karnataka

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್

(ನ್ಯೂಸ್ ಕಡಬ)newskadaba.com ಮಂಡ್ಯ, ಏ.23. ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಖಾಸಗಿ ವೋಲ್ವೊ ಬಸ್ಸೊಂದು ಚಲಿಸುವಾಗಲೇ ಹೊತ್ತಿ ಉರಿದ ಘಟನೆ ಶ್ರೀರಂಗಪಟ್ಟಣದಲ್ಲಿ ಶನಿವಾರ ನಡೆದಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ 30 ಪ್ರಯಾಣಿಕರು ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್‌’ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಬೊಬ್ಬೆ ಹೊಡೆದು ಬಸ್ಸನ್ನು ನಿಲ್ಲಿಸಿದ್ದಾರೆ. ಅಪಾಯದ ಸೂಚನೆ ಅರಿತ ಬಸ್ ಚಾಲಕ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನೂ ಕೆಳಗೆ ಇಳಿಸಿದ್ದಾರೆ.

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್ Read More »

ಕರ್ನಾಟಕ

ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಮುಸ್ಲಿಮರಿಗೆ ಮತ್ತೆ ಮೀಸಲಾತಿ..! ➤ಜತೆಗೆ  ರಾಜ್ಯದಲ್ಲಿ Amul ಹಾಲಿಗೆ ಕಡಿವಾಣ.!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.23 ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರಿಗೆ ಮತ್ತೆ ಶೇ.4ರ ಮೀಸಲಾತಿ ನೀಡುತ್ತೇನೆ. ಜತೆಗೆ ರಾಜ್ಯದಲ್ಲಿ ಅಮುಲ್‌ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಮುಸ್ಲಿಮರ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿ, ಅದನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಿದೆ. ಈ ಹಂಚಿಕೆ ಲಿಂಗಾಯತರು ಮತ್ತು ಒಕ್ಕಲಿಗರ ಬೇಡಿಕೆಯಾಗಿತ್ತಾ? ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರ ಮೀಸಲಾತಿಯನ್ನು ವಾಪಸ್‌ ತರುತ್ತೇನೆ. ಮಾತ್ರವಲ್ಲದೆ, ಒಕ್ಕಲಿಗರು ಹಾಗೂ ಲಿಂಗಾಯತರಿಗೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾರೆ.  

ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಮುಸ್ಲಿಮರಿಗೆ ಮತ್ತೆ ಮೀಸಲಾತಿ..! ➤ಜತೆಗೆ  ರಾಜ್ಯದಲ್ಲಿ Amul ಹಾಲಿಗೆ ಕಡಿವಾಣ.! Read More »

ಕರ್ನಾಟಕ

ಹಲವು ಸೀರಿಯಲ್‌ ನಲ್ಲಿ ನಟಿಸಿದ್ದ ನಟ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್‌ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು ಎನ್ನಲಾಗಿದೆ.

ಹಲವು ಸೀರಿಯಲ್‌ ನಲ್ಲಿ ನಟಿಸಿದ್ದ ನಟ ಆತ್ಮಹತ್ಯೆ Read More »

ಕರ್ನಾಟಕ

ಡಿಸ್ಕೌಂಟ್ ‘ಸೇಲ್’ನಲ್ಲಿ ಸೀರೆಗಾಗಿ ಮಹಿಳೆಯರ ಭಾರಿ ರಂಪಾಟ..!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.23 ಸೀರೆಗಳು ಅಂದ್ರೆ ನಾರಿಯರಿಗೆ ಪಂಚಪ್ರಾಣ. ತಮಗೆ ಇಷ್ಟವಾದ ಸೀರೆಗಳ ಸೆಲೆಕ್ಷನ್‌ಗೆ ಹೆಂಗಳೆಯರು ಸಿಕ್ಕಾಪಟ್ಟೆ ಶಾಪಿಂಗ್‌ ಮಾಡ್ತಾರೆ. ಅದೇ ಸೀರೆಗಳು ಕಡಿಮೆ ದರದಲ್ಲಿ ಸಿಕ್ರೆ ಸುಮ್ನೆ ಬಿಡ್ತಾರಾ. ನಾ ಮುಂದು ತಾ ಮುಂದು ಅಂತಾ ಮುಗಿ ಬೀಳ್ತಾರೆ. ಹೀಗೆ ನಡೆದ ಡಿಸ್ಕೌಂಟ್‌ ಸೇಲ್‌ನಲ್ಲಿ ಇಬ್ಬರು ಮಹಿಳೆಯರು ಜಡೆ ಹಿಡಿದು ಕಿತ್ತಾಡಿಕೊಂಡಿದ್ದಾರೆ.ಒಬ್ಬರ ಜಡೆ ಮತ್ತೊಬ್ಬರು ಹಿಡಿದು ರಂಪಾಟ ನಡೆಸಿರುವ ಘಟನೆ ಮಲ್ಲೇಶ್ವರಂನ KSIC ಡಿಸ್ಕೌಂಟ್ ಸೇಲ್‌ನಲ್ಲಿ ನಡೆದಿದೆ.    

ಡಿಸ್ಕೌಂಟ್ ‘ಸೇಲ್’ನಲ್ಲಿ ಸೀರೆಗಾಗಿ ಮಹಿಳೆಯರ ಭಾರಿ ರಂಪಾಟ..! Read More »

ಕರ್ನಾಟಕ

ಟ್ರಕ್-ಬಸ್ ನಡುವೆ ಭೀಕರ ಅಪಘಾತ..!   ➤ನಾಲ್ವರ ಮೃತ್ಯು, 22 ಮಂದಿಗೆ ಗಾಯ.!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.23 ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ದುರ್ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.     

ಟ್ರಕ್-ಬಸ್ ನಡುವೆ ಭೀಕರ ಅಪಘಾತ..!   ➤ನಾಲ್ವರ ಮೃತ್ಯು, 22 ಮಂದಿಗೆ ಗಾಯ.! Read More »

ಕರ್ನಾಟಕ

‘ಸಿದ್ದಗಂಗಾ’ ಮಠದ ಉತ್ತರಾಧಿಕಾರಿಗೆ ಏ.23(ಇಂದು)ಪಟ್ಟಾಭಿಷೇಕ ಕಾರ್ಯಕ್ರಮ..!

(ನ್ಯೂಸ್ ಕಡಬ)Newskadaba.com ತುಮಕೂರು, ಏ.23  ತುಮಕೂರಿನ ಸಿದ್ದಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಏ.23(ಇಂದು) ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಾಗಿದ್ದು, ಮನೋಜ್ ಕುಮಾರ್ ರವರನ್ನು ಉತ್ತರ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ನಮ್ಮ ಶಾಖಾ ಮಠವಾದ ಬಂಡೇಮಠಕ್ಕೆ ಹರ್ಷ ಕೆ.ಎಂ., ಬೆಂಗಳೂರು ಗ್ರಾಮಾಂತರದ ವಿಜಯಪುರದ ಬಸವಕಲ್ಯಾಣ ಮಠಕ್ಕೆ ಗೌರೀಶ್ ಕುಮಾರ್ ಅವರನ್ನು ಉತ್ತರಾಧಿಕಾರಿಯಾಗಿ ಶಿವಾನುಭವ ಆಯ್ಕೆ ಮಾಡಲಾಗಿದ್ದು, ಮೂವರಿಗೂ ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಲಿಂಗ ಶ್ರೀ

‘ಸಿದ್ದಗಂಗಾ’ ಮಠದ ಉತ್ತರಾಧಿಕಾರಿಗೆ ಏ.23(ಇಂದು)ಪಟ್ಟಾಭಿಷೇಕ ಕಾರ್ಯಕ್ರಮ..! Read More »

ಕರ್ನಾಟಕ

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23 ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಈ ತೊಂದರೆ ಉಂಟಾಗಿದೆ. 7 ಗಂಟೆಗೆ ಆರಂಭವಾಗಬೇಕಿದ್ದ ರೈಲುಗಳ ಸಂಚಾರ ತಡವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ನೇರಳೆ ಮಾರ್ಗದಲ್ಲಿ ರೈಲುಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.  

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ..! Read More »

ಕರ್ನಾಟಕ

ಪುತ್ತೂರು: ಅಕ್ರಮವಾಗಿ ಗೋಮಾಂಸ ಸಾಗಾಟ ➤ ಗೋಮಾಂಸ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಪುತ್ರೂರು, ಏ.23. ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಕೇಸ್ ದಾಖಲಾಗಿದೆ ಎಂದು ವರದಿಯಾಗಿದೆ. ಪಡೀಲ್ ನಲ್ಲಿನ ಕೋಳಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟದ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳು ದೂರು‌ ನೀಡಿದ್ದರು.ಅರುಣ್ ಪುತ್ತಿಲ ಕೂಡ ಪೊಲೀಸರ ಬಳಿ ತೆರಳಿ ಈ ಕುರಿತು ಮಾತುಕತೆ ನಡೆಸಿದ್ದರು ಎನ್ನಲಾಗಿದೆ.  

ಪುತ್ತೂರು: ಅಕ್ರಮವಾಗಿ ಗೋಮಾಂಸ ಸಾಗಾಟ ➤ ಗೋಮಾಂಸ ಪೊಲೀಸ್ ವಶಕ್ಕೆ Read More »

ಕರಾವಳಿ

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ…!➤ ಚಾಲಕ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಂಭೀರ ಗಾಯ.!  

(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.23 ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ.ಮೃತನನ್ನು ರಾಜಸ್ಥಾನ ಮೂಲದ ಚಾಲಕ ಅಬ್ಬಾಸ್ (39) ಎಂದು ಗುರುತಿಸಲಾಗಿದೆ. ಹುಮನಾಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಲಾರಿ ಹಾಗೂ ಜೇವರ್ಗಿಯಿಂದ ಹುಮನಾಬಾದ್ ಗೆ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.ಪರಿಣಾಮ ಓರ್ವ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.      

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ…!➤ ಚಾಲಕ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಂಭೀರ ಗಾಯ.!   Read More »

ಕರ್ನಾಟಕ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಮಂಡ್ಯ, ಏ.23. ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಸರಗೂರು ಬಳಿಯ ಟಿ.ನರಸೀಪುರ-ಬೆಳಕವಾಡಿ ರಸ್ತೆಯಲ್ಲಿ ನಡೆದಿದೆ. ಗ್ರಾಮದ ಶಿವಪ್ಪ(52), ಸತೀಶ್ (46) ಸಾವನ್ದನಪ್ಪಿದ್ದಾರೆ ಅಪಘಾತದ ರಸಭಕ್ಕೆ ಬೈಕ್​ ಸ್ಥಳದಲ್ಲೇ ಹೊತ್ತಿ ಉರಿದಿದೆ. ಸಂಬಂಧಿಕರ ಮದುವೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಸರಗೂರು ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ
Scroll to Top