಸಂಪುಟ ಸೇರ್ಪಡೆಗೆ ಕಸರತ್ತಿನ

ಕಾಂಗ್ರೆಸ್ ನಿಂದ ನೂತನ 24 ಸಚಿವರ ಪಟ್ಟಿ ಬಿಡುಗಡೆ Read More »

ಕರ್ನಾಟಕ
Scroll to Top