karnataka

ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಪ್ರದರ್ಶನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್‌ ಆಗಿದೆ. ಜತೆಗೆ, ಕರ್ನಾಟಕದ ಸಂಸ್ಕೃತಿ, ಆಚರಣೆಯನ್ನು ದೇಶದ ಜನರಿಗೆ ಪರಿಚಯಿಸುವ ಮೂಲಕ ಗಮನ ಸೆಳೆದಿದೆ. ಇದೀಗ ಮಾರ್ಚ್‌ 17ರಂದು ನಟ ದಿ. ಪುನೀತ್‌ ರಾಜ್‌ಕುಮಾರ್‌ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ. ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವ ಇದೀಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ಸಭೆಯಲ್ಲಿ ನಟ ರಿಷಬ್ ಶೆಟ್ಟಿ […]

ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಪ್ರದರ್ಶನ Read More »

ಕರ್ನಾಟಕ

ರಾಜ್ಯದ ಐದು ಜಿಲ್ಲೆಗಳಲ್ಲಿ ‘ವಿಮಾನ ನಿಲ್ದಾಣ’ ನಿರ್ಮಾಣ ➤ ಸಚಿವ ಮುರುಗೇಶ್ ನಿರಾಣಿ…!

(ನ್ಯೂಸ್ ಕಡಬ)newskadaba.com ಕಲಬುರಗಿ, ಮಾ.16. ರಾಜ್ಯದ ಐದು ಕಡೆ ನೂತನ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಮುಂದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಗುಲ್ಬರ್ಗ ವಿವಿ ಆವರಣದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ಅಭಿವೃದ್ದಿಗಾಗಿ ಸರ್ಕಾರ ಐದು ಕಡೆ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತಿದೆ. ಇತ್ತೀಚೆಗೆ ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದಾರೆ ಎಂದು ಹೇಳಿದರು.  

ರಾಜ್ಯದ ಐದು ಜಿಲ್ಲೆಗಳಲ್ಲಿ ‘ವಿಮಾನ ನಿಲ್ದಾಣ’ ನಿರ್ಮಾಣ ➤ ಸಚಿವ ಮುರುಗೇಶ್ ನಿರಾಣಿ…! Read More »

ಕರ್ನಾಟಕ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ➤ 1 ಕೆಜಿ ಅಕ್ಕಿ ಹೆಚ್ಚುವರಿಯಾಗಿ ಉಚಿತ…!

(ನ್ಯೂಸ್ ಕಡಬ)newskadaba.com ದಾವಣಗೆರೆ, ಮಾ.16. ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ NFSA ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಜನವರಿ ಯಿಂದ ಡಿಸೆಂಬರ್ ಅಂತ್ಯದವರೆಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸುವುದರೊಂದಿಗೆ ರಾಜ್ಯ ಸರ್ಕಾರದ ವೆಚ್ಚದಲ್ಲಿ 1 ಕೆ. ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲಾಗುತ್ತಿದೆ. ಅಂಗಡಿಗಳಲ್ಲಿ ಅಂತ್ಯೋದಯ ಪ್ರತಿ ಕಾರ್ಡುದಾರರಿಗೆ ಹಾಗು ಬಿ. ಪಿ. ಎಲ್ ಕಾರ್ಡುದಾರರಿಗೆ ತಲಾ 7 ಕೆ. ಜಿ ಅಕ್ಕಿ ಮತ್ತು ಒಪ್ಪಿಗೆ ನೀಡಿದೆ. ಎ. ಪಿ. ಎಲ್ ಪಡಿತರ ಚೀಟಿದಾರರಿಗೆ 15

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ➤ 1 ಕೆಜಿ ಅಕ್ಕಿ ಹೆಚ್ಚುವರಿಯಾಗಿ ಉಚಿತ…! Read More »

ಕರ್ನಾಟಕ

ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ ➤ ಹಲವರಿಗೆ ಗಂಭೀರ ಗಾಯ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ. ಹೆಚ್.ಎಸ್.ಆರ್. ಲೇಔಟ್ ನ 7ನೇ ಹಂತದಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡಿದ್ದು, ಎರಡು ಮನೆಗಳಿಗೆ ಹಾನಿಯಾಗಿವೆ. ಅಲ್ಲದೇ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. BWSSB ಕಾಮಗಾರಿ ವೇಳೆ ಏಕಾಏಕಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.  

ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ ➤ ಹಲವರಿಗೆ ಗಂಭೀರ ಗಾಯ…! Read More »

ಕರ್ನಾಟಕ

ಈಜಲು ಹೋದ ಬಾಲಕ ನೀರುಪಾಲು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಮಾ.16. ಸ್ನೇಹಿತರ ಜೊತೆ ಈಜಲು ತೆರಳಿದ ಬಾಲಕ ನೀರುಪಾಲಾದ ಘಟನೆ ಕೌರನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ರಾಜಾಜಿನಗರದ ಮನೋಜ್ (17) ಮೃತ ಬಾಲಕ.ಬೆಂಗಳೂರಿನಿಂದ 10 ಸ್ನೇಹಿತರು ಜೊತೆಯಾಗಿ ಈಶ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ವೀಕ್ಷಿಸಲು ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು. ಪ್ರತಿಮೆ ವೀಕ್ಷಣೆ ಬಳಿಕ ವಾಪಸಾಗುವಾಗ ಕೌರನಹಳ್ಳಿ ಬಳಿ ಕಲ್ಲು ಕ್ವಾರಿಯನ್ನು ಕಂಡಿದ್ದಾರೆ. ಅಲ್ಲಿ ನೀರಿನಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಬಾಲಕ ಮನೋಜ್‌ ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.    

ಈಜಲು ಹೋದ ಬಾಲಕ ನೀರುಪಾಲು Read More »

ಕರ್ನಾಟಕ

ಮನೆಯಂಗಳಕ್ಕೆ ಬರೋಬ್ಬರಿ 17 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.16. ದುರ್ಗ ಗ್ರಾಮದಲ್ಲಿ ಪರಿಸರದಲ್ಲಿ ಹರಿದಾಡುತ್ತಾ ನಾಗರಿಕ ನಿದ್ದೆಗೆಡಿಸಿದ, 17 ಅಡಿ ಉದ್ದದ ಕಾಳಿಂಗವೊಂದನ್ನು ಉರಗಪ್ರೇಮಿ ಅನಿಲ್ ಪ್ರಭು ಸೆರೆಹಿಡಿದ್ದಾರೆ. ಕಳೆದ ಕೆಲ ದಿನಗಳಿಂದ ಇದೇ ಪರಿಸರದಲ್ಲಿ ಕಾಣಸಿಕ್ಕಿರುವ ಕಾಳಿಂಗವನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖಾಧಿಕಾರಿಗೆ ಗ್ರಾಮಸ್ಥರು ದುಂಬಾಲು ಬಿದ್ದಿದ್ದರು. ಗ್ರಾಮಸ್ಥರ ಕೋರಿಕೆ ಮನ್ನಣೆ ಸಿಗದೆ ಇದ್ದಾಗ ಮಂಗಳವಾರ ರಾತ್ರಿ ಸುಮಾರು 10ಗಂಟೆಯ ವೇಳೆಗೆ ಕಾಳಿಂಗ ಕಾಣಸಿಕ್ಕಿರುವುದು ಗ್ರಾಮಸ್ಥರಲ್ಲಿ ಇನ್ನಷ್ಟು ಭಯ ಹೆಚ್ಚುಮಾಡಲು ಕಾರಣವಾಗಿತ್ತು.  

ಮನೆಯಂಗಳಕ್ಕೆ ಬರೋಬ್ಬರಿ 17 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ Read More »

ಕರಾವಳಿ

KPTCL ನೌಕರರ ವೇತನ ಶೇ.20ರಷ್ಟು ಹೆಚ್ಚಳ     ➤ ಮುಷ್ಕರ ವಾಪಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.15. ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು  ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು

KPTCL ನೌಕರರ ವೇತನ ಶೇ.20ರಷ್ಟು ಹೆಚ್ಚಳ     ➤ ಮುಷ್ಕರ ವಾಪಸ್ Read More »

ಕರ್ನಾಟಕ

ಕೋಮು ಘರ್ಷಣೆ, ಕಲ್ಲು ತೂರಾಟ ➤ 20 ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ಹಾವೇರಿ, ಮಾ.15. ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು, ಬೈಕ್ ರ್ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್ ನಲ್ಲಿ ನಡೆಯುತ್ತಿದ್ದ ಬೈಕ್ ರ್ಯಾಲಿ ವೇಳೆ ಆಟೋ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದ್ದು, ಮಸೀದಿ ಮತ್ತು ಮನೆಗಳ ಮೇಲೆ ಕಲ್ಲು

ಕೋಮು ಘರ್ಷಣೆ, ಕಲ್ಲು ತೂರಾಟ ➤ 20 ಮಂದಿ ಪೊಲೀಸರ ವಶಕ್ಕೆ Read More »

ಕರ್ನಾಟಕ

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಮಾ. 15. ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಅವರು ಮೃತರು. ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು. ಆದರೆ ನಿನ್ನೆ ಸೌದಿ ಅರೇಬಿಯಾದ ಬುರೈದದಲ್ಲಿ ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾ. 21ರಿಂದ 23 ಸಾವಿರ ಬಸ್ ಗಳ ಸಂಚಾರ ಬಂದ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಸಾರಿಗೆ ನೌಕರರ ವೇತನ ಹೆಚ್ಚಳ, ವಿವಿಧ ಭತ್ಯೆಗಳ ಹೆಚ್ಚಳ, ಸೇವೆಯಿಂದ ವಜಾಗೊಂಡಿರುವ ನೌಕರರ ಮರುನೇಮಕ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ಮಾ. 21ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್‍ ಇದರ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ

ಮಾ. 21ರಿಂದ 23 ಸಾವಿರ ಬಸ್ ಗಳ ಸಂಚಾರ ಬಂದ್..! Read More »

ಕರ್ನಾಟಕ
Scroll to Top