karnataka

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ.!➤ಮೂವರು ಅಧಿಕಾರಿಗಳ ವಿರುದ್ಧ FIR  ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿರುವ ಆರೋಪ ವ್ಯಕ್ತವಾಗಿದ್ದು, ನಿಗಮದ ಮೂವರು ಅಧಿಕಾರಿಗಳ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಿ.ನಾಗೇಶ್ ಅವರು ಅಕ್ರಮದ ಬಗ್ಗೆ ದೂರು ನೀಡಿದ್ದಾರೆ. ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್, ಹಿಂದಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ಪ್ರಕಾಶ್ ಎಂ. ಹರಗಾಪುರೆ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್‌.ಟಿ. ಸೀತಾರಾಮ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು […]

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ.!➤ಮೂವರು ಅಧಿಕಾರಿಗಳ ವಿರುದ್ಧ FIR  ದಾಖಲು Read More »

ಕರ್ನಾಟಕ

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹತ್ಯೆ.!➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.19 ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ನಡೆದಿದೆ.ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹತ್ಯೆ.!➤ ಪ್ರಕರಣ ದಾಖಲು Read More »

ಕರ್ನಾಟಕ

ಮದ್ಯದ ಬಾಕ್ಸ್‌ಗಳನ್ನು ತುಂಬಿ ಸಾಗುತ್ತಿದ್ದ ಲಾರಿ ಪಲ್ಟಿ.!

(ನ್ಯೂಸ್ ಕಡಬ)newskadaba.com ಯಲ್ಲಾಪುರ,ಮೇ.18 ಮದ್ಯದ ಬಾಕ್ಸ್‌ಗಳನ್ನು ತುಂಬಿ ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ತಾಲ್ಲೂಕಿನ ಆರ್ತಿಬೈಲ್ ಘಟ್ಟದಲ್ಲಿ ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದ ಘಟನೆ ನಡೆದಿದೆ.ಲಾರಿ ಮದ್ಯದ ಬಾಟಲ್ ಇರುವ ಬಾಕ್ಸ್‌ಗಳನ್ನು ತುಂಬಿಕೊಂಡು ಕಲಬುರ್ಗಿಯಿಂದ ಉಡುಪಿಗೆ ಸಾಗುತ್ತಿತ್ತು. ಪಲ್ಟಿಯಾದ ಕಾರಣ ಲಾರಿಯ ಮುಂಭಾಗ ಜಖಂ ಆಗಿದ್ದು, ಲಾರಿಯ ಚಾಲಕ ಮತ್ತು ಸಹಾಯಕನಿಗೆ ಅಲ್ಪ ಪ್ರಮಾಣದ ಪೆಟ್ಟಾಗಿದೆ. ಯಲ್ಲಾಪುರ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.    

ಮದ್ಯದ ಬಾಕ್ಸ್‌ಗಳನ್ನು ತುಂಬಿ ಸಾಗುತ್ತಿದ್ದ ಲಾರಿ ಪಲ್ಟಿ.! Read More »

ಕರ್ನಾಟಕ

ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ ➤ ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.18. ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣು ಗೋಪಾಲ್, ಮೇ 20ರಂದು (ಶನಿವಾರ) ಮಧ್ಯಾಹ್ನ 12:30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜೊತೆಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ ➤ ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ Read More »

ಕರ್ನಾಟಕ

ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿದ ಸಿದ್ಧು, ಡಿಕೆಶಿ ➤ 30-30 ತಿಂಗಳು ಸಿಎಂ ಪಟ್ಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.18. ಕರ್ನಾಟಕ ಸಿಎಂ ಆಯ್ಕೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ಆಯ್ಕೆಯಾಗಿದ್ದರೆ, ಡಿಕೆ ಶಿವಕುಮಾರ್ ಗೆ ಉಪ ಮುಖ್ಯಮಂತ್ರಿ ಪಟ್ಟ ದೊರೆತಿದೆ. ಈ ಆಯ್ಕೆ ನಡೆದಿರೋದು ಅಧಿಕಾರ ಹಂಚಿಕೆ ಸೂತ್ರದಿಂದ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದಕ್ಕೆ ಸ್ಪಷ್ಟ ಬಹುಮತ ವಿಧಾನಸಭಾ ಚುನಾವಣೆಯಲ್ಲಿ ಬಂದು ಐದು ದಿನಗಳ ನಂತ್ರ, ಇಂದು ಕರ್ನಾಟಕ ಸಿಎಂ ಆಯ್ಕೆ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳಿಂದ ಸಿಎಂ ಹುದ್ದೆಗಾಗಿ ನಡೆಯುತ್ತಿದ್ದಂತ

ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿದ ಸಿದ್ಧು, ಡಿಕೆಶಿ ➤ 30-30 ತಿಂಗಳು ಸಿಎಂ ಪಟ್ಟ Read More »

ಕರ್ನಾಟಕ

91ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಮಂತ್ರಿ ಹೆಚ್​.ಡಿ ದೇವೇಗೌಡ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18 ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್​ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್​.ಡಿ ದೇವೇಗೌಡ ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ‘ದೇಶಕ್ಕೆ ನಿಮ್ಮ ಕೊಡುಗೆ ಅಪಾರ, ಆರೋಗ್ಯದಿಂದ ಇನ್ನು ಹೆಚ್ಚು ಕಾಲ ಬದುಕಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ‘ಹಿರಿಯ ಮುತ್ಸದ್ಧಿ

91ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಮಂತ್ರಿ ಹೆಚ್​.ಡಿ ದೇವೇಗೌಡ Read More »

ಕರ್ನಾಟಕ

ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ.!➤ನಳಿನ್ ಕುಮಾರ್ ಕಟೀಲ್ 

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18 ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಜನ ವಿದ್ಯುತ್ ಬಿಲ್ ಕಟ್ಟಬಾರದು. ತಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದರು. ತಮಗೂ ಸೇರಿಸಿ ಎಲ್ಲರಿಗೂ ವಿದ್ಯುತ್ ಉಚಿತ ಎಂದು ತಿಳಿಸಿದ್ದರು. ಹೀಗಾಗಿ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಹೇಳಿದ್ದಾರೆ.ಸಿದ್ಧರಾಮಯ್ಯನವರೇ ಹೇಳಿರುವಾಗ ಜನ ಏಕೆ ವಿದ್ಯುತ್ ಬಿಲ್ ಕಟ್ಟುತ್ತಾರೆ? ನನ್ನ ಪ್ರಕಾರ ಯಾರೂ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.    

ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ.!➤ನಳಿನ್ ಕುಮಾರ್ ಕಟೀಲ್  Read More »

ಕರ್ನಾಟಕ

ವಿಧಾನಸಭೆ ಚುನಾವಣೆ ಸೋಲಿಗೆ ಎದೆಗುಂದಬೇಡಿ..!➤ಎಚ್‌.ಡಿ.ದೇವೇಗೌಡ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18 ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಎದೆಗುಂದದೆ ಎಲ್ಲರೂ ಸೇರಿ ಪಕ್ಷ ಸಂಘಟನೆ ಮಾಡಿ ಬಲ ತುಂಬುವ ಕೆಲಸ ಮಾಡೋಣ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು ಭಾವನಾತ್ಮಕವಾಗಿ ಪಕ್ಷದ ಮುಖಂಡರಿಗೆ ಪತ್ರ ಬರೆದಿರುವ ಅವರು, ಪ್ರಜಾಪ್ರಭುತ್ವದ ಚುನಾವಣೆ ವ್ಯವಸ್ಥೆಯಲ್ಲಿ ಏಳು-ಬೀಳು ಸಹಜ. ಆದರೆ, ಪಕ್ಷಕ್ಕೆ ದೊರೆತಿರುವ ಫ‌ಲಿತಾಂಶದಿಂದ ಯಾರೂ ಎದೆಗುಂದಬಾರದು ಎಂದು ಮನವಿ ಮಾಡಿದ್ದಾರೆ.    

ವಿಧಾನಸಭೆ ಚುನಾವಣೆ ಸೋಲಿಗೆ ಎದೆಗುಂದಬೇಡಿ..!➤ಎಚ್‌.ಡಿ.ದೇವೇಗೌಡ Read More »

ಕರ್ನಾಟಕ

ಕೇಂದ್ರ ಸಚಿವರ ಬೆಂಬಲಿಗರಿಂದ ಶಾಸಕರಿಗೇ ಜೀವಭಯ..!➤ ದೂರು ನೀಡಲು ನಿರ್ಧರಿಸಿದ ಶಾಸಕರು

(ನ್ಯೂಸ್ ಕಡಬ)newskadaba.com ಬೀದರ್,ಮೇ.18 ಕೇಂದ್ರ ಸಚಿವರಿಂದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಿಗೇ ಜೀವಭಯ ಇದೆ ಎನ್ನಲಾದ ಪ್ರಕರಣ ಕೇಳಿಬಂದಿದ್ದು, ಸಚಿವರ ವಿರುದ್ಧ ಪೊಲೀಸ್ ಉನ್ನತಾಧಿಕಾರಿಗಳಿಗೆ ದೂರು ನೀಡಲು ಶಾಸಕರು ನಿರ್ಧಾರ ಮಾಡಿದ್ದಾರೆ.ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಆರೋಪಿಸಿರುವ ಶಾಸಕ ಪ್ರಭು ಚವ್ಹಾಣ ದೂರು ನೀಡಲು ನಿರ್ಧರಿಸಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ ಒಂದು ವರ್ಷದಿಂದ ನನ್ನ ವಿರುದ್ಧ ಕುತಂತ್ರ ಮಾಡುವ ಮೂಲಕ ಚುನಾವಣೆಯಲ್ಲಿ ನನನ್ನು ಸೋಲಿಸಲು ಕಾರಣರಾಗಿದ್ದಾರೆ. ಮಾತ್ರವಲ್ಲ,

ಕೇಂದ್ರ ಸಚಿವರ ಬೆಂಬಲಿಗರಿಂದ ಶಾಸಕರಿಗೇ ಜೀವಭಯ..!➤ ದೂರು ನೀಡಲು ನಿರ್ಧರಿಸಿದ ಶಾಸಕರು Read More »

ಕರ್ನಾಟಕ

ರಾಜ್ಯದ ಬಹುತೇಕ ಭಾಗದಲ್ಲಿ ದಿಢೀರ್ ತಾಪಮಾನ ಏರಿಕೆ➤ಬಿರು ಬಿಸಿಲ ಹೊಡೆತಕ್ಕೆ ಬೆಚ್ಚಿದ ಜನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18  ರಾಜ್ಯದ ಬಹುತೇಕ ಭಾಗದಲ್ಲಿ ತಾಪಮಾನ ದಿಢೀರ್ ಹೆಚ್ಚಳವಾಗಿದೆ. ರಾಜ್ಯ ಮಾತ್ರವಲ್ಲ, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಗೋವಾ, ತಮಿಳುನಾಡು, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳಲ್ಲಿ ತಾಪಮಾನ ದಿಢೀರ್ ಹೆಚ್ಚಳವಾಗಿದೆ. ಅನೇಕ ರಾಜ್ಯಗಳಲ್ಲಿ ತಾಪಮಾನ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ರಾಜ್ಯದಲ್ಲಿ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬಿರು ಬಿಸಿಲ ಹೊಡೆತಕ್ಕೆ ಜನ ತತ್ತರಿಸಿ ಹೋಗಿದ್ದಾರೆ.      

ರಾಜ್ಯದ ಬಹುತೇಕ ಭಾಗದಲ್ಲಿ ದಿಢೀರ್ ತಾಪಮಾನ ಏರಿಕೆ➤ಬಿರು ಬಿಸಿಲ ಹೊಡೆತಕ್ಕೆ ಬೆಚ್ಚಿದ ಜನ Read More »

ಕರ್ನಾಟಕ
Scroll to Top