karnataka

ಲಂಚ ಸ್ವೀಕರಿಸಿದ್ದ ಕಂದಾಯ ನಿರೀಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ    ➤ ರೂ 4 ಲಕ್ಷ ದಂಡ ವಿಧಿಸಿದ ನ್ಯಾಯಾಲಯ          

(ನ್ಯೂಸ್ ಕಡಬ)newskadaba.com  ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಕಂದಾಯ ನಿರೀಕ್ಷಕನೊಬ್ಬನಿಗೆ ವಿಶೇಷ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, 4 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ. ಕೆಂಗೇರಿ ಹೋಬಳಿಯ ಕಂದಾಯ ನಿರೀಕ್ಷಕ ಸುರೇಶ್‌ ಜಿ.ಸಿ. (51) ದೋಷಿ ಎಂದು ತೀರ್ಮಾನಿಸಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ, 5 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ.4 ಲಕ್ಷ ದಂಡ ವಿಧಿಸಿದೆ.

ಲಂಚ ಸ್ವೀಕರಿಸಿದ್ದ ಕಂದಾಯ ನಿರೀಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ    ➤ ರೂ 4 ಲಕ್ಷ ದಂಡ ವಿಧಿಸಿದ ನ್ಯಾಯಾಲಯ           Read More »

ಕರ್ನಾಟಕ

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಇಂದು ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 18. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ಇಂದು ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ Read More »

ಕರಾವಳಿ

ಮಂಗಳೂರು: ಅಕ್ರಮ ಚಿನ್ನ ಸಾಗಾಟಕ್ಕೆ ಮಗುವನ್ನು ಬಳಸಿಕೊಂಡ ತಂದೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನಿಂದ 90 ಲಕ್ಷ ರೂ.ಮೌಲ್ಯದ ಚಿನ್ನವನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಮಾರ್ಚ್ 1 ರಿಂದ ಮಾರ್ಚ್ 15 ರ ಅವಧಿಯಲ್ಲಿ ಮೂವರು ಪ್ರಯಾಣಿಕರಿಂದ ಅಧಿಕಾರಿಗಳು 90 ಲಕ್ಷದ 67 ಸಾವಿರದ 750 ರೂ. ಮೌಲ್ಯದ 1,606 ಗ್ರಾಂ 24 ಕ್ಯಾರೆಟ್ ಶುದ್ಧತೆಯ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ವಿವಿಧ ವಿಧಾನಗಳಲ್ಲಿ ಪೇಸ್ಟ್ ರೂಪದಲ್ಲಿ ಮರೆಮಾಡಿ

ಮಂಗಳೂರು: ಅಕ್ರಮ ಚಿನ್ನ ಸಾಗಾಟಕ್ಕೆ ಮಗುವನ್ನು ಬಳಸಿಕೊಂಡ ತಂದೆ.! Read More »

ಕರಾವಳಿ

ಕುಕ್ಕರ್ ಕಂಪನಿ ಮೇಲೆ ತಹಶೀಲ್ದಾರ್ ದಾಳಿ ➤ ಮತದಾರರಿಗೆ ಹಂಚಲು ಇಟ್ಟಿದ್ದ 2900 ಕುಕ್ಕರ್ ಗಳು ವಶ

(ನ್ಯೂಸ್ ಕಡಬ) newskadaba.com ರಾಮನಗರ, ಮಾ. 18. ಕುಕ್ಕರ್ ತಯಾರಿಕಾ ಕಂಪೆನಿ ಮೇಲೆ ತಹಶೀಲ್ದಾರ್ ತೇಜಸ್ವಿನಿ ನೇತೃತ್ವದ ತಂಡವು ದಾಳಿ ನಡೆಸಿ, 2900 ಕುಕ್ಕರ್ ಗಳನ್ನು ವಶಕ್ಕೆ ಪಡೆದ ಘಟನೆ ಕರಿಕಲ್ ದೊಡ್ಡಿ ಎಂಬಲ್ಲಿ ನಡೆದಿದೆ. ವಿಶ್ವಾಸ್ ವೈದ್ಯ ಎಂಬವರಿಗೆ ಸೇರಿದ ಕಂಪೆನಿಗೆ ದಾಳಿ ನಡೆಸಿದ ತಹಶೀಲ್ದಾರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಮತದಾರರಿಗೆ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿದ್ದ ಕುಕ್ಕರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕುಕ್ಕರ್ ಕಂಪನಿ ಮೇಲೆ ತಹಶೀಲ್ದಾರ್ ದಾಳಿ ➤ ಮತದಾರರಿಗೆ ಹಂಚಲು ಇಟ್ಟಿದ್ದ 2900 ಕುಕ್ಕರ್ ಗಳು ವಶ Read More »

ಕರ್ನಾಟಕ

ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ➤ ಡಿ.ಸಿ. ರವಿಕುಮಾರ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಡ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು, ಉದ್ದಿಮೆಗಳು ಬೆಂಕಿ ನಂದಿಸುವ ನೀರಿನ ಟ್ಯಾಂಕರ್’ಗಳನ್ನು ಒದಗಿಸಿಕೊಡಲು ಕೈಜೋಡಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ➤ ಡಿ.ಸಿ. ರವಿಕುಮಾರ್ ಸೂಚನೆ Read More »

ಕರಾವಳಿ

ರಾಜ್ಯದಾದ್ಯಂತ ಇನ್ನೂ 2 ದಿನಗಳ ಕಾಲ ಮಳೆ ಸಾದ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ರಾಜ್ಯದಾದ್ಯಂತ ಇನ್ನೂ 2 ದಿನಗಳ ಕಾಲ ಮಳೆ ಸಾದ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಹೋಟೆಲ್ ನಲ್ಲಿ ಲೇಟ್ ನೈಟ್ ಲೇಡಿಸ್ ಪಾರ್ಟಿ ➤ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಮಾ. 18. ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಹೋಟೆಲ್ ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು.  

ಹೋಟೆಲ್ ನಲ್ಲಿ ಲೇಟ್ ನೈಟ್ ಲೇಡಿಸ್ ಪಾರ್ಟಿ ➤ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು Read More »

ಕರ್ನಾಟಕ

ಗಗನಸಖಿಯಾಗಿ ನೇಮಕಗೊಂಡ ಕಡಬದ ರಕ್ಷಾ ಎಸ್

(ನ್ಯೂಸ್ ಕಡಬ) newskadaba.com ಕಡಬ, ಮಾ. 18. ತಾಲೂಕು ಕೊಣಾಲು ಗ್ರಾಮದ ಆರ್ಲ ನಿವಾಸಿ ರಕ್ಷಾ ಯಸ್.ರವರು ‘ಗೋ ಫಸ್ಟ್’ ವಿಮಾನದಲ್ಲಿ ಗಗನಸಖಿಯಾಗಿ ನೇಮಕಗೊಂಡಿದ್ದಾರೆ. ಗಗನಸಖಿ ನೇಮಕಾತಿಗೆ ಸಂಬಂಧಿಸಿದಂತೆ ನಡೆದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ರಕ್ಷಾ ಅವರು, ಬೆಂಗಳೂರಿನಲ್ಲಿ ನಡೆದ ಸಂದರ್ಶನಕ್ಕೆ ಹಾಜರಾಗಿ ಆಯ್ಕೆಗೊಂಡಿದ್ದರು. ಬಳಿಕ 6 ತಿಂಗಳ ತರಬೇತಿ ಮುಗಿಸಿದ ಅವರು ಇದೀಗ ಗೋ ಫಸ್ಟ್ ವಿಮಾನದಲ್ಲಿ ಗಗನಸಖಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ, ಹೈಸ್ಕೂಲ್ ಶಿಕ್ಷಣ ಮುಗಿಸಿ,

ಗಗನಸಖಿಯಾಗಿ ನೇಮಕಗೊಂಡ ಕಡಬದ ರಕ್ಷಾ ಎಸ್ Read More »

ಕರಾವಳಿ

ಸಣ್ಣ ಮಳೆಗೆ ಕೆರೆಯಂತಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ

(ನ್ಯೂಸ್ ಕಡಬ) newskadaba.com  ರಾಮನಗರ, ಮಾ. 18. ಕಳೆದ ವಾರ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದ ಬೆಂಗಳೂರು-ಮೈಸೂರಿನ ದಶಪಥ ಹೆದ್ದಾರಿ ಸಣ್ಣ ಮಳೆಗೆ ಕೆರೆಯಂತಾಗಿದೆ. ರಸ್ತೆಯಲ್ಲಿ ಮಳೆ ನೀರು ನಿಂತಿದ್ದರಿಂದ ವಾಹನಗಳು ಕೆಟ್ಟು ನಿಂತಿದ್ದು ಹಿಂದೆಯಿಂದ ಬಂದ ವಾಹನಗಳು ಡಿಕ್ಕಿಯಾಗಿ ಸರಣಿ ಅಪಘಾತ ಸಂಭಸಿವೆ. ಇದರಿಂದ ಸವಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಣ್ಣ ಮಳೆಗೆ ಕೆರೆಯಂತಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ Read More »

ಕರ್ನಾಟಕ
Scroll to Top