karnataka

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..!

(ನ್ಯೂಸ್ ಕಡಬ) newskadaba.com ಸೆ. 25. ಇತ್ತೀಚೆಗೆ ತಿರುಪತಿ ಲಡ್ಡು ವಿಚಾರವಾಗಿ ವಿವಾದ ಎದ್ದ ಹಿನ್ನೆಲೆ ನಂದಿನಿ ಬ್ರ್ಯಾಂಡ್‌ ಹೊರತುಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ […]

ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..! Read More »

ಕರ್ನಾಟಕ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿದ ಅರ್ಜಿ ವಜಾಗೊಂಡ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಕರೆ ನೀಡಿದ್ದಾರೆ. ಹೈಕೋರ್ಟಿನ ತೀರ್ಪು ಸ್ವಾಗತಾರ್ಹ ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡುವ ಮೂಲಕ ಹೈಕೋರ್ಟ್,

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ Read More »

ಕರ್ನಾಟಕ

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಕರಾವಳಿ

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ಮಲಯಾಳಂ ಸಿನಿಮಾರಂಗದಲ್ಲಿ ಆಂದೋಲನದ ಹಿನ್ನೆಲೆ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಂಧಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ.  

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿದ ಸರ್ಕಾರ

(ನ್ಯೂಸ್ ಕಡಬ) newskadaba.com ಸೆ. 24. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ವರಿಶೀಲಿಸಿ ವರದಿ ನೀಡಲು ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿದ ಸರ್ಕಾರ Read More »

ಕರ್ನಾಟಕ

ದಸರಾ ಆನೆ ಮುಂದೆ ರೀಲ್ಸ್, ಫೋಟೋಶೂಟ್ ನಿಷೇಧ- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಮೈಸೂರು

ದಸರಾ ಆನೆ ಮುಂದೆ ರೀಲ್ಸ್, ಫೋಟೋಶೂಟ್ ನಿಷೇಧ- ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

ನಿಖಿಲ್ ಕುಮಾರಸ್ವಾಮಿ ಕುಕ್ಕೇಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 24. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದೂವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಈಗಾಗಲೇ ನಮ್ಮ

ನಿಖಿಲ್ ಕುಮಾರಸ್ವಾಮಿ ಕುಕ್ಕೇಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ Read More »

ಕರಾವಳಿ

ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ಕೇಂದ್ರ ಸರಕಾರದ ಉದ್ದೇಶಿತ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಪರಿಶೀಲನೆಗೆ ನೇಮಿಸಲಾಗಿದ್ದ ಸಂಸದೀಯ ಸಮಿತಿಯು 1.2 ಕೋಟಿ ಈಮೇಲ್ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.   ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯ ಜಂಟಿ ಸಮಿತಿಯು ಮಸೂದೆ ಪರ 75,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ ಎಂದು ಸಂಸದೀಯ ಮೂಲಗಳು ತಿಳಿಸಿವೆ. ಅಲ್ಲದೇ ಈಮೇಲ್ ಪ್ರತಿಕ್ರಿಯೆಗಳನ್ನು ವರ್ಗೀಕರಿಸಲು ಮತ್ತು ಪರಿಶೀಲಿಸಲು 15 ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿಯೂ ಮೂಲಗಳು ತಿಳಿಸಿವೆ. ಸಮಿತಿಯು ಕಳೆದ ತಿಂಗಳು ಸಾರ್ವಜನಿಕರಿಂದ,

ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿದ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆಂಬ್ಯುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆಂಬ್ಯುಲೆನ್ಸ್ ಗಳು ನೆರವಾಗುತ್ತವೆ ಎಂದರು. ಸದ್ಯ 65

ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿದ ಸಿಎಂ Read More »

ಕರ್ನಾಟಕ
Scroll to Top