karnataka

ಮಾರ್ಚ್‌ನಲ್ಲಿ 3 ಬಾರಿ ಕರ್ನಾಟಕಕ್ಕೆ ಮೋದಿ ಆಗಮನ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆ ಘೋಷಣೆಯಾಗುವ ಮೊದಲೇ ಈ ತಿಂಗಳಲ್ಲಿ ಮೂರು ಬಾರಿ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಪೈಕಿ ಎರಡು ಬಾರಿ ಆಗಮಿಸುವುದು ನಿಶ್ಚಿತವಾಗಿದೆ. ಮೂರನೇ ಬಾರಿ ಆಗಮಿಸುವ ಕಾರ್ಯಕ್ರಮದ ರೂಪುರೇಷೆ ಅಂತಿಮಗೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿವೆ. ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನು ಮಾ.12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ನಿರೀಕ್ಷೆಯಿದೆ. ಈ ಮೊದಲು 11ರಂದು ಮಂಡ್ಯಕ್ಕೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಒಂದು ದಿನ […]

ಮಾರ್ಚ್‌ನಲ್ಲಿ 3 ಬಾರಿ ಕರ್ನಾಟಕಕ್ಕೆ ಮೋದಿ ಆಗಮನ..! Read More »

ಕರ್ನಾಟಕ

ಬೆಂಗಳೂರು: ನಿವೃತ್ತ ಮಹಿಳಾ ಸರ ದೋಚಿದ್ದ ಖದೀಮನ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಇತ್ತೀಚಿಗೆ ನಿವೃತ್ತ ಮಹಿಳಾ ಪೊಲೀಸ್‌ ಇನ್ಸ್ ಪೆಕ್ಟರ್‌ವೊಬ್ಬರಿಂದ ಚಿನ್ನದ ಸರ ದೋಚಿದ್ದ ಚಾಲಾಕಿ ಖದೀಮನೊಬ್ಬ ಚಂದ್ರಾಲೇಔಟ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಉಲ್ಲಾಳ ನಿವಾಸಿ ದರ್ಶನ್‌ ಬಂಧಿತನಾಗಿದ್ದು, ಆರೋಪಿಯಿಂದ 3 ಲಕ್ಷ ರು ಮೌಲ್ಯದ 76.4 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮೂಡಲಪಾಳ್ಯ ಮುಖ್ಯರಸ್ತೆಯ ಕೆನರಾ ಬ್ಯಾಂಕ್‌ ಕಾಲೋನಿ ನಿವಾಸಿ ನಿವೃತ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ ಗೀತಾರೆಡ್ಡಿ ಅವರು ಮನೆ ಮುಂದೆ ಕಸ ಗುಡಿಸುವಾಗ ಸರ ಕಳವು ಮಾಡಿ ಕಿಡಿಗೇಡಿ ಪರಾರಿಯಾಗಿದ್ದ.

ಬೆಂಗಳೂರು: ನಿವೃತ್ತ ಮಹಿಳಾ ಸರ ದೋಚಿದ್ದ ಖದೀಮನ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕಾರಿಗೆ ಮೀನು ಸಾಗಾಟ ಲಾರಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.02. ಮೀನು ಸಾಗಾಟದ ಲಾರಿಯೊಂದು ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಕೀರು ಸೇತುವೆ ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ ಪಡುಪಣಂಬೂರು ಕಿರು ಸೇತುವೆ ಬಳಿ ಚಾಲಕನ ನಿರ್ಲಕ್ಷ ಚಾಲನೆಯಿಂದ ಅದೇ ದಿಕ್ಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ

ಮಂಗಳೂರು: ಕಾರಿಗೆ ಮೀನು ಸಾಗಾಟ ಲಾರಿ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಕಲಬುರ್ಗಿ, ಮಾ.02. ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರ್ಗಿ ಗ್ರಾಮದಲ್ಲಿ ನಡೆದಿದೆ. ಭರತ ಸುಭಾಶ್ಚಂದ್ರ (25)ಕೊಲೆಯಾದ ಯುವಕ ಎನ್ನಲಾಗಿದೆ. ಈತನ ಸಂಬಂಧಿಯೇ ಆಗಿರುವ ಮಲ್ಲಿಕಾರ್ಜುನ ಶಿವಶರಣಪ್ಪ ಕೊಲೆ ಮಾಡಿರುವುದು ತಿಳಿದು ಬಂದಿದೆ..

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಡಬ, ಮಾ.02. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ವೆಂಕಪ್ಪ ಪೂಜಾರಿ ಎಂಬವರ ಪುತ್ರ ಕಿಶೋರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣಾ ಹೆಚ್.ಸಿ ರಾಜುನಾಯ್ಕ ಮತ್ತು ಪಿಸಿ ಸಿರಾಜುದ್ದಿನ್ ಅವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಬಾಯ್ಲರ್ ಸಿಡಿದು ಮೂವರು ಕಾರ್ಮಿಕರ ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.01. ಬಾಯ್ಲರ್ ಸಿಡಿದು ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾದ ಘಟನೆ ಬೆಂಗಳೂರು ನಗರದ ಅನೇಕಲ್ ನ ಬೊಮ್ಮಸಂದ್ರದಲ್ಲಿ ನಡೆದಿದೆ. ಬೊಮ್ಮಸಂದ್ರದ ಬಾಲ್ ಫಾರ್ಮ ಕಂಪನಿಯಲ್ಲಿ ಈ ದುರಂತ ಸಂಭವಿಸಿದೆ. ಪರಿಣಾಮ ಪ್ರದೀಪ್, ಮುರುಗನ್, ಕಿರಣ್ ಎಂಬ ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಮೈ ಮೇಲೆ ಭಾರಿ ಪ್ರಮಾಣದ ಕೆಮಿಕಲ್ ಬಿದ್ದು ತೀವ್ರತರದ ಗಾಯಗಳಾಗಿದೆ.  

ಬಾಯ್ಲರ್ ಸಿಡಿದು ಮೂವರು ಕಾರ್ಮಿಕರ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ `ಹಳೆಯ ಪಿಂಚಣಿ ಯೋಜನೆ’ ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ `ಹಳೆಯ ಪಿಂಚಣಿ ಯೋಜನೆ’ ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಸರಕಾರಿ ನೌಕರರ ಸಂಘದ ಮುಷ್ಕರ ವಾಪಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು. ಏಪ್ರಿಲ್ 1 ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ

ಸರಕಾರಿ ನೌಕರರ ಸಂಘದ ಮುಷ್ಕರ ವಾಪಸ್ Read More »

ಕರ್ನಾಟಕ

ಮಂಗಳೂರು: ನೌಕರರ ಮುಷ್ಕರ-ಸ್ತಬ್ದಗೊಂಡ ಸರ್ಕಾರಿ ಸೇವೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.01. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಇಂದಿನಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಪರಿಣಾಮ ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳು ಬುಧವಾರ ಸ್ತಭ್ದಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಮುಷ್ಕರದ ಮೊದಲ ದಿನದಂದೇ ಜನಸಾಮಾನ್ಯರಿಗೆ ಸರ್ಕಾರಿ ಸೇವೆ ಬಹುತೇಕ ಅಲಭ್ಯವಾಗಿತ್ತು.

ಮಂಗಳೂರು: ನೌಕರರ ಮುಷ್ಕರ-ಸ್ತಬ್ದಗೊಂಡ ಸರ್ಕಾರಿ ಸೇವೆ Read More »

ಕರಾವಳಿ

ನೌಕರರಿಂದ ಮುಷ್ಕರಕ್ಕೆ ಕರೆ ,ತುರ್ತು ಸಭೆ ಕರೆದ ಮುಖ್ಯಮಂತ್ರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ಇಂದು ನೌಕರರ ಸಂಗದಿಂದ ಪ್ರತಿಭಟನೆಯನ್ನು ಕೈಗೊಂಡಿದ್ದೂ ನಅಳೆ ನೌಕರರು ಮುಷ್ಟರಕ್ಕೆ ಕರೆಕೊಟ್ಟಿರುವ ಹಿನ್ನಲೆ ದಿಕ್ಕು ತೋಚದಂತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಛೆರಿ ಕೃಷ್ನಾದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಇನ್ನ ಈ ಸಭೆಯಲ್ಲಿ ಎಲ್ಲಾ ಇಲಾಖೆಗೆ ಸಂಬಂಧಪಟ್ಟ ಸಚಿವರು ಮತ್ತ ಸರ್ಕಾರಿ ಅಧಿಕಾರಿಗಳು ಭಾಗಿಯಅಗಲಿದ್ದಾರೆ ಇನ್ನು ಬಲ್ಲ ಮಾಹಿತಿ ಪ್ರಕಾರ ಗೃಹ ಮಂತ್ರಿ ಅರಗ ಜ್ಞಾನೆಂದ್ರ ಗೋವಿಂದ ಕಾರಜೋಳ. ತೋಟಗಾರಿಕೆ ಸಚಿವ ಮುನಿರತ್ನ ಸಭೇಯಲ್ಲಿ ಭಾಗವಹಿಸಲಿದ್ದಾರೆ.

ನೌಕರರಿಂದ ಮುಷ್ಕರಕ್ಕೆ ಕರೆ ,ತುರ್ತು ಸಭೆ ಕರೆದ ಮುಖ್ಯಮಂತ್ರಿ Read More »

ಕರ್ನಾಟಕ
Scroll to Top