karnataka

ಹಿರಿಯ ಕಾಂಗ್ರೆಸ್ ನಾಯಕ ಡಿ. ಬಿ. ಇನಾಮಾದಾರ್ ನಿಧನ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ. ಬಿ. ಇನಾಮಾದಾರ್ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದಾನಪ್ಪಗೌಡ ಬಸವನಗೌಡ ಇನಾಮಾದಾರ್ (73) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.    

ಹಿರಿಯ ಕಾಂಗ್ರೆಸ್ ನಾಯಕ ಡಿ. ಬಿ. ಇನಾಮಾದಾರ್ ನಿಧನ.! Read More »

ಕರ್ನಾಟಕ

KSRTC ಬಸ್​ನಲ್ಲಿ ದಾಖಲೆ ಇಲ್ಲದೇ ಅಕ್ರಮವಾಗಿ ಲಕ್ಷ ಲಕ್ಷ ಹಣ ಸಾಗಾಟ!!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.25,ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಕೆಎಸ್‌ಆರ್​ಟಿಸಿ ಬಸ್​ನಲ್ಲಿ ಸಾಗಾಟ ಮಾಡುತ್ತಿದ್ದ ಹಣವನ್ನು ಪೊಲೀಸ್​​​​ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಪರಾನಟ್ಟಿ ಚಕ್ ಪೋಸ್ಟ್​ನಲ್ಲಿ ದಾಖಲೆ ಇಲ್ಲದ 65 ಲಕ್ಷ ರೂಪಾಯಿ ಹಣವನ್ನು ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು.ಚುನಾವಣಾ ಪೊಲೀಸ್​ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.ಸದ್ಯ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.      

KSRTC ಬಸ್​ನಲ್ಲಿ ದಾಖಲೆ ಇಲ್ಲದೇ ಅಕ್ರಮವಾಗಿ ಲಕ್ಷ ಲಕ್ಷ ಹಣ ಸಾಗಾಟ!! Read More »

ಕರ್ನಾಟಕ

ಮಗುವನ್ನು ಬಿಸಿ ನೀರಿನಲ್ಲಿ ಮುಳುಗಿಸಿ ಕೊಲೆಗೈದ ಪಾಪಿ!   ➤ಆರೋಪಿಯನ್ನು ಬಂಧಿಸಿದ ಪೋಲೀಸರು..!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25, ಕೊಲೆಗಾರ ವಿಕ್ರಮ್ ಮತ್ತು ಮಗುವಿನ ತಾಯಿ ಕಿರಣಾ ನಡುವೆ ಅಕ್ರಮ ಸಂಬಂಧವಿತ್ತು. ಕಿರಣಾಳನ್ನು ಮದುವೆಯಾಗಲು ವಿಕ್ರಮ್ ಬಯಸಿದ್ದು, ತನ್ನನ್ನು ಮದುವೆಯಾಗುವಂತೆ ಕಿರಣಾ ಬಳಿ ಕೇಳಿದ್ದಾನೆ. ಕಿರಣಾ ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಅವಳ ಒಂದೂವರೆ ವರ್ಷದ ಮಗುವನ್ನು ಬಿಸಿ ನೀರಿನ ಬಕೆಟ್‌ನಲ್ಲಿ ಮುಳುಗಿಸಿ ಕೊಂದ ಘಟನೆ ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದಿದೆ. ಕೊಲೆಗಾರ ವಿಕ್ರಮ್ನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಲು ಕಿರಣಾ ನಿರಾಕರಿಸಿದ್ದು, ಇದೇ ಕೋಪಕ್ಕೆ ಮಗುವನ್ನು ಕೊಂದಿದ್ದಾನೆ’ ಎಂದು ಹಿರಿಯ ಇನ್ಸ್‌ಪೆಕ್ಟರ್

ಮಗುವನ್ನು ಬಿಸಿ ನೀರಿನಲ್ಲಿ ಮುಳುಗಿಸಿ ಕೊಲೆಗೈದ ಪಾಪಿ!   ➤ಆರೋಪಿಯನ್ನು ಬಂಧಿಸಿದ ಪೋಲೀಸರು..!   Read More »

ಕರ್ನಾಟಕ

‘ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರು ನನ್ನ ವಿರುದ್ಧ ಆರೋಪಕ್ಕೆ ಮುಂದಾಗಿದ್ದಾರೆ’ ➤ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.25. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಕ್ಕೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಭ್ರಷ್ಟ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಮಾಡಿರುವ ಆರೋಪ ರಾಜ್ಯದ ಜನತೆಗೆ ಮಾಡಿದ ಅವಮಾನವಾಗಿದೆ ಎಂದರು. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನೂರಕ್ಕೆ ನೂರಷ್ಟು ಖಚಿತ. ಇದನ್ನು ಅರಿತು ನನ್ನ ವಿರುದ್ಧ ವೈಯಕ್ತಿಕ ದಾಳಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

‘ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರು ನನ್ನ ವಿರುದ್ಧ ಆರೋಪಕ್ಕೆ ಮುಂದಾಗಿದ್ದಾರೆ’ ➤ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25,ಕಾಯಮಾತಿ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಬಿಬಿಎಂಪಿ ಸೇರಿದಂತೆ ರಾಜ್ಯದ 102 ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ 40 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸುವುದಕ್ಕೆ ಸರ್ಕಾರ ನಿರ್ಧರಿಸಿ, ಈ ಸಂಬಂಧ ಆದೇಶವನ್ನೂ ಹೊರಡಿಸಿತ್ತು. ಈ ಪೈಕಿ ಬಿಬಿಎಂಪಿಯ 14,980 ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕಿದೆ. ರಾಜ್ಯದ

Read More »

ಕರ್ನಾಟಕ

ವಚನ ಕೊಟ್ಟಂತೆ ನಡೆದುಕೊಂಡಿದ್ದು ಬಿಜೆಪಿ ಸರ್ಕಾರ ➤ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಹಾವೇರಿ, ಏ.25. ಈ ಚುನಾವಣೆಯಲ್ಲಿ ಬಿಜೆಪಿಯ ಸುನಾಮಿ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ರೋಡ್ ಶೋದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ವಚನ ಕೊಟ್ಟಂತೆ ನಡೆದುಕೊಂಡಿದ್ದು ಬಿಜೆಪಿ ಸರ್ಕಾರ, ಕಾಂಗ್ರೆಸ್ ಸುಳ್ಳು ಭರವಸೆ ಕೊಡುವ ಪಕ್ಷ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಆರೋಪಿಸಿದರು. ಇದೇ ಮೊದಲ ಬಾರಿಗೆ 1500 ಮನೆಗಳ ನಿರ್ಮಾಣವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದರು.

ವಚನ ಕೊಟ್ಟಂತೆ ನಡೆದುಕೊಂಡಿದ್ದು ಬಿಜೆಪಿ ಸರ್ಕಾರ ➤ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

‘ನಾವು ಅಧಿಕಾರಕ್ಕೆ ಬಂದ್ರೆ ಎಲ್ಲಾ ಪೊಲೀಸರನ್ನು ಬದಲಾಯಿಸುತ್ತೇವೆ’!   ➤ ಸಿದ್ದರಾಮಯ್ಯ!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.25 ನಾವು ಅಧಿಕಾರಕ್ಕೆ ಬಂದ್ರೆ ಎಲ್ಲಾ ಪೊಲೀಸರನ್ನು ಬದಲಾಯಿಸುತ್ತೇವೆ ಎಂದು ಗೋಕಾಕ್ ನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಇವರ ಮನೆ ಹಾಳಾಗಬಿಜೆಪಿ ಅಂದರೆ ಸುಳ್ಳಿನ ಫ್ಯಾಕ್ಟರಿ, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯವರು ಭಯದ ವಾತಾವರಣ ನಿರ್ಮಿಸಿದ್ದಾರೆ. ಗೋಕಾಕ್ ನಲ್ಲಿ ಜನರನ್ನು ಹೆದರಿಸಿ ಬೆದರಿಸಿ ನಿಯಂತ್ರಿಸಿದ್ದಾರೆ,ಪೊಲೀಸರು ಇವರು ಹೇಳಿದಂತೆ ಕೇಳುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದ ನಂತರ ಎಲ್ಲಾ ಪೊಲೀಸರನ್ನು ಬದಲಾಯಿಸುತ್ತೇವೆ ಎಂದು ಗೋಕಾಕ್ ನಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.  

‘ನಾವು ಅಧಿಕಾರಕ್ಕೆ ಬಂದ್ರೆ ಎಲ್ಲಾ ಪೊಲೀಸರನ್ನು ಬದಲಾಯಿಸುತ್ತೇವೆ’!   ➤ ಸಿದ್ದರಾಮಯ್ಯ! Read More »

ಕರಾವಳಿ

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ಧರಾಮಯ್ಯ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹೈಕಮಾಂಡ್‌ ನಾಯಕರ ಅಬ್ಬರದ ಪ್ರಚಾರದ ನಡುವೆ ರೈತರ ಜೀವನಾಡಿ ನಂದಿನಿ ಹಾಗೂ ಅಮುಲ್‌ ವಿವಾದ ಜೋರಾಗಿ ಸದ್ದು ಮಾಡುತ್ತಿದೆ. ಈ ಕುರಿತು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿದ್ದಾರೆ. ಆ

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ಧರಾಮಯ್ಯ! Read More »

ಕರ್ನಾಟಕ

ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಏ.25. ಬೆಂಗಳೂರಿನಲ್ಲಿ ನಡೆದ ಕಾರು ಹಾಗೂ ಬೈಕ್‌ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್‌ ಬಾಳೆಬೈಲು (30) ಮೃತ ಯುವಕ ಎಂದು ಗುರುತಿಸಲಾಗಿದೆ. ಯತೀಶ್‌ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತ್ಯು Read More »

ಕರ್ನಾಟಕ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.!   ➤ ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ರಾಜ್ಯ ಸರ್ಕಾರಿ ನೌಕರರಿಗೆ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಅಂತ್ಯಗೊಂಡ ಬಳಿಕ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಶೇಕಡ 4 ತುಟ್ಟಿಭತ್ಯೆ ಹೆಚ್ಚಳ ಮಂಜೂರು ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ. ಮೇ 13 ರಂದು ಚುನಾವಣಾ ನೀತಿ ಸಂಹಿತೆ ಅಂತ್ಯಗೊಳ್ಳಲಿದ್ದು, ಇದಾದ ಬಳಿಕ ತುಟ್ಟಿಭತ್ಯೆ ಮಂಜೂರು ಆದೇಶ ಹೊರಬೀಳಲಿದೆ.ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಈ ಕುರಿತಂತೆ ರಾಜ್ಯ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.!   ➤ ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ! Read More »

ಕರ್ನಾಟಕ
Scroll to Top