karnataka

ರಾಜ್ಯದಲ್ಲಿ 14 ಲಕ್ಷ ಮಂದಿಯ ಪಡಿತರ ಕಾರ್ಡ್​ ರದ್ದು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜ್ಯದಲ್ಲಿ ಸುಮಾರು 14 ಲಕ್ಷ ಬಿಪಿಎಲ್‌ ಪಡಿತರ ಕಾರ್ಡ್‌ಗಳು ಅನರ್ಹರ ಪಾಲಾಗಿದ್ದು, ಇವುಗಳನ್ನು ರದ್ದುಪಡಿಸಲಾಗುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಅನರ್ಹರೂ ಕೂಡ ಬಿಪಿಎಲ್ ಪಡಿತರ ಕಾರ್ಡ್​ ಹೊಂದಿದ್ದು, ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ಕಠಿಣ ಕ್ರಮ ಆರಂಭಿಸಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಅನರ್ಹರ ಕಾರ್ಡ್​​ಗಳನ್ನು ರದ್ದುಗೊಳಿಸಲಾಗುತ್ತಿದೆ. ಇದೀಗ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು […]

ರಾಜ್ಯದಲ್ಲಿ 14 ಲಕ್ಷ ಮಂದಿಯ ಪಡಿತರ ಕಾರ್ಡ್​ ರದ್ದು Read More »

ಕರ್ನಾಟಕ

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಗೆ ಕಠಿಣ ನಿಯಮ ಜಾರಿಗೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22.  ಕಳೆದ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಕುಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಬ್ ಕಾಸ್ಟಿಂಗ್ ಹಾಗೂ ಇತರ ಕಠಿಣ ನಿಯಮದ ಪರಿಣಾಮ ಫಲಿತಾಂಶ ಕುಸಿತ ಆಯಿತು ಎಂಬ ಟೀಕೆ ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದ್ದು, ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಗೆ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ಪ್ಲಾನ್ ಮಾಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಗೊಂಡಿರುವ ಶಿಕ್ಷಣ ಇಲಾಖೆ, ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಿದೆ. ಎಡವಟ್ಟಿಗೆ ಕಾರಣ

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಗೆ ಕಠಿಣ ನಿಯಮ ಜಾರಿಗೆ Read More »

ಕರ್ನಾಟಕ

ರಾಜ್ಯದ ಎಲ್ಲಾ ಶಾಲೆಗಳಲ್ಲಿ”100 ದಿನಗಳ ಓದುವ ಆಂದೋಲನ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು : ನವಂಬರ್‌ 4ರಿಂದ 2025ರ ಫೆಬ್ರವರಿ 11ರವರೆಗೆ ವರೆಗೆ ರಾಜ್ಯದ ಎಲ್ಲಾ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ  “100 ದಿನಗಳ ಓದುವ ಆಂದೋಲನ”  ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆ  ಮಹತ್ವದ ಆದೇಶ ಹೊರಡಿಸಿದೆ. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದರೊಂದಿಗೆ ಭಾಷಾ ಕೌಶಲ್ಯವನ್ನು ಅಭಿವೃದ್ಧಿಗೊಳಿಸಬೇಕಿದೆ. ಹಾಗಾಗಿ 100 ದಿನಗಳ ಓದುವ ಆಂದೋಲನವನ್ನು ರಾಜ್ಯವ್ಯಾಪಿ ಎಲ್ಲಾ ಬಾಲವಾಟಿಕ/ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿನ 01 ರಿಂದ 08ನೇ ತರಗತಿಯ

ರಾಜ್ಯದ ಎಲ್ಲಾ ಶಾಲೆಗಳಲ್ಲಿ”100 ದಿನಗಳ ಓದುವ ಆಂದೋಲನ” ಕಾರ್ಯಕ್ರಮ Read More »

ಕರ್ನಾಟಕ

ಅ. 28ರವರೆಗೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ​

(ನ್ಯೂಸ್ ಕಡಬ) newskadaba.com ಅ. 22.  ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ, ಅಕ್ಟೋಬರ್ 28ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.    

ಅ. 28ರವರೆಗೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ​ Read More »

ಕರ್ನಾಟಕ

ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 21. ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.  

ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ Read More »

ಕರ್ನಾಟಕ

ನದಿಗೆ ಉರುಳಿ ಬಿದ್ದ ಕಾರು: ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 21. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಗಿಣಾ ನದಿಗೆ ಉರುಳಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ಚಿತ್ತಾಪುರ ತಾಲೂಕಿನ ದಂಡೋತಿ ಸಮೀಪದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಚಿತ್ತಾಪುರ ಪಟ್ಟಣದ ಬಹಾರಪೇಟ್ ನಿವಾಸಿ ಕಾರು ಚಾಲಕ ನಿಂಗಪ್ಪ ಪೂಜಾರಿ (50) ಎಂದು ಗುರುತಿಸಲಾಗಿದೆ. ಕೃಷ್ಣಾ ಮತ್ತು ಉಮೇಶ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಳುಗಳಿಗೆ ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ

ನದಿಗೆ ಉರುಳಿ ಬಿದ್ದ ಕಾರು: ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ ರಾಜ್ಯದ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 21. ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ.21 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಮಾಗಡಿ ಕೆಂಪೇಗೌಡ ಅಭಿವೃದ್ದಿ ಸಮಿತಿ ಅಧ್ಯಕ್ಷ ಹೆಚ್.ಎಂ.ಕೃಷ್ಣಮೂರ್ತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿರವರ ದಿವ್ಯ ಸಾನಿಧ್ಯದಲ್ಲಿ ಈ ಮೂರ್ತಿ

ನಾಳೆ ರಾಜ್ಯದ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ Read More »

ಕರ್ನಾಟಕ

ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ: ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 21. ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಎನ್‌.ಟಿ.ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ‌ ನಡೆದಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದ್ದು, ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಸಂಬಂಧ ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆ

ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ: ಓರ್ವ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 21. ಕ್ಷುಲ್ಲಕ ವಿಷಯಕ್ಕೆ ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಂಚೋಳಿ ತಾಲೂಕಿನ ಜಂಗ್ಲಿ ಪೀರ್ ತಾಂಡಾದಲ್ಲಿ ಇಂದು ನಡೆದಿರುವುದಾಗಿ ವರದಿಯಾಗಿದೆ. ಮೂವರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗೀತಾಬಾಯಿ ಸಂತೋಷ ರಾಠೋಡ್ (30) ಎಂಬವರು ಈ ಕೃತ್ಯ ಎಸಗಿದ ಮಹಿಳೆ. ಮಕ್ಕಳಾದ ಚೈತನ್ಯ (4) ಧನುಷ್ (3) ಮತ್ತು ಲಕ್ಷ್ಮೀ (ಒಂದೂವರೆ ತಿಂಗಳ ಮಗು)ಗೆ ವಿಷ ಕುಡಿಸಿದ ಗೀತಾಬಾಯಿ ಸಹ ವಿಷ

ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 21. ಮದ್ದೂರು ತಾಲೂಕಿನ ದೇಶಹಳ್ಳಿ (ಮದ್ದೂರು) ಕೆರೆಯಲ್ಲಿ ಈಜುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕರನ್ನು ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು(14) ಮತ್ತು ತೇಜಸ್ ಅವರ ಪುತ್ರ ರಂಜು(17) ಎಂದು ಗುರುತಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಯುವಕ ಮುತ್ತು ರಾಜು ಎಸೆಸ್ಸಲ್ಸಿ ವ್ಯಾಸಂಗ ಮಾಡುತ್ತಿದ್ದು, ರಂಜು

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top