karnataka

ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.25. ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಮೃತಪಟ್ಟ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಿವಾಸಿ ಹರೀಶ್ (53) ಮೃತರು ಎಂದು ಗುರುತಿಸಲಾಗಿದೆ. ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ತೆಗಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಲೀಲಾ, ಪುತ್ರರಾದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ವಿಶ್ವರಾಜ್ ಹಾಗೂ ವಿನೋದ್ ರಾಜ್‌ನನ್ನು ಅಗಲಿದ್ದಾರೆ.

ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಜ. 26ರಿಂದ ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಎಚ್.ಆರ್. ನಾಯಕ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನವನ ಸಮಿತಿ ಹಾಗೂ ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಜನವರಿ 26ರಿಂದ 29ರವರೆಗೆ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್. ನಾಯಕ್ ತಿಳಿಸಿದ್ದಾರೆ. ಜನವರಿ 24ರ ಮಂಗಳವಾರ ನಗರದ ತೋಟಗಾರಿಕೆ ಇಲಾಖೆಯಲ್ಲಿರುವ ಅವರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜನವರಿ 26ರ ಬೆಳಗ್ಗೆ 10 ಗಂಟೆಗೆ ಇಂಧನ, ಕನ್ನಡ ಮತ್ತು

ಜ. 26ರಿಂದ ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಎಚ್.ಆರ್. ನಾಯಕ್ Read More »

ಕರಾವಳಿ

ನಾಲ್ವರು ಐಐಎಸ್ಸಿ ಸಂಶೋಧಕರಿಗೆ ಐಎನ್ಎಸ್ಎ ಯುವ ವಿಜ್ಞಾನಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಭಾರತೀಯ ವಿಜ್ಞಾನ ಸಂಸ್ಥೆಯ ನಾಲ್ವರು ಅಧ್ಯಾಪಕರು ಯುವ ವಿಜ್ಞಾನಿಗಳ ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಡಾ ಶ್ರೀಮೊಂಟಾ ಗಯೆನ್, ಡಾ ಸುಭೋಜೋಯ್ ಗುಪ್ತಾ, ಡಾ ಮೋಹಿತ್ ಕುಮಾರ್ ಜಾಲಿ ಮತ್ತು ಡಾ ವೆಂಕಟೇಶ್ ರಾಜೇಂದ್ರನ್ ಸೇರಿದಂತೆ ಭಾರತದಾದ್ಯಂತ 42 ವಿಜ್ಞಾನಿಗಳು ಪದಕಕ್ಕೆ ಆಯ್ಕೆಯಾಗಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ನೀಡಿದ ಕೊಡುಗೆಗಳಿಗಾಗಿ 40 ವರ್ಷದೊಳಗಿನ ವಿಜ್ಞಾನಿಗಳಿಗೆ ವಾರ್ಷಿಕವಾಗಿ INSA ನಿಂದ ಯುವ ವಿಜ್ಞಾನಿಗಳಿಗೆ ಪದಕವನ್ನು ನೀಡಲಾಗುತ್ತದೆ. ಡಾ ಗಯೆನ್ ಅವರು

ನಾಲ್ವರು ಐಐಎಸ್ಸಿ ಸಂಶೋಧಕರಿಗೆ ಐಎನ್ಎಸ್ಎ ಯುವ ವಿಜ್ಞಾನಿ ಪ್ರಶಸ್ತಿ Read More »

ಕರ್ನಾಟಕ

ವಾರಾಂತ್ಯದಲ್ಲಿ 108 ನಮ್ಮ ಕ್ಲಿನಿಕ್‌ಗಳು ಪ್ರಾರಂಭ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಹಲವಾರು ಗಡುವುಗಳು ಮುಗಿದ ನಂತರ, ಬಹುನಿರೀಕ್ಷಿತ ನಮ್ಮ ಕ್ಲಿನಿಕ್ ಈ ವಾರಾಂತ್ಯದ ವೇಳೆಗೆ 108 ಬಿಬಿಎಂಪಿ ವಾರ್ಡ್‌ಗಳಲ್ಲಿ (ಒಟ್ಟು 243 ವಾರ್ಡ್‌ಗಳ ಪೈಕಿ) ತನ್ನ ಬಾಗಿಲು ತೆರೆಯಲು ಸಿದ್ಧವಾಗಿದೆ. ಬಿಬಿಎಂಪಿಯು ವೈದ್ಯರ ಕೊರತೆಯನ್ನು ನಿಭಾಯಿಸುತ್ತಿದ್ದು, ಮುಂದಿನ ಕೆಲವು ಹಂತಗಳಲ್ಲಿ ಉಳಿದ 135 ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಯೋಜನೆ ರೂಪಿಸುತ್ತಿದೆ. ಬೆಂಗಳೂರಿನಲ್ಲಿ 243 ಸೇರಿದಂತೆ ಎಲ್ಲಾ 438 ಕ್ಲಿನಿಕ್‌ಗಳನ್ನು ಆಗಸ್ಟ್ ನಲ್ಲಿ ತೆರೆಯಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಬಿಡುಗಡೆಯ ಗಡುವನ್ನು ವಿಸ್ತರಿಸುತ್ತಲೇ ಇತ್ತು.

ವಾರಾಂತ್ಯದಲ್ಲಿ 108 ನಮ್ಮ ಕ್ಲಿನಿಕ್‌ಗಳು ಪ್ರಾರಂಭ Read More »

ಕರ್ನಾಟಕ

20,000 ಕೋಟಿ ದಾಟಿದ ಕೆನರಾ ಬ್ಯಾಂಕ್‌ ಜಾಗತಿಕ ವ್ಯವಹಾರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಸಾರ್ವಜನಿಕ ವಲಯದಲ್ಲಿ ಮುಂಚೂಣಿಯಲ್ಲಿರುವ ಕೆನರಾ ಬ್ಯಾಂಕ್‌ನ ಜಾಗತಿಕ ವ್ಯವಹಾರವು ವಾರ್ಷಿಕ ಶೇ.13.63 ರಷ್ಟು ಬೆಳವಣಿಗೆಯೊಂದಿಗೆ 20 ಸಾವಿರ ಕೋಟಿ ರೂ. ಗಡಿ ದಾಟಿದೆ. ಬ್ಯಾಂಕು ಪ್ರಸಕ್ತ ಆರ್ಥಿಕ ವರ್ಷದ (2022-2023) ಮೂರನೇ ತ್ರೈಮಾಸಿಕ ವರದಿ ಪ್ರಕಟಿಸಿದ್ದು, ನಿವ್ವಳ ಲಾಭವು 2021ರ ಡಿಸೆಂಬರ್‌ಗೆ ಹೋಲಿಸಿದರೆ ಶೇ.91.8ರಷ್ಟು ಹೆಚ್ಚಳದೊಂದಿಗೆ 2,882 ಕೋಟಿ ರು.ಗೆ ತಲುಪಿದೆ. ಒಟ್ಟಾರೆ ಜಾಗತಿಕ ಠೇವಣಿಯು ವಾರ್ಷಿಕ ಶೇ.11.5 ರಷ್ಟು ಬೆಳವಣಿಗೆಯಾಗಿ 11,63,470 ಕೋಟಿ ರು.ಗೆ ತಲುಪಿದೆ. ಸದ್ಯ ಬ್ಯಾಂಕ್‌ನ ಜಾಗತಿಕ

20,000 ಕೋಟಿ ದಾಟಿದ ಕೆನರಾ ಬ್ಯಾಂಕ್‌ ಜಾಗತಿಕ ವ್ಯವಹಾರ Read More »

ಕರ್ನಾಟಕ

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದಲೇ ರೇಪ್‌

(ನ್ಯೂಸ್ ಕಡಬ)newskadaba.com  ಬಾಗಲಕೋಟೆ, ಜ.24. ಅನುದಾನಿತ ಶಾಲೆಯೊಂದರ ಶಿಕ್ಷಕ ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅನುದಾನಿತ ಶಾಲೆಯೊಂದರ ಶಿಕ್ಷಕ ಲಕ್ಷ್ಮಣ ದೇವೆಂದ್ರಪ್ಪ ಕೊಪ್ಪದ ಬಂಧಿತ ಆರೋಪಿ. ಆರೋಪಿ ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಕಾಲುವೆ ಯಲ್ಲಾಪೂರ ಗ್ರಾಮದವನು. ಕಳೆದೊಂದು ವರ್ಷದಿಂದ ತನ್ನ ಮನೆಯಲ್ಲಿ ಇಂಗ್ಲಿಷ್‌ ಟ್ಯೂಷನ್‌ ಹೇಳಿಕೊಡುವುದಾಗಿ ಕರೆಸಿಕೊಂಡು ಟ್ಯೂಷನ್‌ ಬಿಟ್ಟ

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದಲೇ ರೇಪ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

`ಆಧಾರ’ ಯೋಜನೆಯಡಿ ವಿಕಲಚೇತನರಿಗೆ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು 2022-23ನೇ ಸಾಲಿನ ‘ಆಧಾರ’ ಯೋಜನೆಯಡಿ 1.00 ಲಕ್ಷ ರೂ. ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದರಲ್ಲಿ 50% ಸಬ್ಸಿಡಿಯನ್ನು ಇಲಾಖೆಯು ಭರಿಸಲಿದ್ದು, ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ವಿಕಲಚೇತರು ಹಾಗೂ ಅರ್ಹ ವಿಕಲಚೇತನರು ಕೆಳಕಂಡ ಅಗತ್ಯ ದಾಖಲಾತಿಗಳೊಂದಿಗೆ 2023ರ ಫೆಬ್ರವರಿ 04 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಜಿಲ್ಲೆಯಲ್ಲಿ

`ಆಧಾರ’ ಯೋಜನೆಯಡಿ ವಿಕಲಚೇತನರಿಗೆ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ Read More »

ಕರ್ನಾಟಕ

ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ !

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ಕೆಲವು ತಿಂಗಳು ಬಾಕಿ ಇದೆ. ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಾರಿ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಈ ಕುರಿತು ಖಡಕ್ ಸಂದೇಶ ರವಾನಿಸಿದೆ ಎಂದು ಮೂಲಗಳು ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ,  ಮೂಡಬಿದ್ರೆ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಸುಳ್ಯ ಕ್ಷೇತ್ರಗಳಿಗೆ ಹೊಸ

ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ ! Read More »

ಕರಾವಳಿ

ಅಪ್ರಾಪ್ತೆ ಕಾರಣಕ್ಕೆ ಮದುವೆ ರದ್ದಾಗದು ➤ ಕರ್ನಾಟಕ ಹೈಕೋರ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, 24. ಅಪ್ರಾಪ್ತೆ ಎಂಬ ಒಂದೇ ಕಾರಣಕ್ಕೆ ಹಿಂದೂ ವಿವಾಹ ಕಾಯಿದೆಯನ್ವಯ ಜರುಗಿರುವ ವಿವಾಹವನ್ನು ರದ್ದುಗೊಳಿಸಲಾಗದು ಎಂದು ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಈ ತೀರ್ಪು ನೀಡಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ವಿವಾಹದ ಸಂದರ್ಭದಲ್ಲಿ ಯುವತಿ ಅಪ್ರಾಪ್ತಳಾಗಿದ್ದಳೆಂಬ ಕಾರಣಕ್ಕೆ ಮದುವೆಯನ್ನು ರದ್ದುಗೊಳಿಸಿದ್ದ ಕೌಟುಂಬಿಕ

ಅಪ್ರಾಪ್ತೆ ಕಾರಣಕ್ಕೆ ಮದುವೆ ರದ್ದಾಗದು ➤ ಕರ್ನಾಟಕ ಹೈಕೋರ್ಟ್ Read More »

ಕರ್ನಾಟಕ

5ನೇ, 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ..! ➤ ಪರೀಕ್ಷಾ ಕೇಂದ್ರಗಳನ್ನು ಮ್ಯಾಪಿಂಗ್ ಮಾಡಲು ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ವಿವಾದಗಳ ನಡುವೆಯೂ ಶಿಕ್ಷಣ ಇಲಾಖೆಯು ಪ್ರಸಕ್ತ ವರ್ಷದಲ್ಲಿ 5ನೆ ಮತ್ತು 8ನೆ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷಾ ಕೇಂದ್ರಗಳನ್ನು ಗೊತ್ತುಪಡಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಬಿಇಓ ಲಾಗೀನ್‍ನಲ್ಲಿ ಪರೀಕ್ಷಾ ಕೇಂದ್ರಗಳ ರಚನೆಯನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚಿಸಿದೆ. ಕಡ್ಡಾಯವಾಗಿ ಜ.30ರೊಳಗೆ ಪರೀಕ್ಷಾ ಕೇಂದ್ರಗಳ ರಚನಾ ಕಾರ್ಯವನ್ನು ಗುರುತಿಸುವಂತೆ ಸೂಚಿಸಿದೆ. ಶಾಲಾವಾರು ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧಾರಿಸಿ, 5ನೆ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಒಂದು

5ನೇ, 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ..! ➤ ಪರೀಕ್ಷಾ ಕೇಂದ್ರಗಳನ್ನು ಮ್ಯಾಪಿಂಗ್ ಮಾಡಲು ಸೂಚನೆ Read More »

ಕರ್ನಾಟಕ
Scroll to Top