karnataka

ಮಾರಾಕಾಸ್ತ್ರಗಳಿಂದ ಕೊಚ್ಚಿ `ಕಾಂಗ್ರೆಸ್ ಕಾರ್ಯಕರ್ತ’ನ ಬರ್ಬರ ಹತ್ಯೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25   ಬೆಂಗಳೂರಿನ ಚೌಡೇಶ್ವರಿ ನಗರದ ಹಳ್ಳಿ ರುಚಿ ಬಳಿ ಕಾಂಗ್ರೆಸ್ ಕಾರ್ಯಕರ್ತರ ರವಿ ಅಲಿಯಾಸ್ ಮತ್ತಿ ರವಿ (42) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ರವಿ ಹತ್ಯೆಗೂ ಮುನ್ನ ಏರಿಯಾಗಳಲ್ಲಿ ಹಾಕಿದ್ದ ಬ್ಯಾನರ್ ಹರಿದು ಹಾಕಿದ್ದಾರೆ. ಬಳಿಕ ರವಿಯನ್ನು ಸಿಎಂಹೆಚ್ ಬಾರ್ ನಿಂದ ಅಟ್ಟಾಡಿಸಿಕೊಂಡು ಬಂದು ಹಳ್ಳಿ ರುಚಿ ಹೋಟೆಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ […]

ಮಾರಾಕಾಸ್ತ್ರಗಳಿಂದ ಕೊಚ್ಚಿ `ಕಾಂಗ್ರೆಸ್ ಕಾರ್ಯಕರ್ತ’ನ ಬರ್ಬರ ಹತ್ಯೆ.! Read More »

ಕರ್ನಾಟಕ

ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ಪರಿಹಾರ ನೀಡುತ್ತೇವೆ.!➤ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25  ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ನೀಡಲು ಬಿಬಿಎಂಪಿ ಮುಂದಾಗಿದೆ. ಅಧಿಕಾರಿಗಳಿಂದ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದ್ದು, ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಬೆಂಗಳೂರು ಮಹಾನಗರದಲ್ಲಿ ಕಳೆದ ನಾಲ್ಕು ದಿನ ಸುರಿದ ಭಾರಿ ಮಳೆಯಿಂದ ಮನೆಗೆ ನೀರು ನುಗ್ಗಿ ತೊಂದರೆಗೆ ಒಳಗಾದ ಪ್ರತಿ ಕುಟುಂಬಗಳಿಗೆ 10000 ರೂ.ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.        

ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ಪರಿಹಾರ ನೀಡುತ್ತೇವೆ.!➤ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ Read More »

ಕರ್ನಾಟಕ

ನಿಂತಿದ್ದ ಬಸ್ ಗೆ ಟೆಂಪೋ ಟ್ರಾವಲ್ಸ್ ಢಿಕ್ಕಿ.!➤ ಇಬ್ಬರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕುಣಿಗಲ್,ಮೇ.25 ನಿಂತಿದ್ದ ಬಸ್ ಗೆ ಟೆಂಪೋ ಟ್ರಾವಲ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದ ಪರಿಣಾಮ ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿ ಟಿಟಿ ಚಾಲಕ ವೀರೇಶ್ (30), ಶಶಿಕಲಾ (69) ಮೃತಪಟ್ಟವರಾಗಿದ್ದು, ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಗಾಯಗೊಂಡಿದ್ದಾರೆ. ಇವರುಗಳು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಹುಲಿಯೂರುದುರ್ಗ

ನಿಂತಿದ್ದ ಬಸ್ ಗೆ ಟೆಂಪೋ ಟ್ರಾವಲ್ಸ್ ಢಿಕ್ಕಿ.!➤ ಇಬ್ಬರು ಮೃತ್ಯು, ಹಲವರಿಗೆ ಗಾಯ Read More »

ಕರ್ನಾಟಕ

4ನೇ ಮಹಡಿಯಿಂದ ಜಿಗಿದು ವ್ಯಕ್ತಿ ಮೃತ್ಯು.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25  ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ವ್ಯಕ್ತಿಯೊಬ್ಬ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 4ನೇ ಮಹಡಿಯಿಂದ ಜಿಗಿದು 31 ವರ್ಷದ ಮೊಹಮ್ಮದ್ ಹುಸೇನ್ ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ಬೇಗೂರು ರಸ್ತೆಯಲ್ಲಿ ನಡೆದಿದೆ. ಮಹಮ್ಮದ್ ಹುಸೇನ್​ನನ್ನು ವಶಕ್ಕೆ ಪಡೆಯಲು ನಾಲ್ವರು ಪೊಲೀಸರ ತಂಡ ತೆರಳಿತ್ತು. ನಾಲ್ಕನೇ ಮಹಡಿಯ ಟೆರೇಸ್ ಮೇಲಿಂದ ವಶಕ್ಕೆ ಪಡೆಯುತ್ತಿದ್ದ ವೇಳೆ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

4ನೇ ಮಹಡಿಯಿಂದ ಜಿಗಿದು ವ್ಯಕ್ತಿ ಮೃತ್ಯು.! Read More »

ಕರ್ನಾಟಕ

ಮಹಿಳೆಯ ಅಶ್ಲೀಲ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ಕಿಡಿಗೇಡಿ.! ➤ದೂರು ದಾಖಲು

(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಮೇ.25 ಮಹಿಳೆಯ ಖಾಸಗಿ ಫೋಟೋ, ವಿಡಿಯೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡೂರು ಮೂಲದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆ ಬೆಂಗಳೂರಿನಲ್ಲಿದ್ದ ಸಂದರ್ಭದಲ್ಲಿ ಮೊಬೈಲ್ ನಲ್ಲಿ ಗೌಪ್ಯವಾಗಿ ಅಶ್ಲೀಲ ಫೋಟೋ, ವಿಡಿಯೋ ತೆಗೆದಿದ್ದಾನೆ. ಮಹಿಳೆ ಶಿವಮೊಗ್ಗದಲ್ಲಿ ಕೆಲಸ ಮಾಡುತ್ತಿದ್ದು, ಕರೆ ಮಾಡಿ ತನ್ನೊಂದಿಗೆ ಬರುವಂತೆ ಬ್ಲಾಕ್ ಮೇಲ್ ಮಾಡಿ ಬೆದರಿಸಿದ್ದಾನೆ.ಇದಕ್ಕೆ ಮಹಿಳೆ ಒಪ್ಪದಿದ್ದಾಗ ಆಕೆಯ ಸಂಬಂಧಿಕರ ಮೊಬೈಲ್ ಸಂಖ್ಯೆ ತಿಳಿದುಕೊಂಡು ಖಾಸಗಿ ಫೋಟೋಗಳನ್ನು ಅವರಿಗೆ ಕಳುಹಿಸಿದ್ದಾನೆ.

ಮಹಿಳೆಯ ಅಶ್ಲೀಲ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ಕಿಡಿಗೇಡಿ.! ➤ದೂರು ದಾಖಲು Read More »

ಕರ್ನಾಟಕ

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25 ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ವಿಧಾಣಸಭೆ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವಕ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.  

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.! Read More »

ಕರ್ನಾಟಕ

ಚಿಕಿತ್ಸೆ ನೀಡಲು ನಿರಾಕರಿಸಿದ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಅಮಾನತು.!

(ನ್ಯೂಸ್ ಕಡಬ)newskadaba.com ಹಾವೇರಿ,ಮೇ.24  ಪುಡ್ ಪಾಯಿಸನ್ ನಿಂದ ಆಸ್ಪತ್ರೆಗೆ ದಾಖಲಾದಂತ ಜನರಿಗೆ ಚಿಕಿತ್ಸೆ ನೀಡಲು ವಿಳಂಬ, ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ತೋರಿದಂತ ರಟ್ಟೀಹಳ್ಳಿ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಪುಡ್ ಪಾಯಿಸನ್ ನಿಂದ 40ಕ್ಕೂ ಹೆಚ್ಚು ಮಂದಿ ಜನರು ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ನೀಡದೇ ವೈದ್ಯ ಡಾ.ಪುಷ್ಪಾ ನಿರ್ಲಕ್ಷ್ಯ ತೋರಿದ್ದರು. ಕರ್ತವ್ಯಕ್ಕೆ ತಡವಾಗಿ ಬಂದಿದ್ದಲ್ಲದೆ, ಸೂಕ್ತ ಕಾಲದಲ್ಲಿ ಚಿಕಿತ್ಸೆ ನೀಡದ ಕಾರಣ ಅವರಿಗೆ ಜಿಲ್ಲಾಡಳಿತ ಅಮಾನತು ಶಿಕ್ಷೆಯನ್ನು ನೀಡಿ, ಶಾಕ್

ಚಿಕಿತ್ಸೆ ನೀಡಲು ನಿರಾಕರಿಸಿದ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಅಮಾನತು.! Read More »

ಕರ್ನಾಟಕ

ವಿಧಾನಸಭೆಯ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧವಾಗಿ ಆಯ್ಕೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ.24. ವಿಧಾನಸಭೆ ನೂತನ ಸ್ಪೀಕರ್‌ ಆಗಿ ಯುಟಿ ಖಾದರ್‌ ಅವಿರೋಧ ಆಯ್ಕೆಯಾಗಿದ್ದಾರೆ. ಸ್ಪೀಕರ್‌ ಸ್ಥಾನಕ್ಕೆ ಯುಟಿ ಖಾದರ್‌ ಹೈಕಮಾಂಡ್ ಸೂಚನೆ ಮೇರೆಗೆ ನಾಮಪತ್ರವನ್ನು ಸಲ್ಲಿಸಿದ್ದರು. ಬೇರೆ ಯಾರೂ ಕೂಡ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ. ಇದರಿಂದಾಗಿ ಖಾದರ್ ಇಂದು ಅಧಿಕೃತವಾಗಿ ಸ್ಪೀಕರ್‌ ಆಗಿ ಅಧಿಕಾರ ಹಂಗಾಮಿ ಸ್ಪೀಕರ್‌ ಆರ್.ವಿ ದೇಶಪಾಂಡೆ ಅವರಿಂದ ಸ್ವೀಕಾರ ಮಾಡಿದರು. ನೂತನ ಸ್ಪೀಕರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಅಭಿನಂದನೆ ಸಲ್ಲಿಸಿದರು. ಸಚಿವ ಸ್ಥಾನದ

ವಿಧಾನಸಭೆಯ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧವಾಗಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಸ್ಥಿತಿ.!➤ ಜನರ ಪರದಾಟ  

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ,ಮೇ.24 ಬಡವರ ಸಂಜೀವಿನಿ ಎಂದು ಹೆಸರಾದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಸ್ಥಿತಿ ಮಳೆಯಿಂದಾಗಿ ಬಯಲಾಗಿದೆ. ನಗರದಲ್ಲಿ ಸುರಿದ ಬಾರಿ ಮಳೆಗೆ ಕಿಮ್ಸ್ ಆಸ್ಪತ್ರೆಯ ಒಳಗಡೆಯೇ ನೀರು ಬಂದು ರೋಗಿಗಳು, ರೋಗಿಗಳ ಸಂಬಂಧಿಕರು, ಕಿಮ್ಸ್ ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಪರದಾಡಿದ ದ್ರಶ್ಯಗಳು ಕಿಮ್ಸ್ ಆಸ್ಪತ್ರೆಯ ಐ‌ಸಿ‌ಯು ಮುಂಭಾಗದಲ್ಲಿ ಕಂಡು ಬಂದಿದೆ. ಇನ್ನು ಕಿಮ್ಸ್ ಆಸ್ಪತ್ರೆಯ ನಿರ್ವಹಣೆಗಾಗಿ ಪ್ರತಿವರ್ಷ ಕೋಟ್ಯಾಂತರ ರೂಪಾಯಿ ಅನುದಾನ ಹರಿದು ಬಂದರು ಕೂಡಾ ಆ ಅನುದಾನ ಹರಿದು ಎಲ್ಲೋ ಸೇರುವುದರಿಂದ,

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಸ್ಥಿತಿ.!➤ ಜನರ ಪರದಾಟ   Read More »

ಕರ್ನಾಟಕ

ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಜಾರಿಗೆ ದಿನಗಣನೆ ಶುರು.!

(ನ್ಯೂಸ್ ಕಡಬ)newskadaba.comಬೆಂಗಳೂರು,ಮೇ.24 ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಜಾರಿಗೆ ದಿನಗಣನೆ ಶುರುವಾಗಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಗೆ ಸಾರಿಗೆ ಇಲಾಖೆ ಸಿದ್ಧತೆ ನಡೆಸುತ್ತಿದೆ. ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಕಲ್ಪಿಸಲು ಸರ್ಕಾರ ಸಿದ್ದತೆ ನಡೆಸಿದ್ದು, ಫ್ರೀ ಬಸ್ ಭಾಗ್ಯಕ್ಕೆ ಕಂಡೀಷನ್ ಹಾಕಿಯೇ ಫ್ರೀ ಬಸ್ ಸೇವೆ ನೀಡಲು ಪ್ಲಾನ್ ಮಾಡಿದೆ.ಶೀಘ್ರದಲ್ಲೇ ಷರತ್ತು ಮತ್ತು ನಿರ್ಬಂಧ ಗಳಿಗ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಆಗಲಿದ್ದು, ಒಂದೆರಡು

ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಜಾರಿಗೆ ದಿನಗಣನೆ ಶುರು.! Read More »

ಕರ್ನಾಟಕ
Scroll to Top