karnataka

ವಿದ್ಯಾರ್ಥಿಯನ್ನು ಸಕಾಲಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಪೊಲೀಸ್ ಸಿಬ್ಬಂದಿ ➤ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ವಿದ್ಯಾರ್ಥಿಯೊಬ್ಬ ಸಿಇಟಿ ಪರೀಕ್ಷೆ ಬರೆಯಲು ಹೋಗಬೇಕಿತ್ತು. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇದ್ದಿದ್ದರಿಂದ ನಗರದಲ್ಲಿ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಿದ್ಯಾರ್ಥಿ ಮನನೊಂದಿದ್ದ. ಈ ವಿಧ್ಯಾರ್ಥಿಯನ್ನು ನಗರದ ಪೊಲೀಸ್​ ಸಿಬ್ಬಂದಿ  ಹೊಯ್ಸಳ ವಾಹನದಲ್ಲಿ  ಸೈರನ್ ಹಾಕಿಕೊಂಡು ಸಕಾಲಕ್ಕೆ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಕೊತ್ತನೂರಿನ ಹೊಯ್ಸಳ ಸಿಬ್ಬಂದಿ ಗೌರಿಶ್ ಹಾಗೂ ಸೋಮಶೇಖರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.  

ವಿದ್ಯಾರ್ಥಿಯನ್ನು ಸಕಾಲಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಪೊಲೀಸ್ ಸಿಬ್ಬಂದಿ ➤ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ Read More »

ಕರ್ನಾಟಕ

ಮೇ.23 ರಿಂದ ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.ವಿದ್ಯಾರ್ಥಿಗಳು ಪರೀಕ್ಷಾ ವಲಯಗಳಲ್ಲಿ ನಿಯಮ ಪಾಲನೆ ಮಾಡುವುದು ಕಡ್ಡಾಯವಾವಾಗಿದೆ.  ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.

ಮೇ.23 ರಿಂದ ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಆರಂಭ Read More »

ಕರ್ನಾಟಕ

ದಂಪತಿ ಕಲಹಕ್ಕೆ ಇಬ್ಬರು ಕಂದಮ್ಮಗಳು ಬಲಿ

(ನ್ಯೂಸ್ ಕಡಬ)newskadaba.com ಹಾವೇರಿ,ಮೇ.22 ಪತಿ-ಪತ್ನಿಯರ ನಡುವೆ ನಡೆಯುತ್ತಿದ್ದ ಜಗಳ ಹಾಗೂ ಸಂಶಯ ಎರಡು ಕಂದಮ್ಮಗಳನ್ನು ಬಲಿ ತೆಗೆದುಕೊಂಡ ಘಟನೆ ಹಾವೇರಿ ಜಿಲ್ಲೆ ರಾಣಿಬೆನ್ನೂರ ತಾಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ನಡೆದಿದೆ. ಪತಿ ಮಂಜಯ್ಯ ಪಾಟೀಲಗೆ ಪತ್ನಿ ಸುನೀತಾ ಮೇಲೆ ಸಂಶಯ ಉಂಟಾಗಿದ್ದು, ನಿತ್ಯವೂ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಜಗಳದಿಂದ ಬೇಸತ್ತ ಸುನೀತಾ ಎರಡೂ ಮಕ್ಕಳನ್ನು ಕೊಠಡಿಯಲ್ಲಿ ನೇಣು ಹಾಕಿ, ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಳು. ಈ ಸಮಯದಲ್ಲಿ ಸಾಯುವ ಸಂಕಟದಲ್ಲಿದ್ದ ಸುನೀತಾ ಚೀರಿದ್ದಾಳೆ. ತಕ್ಷಣ ಧಾವಿಸಿದ ಅತ್ತೆ-ಮಾವ

ದಂಪತಿ ಕಲಹಕ್ಕೆ ಇಬ್ಬರು ಕಂದಮ್ಮಗಳು ಬಲಿ Read More »

ಕರ್ನಾಟಕ

ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಮೃತ್ಯು➤BBMP ಅಧಿಕಾರಿಗಳ ವಿರುದ್ಧ ದೂರು ದಾಖಲು.!

(ನ್ಯೂಸ್ ಕಡಬ)newskadaba.com ಹಲಸೂರು,ಮೇ.22 ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ವಿರುದ್ಧ ದೂರು ದಾಖಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್‌ಪಾಸ್‌ನಲ್ಲಿ ನೀರು ನಿಂತಿದೆ, ನೀರು ಹೊರಹೋಗಲು ಜಾಗ ಇಲ್ಲದಂತಾಗಿತ್ತು.ನೀರು ಹೋಗಲು ಜಾಗ ಇದ್ದಿದ್ದರೆ ಈ ಅವಘಡ ಸಂಭವಿಸುತ್ತಿರಲಿಲ್ಲ ಎಂದು ಭಾನು ಸಹೋದರ ಸಂದೀಪ್ ದೂರು ನೀಡಿದ್ದಾರೆ.

ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಮೃತ್ಯು➤BBMP ಅಧಿಕಾರಿಗಳ ವಿರುದ್ಧ ದೂರು ದಾಖಲು.! Read More »

ಕರ್ನಾಟಕ

ಮಳೆ ನೀರಿಗೆ ಯುವತಿ ಮೃತ್ಯು    ➤ BBMP ಅಧಿಕಾರಿಗಳ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್​ಪಾಸ್​ನಲ್ಲಿ ನೀರು ತುಂಬಿದೆ. ನೀರು ಹೊರ ಹೋಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್​​ಐಆರ್​​ ದಾಖಲಾಗಿದ್ದು,

ಮಳೆ ನೀರಿಗೆ ಯುವತಿ ಮೃತ್ಯು    ➤ BBMP ಅಧಿಕಾರಿಗಳ ವಿರುದ್ಧ ದೂರು ದಾಖಲು Read More »

ಕರ್ನಾಟಕ

ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ.!➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಡಿಕೇರಿ,ಮೇ.22 ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.ವಾಹನ ನಿಲುಗಡೆ ಸಂಬಂಧ ಉಂಟಾದ ವಿವಾದ ಹಲ್ಲೆಗೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.’ರಸ್ತೆಯಲ್ಲಿ ಗಲಾಟೆ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಆರೋಪದ ಮೇರೆಗೆ ಭರತ್, ಸುಬ್ಬಯ್ಯ ಹಾಗೂ ಪ್ರಜ್ವಲ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.  

ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ದೊಣ್ಣೆಯಿಂದ ಹಲ್ಲೆ.!➤ ಪ್ರಕರಣ ದಾಖಲು Read More »

ಕರ್ನಾಟಕ

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರು ನೇಮಕಗೊಂಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ. ಬಿಹಾರ ಮೂಲದ ಡಾ.ಅಲೋಕ್ ಮೋಹನ್ ಅವರು 1987 ರ ಬ್ಯಾಚ್ ನ ಹಿರಿಯ IPS ಅಧಿಕಾರಿಯಾಗಿದ್ದಾರೆ. ಅವರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.  

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕ Read More »

ಕರ್ನಾಟಕ

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ.!➤ ಹೈಕೋರ್ಟ್

(ನ್ಯೂಸ್ ಕಡಬ)newskadaba.com ತುಮಕೂರು,ಮೇ.22 ರಾಜ್ಯ ಸರ್ಕಾರಕ್ಕೆ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಇಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾ.ಕೃಷ್ಣ ದೀಕ್ಷೀತ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿದ್ದು, ಮುರುಘಾಮಠಕ್ಕೆ ವೀರಶೈವ ಮುಖಂಡರು, ಸಮಾಜದ ಪ್ರಮುಖರು ಆಡಳಿತ ನಡೆಸಬಹುದು. ಆಡಳಿತಾಧಿಕಾರಿಗೆ ಅಧಿಕಾರ ಇಲ್ಲ ಎಂದು ಹೈಕೋರ್ಟ್ ತಿಳಿಸಿದೆ.ಈ ಸಂಬಂಧ ಡಾ. ಶಿವಮೂರ್ತಿ ಮುರುಘಾಶ್ರೀ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆಡಳಿತಾಧಿಕಾರಿ ನೇಮಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕಸದಸ್ಯ

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ.!➤ ಹೈಕೋರ್ಟ್ Read More »

ಕರ್ನಾಟಕ

ಹಾವು ಕಡಿದು 27 ವರ್ಷದ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಧಾರವಾಡ, ಮೇ.22. ವಿಷಪೂರಿತ ಹಾವು ಕಡಿತದಿಂದಾಗಿ 27 ವರ್ಷದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಶ್ರಿರಾಮನಗರ ನಿವಾಸಿ ಚೇತನ್ (27) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ವಿಷಕಾರಿ ಹಾವೊಂದು ಶ್ರಿರಾಮನಗರದ ತುಳಜಾ ಭವಾನಿ ದೇವಸ್ಥಾನದ ಬಳಿ ಹೋಗುತ್ತಿತ್ತು. ಇದನ್ನು ಕಂಡ ಚೇತನ್ ಹಾವನ್ನು ಹಿಡಿಯುವ ಸಲುವಾಗಿ ಅದರ ಸಮೀಪ ಹೋಗಿದ್ದಾರೆ. ಈ ವೇಳೆ ಚೇತನ್ ಗೆ ಹಾವು ಕಚ್ಚಿದೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಾವು ಕಚ್ಚಿದ

ಹಾವು ಕಡಿದು 27 ವರ್ಷದ ಯುವಕ ಮೃತ್ಯು..! Read More »

ಕರ್ನಾಟಕ

ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಟೀಕಿಸಿದ ಶಿಕ್ಷಕ ಅಮಾನತು.!

(ನ್ಯೂಸ್ ಕಡಬ)newskadaba.com ತುಮಕೂರು,ಮೇ.22 ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಟೀಕಿಸಿ, ಶಿಕ್ಷಕನೊಬ್ಬ ಅಮಾನತುಗೊಂಡ ಪ್ರಕ್ರಿಯೆ ತುಮಕೂರಿನಲ್ಲಿ ನಡೆದಿದೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಾವಳಿ-1966ನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಟೀಕಿಸಿದ ಶಿಕ್ಷಕ ಅಮಾನತು.! Read More »

ಕರ್ನಾಟಕ
Scroll to Top