karnataka

ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ..!   ➤ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಜೇಶ್ವರ,  ಮಾ.29. ಬೈಕ್ ಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.  

ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ..!   ➤ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಸಕ ಮಾಡಾಳ್ ಐದು ದಿನ ಲೋಕಾಯುಕ್ತ ವಶಕ್ಕೆ..! ➤ ಕೋರ್ಟ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಪುತ್ರ ಪ್ರಶಾಂತ್ ನಿವಾಸದಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧನ ಮಾಡಿದ್ದರು.

ಶಾಸಕ ಮಾಡಾಳ್ ಐದು ದಿನ ಲೋಕಾಯುಕ್ತ ವಶಕ್ಕೆ..! ➤ ಕೋರ್ಟ್ ಆದೇಶ Read More »

ಕರ್ನಾಟಕ
Death, deadbody, Waterfall

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.29. ತಾಯಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಮಗಳು ಮನೆ ಸಮೀಪದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ನೂರಾಲ್ ಬೆಟ್ಟು ಕಜೆ ಎಂಬಲ್ಲಿ ಸಂಭವಿಸಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಭಾಗಿ(65) ಎಂಬವರು ಸುಮಾರು 10 ವೇಳೆಯಲ್ಲಿ ಮನೆಯಲ್ಲಿ ಮೃತಪಟ್ಟಿದ್ದರು. ಈ ನಡುವೆ ಭಾಗಿಯ ಮಗಳು ರೇಖಾ(25) ಎಂಬಾಕೆ ಎಂದಿನಂತೆ ನಾರಾವಿಯ ಫ್ಯಾನ್ಸಿ ಅಂಗಡಿಯ ಕೆಲಸಕ್ಕೆಂದು ಹೊರಟು ಹೋಗಿದ್ದ ಆಕೆಗೆ ಪರಿಚಯಸ್ಥರೊಬ್ಬರ ಕರೆ ಮಾಡಿ ತಾಯಿಗೆ ಸೌಖ್ಯವಿಲ್ಲ ಮನೆಗೆ ಬಾ ಎಂದು ಎಂದಿದ್ದರು.  

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.29. ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರಾವಳಿಯ ಯುವಕ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ತಾಲೂಕು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.  

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.29. ತೆಂಗಿನ ಮರವೇರಿ ಕಾಯಿ ತೆಗೆಯುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ‌. ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ರೆಂಜಮೂಲೆ ನಿವಾಸಿ ಪ್ರಕಾಶ್ ನಾಯ್ಕ್ ಕೆ.(54) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ವ್ಯಕ್ರಿಯೋರ್ವರ ಮನೆಯಲ್ಲಿ ಕಾಯಿ ಕೀಳುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬಳಿಕ ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಮೃತರ

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

PSI ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.28. 2022ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಸಬ್‌ ಇನ್‌ ಸ್ಪೆಕ್ಟರ್‌ಗಳ ನೇಮಕಾತಿ ಹಗರಣದ ಭಾಗವಾಗಿ ವಿಚಾರಣೆ ಎದುರಿಸಿದ್ದ ಭಟ್ ಅವರು ಸಿದ್ದಾಪುರ ತಾಲೂಕಿನ ಹೇರೂರು ಗ್ರಾಮದ ತಮ್ಮ ನಿವಾಸದ ಪಂಪ್‌ ಹೌಸ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

PSI ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ..! Read More »

ಕರಾವಳಿ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ..! ➤ ಮುಖ್ಯೋಪಾಧ್ಯಾಯ ಅಮಾನತು

(ನ್ಯೂಸ್ ಕಡಬ)newskadaba.com  ತುಮಕೂರು, ಮಾ.28. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. ಮೂಲಗಳ ಪ್ರಕಾರ, ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ, ವಿದ್ಯಾರ್ಥಿನಿಯರೊಂದಿಗೆ ಪ್ರತಿದಿನ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವೇಳೆ ಕರ್ತವ್ಯಲೋಪ ಆರೋಪದಡಿ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಅಮಾನತುಗೊಳಿಸಲಾಗಿದೆ.  

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ..! ➤ ಮುಖ್ಯೋಪಾಧ್ಯಾಯ ಅಮಾನತು Read More »

ಕರ್ನಾಟಕ

ತಹಸೀಲ್ದಾರ್‌ ಗೆ ಒಂದೂವರೆ ಕೋಟಿ ದಂಡ ➤ 4 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com ತುಮಕೂರು, ಮಾ.28. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ವಿ. ವೆಂಕಟೇಶ್‌, ಗ್ರೇಡ್‌-1 ತಹಸೀಲ್ದಾರ್‌(ಆಡಳಿತಾಧಿಕಾರಿ ಕೆಆರ್‌ಐಡಿಎಲ್‌) ಗೆ ತುಮಕೂರಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಸಾದಾ ಶಿಕ್ಷೆ ಮತ್ತು ಒಂದೂವರೆ ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ವಿ.ವೆಂಕಟೇಶ್‌, ಆಡಳಿತಾಧಿಕಾರಿ(ತಹಸೀಲ್ದಾರ್‌ ಗ್ರೇಡ್‌-1) ಕರ್ನಾಟಕ ರಿನಿವಲಬಲ್‌ ಎನರ್ಜಿ ಡೆವಲಪ್‌ಮೆಂಟ್‌ ಲಿಮಿಟೆಡ್‌, ಪ್ಯಾಲೇಸ್‌ ರಸ್ತೆ, ಬೆಂಗಳೂರು ಇವರು ತಮ್ಮ ಸೇವಾ ಅವಧಿಯಲ್ಲಿ ಅಂದರೆ ದಿನಾಂಕ 1981 ಡಿಸೆಂಬರ್‌ 17

ತಹಸೀಲ್ದಾರ್‌ ಗೆ ಒಂದೂವರೆ ಕೋಟಿ ದಂಡ ➤ 4 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರ್ನಾಟಕ

ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ ➤ ಹೆಡ್ ಕಾನ್ಸ್ ಟೇಬಲ್ ಅಮಾನತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.28. ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪಗಳ ಪತ್ರ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಶಿಸ್ತು ನಿಯಮ ಉಲ್ಲಂಘಿಸಿದ ಸುಬ್ರಹ್ಮಣ್ಯನಗರ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಶಿವಕುಮಾರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಉತ್ತರ ವಿಭಾಗದ ಡಿಸಿಪಿ ದೇವರಾಜ್ ಆದೇಶ ಹೊರಡಿಸಿದ್ದಾರೆ. ಸುಬ್ರಹ್ಮಣ್ಯನಗರ ಠಾಣೆ ಇನ್ಸ್‌ಪೆಕ್ಟರ್  ಶರಣಗೌಡ ವಿರುದ್ಧ ಸಿಬ್ಬಂದಿಗೆ ಕಿರುಕುಳ, ಭ್ರಷ್ಟಾಚಾರ ಸೇರಿದಂತೆ ಕೆಲ ಗಂಭೀರ ಆರೋಪಗಳನ್ನು ಒಳಗೊಂಡ ದೂರಿನ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು.  

ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ ➤ ಹೆಡ್ ಕಾನ್ಸ್ ಟೇಬಲ್ ಅಮಾನತು Read More »

ಕರ್ನಾಟಕ

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.28. ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದ್ದು, ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ನಡೆದ ಸಂದರ್ಭ ಮಹಿಳೆಯ ಕಿವಿಯಲ್ಲಿ ಇಯರ್ ಪೋನ್ ಇದ್ದು ಆಕೆಯ ಮೊಬೈಲ್ ಪೋನ್

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top