karnataka

ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ ! ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ ಎನ್ನಲಾಗಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದಂತ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ಆದೇಶಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದಂತ ಹಿರೇಮಠ್ ಎಂ.ಜಿ ಅವರನ್ನು ಕರ್ನಾಟಕ ರೂರಲ್ ಇನ್ಫಾಸ್ಟ್ರಕ್ಚರ್ ಡೆವಲ್ಪಮೆಂಟ್ ಕಾರ್ಪೊರೇಷನ್ ಎಂ.ಡಿಯಾಗಿ ನಿಯೋಜಿಸಲಾಗಿದೆ. […]

ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ ! ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ನಾಳೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ಹೊಸ ಹಣಕಾಸು ವರ್ಷವು ಏಪ್ರಿಲ್ 1 ರಂದು ಪ್ರಾರಂಭವಾಗುತ್ತದೆ. ಹಣದುಬ್ಬರವು ಏಪ್ರಿಲ್’ನಲ್ಲಿ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರಲಿದೆ. ಅನೇಕ ವಸ್ತುಗಳ ಬೆಲೆಗಳು ದುಬಾರಿಯಾಗಲಿವೆ ಮತ್ತು ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದೆ. ಅಲ್ಲದೆ, ಬಜೆಟ್ನಲ್ಲಿ ಪ್ರಸ್ತಾಪಿಸಲಾದ ಎಲ್ಲಾ ರೀತಿಯ ತೆರಿಗೆಗಳನ್ನ ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು. ಏಪ್ರಿಲ್ 1 ರಿಂದ ಯಾವ ವಸ್ತುಗಳು ದುಬಾರಿಯಾಗುತ್ತವೆ

ನಾಳೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ Read More »

ಕರ್ನಾಟಕ

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ ➤ 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ಇಂದಿನಿಂದ ರಾಜ್ಯಾದ್ಯಂತ SSLC ಮುಖ್ಯ ಪರೀಕ್ಷೆ ಆರಂಭಗೊಡು ಎಪ್ರಿಲ್ 15ರ ವರೆಗೆ ನಡೆಯಲಿದ್ದು, 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ ನಡೆದಿದೆ. ಎಸೆಸೆಲ್ಸಿ ಪರೀಕ್ಷೆಗೆ ರಾಜ್ಯದ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 5,833 ಸರಕಾರಿ ಶಾಲೆಗಳು, 3,605 ಅನುದಾನಿತ ಹಾಗೂ 6,060 ಅನುದಾನರಹಿತ ಶಾಲೆಗಳಾಗಿವೆ. ಇನ್ನು ಪರೀಕ್ಷಾ ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ನಿಗಾ ವಹಿಸಿದೆ.

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ ➤ 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ Read More »

ಕರ್ನಾಟಕ

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!       

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!        Read More »

ಕರಾವಳಿ, ಕ್ರೈಮ್ ನ್ಯೂಸ್

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು 

(ನ್ಯೂಸ್ ಕಡಬ)newskadaba.com ಕಿನ್ನಿಗೋಳಿ, ಮಾ.31. ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ ಎಂದು ಗುರುತಿಸಲಾಗಿದೆ. ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.    

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು  Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.30. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸರ್ಕಾರಿ ಸ್ವಾಮ್ಯದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ವಿ.ಕೆ.ಅಂಗಡಿ ಬಂಧಿತ ಶಾಲೆಯ ಮುಖ್ಯೋಪಾಧ್ಯಾಯ. ಪ್ರತಿದಿನ ಮೊಬೈಲ್ ಕರೆ ಮಾಡಿ ಹಾಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಅಲ್ಲದೇ ನಿನಗೆ ಒಳ್ಳೆಯ ಆಫರ್ ಕೊಡುತ್ತೇನೆ. ನನ್ನ ಮನೆಗೆ ಒಂದು ಗಂಟೆ ಬಂದು ಹೋಗು ಎಂದು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ಮುಖ್ಯೋಪಾಧ್ಯಾಯನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಜಾಧ್ವನಿ ಯಾತ್ರೆಯಲ್ಲಿ ಹಣ ಎಸೆದ ಆರೋಪ  ➤ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲು

(ನ್ಯೂಸ್ ಕಡಬ)newskadaba.com ಮಂಡ್ಯ, ಮಾ.30. ಮಂಡ್ಯ ಜಿಲ್ಲೆಯಲ್ಲಿ ಪ್ರಚಾರದ ವೇಳೆ ಜನರ ಮೇಲೆ ಹಣ ಎಸೆದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸ್ಥಳೀಯ ಚುನಾವಣಾಧಿಕಾರಿಯೊಬ್ಬರು ಡಿ. ಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 155 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರದ ವೇಳೆ ನಗದು ಎಸೆದಿದ್ದಾರೆ ಎಂಬ ಮಾಧ್ಯಮ ವರದಿಗಳ ಆಧಾರದ ಮೇಲೆ ಲಿಖಿತ ದೂರು ದಾಖಲಿಸಲಾಗಿದೆ

ಪ್ರಜಾಧ್ವನಿ ಯಾತ್ರೆಯಲ್ಲಿ ಹಣ ಎಸೆದ ಆರೋಪ  ➤ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲು Read More »

ಕರ್ನಾಟಕ

ಬೆಳ್ತಂಗಡಿ: ನೇತ್ರಾವತಿ ಸ್ಥಾನಘಟ್ಟದಲ್ಲಿ ಸಾಬೂನ್, ಶಾಂಪೂ ಬಳಕೆ ನಿಷೇಧ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.30. ನೇತ್ರಾವತಿ ನದಿ ನೀರಿನ ಹರಿವು ಕ್ಷೀಣಿಸಿರುವ ಹಿನ್ನೆಲೆಯಲ್ಲಿ ನೀರು ಮಲಿನವಾಗುವುದನ್ನು ತಡೆಯಲು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಸಾಬೂನು, ಶಾಂಪೂಗಳ ಮಾರಾಟ, ಬಳಕೆಯನ್ನು ನಿಷೇಧಿಸಲಾಗಿದೆ. ಈ ಕುರಿತು ಧರ್ಮಸ್ಥಳ ಗ್ರಾ.ಪಂ. ಸಭೆಯಲ್ಲಿ ನಿರ್ಣಯ ಕೈಗೊಂಡು ನದಿ ಸುತ್ತಲಿನ ಅಂಗಡಿಗಳಲ್ಲಿ ಸೋಪು, ಶಾಂಪೂ ಮಾರಾಟ ಮಾಡದಂತೆ ನೋಟಿಸ್‌ ಕಳುಹಿಸಲಾಗಿದೆ.

ಬೆಳ್ತಂಗಡಿ: ನೇತ್ರಾವತಿ ಸ್ಥಾನಘಟ್ಟದಲ್ಲಿ ಸಾಬೂನ್, ಶಾಂಪೂ ಬಳಕೆ ನಿಷೇಧ Read More »

ಕರಾವಳಿ

ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ ➤ ಪೊಲೀಸರಿಂದ ಓರ್ವನ ವಿಚಾರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ಯುವಕನೊಬ್ಬ ಜನನಿಬಿಡ ಪ್ರದೇಶದಲ್ಲಿ ನಿಂತುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾನೆ. ಇದರಿಂದಾಗಿ ಗಾಬರಿಗೊಂಡ ಸ್ಥಳೀಯರು ಈತನನ್ನು ಉಗ್ರ ಎಂದುಕೊಂಡಿದ್ದಾರೆ. ಭೀತಿಗೊಳಗಾಗಿದ್ದ ಸಾರ್ವಜನಿಕರು ತಕ್ಷಣ ಪೊಲೀಸರನ್ನು ಕರೆ ಮಾಡಿದ್ದಾರೆ. ಈ ಘಟನೆ ಮೈಕೋ ಲೇ ಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಿಟಿಎಂ ಲೇಔಟ್ 2nd ಸ್ಟೇಜ್ 7th ಮೈನ್ ಬಳಿ ನಡೆದಿದೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಯುವಕನನ್ನು ಅಂಕುಶ್ (24) ಎಂದು ಗುರುತಿಸಲಾಗಿದೆ.  

ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ ➤ ಪೊಲೀಸರಿಂದ ಓರ್ವನ ವಿಚಾರಣೆ Read More »

ಕರ್ನಾಟಕ

ಕಾಂಗ್ರೆಸ್ ನ 23 ವರ್ಷದ ತ್ರಿವೇಣಿ ನೂತನ ಮೇಯರ್ ➤ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಮಾ.30. ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಡಿ.ತ್ರಿವೇಣಿ ಆಯ್ಕೆಯಾಗಿದ್ದು ಉಪ ಮೇಯರ್ ಆಗಿ ಬಿ‌.ಜಾನಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ತ್ರಿವೇಣಿ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಗೆ ಇಂದು ಚುನಾವಣೆ ನಡೆಯಿತು‌. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ, ಉಪ ಮೇಯರ್ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಿತ್ತು. ಇನ್ನು ಪಾಲಿಕೆಯಲ್ಲಿ 39 ಸದಸ್ಯರಿದ್ದು, ಸಂಸದರು, ಶಾಸಕರ ಮತಗಳಿಂದ ಬಿಜೆಪಿ 16 ಮತಗಳನ್ನು

ಕಾಂಗ್ರೆಸ್ ನ 23 ವರ್ಷದ ತ್ರಿವೇಣಿ ನೂತನ ಮೇಯರ್ ➤ ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ Read More »

ಕರಾವಳಿ
Scroll to Top