karnataka

‘ಬಹುಮತದೊಂದಿಗೆ ಅಧಿಕಾರ ಬರುವ ವಿಶ್ವಾಸ ಇದೆ’..! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ರಾಜ್ಯದ 189 ಸ್ಥಳಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಎಲ್ಲರೂ ಬಹುಮತದಿಂದ ಆಯ್ಕೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಒಮ್ಮತದ ಸ್ವಾಗತ ದೊರೆತಿದೆ. ಕೆಲವು ಅಸಮಧಾನಿತರ ಜೊತೆ ಮಾತಾಡುವ ಕೆಲಸ ನಡೆದಿದೆ. ಲಕ್ಷ್ಮಣ ಸವದಿ ಅವರೊಂದಿಗೆ ಮಾತಾಡಿದ್ದು, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ತಿಳಿಸಿರುವುದಾಗಿ ಹೇಳಿದರು.

‘ಬಹುಮತದೊಂದಿಗೆ ಅಧಿಕಾರ ಬರುವ ವಿಶ್ವಾಸ ಇದೆ’..! ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಉಡುಪಿ: ‘ಪಕ್ಷ ನನ್ನನ್ನು ನಡೆಸಿಕೊಂಡ ರೀತಿಗೆ ನೋವಾಗಿದೆ’ ➤ ರಘುಪತಿ ಭಟ್

(ನ್ಯೂಸ್ ಕಡಬ)newskadaba.com ಉಡುಪಿ, ಏ.12. “ಟಿಕೆಟ್ ತಪ್ಪಿರುವುದಕ್ಕೆ ಬೇಸರವಿಲ್ಲ, ಆದರೆ ಪಕ್ಷ ನನ್ನನ್ನು ನಡೆಸಿಕೊಂಡ ರೀತಿಯಿಂದ ನನಗೆ ನೋವಾಗಿದೆ” ಎಂದು ಶಾಸಕ ಕೆ. ರಘುಪತಿ ಭಟ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಶಾಸಕ ಕೆ. ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಮನೆ ಮುಂದೆ ನೂರಾರು ಸಂಖ್ಯೆಯ ಕಾರ್ಯಕರ್ತರು ಸೇರಿದ್ದು, ಮಾಧ್ಯಮದೊಂದಿಗೆ ಮಾತನಾಡಿ, “ಪಕ್ಷ ನನ್ನನ್ನು ನಡೆಸಿಕೊಂಡ ರೀತಿಯಿಂದ ನೋವಾಗಿದೆ. ಯಾವೊಬ್ಬ ನಾಯಕರೂ ನನಗೆ ಕಾಲ್ ಮಾಡಿ ಮಾತನಾಡಿಲ್ಲ. ಒಬ್ಬ ಜಿಲ್ಲಾಧ್ಯಕ್ಷರೂ ನನಗೆ ಕರೆ

ಉಡುಪಿ: ‘ಪಕ್ಷ ನನ್ನನ್ನು ನಡೆಸಿಕೊಂಡ ರೀತಿಗೆ ನೋವಾಗಿದೆ’ ➤ ರಘುಪತಿ ಭಟ್ Read More »

ಕರಾವಳಿ

ರಾಜ್ಯ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೀಗಿವೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಂಡಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಶಿಕಾರಿಪುರ ಕ್ಷೇತ್ರದಿಂದ ವೈ ವಿಜಯೇಂದ್ರಗೆ ಟಿಕೆಟ್ ನೀಡಲಾಗಿದೆ. ಶಿಗ್ಗಾಂವ್‌- ಬಸವರಾಜ

ರಾಜ್ಯ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೀಗಿವೆ..! Read More »

ಕರ್ನಾಟಕ

ಚುನಾವಣಾ ಕರ್ತವ್ಯಲೋಪ ಆರೋಪ ➤ ಮತಗಟ್ಟೆ ಅಧಿಕಾರಿ ಅಮಾನತು

(ನ್ಯೂಸ್ ಕಡಬ)newskadaba.com ಧಾರವಾಡ, ಏ.12. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಭಾಗ ಸಂಖ್ಯೆ 94 ರ ಮತಗಟ್ಟೆ ಅಧಿಕಾರಿಯಾಗಿದ್ದ ನವೀನ ಡಿ. ಸೂರ್ಯವಂಶಿ ಅವರು ಚುನಾವಣಾ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರಿ, ಕಾರ್ಯಲೋಪ ಮಾಡಿರುವುದರಿಂದ ತಕ್ಷಣ ಸರಕಾರಿ ಸೇವೆಯಿಂದ ಅವರನ್ನು ಅಮಾನತ್ತುಗೊಳಿಸಿ, ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಆದೇಶ ಹೊರಡಿಸಿದ್ದಾರೆ. ನವೀನ್ ಸೂರ್ಯವಂಶಿ ಅವರು 2023 ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ

ಚುನಾವಣಾ ಕರ್ತವ್ಯಲೋಪ ಆರೋಪ ➤ ಮತಗಟ್ಟೆ ಅಧಿಕಾರಿ ಅಮಾನತು Read More »

ಕರ್ನಾಟಕ

ಚುನಾವಣಾ ರಾಜಕೀಯಕ್ಕೆ ನಿವೃತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.12. ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ ಎಂದು ಹೇಳಿದ್ದಾರೆ.  

ಚುನಾವಣಾ ರಾಜಕೀಯಕ್ಕೆ ನಿವೃತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ Read More »

ಕರ್ನಾಟಕ

ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆ ಬಿಜೆಪಿ ತನ್ನ ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂದು ವರದಿ ತಿಳಿಸಿದೆ. ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಂಬಂಧ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಹತ್ವದ ಸಭೆ ನಡೆದಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರೀಯ ಚುನಾವಣಾ ಸಮಿತಿ

ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ Read More »

ಕರ್ನಾಟಕ

ಪುತ್ತೂರು: ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ..!

(ನ್ಯೂಸ್ ಕಡಬ)newskadaba.com ಪುತ್ತೂರು, ಏ.12. ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಪುತ್ತೂರಿನ ಬಿಜೆಪಿ ಟಿಕೆಟ್ ನೀಡಿದೆ ವರದಿ ತಿಳಿಸಿದೆ. ಇದರ ಬೆನ್ನಲ್ಲೇ ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ ಎನ್ನಲಾಗಿದೆ. ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ.  

ಪುತ್ತೂರು: ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ..! Read More »

ಕರಾವಳಿ

ನಾಳೆಯಿಂದ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ರಾಜ್ಯದಲ್ಲಿ ಮೇ. 10ರಂದು ನಡೆಯಲಿರುವ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, (ನಾಳೆ)ಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇದರೊಂದಿಗೆ ವಿಧಾನಸಭೆ ಚುನಾವಣೆಯ ಅಧಿಕೃತ ಪ್ರಕ್ರಿಯೆಗಳು ಆರಂಭವಾಗಲಿವೆ. ಏ.20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏ.21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಉಮೇದುವಾರಿಕೆ ವಾಪಾಸ್‌ ಪಡೆಯಲು ಏ.24ರಂದು ಕೊನೆಯ ದಿನವಾಗಿದೆ. ಮೇ.10 ಕ್ಕೆ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.

ನಾಳೆಯಿಂದ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ Read More »

ಕರ್ನಾಟಕ

‘ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿ’ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿ ಆಗಿದೆ ಎಂದರು. ಇನ್ನೆರಡು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದಾರೆ.

‘ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿ’ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com  ಕಡಬ, ಏ.11. ಕಡಬ ತಾಲೂಕಿನ ಮರ್ಧಾಳ ನಿವಾಸಿ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು  ಕಡಬ ಮರ್ಧಾಳ ನಿವಾಸಿ ಶಫೀಕ್ (40) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.  

ಕಡಬ: ಮರ್ಧಾಳ ನಿವಾಸಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top