karnataka

ಜಾತ್ರೆಯಲ್ಲಿ ವಾಹನಗಳ ಗ್ಲಾಸ್ ಒಡೆದು ಹಾನಿ ಮಾಡಿದ ಕಿಡಿಗೇಡಿಗಳು   ➤ ಮಕ್ಕಳು ಮಹಿಳೆಯರ ಮೇಲೂ ಲಾಠಿ ಬೀಸಿದ ಪೊಲೀಸರು.!  

(ನ್ಯೂಸ್ ಕಡಬ)Newskadaba.com ದಾವಣಗೆರೆ,ಏ.27 ಮಕ್ಕಳು ಮಹಿಳೆಯರು ಎಂಬುದನ್ನೂ ನೋಡದೆ ಪೊಲೀಸರು ಸಾರ್ವಜನಿಕರ ಮೇಲೆ ಲಾಠಿ ಬೀಸಿ ದೌರ್ಜನ್ಯ ತೋರಿದ್ದಾರೆ ಎನ್ನಲಾದ ಪ್ರಕರಣವೊಂದು ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆ ಬಳಿಯೇ ಈ ಘಟನೆ ನಡೆದಿದೆ. ಜಗಳೂರಿನಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ದೊಡ್ಡ ಮಾರಮ್ಮನ‌ ಜಾತ್ರೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ರಾತ್ರಿ ಜಾತ್ರೆ ಸಂದರ್ಭ ಕೆಲವು ಕಿಡಿಗೇಡಿಗಳು ವಾಹನಗಳ ಗ್ಲಾಸ್ ಒಡೆದು ಹಾನಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತಕ್ಕೂ ಹೆಚ್ಚು […]

ಜಾತ್ರೆಯಲ್ಲಿ ವಾಹನಗಳ ಗ್ಲಾಸ್ ಒಡೆದು ಹಾನಿ ಮಾಡಿದ ಕಿಡಿಗೇಡಿಗಳು   ➤ ಮಕ್ಕಳು ಮಹಿಳೆಯರ ಮೇಲೂ ಲಾಠಿ ಬೀಸಿದ ಪೊಲೀಸರು.!   Read More »

ಕರ್ನಾಟಕ

‘ಡಿಕೆಶಿ ರಕ್ತ ಯಾರಿಗೂ ಪ್ರಯೋಜನ ಇಲ್ಲ’       ➤ ಸಿಎಂ ಬೊಮ್ಮಾಯಿ ವ್ಯಂಗ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಡಿ.ಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಇಲ್ಲ, ಅವರ ಅಪೇಕ್ಷೆವನ್ನು ನಾವು ನೆರವೇರಿಸುತ್ತೇವೆ. ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಾದೆ ನಾನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಚುನಾವಣೆಯಲ್ಲಿ ಜನರಿಗೆ ಮೋಸ ಮಾಡುವ ತಂತ್ರ. 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ

‘ಡಿಕೆಶಿ ರಕ್ತ ಯಾರಿಗೂ ಪ್ರಯೋಜನ ಇಲ್ಲ’       ➤ ಸಿಎಂ ಬೊಮ್ಮಾಯಿ ವ್ಯಂಗ್ಯ Read More »

ಕರ್ನಾಟಕ

ಚುನಾವಣಾ ಆಯೋಗದಿಂದ ಭರ್ಜರಿ ಸಿದ್ಧತೆ !  ➤ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ ಬುಕ್ಕಿಂಗ್ ➤ ಮೇ 5ರಿಂದ 13ರ ವರೆಗೂ ಪ್ರಯಾಣಿಕರನ್ನು ಕಾಡಲಿದೆ ಬಸ್‌ಗಳ ಕೊರತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕಾರ್ಯಕ್ಕೆ ಬೇಕಾದ ಬಸ್​ಗಳ ವ್ಯವಸ್ಥೆಗೆ ಚುನಾವಣಾ ಅಧಿಕಾರಿಗಳು ಈಗಾಗಲೇ ಬುಕಿಂಗ್ ಮಾಡಿಕೊಳ್ಳುತ್ತಿದ್ದು, ಈಗಾಗಲೇ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ಸುಗಳನ್ನು ಬುಕ್ಕಿಂಗ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಬಸ್‌ ಕೊರತೆ ಉಂಟಾದಲ್ಲಿ ಪ್ರಯಾಣಿಕರ ಸಂಚಾರಕ್ಕೂ ಬಿಸಿ ತಟ್ಟಲಿದೆ. ಚುನಾವಣಾ ಅಧಿಕಾರಿಗಳು ಚುನಾವಣೆ​ಗೆ ಬೇಕಾದ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳುತ್ತಿದ್ದು, ಎಲೆಕ್ಷನ್ ಸಿದ್ದತೆಗೆ ಬೇಕಾದ ಸಾರಿಗೆ ವ್ಯವಸ್ಥೆಗೆ ರಾಜ್ಯಾದ್ಯಂತ ಅಂದಾಜು 10 ಸಾವಿರ ಬಿಎಂಟಿಸಿ, ಕೆಎಸ್​ಆರ್​ಟಿಸಿ ಹಾಗೂ

ಚುನಾವಣಾ ಆಯೋಗದಿಂದ ಭರ್ಜರಿ ಸಿದ್ಧತೆ !  ➤ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ ಬುಕ್ಕಿಂಗ್ ➤ ಮೇ 5ರಿಂದ 13ರ ವರೆಗೂ ಪ್ರಯಾಣಿಕರನ್ನು ಕಾಡಲಿದೆ ಬಸ್‌ಗಳ ಕೊರತೆ Read More »

ಕರ್ನಾಟಕ

ಮಾಜಿ ಸಿಎಂ ಸಿದ್ದು ಪರ ಅಬ್ಬರದ ಪ್ರಚಾರ ನಡೆಸಿದ ಅವರ ಸೊಸೆ ಸ್ಮಿತಾ ರಾಕೇಶ್.!

(ನ್ಯೂಸ್ ಕಡಬ)Newskadaba.com ಮೈಸೂರು,ಏ.27 ರಾಜ್ಯದೆಲ್ಲೆಡೆ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿಯೇ ಸಾಗುತ್ತಿದೆ. ಈ ನಡುವೆ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ಅವರ ಸೊಸೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್‌ ಸಿದ್ದರಾಮಯ್ಯ, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.    

ಮಾಜಿ ಸಿಎಂ ಸಿದ್ದು ಪರ ಅಬ್ಬರದ ಪ್ರಚಾರ ನಡೆಸಿದ ಅವರ ಸೊಸೆ ಸ್ಮಿತಾ ರಾಕೇಶ್.! Read More »

ಕರ್ನಾಟಕ

ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಎಎಪಿಯ ವಿಕಲಚೇತನ ಬೆಂಬಲಿಗರನ್ನು ತಡೆದ ಚುನಾವಣಾ ಅಧಿಕಾರಿಗಳು..!

(ನ್ಯೂಸ್ ಕಡಬ)Newskadaba.com ಚಿಕ್ಕಪೇಟೆಯ,ಏ.27 ಚಿಕ್ಕಪೇಟೆಯ ಸಜ್ಜನ್ ರಾವ್ ವೃತ್ತದಲ್ಲಿ ಬುಧವಾರ ಸಂಜೆ 4 ಗಂಟೆಗೆ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಸುಮಾರು 50 ಮಂದಿ ವಿಕಲಚೇತನ ಆಪ್ ಬೆಂಬಲಿಗರನ್ನು ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಕೇಶವ ವಿಸಿ ಅವರು ತಡೆದು ನಿಲ್ಲಿಸಿದ್ದಾರೆ.ವಿಕಲಚೇತನ ವ್ಯಕ್ತಿಗಳು ಗಾಲಿಕುರ್ಚಿಗಳನ್ನು ಬಳಸುತ್ತಿದ್ದರು. ಹೀಗಾಗಿ ಎಎಪಿ ಈ ಪ್ರಚಾರಕ್ಕೆ ಅನುಮತಿ ಪಡೆಯಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಎಎಪಿ ಕಾರ್ಯಕರ್ತರು ತಮಗೆ ಅಗತ್ಯವಿರುವ ಅನುಮತಿಗಳನ್ನು ಹೊಂದಿದ್ದಾರೆ ಎಂದು ಪರಿಶೀಲಿಸಿದಾಗ, ಅವರು ಯಾವುದೇ

ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಎಎಪಿಯ ವಿಕಲಚೇತನ ಬೆಂಬಲಿಗರನ್ನು ತಡೆದ ಚುನಾವಣಾ ಅಧಿಕಾರಿಗಳು..! Read More »

ಕರ್ನಾಟಕ

ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ..!

(ನ್ಯೂಸ್ ಕಡಬ)Newskadaba.com  ಬೆಂಗಳೂರು,ಏ.27 ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು ಇದೀಗ ಬೊಮ್ಮನಹಳ್ಳಿ ಪೊಲೀಸರ ಮೇಲೂ ತನಿಖೆ ನಡೆಯೋ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ತೋರುತ್ತಿದೆ.ಬೊಮ್ಮನಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ಪ್ರಶಾಂತ್ ಹಾಗೂ ಸಿಬ್ಬಂದಿಗಳ ಮೇಲೆ ಇಲಾಖಾ ತನಿಖೆ ನಡೆಯುವ ಸಾಧ್ಯತೆ ಇದೆ. ಕಾರಣ ಆರೋಪಿಗಳಿಂದ ಬೊಮ್ಮನಹಳ್ಳಿ ಪೊಲೀಸರು ಈ ಹಿಂದೆಯೇ ಬೆನಿಫಿಟ್ಸ್ ಪಡೆದಿದ್ದರಾ ಎಂಬ ಅನುಮಾನವೇ ಕಾರಣವಾಗಿದೆ.ಅಕ್ಯುಮೆಟ್ರಿಕ್ ಕಂಪೆನಿಯ ಮೇಲೆ ಸಿಸಿಬಿ ದಾಳಿಯಿಂದ ಹಿಂದಿನ ಡೀಲ್ ಪ್ರಕರಣ ಬೆಳಕಿಗೆ ಬರುತ್ತಾ ಎನ್ನುವ ಅನುಮಾನ ಇದೀಗ

ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ..! Read More »

ಕರ್ನಾಟಕ

‘ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ’ ➤ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಳಗಾವಿ, ಏ.27. ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು.ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ 40 ಪರ್ಸೆಂಟ್ ಕಮಿಷನ್ ತನಿಖೆ ಕೈಗೊಳ್ಳಲಾಗುವುದು ಎಂಬ ಲಕ್ಷ್ಮಣ್ ಸವದಿ ಅವರ ಹೇಳಿಕೆಗೆ ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

‘ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ’ ➤ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಬೆಳ್ತಂಗಡಿ: ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿ ಅರೆಸ್ಟ್ !      ➤ 10 ಸಾವಿರ ರೂ. ಮೌಲ್ಯದ ಗಾಂಜಾ ವಶ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.27. ಗುರುವಾಯನಕೆರೆ ಇಲ್ಲಿನ ಸರಕಾರಿ ಪ್ರೌಢ ಶಾಲೆಯ ಹತ್ತಿರ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ಪೊಲೀಸರು ಕಾರ್ಯಚರಣೆ ನಡೆಸಿ ಕುವೆಟ್ಟು ಗ್ರಾಮದ ಮನ್ಸೂರ್ ಎಂಬವರ ಪುತ್ರ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಇವರಿಂದ ಹತ್ತು ಸಾವಿರ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿ ಅರೆಸ್ಟ್ !      ➤ 10 ಸಾವಿರ ರೂ. ಮೌಲ್ಯದ ಗಾಂಜಾ ವಶ Read More »

ಕರಾವಳಿ

ಬಿಬಿಎಂಪಿ ಅಧಿಕಾರಿ ಬಳಿ 400 ಬ್ಲೇಝರ್‌ ಪತ್ತೆ..!   ➤ FIR ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಬಿಬಿಎಂಪಿಯ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಕೆ.ಎಲ್‌. ಗಂಗಾಧರಯ್ಯ ಬಳಿ 400 ಬ್ಲೇಝರ್‌ಗಳು ಪತ್ತೆಯಾಗಿವೆ. ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್‌ ಘಟಕವು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಗಂಗಾಧರಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸುತ್ತಿದೆ.ಆರೋಪಿಗೆ ಸಂಬಂಧಿಸಿದ ಏಳು ಸ್ಥಳಗಳ ಮೇಲೆ ದಾಳಿ ಮಾಡಿ, ಶೋಧ ನಡೆಸಲಾಗಿದೆ.    

ಬಿಬಿಎಂಪಿ ಅಧಿಕಾರಿ ಬಳಿ 400 ಬ್ಲೇಝರ್‌ ಪತ್ತೆ..!   ➤ FIR ದಾಖಲು Read More »

ಕರ್ನಾಟಕ

ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಬೆಂಗಳೂರಿನ ಜೆಸಿ ರಸ್ತೆ ಭರತ್ ಸರ್ಕಲ್ ಬಳಿ ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ಜೆಪಿ ರಸ್ತೆ ಭರತ್ ಸರ್ಕಲ್ ಸಮೀಪದ ಕಮರ್ಷಿಯಲ್ ಬಿಲ್ಡಿಂಗ್ ನಲ್ಲಿ ಘಟನೆ ನಡೆದಿದೆ.ಸಂಜಯ್ ಆಟೋಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ವಿಕಾಸ್(23) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಆರು ತಿಂಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದ ವಿಕಾಸ್ ಸಾವಿನ ವಿಚಾರವನ್ನು ಪೊಲೀಸರು ಪೋಷಕರಿಗೆ ತಿಳಿಸಿದ್ದಾರೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕಲಾಸಿಪಾಳ್ಯ

ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತ್ಯು..! Read More »

ಕರ್ನಾಟಕ
Scroll to Top