karnataka

SSLC ಪಬ್ಲಿಕ್ ಪರೀಕ್ಷೆ ಹಿನ್ನೆಲೆ  ➤ ಪೋಷಕರು, ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 18. ಎಸ್.ಎಸ್.ಎಲ್.ಸಿ ಪರೀಕ್ಷಾ ಸಮೀಪಿಸುತ್ತಿದ್ದು ಎಂದಿನಂತೆ ಈ ಬಾರಿಯೂ ಕೂಡ ವಿದ್ಯಾರ್ಥಿಗಳ ನಡುವೆ ಗೊಂದಲ ನಿವಾರಣೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷವೂ ಸಹಾಯವಾಣಿ ಪ್ರಾರಂಭಿಸಿದೆ ಎನ್ನಲಾಗಿದೆ. ಮಾರ್ಚ್ 20 ರಿಂದ 28ರ ವರೆಗೆ ಮಧ್ಯಾಹ್ನ 3 ರಿಂದ 7:30ರ ವರೆಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಹಾಗೂ ಮಾ.26 ರಂದು ಬೆಳಗ್ಗೆ 11 ರಿಂದ ಸಂಜೆ 6 ರವರೆಗೆ ಇರಲಿದೆ. ಮಾ. 31ರಿಂದ ಏ. […]

SSLC ಪಬ್ಲಿಕ್ ಪರೀಕ್ಷೆ ಹಿನ್ನೆಲೆ  ➤ ಪೋಷಕರು, ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭ Read More »

ಕರಾವಳಿ

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com   ಹೊನ್ನಾವರ, ಮಾ.18. ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ. ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್‌ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅನಂತೇಶ ರಾವ್ ಅವರು ಸೋದೆ ಮೂಲ ಮಠಕ್ಕೆ ಉಡುಪಿಯಿಂದ ತೆರಳುತ್ತಿದ್ದರು. ಈ ವೇಳೆ ಹೊನ್ನಾವರ ಬಳಿ ಅವರ ಕಾರು ಕಂಟೈನರ್‌ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರು

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮಾ. 17. ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮ್ಮೇಳನಕ್ಕೆ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾ. 18 ರಂದು ಮಡಿಕೇರಿ, ಕುಶಾಲನಗರ, ವೀರಾಜಪೇಟೆ, ಸೋಮವಾರಪೇಟೆ, ಪುತ್ತೂರು, ಸುಳ್ಯ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಕೆಎಸ್‍ಆರ್.ಟಿಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‍ಆರ್.ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಮನವಿ ಮಾಡಿದ್ದಾರೆ.  

ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ

ದಾಸ್ತಾನು ಮಳಿಗೆ ಮೇಲೆ ಸಿಸಿಬಿ ದಾಳಿ  ➤ 450 ಚೀಲ ಅಕ್ಕಿ, 5 ಲಕ್ಷ ಹಣ ವಶಕ್ಕೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಮಾ. 17. ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದರೆಂಬ ಆರೋಪಕ್ಕೆ ಸಂಬಂಧಿಸಿ ನಗರದ ಅಮರಗೋಳದ ಎಪಿಎಂಸಿ ದಾಸ್ತಾನು ಮಳಿಗೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 450 ಚೀಲ ಹಾಗೂ 5 ಲಕ್ಷ ನಗದು ಹಾಗೂ 4 ವಾಹನಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಈ ಕುರಿತಂತೆ ಖಚಿತ ಮಾಹಿತಿಯ ಮೇರೆಗೆ ಎಸಿಪಿ ನಾರಾಯಣ ಹಾಗೂ ಬರಮನಿ ನೇತೃತ್ವದ ತಂಡವು ದಾಳಿ ನಡೆಸಿದೆ ಎನ್ನಲಾಗಿದೆ. ಸರ್ಕಾರದಿಂದ ಉಚಿತವಾಗಿ ನೀಡುವ ಅಕ್ಕಿಯನ್ನು ಆರೋಪಿ ಷಣ್ಮುಖಪ್ಪ ಬೆಟಗೇರಿ

ದಾಸ್ತಾನು ಮಳಿಗೆ ಮೇಲೆ ಸಿಸಿಬಿ ದಾಳಿ  ➤ 450 ಚೀಲ ಅಕ್ಕಿ, 5 ಲಕ್ಷ ಹಣ ವಶಕ್ಕೆ Read More »

ಕರ್ನಾಟಕ

48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಾನೂನು ಕ್ರಮ ➤ NHM ಸಿಬ್ಬಂದಿಗಳಿಗೆ ಖಡಕ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಖಾಯಂ ನೌಕರಿ ಹಾಗೂ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯುತ್ತಿದ್ದು, ಇದೀಗ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯು ಖಡಕ್ ಸೂಚನೆ ನೀಡಿದೆ. ಈ ಬಗ್ಗೆ ಎನ್ ಹೆಚ್ ಎಮ್ ನಿರ್ದೇಶಕರು ನೋಟಿಸ್ ನೀಡಿದ್ದು, 48 ಗಂಟೆ ಒಳಗೆ ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಸೂಚನೆ ನೀಡಿದ್ದಾರೆ.

48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಾನೂನು ಕ್ರಮ ➤ NHM ಸಿಬ್ಬಂದಿಗಳಿಗೆ ಖಡಕ್ ಸೂಚನೆ Read More »

ಕರ್ನಾಟಕ

ಮಾ. 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಇದೇ ಮಾ. 25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭವು ದಾವಣಗೆರೆಯಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲಿರುವ ಪ್ರಧಾನಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರಿನಲ್ಲಿ ಕೆ.ಆರ್. ಪುರ- ವೈಟ್ ಫೀಲ್ಡ್ ಮೆಟ್ರೊ ಮಾರ್ಗ

ಮಾ. 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ Read More »

ಕರ್ನಾಟಕ

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 17. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಸಂಖ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಉಡುಪಿ ಪೊಲೀಸರು ಅವರನ್ನು ನ್ಯಾಯಾಲಯಗಳಿಗೆ ಹಾಜರು ಪಡಿಸಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಚ್ಚಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ ಅವರು ವಿಶೇಷ ತಂಡಗಳನ್ನು ರಚಿಸಿದ್ದು, ಈ ತಂಡಗಳು ಸುಮಾರು 15 ದಿನಗಳಲ್ಲಿ ಹೊರ ಜಿಲ್ಲೆ ಹಾಗೂ ಹೊರರಾಜ್ಯಗಳಲ್ಲಿ

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ

ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 17. ಧಾರವಾಡದಿಂದ ಬೆಳಗಾವಿಗೆ ಬಂದ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗಡೆ ಮೂರು ವರ್ಷದ ಬಾಲಕಿಯ ಶವ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೂಲಗಳ ಪ್ರಕಾರ, ಮೈಸೂರು-ಧಾರವಾಡ ಎಕ್ಸ್ಪ್ರೆಸ್ (ರೈಲು ಸಂಖ್ಯೆ 07357) ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ರೈಲು ನಿಲ್ದಾಣವನ್ನು ತಲುಪಿತ್ತು. ಎಸ್ 3 ಕೋಚ್ ನ ಸೀಟ್ ನಂ. 20ರ ಕೆಳಗೆ ಸಂಜೆ 4 ಗಂಟೆ ಸುಮಾರಿಗೆ ರೈಲ್ವೇ ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾಗ ಗುಲಾಬಿ ಬಣ್ಣದ ಸ್ಲೀವ್ ಲೆಸ್ ಫ್ರಾಕ್ ಧರಿಸಿದ್ದ

ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಸ್-ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು BBMP ಒಪ್ಪಿಗೆ !

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ನಿರೀಕ್ಷೆಯಂತೆ ಬೆಂಗಳೂರಿನ ರೇಸ್-ಕೋರ್ಸ್ ರಸ್ತೆಗೆ ಖ್ಯಾತ ದಿವಂಗತ ನಟ ಅಂಬರೀಶ್ ಹೆಸರನ್ನಿಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅನುಮೋದನೆ ನೀಡಿದ್ದಾರೆ. ರೇಸ್-ಕೋರ್ಸ್ ರಸ್ತೆಯ ರಾಂ ನಾರಾಯಣ್ ಚೆಲ್ಲಾರಾಂ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದವರೆಗಿನ ರಸ್ತೆಗೆ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಘೋಷಿಸಿದ್ದರು.

ರೇಸ್-ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು BBMP ಒಪ್ಪಿಗೆ ! Read More »

ಕರ್ನಾಟಕ

ಡ್ರಮ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ ➤ ಮೂವರ ಬಂಧನ         

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೇ ನಿಲ್ದಾಣದ ಬಳಿ ಡ್ರಮ್ ಒಂದರಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಪ್ರಕರಣವನ್ನು ಭೇಧಿಸಿದ ರೈಲ್ವೇ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದ ಮಹಿಳೆಯನ್ನು ಬಿಹಾರ ಮೂಲದ ತಮನ್ನಾ ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಭಾಗವಹಿಸಿದ್ದು ಸಿಟಿ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಮಾಲ್(21), ತನ್ವೀರ್(24) ಶಕೀಬ್(25) ಎಂಬವರನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು

ಡ್ರಮ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ ➤ ಮೂವರ ಬಂಧನ          Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top