karnataka

ಮಂಗಳೂರು: ಶತಮಾನೋತ್ಸವ ಹೊಸ್ತಿಲಲ್ಲಿ ಕರ್ಣಾಟಕ ಬ್ಯಾಂಕ್‌

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.10. ಪ್ರತಿಷ್ಠಿತ ಕರ್ಣಾಟಕ ಬ್ಯಾಂಕಿನ ಪ್ರಧಾನ ಕಚೇರಿ ಮಂಗಳೂರಿನಲ್ಲಿ ಬ್ಯಾಂಕಿನ ಎಲ್ಲ ಪ್ರಾದೇಶಿಕ ಮುಖ್ಯಸ್ಥರು, ವಿವಿಧ ಇಲಾಖೆಯ ಮುಖ್ಯಸ್ಥರು, ಉನ್ನತ ಅಧಿಕಾರಿಗಳನ್ನು ಒಳಗೊಂಡು ಬ್ಯಾಂಕಿನ ಪ್ರಾದೇಶಿಕ ಕಚೇರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಂದರ್ಭ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್‌., ಸತತವಾಗಿ ಉತ್ತಮ ಫಲಿತಾಂಶಗಳನ್ನು ಸಾಧಿಸುತ್ತಿರುವ ಕರ್ಣಾಟಕ ಬ್ಯಾಂಕ್‌ ಶತಮಾನೋತ್ಸವದ ಸಂಭ್ರಮಕ್ಕೆ ಸಜ್ಜಾಗಿ ನಿಂತಿದೆ. ಸಾಮಾಜಿಕ ಕಳಕಳಿಗೆ ಬದ್ಧವಾಗಿ ಸುದೃಢ ಆರ್ಥಿಕ ವ್ಯವಹಾರ […]

ಮಂಗಳೂರು: ಶತಮಾನೋತ್ಸವ ಹೊಸ್ತಿಲಲ್ಲಿ ಕರ್ಣಾಟಕ ಬ್ಯಾಂಕ್‌ Read More »

ಕರ್ನಾಟಕ

ಬೆಂಗಳೂರು ಇತಿಹಾಸ ಹೇಳಲಿದೆ ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಈ ಬಾರಿಯ ಗಣರಾಜ್ಯೋತ್ಸ ದಿನದ ಫಲಪುಷ್ಪ ಪ್ರದರ್ಶನದಲ್ಲಿ ಜನತೆಗೆ ಶೈಕ್ಷಣಿಕ ಅನುಭವ ನೀಡಲು ತೋಟಗಾರಿಕಾ ಇಲಾಖೆಯು ಮುಂದಾಗಿದ್ದು, ಬೆಂಗಳೂರು ಇತಿಹಾಸವನ್ನು ಥೀಮ್ ಆಗಿ ಬಳಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ತಜ್ಞರ ಸಲಹೆಯ ಮೇರೆಗೆ ಈ ಬಾರಿಯ ಪುಷ್ಪ ಪ್ರದರ್ಶನದ ಥೀಮ್ ಬೆಂಗಳೂರಿನ ಇತಿಹಾಸವನ್ನು ಥೀಮ್ ಆಗಿ ತೆಗೆದುಕೊಳ್ಳಲು ಇಲಾಖೆ ನಿರ್ಧರಿಸಿದ್ದು, ಇಲಾಖೆಯು 1500 ಎಡಿ ಯಿಂದ ಇತಿಹಾಸವನ್ನು ಪ್ರದರ್ಶಿಸಲಿದೆ. ವಿವಿಧ ರಾಜವಂಶಗಳ ಆಳ್ವಿಕೆಯಲ್ಲಿ ನಗರವು ಹೇಗೆ ಬೆಳೆಯಿತು ಮತ್ತು ಹೇಗೆ ರೂಪುಗೊಂಡಿತು ಎಂಬುದನ್ನು

ಬೆಂಗಳೂರು ಇತಿಹಾಸ ಹೇಳಲಿದೆ ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ Read More »

ಕರ್ನಾಟಕ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ➤ ಪುರಭವನದಲ್ಲಿ ಭಾರೀ ಹೈಡ್ರಾಮಾ..!                     

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಹೈಡ್ರಾಮಾವೇ ನಡೆಯಿತು. ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು, ನ್ಯಾಯಾಲಯದ ಮೊರೆ ಹೋಗಿ ಪುಸ್ತಕ ಬಿಡುಗಡೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆ ನೀಡಿತು. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ➤ ಪುರಭವನದಲ್ಲಿ ಭಾರೀ ಹೈಡ್ರಾಮಾ..!                      Read More »

ಕರ್ನಾಟಕ

ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ ! ➤ಸಿಎಂ ಬೊಮ್ಮಾಯಿ..

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿ ಹೆಚ್ಚಳಗೊಂಡಿದ್ದು, ಈ ತಿಂಗಳ 12 ಮತ್ತು 19ರಂದು ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಂಬಂಧ ಪ್ರಧಾನಿ ಮೋದಿ ಅವರು ಜ.12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28  ರಾಜ್ಯಗಳಿಂದ ಹಾಗೂ

ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ ! ➤ಸಿಎಂ ಬೊಮ್ಮಾಯಿ.. Read More »

ಕರ್ನಾಟಕ

ಮಂಗಳೂರು: ಕರಾವಳಿಯಲ್ಲಿ ಹೆಚ್ಚಿದ ಚಳಿ…!!!  ➤ ಸಾಂಕ್ರಾಮಿಕ ರೋಗದ ಭೀತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.10. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.ಕಳೆದ ಡಿಸಂಬರ್ ನಲ್ಲಿ ಕಾಣಿಸಿಕೊಂಡಿದ್ದ ಕಡಿಮೆ ಉಷ್ಣಾಂಶ ಇದೀಗ ಮತ್ತೆ ಕಂಡು ಬರುತ್ತಿದೆ. ಚಳಿಯಿಂದಾಗಿ ರಕ್ತ ಹೆಪ್ಪುಗಟ್ಟುವ ಜೊತೆಗೆ ಹೃದಯಾಘಾತಗಳು ದೇಶದ ಹಲವೆಡೆ ಹೆಚ್ಚಳವಾಗುತ್ತಿದೆ ಎಂದು ವರದಿ ತಿಳಿಸಿದೆ. ಅತಿಯಾದ ಚಳಿಯಿಂದ ಜ್ವರ, ಶೀತ- ಕೆಮ್ಮು, ಗಂಟಲು ನೋವು ಉಂಟಾಗಬಹುದು. ಅಲರ್ಜಿ, ಅಸ್ತಮಾ ರೋಗಿಗಳು ಎಚ್ಚರ ವಹಿಸಬೇಕಾದ ಆವಶ್ಯಕತೆ ಎದುರಾಗಿದೆ. ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಕುಂದುವ ಅಪಾಯವಿರುತ್ತದೆ.ಆದ್ದರಿಂದ ಈ

ಮಂಗಳೂರು: ಕರಾವಳಿಯಲ್ಲಿ ಹೆಚ್ಚಿದ ಚಳಿ…!!!  ➤ ಸಾಂಕ್ರಾಮಿಕ ರೋಗದ ಭೀತಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬಾಲಕನೋರ್ವ ಹೃದಯಾಘಾತದಿಂದ ಮೃತ್ಯು…!!!                   

(ನ್ಯೂಸ್ ಕಡಬ)newskadaba.com ಮಂಗಳೂರು, ಜ.10. ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಎಂದು ಗುರುತಿಸಲಾಗಿದೆ. ಶಾಲೆಗೆ ಹೋಗಲು ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತಿ ಬಿದ್ದಿದ್ದಾನೆ ಮನೆಯವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು‌ ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೂ ಬದುಕಿಸುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.ಅಲ್ಲಿ

ಮಂಗಳೂರು: ಬಾಲಕನೋರ್ವ ಹೃದಯಾಘಾತದಿಂದ ಮೃತ್ಯು…!!!                    Read More »

ಕರಾವಳಿ
crime, arrest, suspected

ಶ್ರೀಗಂಧ ಮರ ಮಾರಟಕ್ಕೆ ಯತ್ನ…!!! ➤ ನಾಲ್ವರು ಆರೋಪಿಗಳು ಅರೆಸ್ಟ್       

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ಮೀಸಲು ಅರಣ್ಯ ಪ್ರದೇಶದಿಂದ ಶ್ರೀಗಂಧದ ಮರಗಳನ್ನು ಕದ್ದು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಕಮಲಾನಗರ ನಿವಾಸಿ ಪೊನ್ನರಾಜ್‌ ಅಲಿಯಾಸ್‌ ಪೊನ್ನ(35), ಲಗ್ಗೆರೆ ಪ್ರೇಮನಗರ ನಿವಾಸಿ ಧೃವಕುಮಾರ್‌(29), ಮೀನಾಕ್ಷಿ ನಗರದ ಸಿದ್ದಪ್ಪ(27) ಹಾಗೂ ಮಾಗಡಿಯ ಹರೀಶ್‌(34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 16.50 ಲಕ್ಷ ಮೌಲ್ಯದ 330 ಕೆ.ಜಿ. ತೂಕದ ಶ್ರೀಗಂಧದ ಮರದ ತುಂಡುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನ ಜಪ್ತಿ ಮಾಡಲಾಗಿದೆ

ಶ್ರೀಗಂಧ ಮರ ಮಾರಟಕ್ಕೆ ಯತ್ನ…!!! ➤ ನಾಲ್ವರು ಆರೋಪಿಗಳು ಅರೆಸ್ಟ್        Read More »

ಕರಾವಳಿ

ಕೋಲಾರದಿಂದ ಸ್ಪರ್ಧೆಗೆ ತೀರ್ಮಾನ ➤  ಸಿದ್ದರಾಮಯ್ಯ ಅಧಿಕೃತ ಘೋಷಣೆ

(ನ್ಯೂಸ್ ಕಡಬ)newskadaba.com  ಕೋಲಾರ, ಜ.09. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ದಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಘೋಷಿಸಿದರು ಎನ್ನಲಾಗಿದೆ. ಎಲ್ಲಾ ನಾಯಕರು ಇಲ್ಲಿಂದಲೇ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಎಲ್ಲರೂ ಒಕ್ಕೋರಲಿನಿಂದ ಒತ್ತಾಯಿಸುತ್ತಿದ್ದೀರಿ. ನಿಮ್ಮ ಪ್ರೀತಿ, ಅಭಿಮಾನ ತಿರಸ್ಕಾರ ಮಾಡಲು ಸಾದ್ಯವಿಲ್ಲ ಎಂದರು.      

ಕೋಲಾರದಿಂದ ಸ್ಪರ್ಧೆಗೆ ತೀರ್ಮಾನ ➤  ಸಿದ್ದರಾಮಯ್ಯ ಅಧಿಕೃತ ಘೋಷಣೆ Read More »

ಕರಾವಳಿ

ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.09. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು ಎನ್ನಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು  ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲಿಯೇ ಪ್ರತಿಕ್ರಿಯಿಸಿದರು ಎಂದು ತಿಳಿದುಬಂದಿದೆ. ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೇ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.    

ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ Read More »

ಕರಾವಳಿ, ಕರ್ನಾಟಕ

’ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 09. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ರಚಿಸಲಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ ಎಂದು ತಿಳಿದುಬಂದಿದೆ. ಇಂದು ಬೆಂಗಳೂರಿನ ಪುರಭವನದಲ್ಲಿ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಪುಸ್ತಕ ಬಿಡುಗಡೆಯನ್ನು ಡಾ.ಸಿಎನ್  ಅಶ್ವತ್ಥನಾರಾಯಣ ನೆರವೇರಿಸಲಿದ್ದರು ಎನ್ನಲಾಗಿದೆ. ಈ ಕುರಿತು ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.

’ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ Read More »

ಕರ್ನಾಟಕ
Scroll to Top