karnataka

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ..! ➤ ಷಡಕ್ಷರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಈ ಮಧ್ಯೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಷಡಕ್ಷರಿ, “ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಆರ್ಥಿಕ ಇಲಾಖೆ ಆದೇಶ ಹೊರಡಿಸಲಿದೆ” ಎಂದು ಹೇಳಿಕೆ ನೀಡಿದ್ದಾರೆ. ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ರಾಜ್ಯದಲ್ಲಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರ ಮತದಾರರ‌ ಮೇಲೆ […]

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ..! ➤ ಷಡಕ್ಷರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

ಕರ್ನಾಟಕ

ಕಿಚ್ಚನ ಪ್ರಚಾರದ ವಿರುದ್ಧ ಟೀಕಿಸಿ ಮಾತಡಿದ ಮಾಜಿ ಶಾಸಕರ ಪುತ್ರ ➤ ರೊಚ್ಚಿಗೆದ್ದ ಸುದೀಪ್ ಫ್ಯಾನ್ಸ್  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರಗಳ ಪರ್ವವೇ ನಡೆಯಲು ಆರಂಭಿಸಿತು. ಬಿಜೆಪಿಯನ್ನು ತೊರೆದು ಶೆಟ್ಟರ್‌ ಕಾಂಗ್ರೇಸ್‌ ಕೈ ಹಿಡಿದರು. ಲಕ್ಷ್ಮಣ ಸವದಿ ಸಹ ಬಿಜೆಪಿ ಬಿಟ್ಟು ಕಾಂಗ್ರೇಸ್‌ ಸೇರಿಕೊಂಡರು. ಕೈ ಸೇರಿಕೊಂಡ ಶೆಟ್ಟರ್‌ ಅವರನ್ನು ಬಿಜೆಪಿ ಪಕ್ಷ ಎಂದಿಗೂ ಕ್ಷಮಿಸುವುದಿಲ್ಲ, ನಂಬಿಕೆ ದ್ರೋಹಿ ಎಂದೆಲ್ಲಾ ಆರೋಪಿಸಿ ಅವರ ವಿರುದ್ಧ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಇದಲ್ಲದೇ ಶೆಟ್ಟರ್‌ ಸಹ ಬಿಜೆಪಿ ಲಿಂಗಾಯತ ವಿರೋಧಿ ಎಂದು ಆರೋಪಿಸಿದ್ದಾರೆ. ಈ ಆರೋಪದಿಂದ ಬಿಜೆಪಿ ನಿರ್ಣಾಯಕ ಮತದಿಂದ ಶೆಟ್ಟರ್‌ ವಿರುಧ್ಧ ಗೆಲ್ಲುವುದು ಒಂದು

ಕಿಚ್ಚನ ಪ್ರಚಾರದ ವಿರುದ್ಧ ಟೀಕಿಸಿ ಮಾತಡಿದ ಮಾಜಿ ಶಾಸಕರ ಪುತ್ರ ➤ ರೊಚ್ಚಿಗೆದ್ದ ಸುದೀಪ್ ಫ್ಯಾನ್ಸ್   Read More »

ಕರ್ನಾಟಕ

ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್ ಗೆ ಸೇರ್ಪಡೆ ➤ ನಾರಾಯಣ ಗೌಡ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಕಳೆದ ಬಾರಿ (2018) ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧವೇ ಸ್ಪರ್ಧಿಸಿದ್ದ ನಾರಾಯಣಗೌಡ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು.ನಾರಾಯಣಗೌಡರ ಜೊತೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ರೆಡ್ಡಿ ಅವರು ಸಹ ಕಾಂಗ್ರೆಸ್ ಸೇರಿದ್ದಾರೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದ ಇಬ್ಬರು ನಾಯಕರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್ ಗೆ ಸೇರ್ಪಡೆ ➤ ನಾರಾಯಣ ಗೌಡ Read More »

ಕರ್ನಾಟಕ

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್   ➤ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗಿದೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೆ ಸಮಸ್ಯೆ ಮುಂದುವರೆಯಲಿದೆ. ಚುನಾವಣಾ ನೀತಿ ಸಂಹಿತೆ ಕಾರಣ ಟೆಂಡರ್ ವಿಳಂಬವಾಗಿದ್ದು, ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕಂಡುಬಂದಿದೆ.ಚುನಾವಣೆ ನೀತಿ ಸಂಹಿತೆ ಬಿಸಿ ಸರ್ಕಾರಿ ಆಸ್ಪತ್ರೆಗಳ ಔಷಧಗಳ ಮೇಲೆ ಪರಿಣಾಮವನ್ನುಂಟು ಮಾಡಿದ್ದು, ರೋಗಿಗಳಿಗೆ ವಿತರಿಸಲು ಔಷಧಗಳ ಕೊರತೆ ಕಂಡು ಬಂದಿದೆ. ಹೊರಗೆ ಔಷಧ ಖರೀದಿಸುವ ಪರಿಸ್ಥಿತಿ ಉಂಟಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಿಗೆ ರಿಯಾಯಿತಿ ದರದಲ್ಲಿ ಮತ್ತು ಉಚಿತವಾಗಿ ಔಷಧ

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್   ➤ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗಿದೆ.!   Read More »

ಕರ್ನಾಟಕ

ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.28. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಂದು ನಡೆದಿದೆ. ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ‌.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿ.ಸಿ ರೋಡಿನಿಂದ

ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ Read More »

ಕರಾವಳಿ

ಮೋದಿಯವರಿಗೆ ಹೇಳಿದ ಮಾತಿಗೆ ಸಮಜಾಯಿಷಿ ನೀಡಿದ ಮಲ್ಲಿಕಾರ್ಜುನ ಖರ್ಗೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಯೂಟರ್ನ್ ಹೊಡೆದಿದ್ದಾರೆ.ಮೋದಿ ಅಂದ್ರೆ ವಿಷದ ಹಾವು ಇದ್ದಂತೆ ವಿಷ ನೆಕ್ಕಿದವ ಸತ್ತು ಹೋಗ್ತಾನೆ ಎಂದು ಗದಗ ಕಾಂಗ್ರೆಸ್ ಸಮಾವೇಶದಲ್ಲಿ ಖರ್ಗೆ ಹೇಳುತ್ತಿದ್ದಂತೆ ರಾಜ್ಯಾದ್ಯಂತ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ ಮಲ್ಲಿಕಾರ್ಜುನ ಖರ್ಗೆ, ನಾನು ಪ್ರಧಾನಿ ಮೋದಿಯವರಿಗೆ ವಿಷದ ಹಾವು ಎಂದಿಲ್ಲ, ವೈಯಕ್ತಿಕವಾಗಿ ನಾನು ಟೀಕೆ ಮಾಡಿಲ್ಲ.

ಮೋದಿಯವರಿಗೆ ಹೇಳಿದ ಮಾತಿಗೆ ಸಮಜಾಯಿಷಿ ನೀಡಿದ ಮಲ್ಲಿಕಾರ್ಜುನ ಖರ್ಗೆ..! Read More »

ಕರ್ನಾಟಕ

ಹವಾಮಾನ ವರದಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.28. ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು

ಹವಾಮಾನ ವರದಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »

ಕರ್ನಾಟಕ

ಕಾಸರಗೋಡು: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ     ➤ ಮಂಗಳೂರು ನಿವಾಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.28. ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿ ನಡೆದಿದೆ. ಮಂಗಳೂರು ಕೊಟ್ಟಾರ ಚೌಕಿಯ ನಳಿನಾಕ್ಷಿ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರ ಪತಿ ಪ್ರಭಾಕರ ಘಟನೆಯಲ್ಲಿ ಗಾಯಗೊಂಡಿದ್ದಾರೆ‌.  

ಕಾಸರಗೋಡು: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ     ➤ ಮಂಗಳೂರು ನಿವಾಸಿ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪೋಷಕರಿಗೆ ಬಿಗ್ ಶಾಕ್ ➤ಶಾಲೆ ಮಕ್ಕಳ ನೋಟ್ಸ್ ಬುಕ್ ಬೆಲೆಯಲ್ಲಿ ಏರಿಕೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಶಾಲೆ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಪಠ್ಯ ಪುಸ್ತಕ, ಮಕ್ಕಳ ಶುಲ್ಕ ಏರಿಕೆ ಬೆನ್ನಲ್ಲೇ ಇದೀಗ ಮಕ್ಕಳ ನೋಟ್ಸ್ ಬುಕ್, ವರ್ಕ್ ಬುಕ್ ಹಾಗೂ ಪೇಪರ್ ಬೆಲೆಯಲ್ಲಿ ಏರಿಕೆಯಾಗಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ದದ ಪರಿಣಾಮ ಕಚ್ಚಾ ಪೇಪರ್​ ಬರುತ್ತಿಲ್ಲ.ಹೀಗಾಗಿ ಪೇಪರ್ ನೋಟ್ ಬುಕ್ಸ್ ಗೆ ಬೇಡಿಕೆ ಹೆಚ್ಚಾಗಿದ್ದು, ಪಠ್ಯ ಪುಸ್ತಕಗಳ ಬೆಲೆ ಏರಿಕೆಯ ಜೊತೆಗೆ ನೋಟ್ಸ್ ಬುಕ್ , ವರ್ಕ್ ಬುಕ್, ಪೇಪರ್ ಗಳ ಬೆಲೆ 30-40% ಏರಿಕೆಯಾಗಿದೆ.

ಪೋಷಕರಿಗೆ ಬಿಗ್ ಶಾಕ್ ➤ಶಾಲೆ ಮಕ್ಕಳ ನೋಟ್ಸ್ ಬುಕ್ ಬೆಲೆಯಲ್ಲಿ ಏರಿಕೆ..! Read More »

ಕರ್ನಾಟಕ

‘ಮೋದಿಯನ್ನು ಟೀಕಿಸಿದವರು ಯಾರೂ ಉದ್ಧಾರವಾಗಿಲ್ಲ’       ➤ ಖರ್ಗೆಗೆ ಈಶ್ವರಪ್ಪ ತಿರುಗೇಟು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.28. ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಮೆಚ್ಚಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಖರ್ಗೆಯವರಿಗಿಂತ ಕೆಟ್ಟ ಭಾಷೆಯಲ್ಲಿ ಟೀಕಿಸಬಲ್ಲೆ. ಆದರೆ ಆ ಕೆಲಸ ಮಾಡಲ್ಲ. ಖರ್ಗೆಯವರಿಗೆ ಒಂದು ತೂಕವಿತ್ತು. ಅದಕ್ಕೆ‌ ಎಐಸಿಸಿ ಅಧ್ಯಕ್ಷರಾದರೂ. ಆದರೆ ಈಗ ಏನಾಗಲು ಹೊರಟಿದ್ದಾರೋ ಗೊತ್ತಿಲ್ಲ. ನರೇಂದ್ರ ಮೋದಿ ಅವರನ್ನು ಟೀಕಿಸಿದವರು ಯಾರೂ ಉದ್ಧಾರವಾಗಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ ತಿರುಗೇಟು ನೀಡಿದ್ದಾರೆ.

‘ಮೋದಿಯನ್ನು ಟೀಕಿಸಿದವರು ಯಾರೂ ಉದ್ಧಾರವಾಗಿಲ್ಲ’       ➤ ಖರ್ಗೆಗೆ ಈಶ್ವರಪ್ಪ ತಿರುಗೇಟು Read More »

ಕರ್ನಾಟಕ
Scroll to Top