karnataka

ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..!➤ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಡೆತ್‌ನೋಟ್‌ ಬರೆದಿಟ್ಟು ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಕಾಟನ್‌ ಪೇಟೆಯಲ್ಲಿರುವ ಪೊಲೀಸ್‌ ಕ್ವಾಟ್ರರ್ಸ್‌ನ 8ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಟನ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಆಯಿಷಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಆಕೆಯ ಬಳಿ ಎರಡು ಪುಟದ ಡೆತ್‌ನೋಟ್‌ ಪತ್ತೆಯಾ ಗಿದ್ದು, ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.        

ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..!➤ ಪ್ರಕರಣ ದಾಖಲು Read More »

ಕರ್ನಾಟಕ

KSRTC ಬಸ್ಸಿಗೆ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)Newskadaba.com ಪುತ್ತೂರು,ಮೇ.02 ಪುತ್ತೂರಿನ ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ ಬಳಿ ಡಿಯೋ ದ್ವಿಚಕ್ರ ವಾಹನ‌ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಎದುರಿನಿಂದ ಬಂದ ಡಿಯೋ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ಹೊಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ, ಚಾಲಕ ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾನೆ.

KSRTC ಬಸ್ಸಿಗೆ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಧಾರಾಕಾರ ಮಳೆಗೆ  ಕುಸಿದು ಬಿದ್ದ ಮನೆ..! ➤20 ದಿನದ ಹಸುಗೂಸು ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)Newskadaba.com ಕೊಪ್ಪಳ,ಮೇ.02 ಧಾರಾಕಾರ ಮಳೆಗೆ ಮನೆಯೊಂದು ಕುಸಿದು ಬಿದ್ದು, 20 ದಿನದ ಹಸುಗೂಸು ಹಾಗೂ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜೀರಾಳ ಗ್ರಾಮದಲ್ಲಿ ನಡೆದಿದೆ.ಮನೆ ಕುಸಿತದಿಂದ ಹಸುಗೂಸು ಹಾಗೂ ವೃದ್ಧೆ ಫಕೀರಮ್ಮ (60) ಸಾವನ್ನಪ್ಪಿದ್ದಾರೆ. ಬೆಳಗ್ಗಿನ ಜಾವ ಎಲ್ಲರೂ ಮಲಗಿದ್ದ ವೇಲೆ ದುರ್ಘಟನೆ ನಡೆದಿದೆ. ಬಾಣಂತಿ ಕನಕಮ್ಮಳಿಗೆ ಗಾಯಗಳಾಗಿದ್ದು, ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪತಿ ಸದ್ಯ ಮನೆಯ ಹೊರಗಡೆ ಮಲಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಧಾರಾಕಾರ ಮಳೆಗೆ  ಕುಸಿದು ಬಿದ್ದ ಮನೆ..! ➤20 ದಿನದ ಹಸುಗೂಸು ಸೇರಿ ಇಬ್ಬರು ಮೃತ್ಯು Read More »

ಕರ್ನಾಟಕ

ಮೇ.03 ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ..! ➤ವಧೂ-ವರರಿಗೆ ನಟ ದರ್ಶನ್ ತೂಗುದೀಪ ಮಂಗಲಸೂತ್ರ ವಿತರಿಸಲಿದ್ದಾರೆ!!

(ನ್ಯೂಸ್ ಕಡಬ)Newskadaba.com ಬೆಳ್ತಂಗಡಿ,ಮೇ.02 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮೇ 3ರಂದು ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿವೆ. ಮೇ 2ರಂದು ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ವಧುವಿಗೆ ಸೀರೆ, ರವಿಕೆ ಕಣ ಮತ್ತು ವರನಿಗೆ ಧೋತಿ, ಶಾಲು ನೀಡಲಾಗುತ್ತದೆ. ಮೇ 3ರಂದು ಸಂಜೆ 5ರಿಂದ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವಿವಾಹ ನೆರವೇರಲಿರುವ ಅಮೃತವರ್ಷಿಣಿ ಸಭಾ ಮಂಟಪಕ್ಕೆ

ಮೇ.03 ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ..! ➤ವಧೂ-ವರರಿಗೆ ನಟ ದರ್ಶನ್ ತೂಗುದೀಪ ಮಂಗಲಸೂತ್ರ ವಿತರಿಸಲಿದ್ದಾರೆ!! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎಂಟಿಬಿ ನಾಗರಾಜ್ ವ್ಯಂಗ್ಯಕ್ಕೆ ಕಿಡಿಕಾರಿದ ಶಾಸಕ ಶರತ್ ಬಚ್ಚೇಗೌಡ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಹೊಸಕೋಟೆಯ ಪಾರ್ವತಿಪುರದಲ್ಲಿ ಶರತ್ ಬಚ್ಚೇಗೌಡ ಪರ ಚುನಾವಣ ಅಪ್ರಚಾರಕ್ಕೆ ಪತ್ನಿ ಪ್ರತಿಭಾ ಆಗಮಿಸಿದ್ದ ವೇಳೆ ಬ್ಯಾಗ್ ಹಾಗೂ ಮೊಬೈಲ್ ಕಳ್ಳತನವಾಗಿದ್ದಕ್ಕೆ ಪ್ರತಿಭಾ ಕಣ್ಣೀರಿಟ್ಟಿದ್ದರು. ಈ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಚುನಾವಣಾ ಪ್ರಚಾರದ ವೇಳೆ ಅಣಕಿಸಿ, ವ್ಯಂಗ್ಯವಾಡಿದ್ದರು. ಸಚಿವರ ನಡೆಗೆ ಶರತ್ ಬಚ್ಚೆಗೌಡ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಸಚಿವ ಎಂಟಿಬಿ ವಿರುದ್ಧ ಕಿಡಿಕಾರಿರುವ ಶಾಸಕ ಶರತ್ ಬಚ್ಚೇಗೌಡ ಓರ್ವ ಹೆಣ್ಣುಮಗಳು ಘಟನೆಯಿಂದ

ಎಂಟಿಬಿ ನಾಗರಾಜ್ ವ್ಯಂಗ್ಯಕ್ಕೆ ಕಿಡಿಕಾರಿದ ಶಾಸಕ ಶರತ್ ಬಚ್ಚೇಗೌಡ..! Read More »

ಕರ್ನಾಟಕ

‘ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ’.!   ➤ ಕಾಂಗ್ರೇಸ್ ಗೆ ಸೆಡ್ಡು ಹೊಡೆದ ಶೋಭಾ ಕರಂದ್ಲಾಜೆ  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹೊರ ತಂದಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಭರವಸೆ ನೀಡಿರುವುದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೆಂಡಾ ಮಂಡಲವಾಗಿದ್ದಾರೆ. ಈ ಭರವಸೆ ಓದಿ ನನ್ನ ರಕ್ತ ಕುದಿಯುತ್ತಿದೆ. ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದು ಸೆಡ್ಡು ಹೊಡೆದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ದೇಶದ್ರೋಹಿ ಪಿಎಫ್ ಐ ಸಂಘಟನೆಯನ್ನು ದೇಶಭಕ್ತ ಬಜರಂಗದಳಕ್ಕೆ ಹೋಲಿಸಿರುವುದು ಸರಿಯಲ್ಲ. ಉಗ್ರ ಕೃತ್ಯ ಎಸಗುವವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ

‘ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ’.!   ➤ ಕಾಂಗ್ರೇಸ್ ಗೆ ಸೆಡ್ಡು ಹೊಡೆದ ಶೋಭಾ ಕರಂದ್ಲಾಜೆ   Read More »

ಕರ್ನಾಟಕ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ➤ರಾಜ್ಯಾದ್ಯಂತ 58,000 ಬೂತ್‌ಗಳಲ್ಲಿ ಜಾಗೃತಿ ಅಭಿಯಾನ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ತಮ್ಮ ಮತಗಟ್ಟೆಗಳ ಬಗ್ಗೆ ಅರಿವು ಮೂಡಿಸಲು ‘ನಮ್ಮ ನಡೆ ಮತಗಟ್ಟೆಯ ಕಡೆ’ ಎಂಬ ವಿಶೇಷ ಕಾರ್ಯಕ್ರಮವನ್ನು ರಾಜ್ಯಾದ್ಯಂತ 58 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಉತ್ತರದ ಜಕ್ಕೂರಿನಲ್ಲಿರುವ ತಮ್ಮ ಮತಗಟ್ಟೆಗೆ ಭೇಟಿ ನೀಡುವ ಮೂಲಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಮತಗಟ್ಟೆಗಳಲ್ಲಿ ‘ಮೇ 10 ರಂದು ಪ್ರಜಾಪ್ರಭುತ್ವದ ಮತದಾನದ ಹಬ್ಬ’ ಎಂಬ ಧ್ಯೇಯವಾಕ್ಯದೊಂದಿಗೆ ಧ್ವಜಾರೋಹಣ ಮತ್ತು ವಾಕಥಾನ್ ಸೇರಿದಂತೆ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ➤ರಾಜ್ಯಾದ್ಯಂತ 58,000 ಬೂತ್‌ಗಳಲ್ಲಿ ಜಾಗೃತಿ ಅಭಿಯಾನ..! Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤`ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಕಾಂಗ್ರೆಸ್ 

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನ ಪ್ರಣಾಳಿಕೆ ಜನರಿಗೆ ಸಾಕಷ್ಟು ರಿಲೀಫ್ ಕೊಡಲಿದೆ. ನಾವು ಏನು ಹೇಳುತ್ತೇವೆ. ಅದನ್ನು ಮಾಡುತ್ತೇವೆ. ನಾವು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನಮ್ಮ 165 ಭರವಸೆಗಳಲ್ಲಿ 158 ಭರವಸೆಗಳನ್ನು

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤`ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಕಾಂಗ್ರೆಸ್  Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿದ ಸೈಕಲ್‌‌ಗೆ ಢಿಕ್ಕಿ ಹೊಡೆದ ಕಾರು..! ➤ ಸೈಕಲ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)Newskadaba.com ಕೋಟ,ಮೇ.02 ಚಾಲಕನ ನಿಯಂತ್ರಣ ತಪ್ಪಿದ ಕಾರು ಸೈಕಲ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಸಾಲಿಗ್ರಾಮ ಡಿವೈನ್ ಪಾರ್ಕ್ ಎದುರುಗಡೆ ನಡೆದಿದೆ.ಸೈಕಲ್ ಸವಾರ ಗುಂಡ್ಮಿ ಭಗವತಿ ರಸ್ತೆಯ ಕೇಶವ ಮರಕಾಲ (41) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ವೇಗವಾಗಿ ಹೋಗುತ್ತಿದ್ದ ಸೈಕಲ್ ಚಾಲಕನ ನಿಯಂತ್ರಣ ತಪ್ಪಿ ಗುಂಡ್ಮಿಯಿಂದ ಸಾಲಿಗ್ರಾಮ ಕಡೆ ಹೋಗುತ್ತಿದ್ದ ಸೈಕಲ್ ಸವಾರನಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಸೈಕಲ್‌‌ಗೆ ಢಿಕ್ಕಿ ಹೊಡೆದ ಕಾರು..! ➤ ಸೈಕಲ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಬಾಟಲಿಯ ಮುಚ್ಚಲ ತೆಗೆಯುವಾಗ ಗಂಟಲಿಗೆ ಸಿಲುಕಿ ಬಾಲಕ ಮೃತ್ಯು.!

(ನ್ಯೂಸ್ ಕಡಬ)Newskadaba.com ಕುಷ್ಟಗಿ,ಮೇ.02 ಸಿಹಿತಿಂಡಿ ಬಾಟಲಿಯ ಮುಚ್ಚಲ ತೆಗೆಯುವಾಗ ಗಂಟಲಿಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ‌ ಸಿಲುಕಿ ಬಾಲಕ ಮೃತಪಟ್ಟಿದ್ದಾನೆ.ಕುಷ್ಟಗಿಯ ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಮೃತ ಬಾಲಕ‌. ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್‌ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯುವಾಗ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಬಾಲಕನಿಗೆ ಕೂಡಲೇ ಆಸ್ಪತ್ರೆಗೆ

ಬಾಟಲಿಯ ಮುಚ್ಚಲ ತೆಗೆಯುವಾಗ ಗಂಟಲಿಗೆ ಸಿಲುಕಿ ಬಾಲಕ ಮೃತ್ಯು.! Read More »

ಕರ್ನಾಟಕ
Scroll to Top