karnataka

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ➤ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಾಳೆಯಿಂದ ಪ್ರಾರಂಭವಾಗಲಿದ್ದು, ಏ.15ರವರೆಗೆ ನಡೆಯಲಿದೆ. ಈ ಬಾರಿಯ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಈ ಸಲ ಒಟ್ಟು 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು ಪಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮ ತಡೆಯಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಸ್.ಎಸ್.ಎಲ್‍ಸಿ. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ:  […]

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ➤ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ Read More »

ಕರ್ನಾಟಕ

ರಾಜ್ಯದ ಹಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ   ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆಗಳಲ್ಲಿ ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ (ಮಾರ್ಚ್ 30) ಏಪ್ರಿಲ್ 4 ರವರೆಗೆ ಮುಂದಿನ 5 ದಿನಗಳ ಕಾಲ ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಾಮರಾಜನಗರ & ಕೊಡಗಿನಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ರಾಜ್ಯದ ಹಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ   ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಕರಾವಳಿಯ ಮೂವರು ಮಹಿಳೆಯರು ರಾಷ್ಟ್ರಪತಿಗಳೊಂದಿಗೆ ಸಂವಾದ ನಡೆಸಲು ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.30. ಬಂಟ್ವಾಳದ ಮೂವರು ಮಹಿಳೆಯರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳ ಜೊತೆ ಸಂವಾದ ನಡೆಸುವ ಸೌಭಾಗ್ಯ ಪಡೆದುಕೊಂಡಿದ್ದು, ಅದಕ್ಕಾಗಿ ದೆಹಲಿಯತ್ತ ಹೊರಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿರುವ ಈ ಮೂವರು ಮಹಿಳೆಯರೂ ಬಂಟ್ವಾಳ ತಾಲೂಕಿನವರಾಗಿದ್ದು, ಬೆಂಗಳೂರಿಗೆ ರೈಲಿನಲ್ಲಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ಪಯಣಿಸುವ ಭಾಗ್ಯ ಇವರಿಗೆ ಒದಗಿ ಬಂದಿದ್ದು, ಅಳಿಕೆ ಅನುಗ್ರಹ ಒಕ್ಕೂಟದ ವಾರಿಜ ಮತ್ತು ಅಮಿತ ಹಾಗೂ ಕೊಳ್ನಾಡು ನೇತ್ರಾವತಿ ಸಂಜೀವಿನೀ ಒಕ್ಕೂಟದ ಇಂದ್ರಾವತಿ ಎಂಬವರೇ ರಾಷ್ಟ್ರಪತಿಗಳ ಭೇಟಿಯ ಅವಕಾಶ ಪಡೆದವರು

ಕರಾವಳಿಯ ಮೂವರು ಮಹಿಳೆಯರು ರಾಷ್ಟ್ರಪತಿಗಳೊಂದಿಗೆ ಸಂವಾದ ನಡೆಸಲು ಆಯ್ಕೆ Read More »

ಕರಾವಳಿ

ಮಂಗಳೂರು: ನೀತಿ ಸಂಹಿತೆ ಹಿನ್ನೆಲೆ         ➤ ಕರಾವಳಿಯಾದ್ಯಂತ ಪೊಲೀಸರ ಹದ್ದಿನಕಣ್ಣು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆಯೂ ಜಾರಿಗೊಂಡಿದೆ. ಇದರಿಂದ ಕರಾವಳಿ ಭಾಗದಲ್ಲಿ ತರಾತುರಿಯಲ್ಲಿ ನಡೆಯುತ್ತಿದ್ದ ವಿವಿಧ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆ, ಹಕ್ಕುಪತ್ರ ವಿತರಣೆಯಂತಹ ಸರ್ಕಾರಿ ಕಾರ್ಯಕ್ರಮಗಳಿಗೆ ಬುಧವಾರದಿಂದಲೇ ಬ್ರೇಕ್ ಹಾಕಲಾಗಿದೆ. ಕರ್ನಾಟಕ ವಿಧಾನಸಭೆಗೆ ಮೇ.10ರಂದು ಚುನಾವಣೆ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯೊಂದಿಗೆ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೊಂಡಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ನೆರವೇರಿಸುವಂತಿಲ್ಲ. ಹೀಗಾಗಿ ವಿವಿಧ ಯೋಜನೆಗಳ ಶಿಲಾನ್ಯಾಸ, ಹಕ್ಕುಪತ್ರ

ಮಂಗಳೂರು: ನೀತಿ ಸಂಹಿತೆ ಹಿನ್ನೆಲೆ         ➤ ಕರಾವಳಿಯಾದ್ಯಂತ ಪೊಲೀಸರ ಹದ್ದಿನಕಣ್ಣು Read More »

ಕರಾವಳಿ

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ಲಾಲ್‌ ಭಾಗ್‌ನ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ನಿಷೇಧಿತ ಇ-ಸಿಗರೇಟ್‌ ಮತ್ತು ವಿದೇಶಿ ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಐದು ಮಂದಿಯನ್ನು ಬಂಧಿಸಿದ್ದಾರೆ ಬಂಧಿತರನ್ನು ರೆಹಮತ್ತುಲ್ಲಾ, ಸಂತೋಷ, ಶಿವು ಯಾನೆ ಶಿವಾನಂದ, ಹಸನ್ ಶರೀಫ್, ಇರ್ಷಾದ್ ಎಂದು ಗುರುತಿಸಲಾಗಿದೆ. ಇ-ಸಿಗರೇಟ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳ ಮೇಲೆ ದಾಳಿ ಒಟ್ಟು 1,50,000 ಮೌಲ್ಯದ 273 ಇ-ಸಿಗರೇಟ್ ಗಳನ್ನು ಹಾಗೂ ಕೊಟ್ಟಾ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.30. ದ್ವಿಚಕ್ರ ವಾಹನದಲ್ಲಿ ಸವಾರನೋರ್ವ ದಾಖಲೆಯಿಲ್ಲದೆ, ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಕುಂದಾಪುರ ಪೊಲೀಸರು 13 ಲಕ್ಷ ರೂ. ವಶಕ್ಕೆ ಪಡೆದ ಘಟನೆ ಸಂಗಮ್‌ ಬಳಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಮೂಲತಃ ಮಹಾರಾಷ್ಟ್ರದ, ಪ್ರಸ್ತುತ ಕೋಟೇಶ್ವರ ಸಮೀಪದ ನಿವಾಸಿ ದಿಲೀಪ್ ಗೋಡ್ಸೆ (47) ಎಂಬಾತ ತನ್ನ ಬೈಕಿನಲ್ಲಿ ಯಾವುದೇ ದಾಖಲೆಗಳಿಲ್ಲದೆ 13 ಲಕ್ಷ ಸಾಗಿಸುತ್ತಿದ್ದ. ಕುಂದಾಪುರ ಸಂಗಮ್ ಜಂಕ್ಷನ್ ಬಳಿ ಪೊಲೀಸ್ ಚೆಕ್ ಪೊಸ್ಟ್ ಬಳಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಕಡಬ, ಮಾ.30. ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೊದಲ ದಿನದ 5, 8ನೇ ತರಗತಿ ಮೌಲ್ಯಾಂಕನ ಯಶಸ್ವಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಖಾಸಗಿ ಶಾಲೆಗಳ ತೀವ್ರ ವಿರೋಧದ ನಡುವೆಯೂ ರಾಜ್ಯಾದ್ಯಂತ 5 ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆದಿದ್ದು, 5ನೇ ತರಗತಿಗೆ 56,157 ಶಾಲೆಗಳಿಂದ 9,59,734 ವಿದ್ಯಾರ್ಥಿಗಳು ಹಾಗೂ 8ನೇ ತರಗತಿಗೆ 22,639 ಶಾಲೆಯ 9,43,919 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದತ್ತಾಂಶ ನೀಡಿದೆ.  

ಮೊದಲ ದಿನದ 5, 8ನೇ ತರಗತಿ ಮೌಲ್ಯಾಂಕನ ಯಶಸ್ವಿ Read More »

ಕರ್ನಾಟಕ

ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29.  ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 15 ಲಕ್ಷ ಮೌಲ್ಯದ 25 ಕೆಜಿ ಗಾಂಜಾವನ್ನ ವಶ ಪಡಿಸಿಕೊಳ್ಳುವಲ್ಲಿ ಆನೇಕಲ್ ಪೋಲೀಸರು ಯಶಸ್ವಿಯಾಗಿದ್ದಾರೆ. ಆನೇಕಲ್ ಪಟ್ಟಣದ ಸೋಮಶೇಖರ್ ಹಾಗೂ ರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.  

ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ

ಬೆಳ್ತಂಗಡಿ: ಬೆಳಕು ಯೋಜನೆಯಲ್ಲಿ ಎಳನೀರಿನ 33 ಮನೆಗಳಿಗೆ ವಿದ್ಯುತ್ ಬೆಳಕು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.29. ಸರಕಾರದ ಬೆಳಕು ಯೋಜನೆಯಲ್ಲಿ ದುರ್ಗಮ ಪ್ರದೇಶವಾದ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಪ್ರದೇಶದ ಒಟ್ಟು 33 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಪೂರ್ಣಗೊಂಡಿದ್ದು , ಉದ್ಘಾಟನೆಗೊಳ್ಳುವ ಮೂಲಕ ಇಲ್ಲಿನ ಮನೆಗಳಲ್ಲಿ ವಿದ್ಯುತ್ ಬೆಳಕು ಚೆಲ್ಲಲಿದ್ದು, ಸರಿ ಸುಮಾರು 75 ವರ್ಷಗಳ ಬಳಿಕ‌ ವಿದ್ಯುತ್ ಸಂಪರ್ಕ ಸಿಗುತ್ತಿದೆ. ಬೆಳ್ತಂಗಡಿಯಿಂದ 120 ಕಿಮೀ ದೂರದಲ್ಲಿರುವ ಎಳನೀರು ಪ್ರದೇಶದಲ್ಲಿ 150 ರಷ್ಟು ಮನೆಗಳು ಹಾಗೂ 600ಕ್ಕಿಂತ ಅಧಿಕ ಜನಸಂಖ್ಯೆ ಇದೆ. ಜಲಪಾತಗಳ ಸಹಿತ

ಬೆಳ್ತಂಗಡಿ: ಬೆಳಕು ಯೋಜನೆಯಲ್ಲಿ ಎಳನೀರಿನ 33 ಮನೆಗಳಿಗೆ ವಿದ್ಯುತ್ ಬೆಳಕು Read More »

ಕರಾವಳಿ
Scroll to Top