karnataka

ಸಚಿವ ಸ್ಥಾನ ಸಿಗದ ಕಾರಣಕ್ಕೆ ಫುಲ್ ಗರಂ ಆದ ಕಾಂಗ್ರೆಸ್ ನಾಯಕ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 10 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸ್ಥಾನ ನೀಡದಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಗರಂ ಆಗಿದ್ದಾರೆ. ಮೊದಲ ಲಿಸ್ಟ್ ನಲ್ಲಿ ಮಂತ್ರಿಗಿರಿ ಸಿಗದಿರುವುದಕ್ಕೆ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದು, ನಾನು 224 ಶಾಸಕರಲ್ಲೇ ಅತ್ಯಂತ ಹಿರಿಯ ಶಾಸಕನಾಗಿದ್ದೇನೆ. ಅತಿ ಹೆಚ್ಚು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನನ್ನನ್ನೇ ಹೊರಗಿಟ್ಟು ಪ್ರಮಾಣವಚನ ಮಾಡ್ತಾ ಇದ್ದಾರೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.ಇದು […]

ಸಚಿವ ಸ್ಥಾನ ಸಿಗದ ಕಾರಣಕ್ಕೆ ಫುಲ್ ಗರಂ ಆದ ಕಾಂಗ್ರೆಸ್ ನಾಯಕ Read More »

ಕರ್ನಾಟಕ

ಪೆಟ್ರೋಲ್ ಬಂಕ್​ನಲ್ಲಿ ಅಗ್ನಿ ದುರಂತ➤ಯವತಿ ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು,ಮೇ.20 ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಯುವತಿ ಸಾವನ್ನಪ್ಪಿದ್ದಾರೆ. ಶಿರಾ ತಾಲ್ಲೂಕಿನ ಜವನಹಳ್ಳಿ ಗ್ರಾಮದ ನಿವಾಸಿ ಭವ್ಯಾಗೌಡ ಮೃತ ಯುವತಿ. ಭವ್ಯಾ ಗೌಡ ತಮ್ಮ ಸ್ಕೂಟರ್​ಗೆ ಬಡವನಹಳ್ಳಿಯ ಬಂಕ್​ನಲ್ಲಿ ಪೆಟ್ರೋಲ್ ಹಾಕಿಸಲು ಬಂದಿದ್ದರು. ಸ್ಕೂಟರ್ ಇಂಜಿನ್ ಬಿಸಿಯಾಗಿದ್ದರಿಂದ ಪೆಟ್ರೋಲ್ ಹಾಕಿಸುವ ವೇಳೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಹತ್ತಿಕೊಂಡ ಬೆಂಕಿ ಭವ್ಯಾಗೌಡರನ್ನು ಆವರಿಸಿಕೊಂಡಿದೆ. ಕೂಡಲೇ ಬಂಕ್ ಸಿಬ್ಬಂದಿ ಬೆಂಕಿ ನಂದಿಸಿ ಭವ್ಯಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ

ಪೆಟ್ರೋಲ್ ಬಂಕ್​ನಲ್ಲಿ ಅಗ್ನಿ ದುರಂತ➤ಯವತಿ ಮೃತ್ಯು Read More »

ಕರ್ನಾಟಕ

ಪಿಯುಸಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಪಿಯುಸಿ ಮರು ಮೌಲ್ಯಮಾಪನದಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶ್ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶ್ ನಾಯ್ಕ್ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಪಿಯುಸಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ Read More »

ಕರ್ನಾಟಕ

ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ಕಂಠೀರವ ಕ್ರೀಡಾಂಗಣದ ಪ್ರವೇಶ ದ್ವಾರದ ಬೆಳಗ್ಗೆಯೇ ನೂಕುನುಗ್ಗಲು

ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​ Read More »

ಕರ್ನಾಟಕ

ಕಂಠೀರವ ಕ್ರೀಡಾಂಗಣದ ಬಳಿ ಜನಸಂದಣಿಯಿಂದ ನೂಕು ನುಗ್ಗಲು➤ ಪೊಲೀಸರಿಂದ ಲಾಠಿ ಚಾರ್ಜ್!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಮಾಡಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ವ್ಯವಸ್ಥೆ ಮಾಡಿದ್ದು, ಕಾರ್ಯಕ್ರಮಕ್ಕೆ ಜನರೇ ದಂಡೇ ಆಗಮಿಸುತ್ತಿದೆ.ಈ ನಡುವೆ ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಹೆಚ್ಚಿನ ಜನಸಂದಣಿಯಿಂದ ಗಲಾಟೆ ಶುರುವಾಗಿದ್ದು, ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಕ್ರೀಡಾಂಗಣದತ್ತ ಹೆಜ್ಜೆ ಹಾಕಿದ್ದಾರೆ. ಈ ವೇಲೆ ಪ್ರವೇಶ ದ್ವಾರದಲ್ಲಿ ಹೆಚ್ಚಿನ ಜನರಿಂದಾಗು ನೂಕು ನುಗ್ಗಲು ಉಂಟಾಗಿದೆ. ಜನರನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಪೊಲೀಸರು

ಕಂಠೀರವ ಕ್ರೀಡಾಂಗಣದ ಬಳಿ ಜನಸಂದಣಿಯಿಂದ ನೂಕು ನುಗ್ಗಲು➤ ಪೊಲೀಸರಿಂದ ಲಾಠಿ ಚಾರ್ಜ್! Read More »

ಕರ್ನಾಟಕ

ಪದಗ್ರಹಣ ಸಮಾರಂಭಕ್ಕೆ ರೈಲಿನಲ್ಲಿ ಆಗಮಿಸಿ, ಸರಳತೆ ಮೆರೆದ ಶಾಸಕ.!

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.20 ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್​ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಈಗಾಗಲೇ ಕಾಂಗ್ರೆಸ್​ ಪಕ್ಷದ ಶಾಸಕರು ಮತ್ತು ಅತಿಥಿಗಳು ರಾಜಧಾನಿಗೆ ಆಗಮಿಸಿದ್ದಾರೆ. ಇದರ ನಡುವೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್​ ಪುಟ್ಟಣ್ಣಯ್ಯ ಎಲ್ಲರ ಗಮನ ಸೆಳೆದಿದ್ದಾರೆ.ದರ್ಶನ್​ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ. ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ರೈಲಿನಲ್ಲಿ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರ ಆಹ್ವಾನ‌ದ ಮೇರೆಗೆ ದರ್ಶನ್​, ಪ್ರಮಾಣ

ಪದಗ್ರಹಣ ಸಮಾರಂಭಕ್ಕೆ ರೈಲಿನಲ್ಲಿ ಆಗಮಿಸಿ, ಸರಳತೆ ಮೆರೆದ ಶಾಸಕ.! Read More »

ಕರ್ನಾಟಕ

‘ಬ್ಯಾನ್‌ ಮಾಡುವುದಿದ್ದರೆ 2000 ರೂ. ನೋಟನ್ನು ಏಕೆ ಪರಿಚಯಿಸಿದ್ದೀರಿ’ ?       ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. 2000 ರೂಪಾಯಿ ಮುಖಬೆಲೆ ನೋಟನ್ನು ಹಿಂಪಡೆಯುವುದರ ಬಗ್ಗೆ ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು.

‘ಬ್ಯಾನ್‌ ಮಾಡುವುದಿದ್ದರೆ 2000 ರೂ. ನೋಟನ್ನು ಏಕೆ ಪರಿಚಯಿಸಿದ್ದೀರಿ’ ?       ➤ ಸಿದ್ದರಾಮಯ್ಯ ವಾಗ್ದಾಳಿ Read More »

ಕರ್ನಾಟಕ

ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ವಿಧಿವಶ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20  ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ (69) ಅವರು ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ಮನೆಗೆ ಮರಳಿದ ನಂತರ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣವೇ ಕುಟುಂಬ ಸದಸ್ಯರು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ

ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ವಿಧಿವಶ..! Read More »

ಕರ್ನಾಟಕ

ಪ್ರಿಯಕರನ ಸಹಾಯದಿಂದ ಪತಿಯನ್ನು ಉಸಿಗಟ್ಟಿಸಿ ಕೊಂದ ಪತ್ನಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿಗಟ್ಟಿಸಿ ಕೊಂದು ಆತ್ಮಹತ್ಯೆಯ ಕಥೆ ಕಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌.ಅನಿತಾ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆನಂದ್​ ಕೊಲೆಯಾದವರು.ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಯಲು. ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರ ಬಾತ್ ರೂಮಿನಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್ ಅವರ ಶವ ಪತ್ತೆಯಾಗಿತ್ತು. ಶವವನ್ನ ಪರಿಶೀಲಿಸಿದ್ದ ಕಾಡುಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ

ಪ್ರಿಯಕರನ ಸಹಾಯದಿಂದ ಪತಿಯನ್ನು ಉಸಿಗಟ್ಟಿಸಿ ಕೊಂದ ಪತ್ನಿ..! Read More »

ಕರ್ನಾಟಕ

ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ..!➤ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ,ಮೇ.19 ಕಟ್ಟಿಗೆ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, ಕ್ರೂಸರ್ ನಲ್ಲಿದ್ದ ಇಬ್ಬರು ಸಾವಿಗೀಡಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ನಡೆದಿದೆ. ಟ್ರ್ಯಾಕ್ಟರ್ ಡಿಕ್ಕಿ ಬಳಿಕ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿದೆ. ಕ್ರೂಸರ್ ನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಅಮಸಿದ್ದ ಬಂಡೆ (27) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ..!➤ಇಬ್ಬರು ಮೃತ್ಯು Read More »

ಕರ್ನಾಟಕ
Scroll to Top