karnataka

ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು

(ನ್ಯೂಸ್ ಕಡಬ)newskadaba.com  ವಿಜಯಪುರ, ಮಾ.23. ಮತದಾರರನ್ನು ಸೆಳೆಯಲು ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು, ಸೀರೆಯನ್ನು ಸ್ವೀಕರಿಸಿದೆ ಶಾಸಕರ ಬೆಂಬಲಿಗರನ್ನು ವಾಪಸ್ ಕಳಿಸಿದ ಪ್ರಸಂಗ ನಡೆದಿದೆ. ವಿಜಯಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಬೆಂಬಲಿಗರು ಮುದ್ದೇಬಿಹಾಳದ ಮೆಹಬೂಬ್​ ನಗರದಲ್ಲಿ ಸೀರೆ ಹಂಚಲು ಹೋಗಿದ್ದು, ನೀವು ನಮ್ಮ ಕೆಲಸ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿರುವ ಸ್ಥಳೀಯ ಮನೆಯೊಂದರ ಮಂದಿ, ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.  

ಸೀರೆ ಹಂಚಲು ಬಂದಿದ್ದ ಶಾಸಕರ ಬೆಂಬಲಿಗರನ್ನು ತರಾಟೆಗೆ ತೆಗೆದುಕೊಂಡ ಜನರು Read More »

ಕರ್ನಾಟಕ

ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ       ➤ ನಿತಿನ್‌ ಗಡ್ಕರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಹೊನ್ನಾವರ-ಚಿತ್ತೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಕರ್ನಾಟಕದ ಹಲವು ಹೆದ್ದಾರಿಗಳನ್ನು ಉನ್ನತೀಕರಣಗೊಳಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, 2022-23ನೇ ಸಾಲಿನಲ್ಲಿ ಅಭಿವೃದ್ಧಿಗೆ ಆಯ್ದುಕೊಂಡ ರಾಜ್ಯದ ಹೆದ್ದಾರಿ ವಿವರಗಳನ್ನು ನೀಡಿದ್ದಾರೆ.  

ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ       ➤ ನಿತಿನ್‌ ಗಡ್ಕರಿ Read More »

ಕರ್ನಾಟಕ

ಇಂದಿನಿಂದ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ      ➤ ಸಿಎಂ ಚಾಲನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಇಂದಿನಿಂದ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಫಿಲಂ ಫೆಸ್ಟಿವಲ್ ಆಯೋಜಿಸಿವೆ. ವಿಧಾನಸೌಧದ ಎದುರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫಿಲಂ ಫೆಸ್ಟಿವಲ್ ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವ ಸ್ಮರಣ ಸಂಚಿಕೆಯನ್ನು ವಿಜಯೇಂದ್ರ ಪ್ರಸಾದ್ ಬಿಡುಗಡೆ ಮಾಡಲಿದ್ದಾರೆ. ಅಶೋಕ್ ಕಶ್ಯಪ್ ಉಪಸ್ಥಿತರಿರುತ್ತಾರೆ.  

ಇಂದಿನಿಂದ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ      ➤ ಸಿಎಂ ಚಾಲನೆ Read More »

ಕರ್ನಾಟಕ

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ)newskadaba.com ಮ‌ಡಿಕೇರಿ, ಮಾ.23. ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದು, ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.23. ಅಪಾರ್ಟ್ಮೆಂಟ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮಣಿಪಾಲದಲ್ಲಿ ವರದಿಯಾಗಿದೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳನ್ನು ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಎಂದು ಗುರುತಿಸಲಾಗಿದೆ.  

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಆರೋಪಿಯನ್ನೇ ಅಪಹರಿಸಿದ ಪೊಲೀಸರು ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದಾರೆ. ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.    

ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಸತಿ ಗೃಹದಲ್ಲೇ ಪೊಲೀಸ್ ಕಾನ್ಸ್’ಟೇಬಲ್ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಮಾ.23. ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್ ಕಾನ್ಸ್’ಟೇಬಲ್ ಒಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತ ಕಾನ್ಸ್ ಟೇಬಲ್’ರನ್ನು ಜಾಫರ್ ಎಂದು ಗುರುತಿಸಲಾಗಿದೆ. ಪೊಲೀಸ್ ವಸತಿ ಗೃಹದಲ್ಲಿ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಜಾಫರ್ ಅವರನ್ನು ವಿಮ್ಸ್’ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಾಫರ್ ಮೃತಪಟ್ಟಿದ್ದಾನೆ.

ವಸತಿ ಗೃಹದಲ್ಲೇ ಪೊಲೀಸ್ ಕಾನ್ಸ್’ಟೇಬಲ್ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ಕಳವು ➤ ಮಾಜಿ ಕಾರು ಚಾಲಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ,23. ಖ್ಯಾತ ಗಾಯಕ ಸೋನು ನಿಗಮ್ ತಂದೆಯ ಮನೆಯಿಂದ 72 ಲಕ್ಷ ರೂಪಾಯಿ ಕಳ್ಳತನ ಮಾಡಿದ ಆರೋಪದಲ್ಲಿ ಅವರ ಮಾಜಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಮಗಳಿಗೆ ಕರೆ ಮಾಡಿ, ಮರದ ಕಪಾಟಿಲ್ಲಿ ಇದ್ದ ಡಿಜಿಟಲ್ ಲಾಕರ್‌ನಿಂದ 40 ಲಕ್ಷ ರೂಪಾಯಿ ಕಾಣೆಯಾಗಿದೆ ಎಂದು ನಿಕಿತಾ ಪೊಲೀಸ್ ಠಾಣೆಗೆ ಆಗಮಿಸಿದ ದೂರು ನೀಡಿದ್ದಾರೆ.

ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ಕಳವು ➤ ಮಾಜಿ ಕಾರು ಚಾಲಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 23. ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತು ಎಸ್.ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಎಂದು ಗುರುತಿಸಲಾಗಿದೆ. ಈತ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮಾ. 23. KSRTC ಬಸ್- ಬೈಕ್ ಗೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top