karnataka

‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್ ? ➤ ಕುತೂಲಹ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಏ.05. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಜಕಾರಣಿಗಳು ಪಕ್ಷಾಂತರ ಮಾಡುವುದು ಸಾಮಾನ್ಯ. ಆದರೆ, ರಾಜಕಾರಣದಲ್ಲಿದ್ದ ಪ್ರಸ್ತಿದ್ದ ವ್ಯಕ್ತಿಗಳನ್ನು, ಖ್ಯಾತ ಚಲನಚಿತ್ರ ತಾರೆಯರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು, ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು, ಈ ಮೂಲಕ ಮತದಾರರ ಮನಗೆಲ್ಲಲು ಪಕ್ಷಗಳ ನಾಯಕರು ಪ್ರಯತ್ನಿಸುತ್ತಾರೆ. ಇನ್ನೇನು ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅಭಿನಯ ಚಕ್ರವರ್ತಿ ಸುದೀಪ್ ಇಂದು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ ಎಂದು ವರದಿ […]

‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್ ? ➤ ಕುತೂಲಹ ಮೂಡಿಸಿದ ಸಿಎಂ ಸುದ್ದಿಗೋಷ್ಠಿ Read More »

ಕರ್ನಾಟಕ

ಕೆಲವರ ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಮತ್ತು ಎಂಎಲ್‌ಸಿಗಳ ಪಕ್ಷಾಂತರವು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಖಚಿತತೆಯ ಮೇರೆಗೆ ಕೆಲ ನಾಯಕರು ಪಕ್ಷ ತೊರೆದಿದ್ದು, ಇದರಿಂದ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ಪುನರುಚ್ಚರಿಸಿದರು.  

ಕೆಲವರ ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ ➤ ಅರ್ಜಿ ವಜಾಗೊಳಿಸಿದ ಹೈಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಒಂದೇ ವಿಷಯದ ಕುರಿತು ಅನೇಕ ಎಫ್‌ಐಆರ್‌ಗಳ ರೇಣುಕಾಚಾರ್ಯ ಅವರ ವಾದವನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ಅರ್ಜಿಯನ್ನು ವಜಾಗೊಳಿಸಿದರು.  

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ ➤ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಕರ್ನಾಟಕ

ಕಿಚ್ಚ ಸುದೀಪ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ..! ➤ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಸ್ಯಾಂಡಲ್ ವುಡ್ ನಟ, ಅಭಿಮಾನಿಗಳ ಪಾಲಿನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಯಾಗುತ್ತಾರೆಯೇ, ಇಲ್ಲ ಸ್ಟಾರ್ ಪ್ರಚಾರಕರಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆಯೇ ಎಂಬ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯನ್ನು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆಸಲಿದ್ದು ಅದರಲ್ಲಿ ಕಿಚ್ಚ ಸುದೀಪ್ ಭಾಗಿಯಾಗುತ್ತಿದ್ದಾರೆ. ಅದರಲ್ಲಿ ತಮ್ಮ ನಡೆಯನ್ನು ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಿಚ್ಚ ಸುದೀಪ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ..! ➤ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಈಜಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ದಾವಣಗೆರೆ, ಏ.05. ಈಜಲು ತೆರಳಿದ ಇಬ್ಬರು ಯುವಕರು‌ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಸಂಭವಿಸಿದೆ. ರಾಜು ಮತ್ತು ವಿಜಯ್ ಎಂಬ ಸ್ನೇಹಿತರು ಮೃತರು.ಬೇಸಿಗೆ ರಜೆ ಹಿನ್ನೆಲೆಯಲ್ಲಿ ಕುರಿ ಕಾಯಲು ಹೋಗಿದ್ದ ಇವರು, ಬಿಸಿಲಿನ ತಾಪಕ್ಕೆ ಗೊಲ್ಲರಹಟ್ಟಿ ಕೆರೆಯಲ್ಲಿ ಈಜಲು ಹೋಗಿದ್ದರು. ಈಜುವ ವೇಳೆ ಆಳವಾದ ಗುಂಡಿಯಲ್ಲಿ ಮುಳುಗುತ್ತಿದ್ದ ರಾಜುವನ್ನು ರಕ್ಷಿಸಲು ವಿಜಯ್ ಕೂಡ ಧುಮುಕಿದ್ದ. ಆದರೆ ಕೊನೆಗೆ ಇಬ್ಬರೂ ಮುಳುಗಲಾರಂಭಿಸಿದ್ದಾರೆ. ಮತ್ತೋರ್ವ ಯುವಕ ಇವರಿಬ್ಬರನ್ನು ರಕ್ಷಿಸಲು ಪ್ರಯತ್ನಿಸಿದ್ದ ಅದರೆ

ಈಜಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ

ಬಂಟ್ವಾಳ: ಹೆಚ್ಚುವರಿ ತಪಾಸಣಾ ಕೇಂದ್ರ ➤ ಪರಿಶೀಲನೆ ಇನ್ನಷ್ಟು ಬಿಗಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.05. ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೋಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಶ್ಚಿಮ ವಲಯ ಐ.ಜಿ. ಡಾ. ಚಂದ್ರಗುಪ್ತ ಹೇಳಿದರು ಎನ್ನಲಾಗಿದೆ.  

ಬಂಟ್ವಾಳ: ಹೆಚ್ಚುವರಿ ತಪಾಸಣಾ ಕೇಂದ್ರ ➤ ಪರಿಶೀಲನೆ ಇನ್ನಷ್ಟು ಬಿಗಿ Read More »

ಕರಾವಳಿ

ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ➤ ನಾಲ್ವರ ಬಂಧನ, ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಪು, ಏ.05. ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ಕೋತಲ ಕಟ್ಟೆಯಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಡಿವೈಡರ್ ಮೇಲೇರಿ, ಉಡುಪಿ – ಮಂಗಳೂರು ರಸ್ತೆಗೆ ಅಡ್ಡಲಾಗಿ ನಿಂತು ಬಿಟ್ಟಿದೆ. ಎದುರಿನಿಂದ ಯಾವುದೇ ವಾಹನಗಳು ಬಾರದೇ ಇದ್ದುದರಿಂದ ಕಾರು ಚಾಲಕ ಪವಾಢ ಸಧೃಢ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ

ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ➤ ನಾಲ್ವರ ಬಂಧನ, ಸೊತ್ತು ವಶಕ್ಕೆ Read More »

ಕರಾವಳಿ

ಬೆಳ್ತಂಗಡಿ: ಯುವತಿಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಯುವಕನೋರ್ವನಿಗೆ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.05. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಪರಿಚಯಸ್ಥ ಸಹ ಪ್ರಯಾಣಿಕೆಯೊಂದಿಗೆ ಮಾತನಾಡಿದ್ದನ್ನೇ ನೆಪವಾಗಿರಿಸಿ ಯುವಕರ ಗುಂಪೊಂದು ಯುವತಿಗೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಉಜಿರೆಯಲ್ಲಿ ವರದಿಯಾಗಿದೆ. ಕಕ್ಕಿಂಜೆ ನಿವಾಸಿ ಶಾಹಿಲ್ (22) ಹಲ್ಲೆಗೆ ಒಳಗಾದ ಯುವಕ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ

ಬೆಳ್ತಂಗಡಿ: ಯುವತಿಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಯುವಕನೋರ್ವನಿಗೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಮಗಳನ್ನು ಶಾಲೆಗೆ ಬಿಡಲು ಬೈಕ್’ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾಗಡಿಯ ಸಾಬರಪಾಳ್ಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಾಗಡಿಯ ಕಲ್ಯಾ ಗ್ರಾಮದ ಯೋಗೇಶ್ (47) ಮಗಳು ಹರ್ಷಿತಾ(14) ಮೃತಪಟ್ಟವರು. ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್’ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇನ್ಮುಂದೆ ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ➤ ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಕಾರಿನ ಸೀಟ್ ಬೆಲ್ಟ್ ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರ ವಿಡಿಯೋವನ್ನು ಹಂಚಿಕೊಂಡ ಕೇಂದ್ರ ಸಚಿವರು, ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. “ಕಾರಿನಲ್ಲಿ ಕುಳಿತುಕೊಳ್ಳುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದನ್ನು ಈಗ ಕಡ್ಡಾಯಗೊಳಿಸಲಾಗುವುದು” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದಾರೆ.  

ಇನ್ಮುಂದೆ ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ➤ ಸಚಿವ ನಿತಿನ್ ಗಡ್ಕರಿ Read More »

ಕರ್ನಾಟಕ
Scroll to Top