karnataka

ಕ್ಲಸ್ಟರ್‌ ಹಂತದಲ್ಲೇ 5, 8ನೇ ತರಗತಿ ಮೌಲ್ಯಮಾಪನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.22. ರಾಜ್ಯ ಪಠ್ಯಕ್ರಮ ಬೋಧಿಸುವ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಕ್ಲಸ್ಟರ್‌ ಮಟ್ಟದಲ್ಲಿ ನಿರ್ವಹಿಸುವುದಾಗಿ ತೀರ್ಮಾನಿಸಲಾಗಿದೆ. ಒಂದು ಬ್ಲಾಕ್‌ನಿಂದ ಮತ್ತೂಂದು ಬ್ಲಾಕ್‌ಗೆ ಪ್ರಶ್ನೆಪತ್ರಿಕೆಗಳ ಸಾಗಾಟ ಮಾಡಿ ಮೌಲ್ಯಮಾಪನ ನಡೆಸಿ ಫಲಿತಾಂಶ ಪ್ರಕಟಿಸಲು ಸಮಯ ಸಾಲದು, ಆದ್ದರಿಂದ ಅಂತರ್‌ ಕ್ಲಸ್ಟರ್‌ವಾರು ನಿರ್ವಹಿಸುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಸೂಚಿಸಲಾಗಿದೆ.  

ಕ್ಲಸ್ಟರ್‌ ಹಂತದಲ್ಲೇ 5, 8ನೇ ತರಗತಿ ಮೌಲ್ಯಮಾಪನ Read More »

ಕರ್ನಾಟಕ
Death, deadbody, Waterfall

ತಾಯಿಯ ಅನೈತಿಕ ಸಂಬಂಧಕ್ಕೆ 10ನೇ ತರಗತಿ ಮಗಳು ಬಲಿ

(ನ್ಯೂಸ್ ಕಡಬ)newskadaba.com ಗದಗ, ಮಾ.22. ತಾಯಿಯ ಅನೈತಿಕ ಸಂಬಂಧಕ್ಕೆ ಮಗಳು ಕೊಲೆಯಾಗಿರುವ ಆರೋಪ ಗದಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಮುಂಡರಗಿ ಪಟ್ಟಣದಲ್ಲಿ ಪರೀಕ್ಷೆ ಬರೆದು ಬಂದ ಅಪ್ರಾಪ್ತ ಬಾಲಕಿಯನ್ನು ಮೆಹಬೂಬ್ ಸಾಬ್ ಬಾಣದ ಎನ್ನುವಾತ ಕೊಲೆ ಮಾಡಿದ್ದಾನೆ. ಇದಕ್ಕೆ ಬಾಲಕಿ ವಿರೋಧ ವ್ಯಕ್ತಪಡಿಸಿದ್ದಳು ಅದ್ಕೆ ಕೋಪಗೊಂಡ ಮೆಹಬೂಬ್ ಸಾಬ್‌ ಅವಳ ಕತ್ತು ಹಿಸುಕಿ, ಉಸಿರು ಗಟ್ಟಿಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸ್ತಿದ್ದಾರೆ.

ತಾಯಿಯ ಅನೈತಿಕ ಸಂಬಂಧಕ್ಕೆ 10ನೇ ತರಗತಿ ಮಗಳು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೂಕ್ತ ದಾಖಲೆಗಳಿಲ್ಲದೆ 9 ಲಕ್ಷ ರೂ. ನಗದು ಕಾರಿನಲ್ಲಿ ಸಾಗಾಟ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮಾ.22. ಸೂಕ್ತ ದಾಖಲಾತಿಗಳಿಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ. ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ.  

ಸೂಕ್ತ ದಾಖಲೆಗಳಿಲ್ಲದೆ 9 ಲಕ್ಷ ರೂ. ನಗದು ಕಾರಿನಲ್ಲಿ ಸಾಗಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಹ್ಮಾವರ: ಅಕ್ರಮ ಅಕ್ಕಿ ಸಾಗಾಟ ➤ 5.7 ಲಕ್ಷ ರೂ. ಮೌಲ್ಯದ 220  ಚೀಲ ಪಡಿತರ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಮಾ.22. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 5,00,790 ರೂ. ಮೌಲ್ಯದ 220 ಚೀಲ ಪಡಿತರ ಅಕ್ಕಿಯನ್ನು ಬ್ರಹ್ಮಾವರ ತಾಲೂಕು ಆಹಾರ ನಿರೀಕ್ಷಕರು ಪೊಲೀಸರ ಸಹಕಾರದೊಂದಿಗೆ ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಸಾಗಾಟಕ್ಕೆ ಬಳಸಿದ ಕಂಟೈನರ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬ್ರಹ್ಮಾವರ ಚಾಂತಾರು ಗ್ರಾಮದ ಕೃಷಿ ಕೇಂದ್ರದ ಬಳಿ ಬ್ರಹ್ಮಾವರ-ಹೆಬ್ರಿ ರಸ್ತೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬ್ರಹ್ಮಾವರ ಠಾಣಾ ಪಿಎಸ್‌ಐ ಹಾಗೂ ಸಿಬಂದಿಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದ ತಾಲೂಕು ಆಹಾರ ನಿರೀಕ್ಷಕರು

ಬ್ರಹ್ಮಾವರ: ಅಕ್ರಮ ಅಕ್ಕಿ ಸಾಗಾಟ ➤ 5.7 ಲಕ್ಷ ರೂ. ಮೌಲ್ಯದ 220  ಚೀಲ ಪಡಿತರ ಅಕ್ಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ವೇಗವಾಗಿ‌ ಬಂದ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಎಂದು ಗುರುತಿಸಲಾಗಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಅಂಬುಲೆನ್ಸ್ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಪ್ರಕಾಶ್, ನಾಗೇಂದ್ರ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.  

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಕಾರು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.  

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ಮನೆ ಮುಂದೆ ನಿಲ್ಲಿಸಿದ್ದ ಕಾರು ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೇಡಿ ಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನ್ನು ಇಸ್ಮಾಯಿಲ್ ಖಾನ್ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಬಂದಿದ್ದ ಇಸ್ಮಾಯಿಲ್ ಮನೆ ಮುಂದಿರುವ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದಕ್ಕೆ ಎದುರು ಮನೆಯ ಸೈಯದ್ ಅಕಿಲ್ ಶಾ ಕುಟುಂಬಸ್ಥರು ಕ್ಯಾತೆ ತೆಗೆದಿದ್ದು,

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: 12 ಮಂದಿ ಪತ್ರಕರ್ತರಿಗೆ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಘೋಷಣೆ

(ನ್ಯೂಸ್ ಕಡಬ)newskadaba.com ಮಂಗಳೂರ, ಮಾ.22. ಹಿರಿಯ ಪತ್ರಕರ್ತರಾದ ಬದ್ರುದ್ದೀನ್ ಕೆ. ಮಾಣಿ, ಹಂಝ ಮಲಾರ್ ಸಹಿತ 12 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯ ಕಟ್ಟೆ, ಕೇರಳದ ಎರ್ನಾಕುಲಂ ನಲ್ಲಿ ನಡೆಯಲಿದೆ ಎಂದು ತಿಳಿಸಿದರು. ಡಾ.ವೆಂಕಟೇಶ್ ತುಪ್ಪಿಲ್ ಕೊಡ ಮಾಡುವ ದತ್ತಿನಿಧಿ ಪ್ರಶಸ್ತಿಗೆ ಬದ್ರುದ್ದೀನ್ ಕೆ.ಮಾಣಿ, ಹಾಸನದ ಜೆ.ಆರ್. ಕೆಂಚೇಗೌಡ

ಮಂಗಳೂರು: 12 ಮಂದಿ ಪತ್ರಕರ್ತರಿಗೆ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಘೋಷಣೆ Read More »

ಕರಾವಳಿ

ಮಂಗಳೂರು: ಅಕ್ರಮ ಮದ್ಯ ತಯಾರಿಕೆ, ಮಾರಾಟ ➤ ಅಬಕಾರಿ ಇಲಾಖೆಯಿಂದ ದಾಳಿ, ಜಪ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಮಂಗಳೂರು ನಗರ ವಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಯಾರಿಕೆ ಹಾಗೂ ದಾಸ್ತಾನು ಚಟುವಟಿಕೆ ನಡೆಸುವ ಕೇಂದ್ರಗಳಿಗೆ ಮಾರ್ಚ್ 6ರಿಂದ 20ರವರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ಸಹಿತ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಮಾರ್ಚ್ 16ರಂದು ದಾಳಿ ನಡೆಸಿ ಒಟ್ಟು 23,400 ಲೀಟರ್ ಬಿಯರ್, 1 ಆಟೋ ರಿಕ್ಷಾ ಮತ್ತು ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಾರ್ಚ್

ಮಂಗಳೂರು: ಅಕ್ರಮ ಮದ್ಯ ತಯಾರಿಕೆ, ಮಾರಾಟ ➤ ಅಬಕಾರಿ ಇಲಾಖೆಯಿಂದ ದಾಳಿ, ಜಪ್ತಿ Read More »

ಕರಾವಳಿ

ನಟ ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ನೀಡದಂತೆ ಸಚಿವ ಆರ್. ಅಶೋಕ್ ಒತ್ತಡ ➤ ಅಭಿಮಾನಿ ಸಂಘಗಳ ಒಕ್ಕೂಟ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವ ಬಗ್ಗೆ ರಾಜ್ಯ ಸರಕಾರವು ಶಿಫಾರಸ್ಸು ಮಾಡದಂತೆ ಕಂದಾಯ ಸಚಿವ ಆರ್. ಅಶೋಕ್ ತಡೆದಿದ್ದಾರೆ ಎಂದು ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟವು ಆರೋಪಿಸಿದೆ. ಈ ಕುರಿತು ಮಂಗಳವಾರದಂದು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಕಾರ್ಯದರ್ಶಿ ಹೊನ್ನಯ್ಯಗೌಡ ಎಚ್, ಸಚಿವ ಆರ್. ಅಶೋಕ ಅವರ ಒತ್ತಡದಿಂದಾಗಿ ಮುಖ್ಯಮಂತ್ರಿಗಳು ನಟ ಪುನೀತ್ ರಾಜ್‍ಕುಮಾರ್

ನಟ ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ನೀಡದಂತೆ ಸಚಿವ ಆರ್. ಅಶೋಕ್ ಒತ್ತಡ ➤ ಅಭಿಮಾನಿ ಸಂಘಗಳ ಒಕ್ಕೂಟ ಆರೋಪ Read More »

ಕರ್ನಾಟಕ
Scroll to Top