karnataka

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..!

(ನ್ಯೂಸ್  ಕಡಬ) newskadaba.com ಹಾಸನ, ಜ. 02.  ಜನರಿಗೆ ನಿರಂತರವಾಗಿ ಕಾಟ ನೀಡುತ್ತಿದ್ದ ಮರಿಕಾಡಾನೆಯೊಂದು ಜನರೇ ತೋಡಿದ್ದ ಕಂದಕಕ್ಕೆ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಕೊಪ್ಪಲು ಎಂಬಲ್ಲಿ ವರದಿಯಾಗಿದೆ. ಕಾಡಾನೆಗಳ ಉಪಟಳದಿಂದ ರೋಸಿ ಹೋಗಿದ್ದ ಜನರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸುತ್ತಲೇ ಇದ್ದರು. ಆದರೆ ಸರ್ಕಾರ ಶಾಶ್ವತ ಪರಿಹಾರ ಕಂಡುಹಿಡಿಯದೆ ಇದ್ದುದರಿಂದ ಗ್ರಾಮಸ್ಥರು ಒಟ್ಟಾಗಿ ಆನೆಯ ಸೆರೆಹಿಡಿಯಲು ದೊಡ್ಡ ಕಂದಕ ತೋಡಿದ್ದರು. ಸದ್ಯ ಇದೀಗ ಗ್ರಾಮಸ್ಥರು ತೋಡಿದ್ದ ಕಂದಕಕ್ಕೆ ಮರಿಯಾನೆಯೊಂದು ಬಿದ್ದಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ […]

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..! Read More »

ಕರ್ನಾಟಕ

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ  ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ                                                                           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ. 02. ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.  ಈ ಹಿಂದೆ ಸಂಸದ ಪ್ರತಾಪ್ ಸಿಂಹ ಅವರು ಇದೇ ಹೆದ್ದಾರಿಗೆ ಕಾವೇರಿ ನದಿ ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ  ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ                                                                            Read More »

ಕರ್ನಾಟಕ

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಗೆಳೆಯನ ಮನೆಯಿಂದ ಬೇರೊಂದು ಕಟ್ಟಡಕ್ಕೆ ಜಿಗಿಯುವ ವೇಳೆ ಕೆಳಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಚಂದ್ರಕಾಂತ್ ಪಾತ್ರಾ (37) ಎಂದು ಗುರುತಿಸಲಾಗಿದೆ. ಇವರು ಬ್ಯಾಗ್ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ  ಪಾತ್ರಾ, ತನ್ನ ಸ್ನೇಹಿತರೊಂದಿಗೆ ಟೆರೇಸ್ ಮೇಲೆ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಗಾಯಾಳುವನ್ನು ಪೀಣ್ಯ 4ನೇ ಬ್ಲಾಕ್ ನಿವಾಸಿ ಪ್ರಶಾಂತ್ ಎ (30) ಎಂದು ಗುರುತಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ಚೂರಿಯಿಂದ ಇರಿದ ಪ್ರಶಾಂತ್ (31) ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಮದ್ಯ ಸೇವಿಸಿದ್ದು, ನಂತರ ಇಬ್ಬರ ನಡುವೆ ಮಾತಿನ ಚಕಮಕಿ

ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಮೊಟ್ಟಮೊದಲ ಆನೆಗಳ ಆರೈಕೆ ಕೇಂದ್ರ ಆರಂಭ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೋಲಾರ ಸಮೀಪದ ಕಾಜಿಕಲ್ಲಹಳ್ಳಿ ಗ್ರಾಮದಲ್ಲಿ ರಾಜ್ಯದ ಮೊಟ್ಟಮೊದಲ ಆನೆಗಳ ಆರೈಕೆ ಕೇಂದ್ರವನ್ನು ಆರಂಭಿಸಲಾಗಿದ್ದು, ಶೀಘ್ರದಲ್ಲಿಯೇ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಲಕ್ಷ್ಮೀಸಾಗರ ಮೀಸಲು ಅರಣ್ಯದಲ್ಲಿ 25 ಎಕರೆ ಪ್ರದೇಶದಲ್ಲಿ ಆನೆಗಳ ಆರೈಕ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ಈ ಕೇಂದ್ರದಲ್ಲಿ ಸ್ಥೂಲಕಾಯ, ಮಧುಮೇಹ ಮತ್ತು ಗಾಯಗಳಿಗಾಗಿ ನಾಲ್ಕು ಆನೆಗಳು ಚಿಕಿತ್ಸೆ ಪಡೆದುಕೊಳ್ಳುತ್ತಿವೆ. ಆನೆಗಳ ಆರೈಕೆಗೆ ಕೇಂದ್ರ ಆರಂಭಿಸಿರುವ ಸರ್ಕಾರ ಮುಂದಿನ ದಿನಗಳಲ್ಲಿ ಈ ಕೇಂದ್ರಕ್ಕೆ ಪ್ರವಾಸಿಗರ ಭೇಟಿಗೆ

ಕರ್ನಾಟಕದಲ್ಲಿ ಮೊಟ್ಟಮೊದಲ ಆನೆಗಳ ಆರೈಕೆ ಕೇಂದ್ರ ಆರಂಭ     Read More »

ಕರ್ನಾಟಕ

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಹುಣಸಗಿ, ಡಿ. 31. ಬ್ರಿಜ್‍ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಣಸಗಿ ಸಮೀಪದ ರಾಜನ್ ಕೊಳ್ಳೂರ್ ಬಳಿ ವರದಿಯಾಗಿದೆ. ಮೃತರನ್ನು ಕಾಮನಟಗಿ ಗ್ರಾಮದ ಮಲ್ಲಿಕಾರ್ಜುನ ಚೆನ್ನಪ್ಪ ಮಡಿವಾಳ (35) ಹಾಗೂ ಬಲಶೆಟ್ಟಿಹಾಳ್ ಗ್ರಾಮದ ಪರಶುರಾಮ ಅಂಬರೀಶ ಚಲವಾದಿ (32) ಎಂದು ಗುರುತಿಸಲಾಗಿದೆ. ಈ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ವರ್ಷದಿಂದ ಮೆಟ್ರೋ ಟಿಕೆಟ್‌ ಮೇಲೆ ಭಾರೀ ರಿಯಾಯಿತಿ                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಜನವರಿ 1 ರಿಂದ  ಮೆಟ್ರೋ ರೈಲ್ವೇ ಕಾರ್ಪೊರೇಷನ್‌ ಲಿಮಿಟೆಡ್‌, ಮಧ್ಯಮ ಮತ್ತು ದೊಡ್ಡ ಗುಂಪುಗಳಿಗೆ ಕ್ರಮವಾಗಿ ಶೇ. 15 ಮತ್ತು ಶೇ. 20ರಷ್ಟು ರಿಯಾಯಿತಿ ನೀಡುತ್ತಿದೆ ಎಂದು ವರದಿ ತಿಳಿಸಿದೆ. ದೊಡ್ಡ ಗುಂಪು (1,000ಕ್ಕಿಂತ ಹೆಚ್ಚು) ಟಿಕೆಟ್‌ ಖರೀದಿ ಮಾಡಿ ಒಂದೇ ನಿಲ್ದಾಣದಲ್ಲಿ ಪ್ರವೇಶ ಪಡೆದು, ಎಲ್ಲರೂ ಒಂದೇ ನಿಲ್ದಾಣದಲ್ಲಿ ನಿರ್ಗಮಿಸಿದರೆ ಶೇ. 20 ರಷ್ಟು ರಿಯಾಯಿತಿ ನೀಡಲಾಗುತ್ತದೆ. 30 ರೂ. ಪ್ರತ್ಯೇಕವಾಗಿ ನೀಡಿ ನಮೂದಿಸಿದ ವಿವಿಧ ನಿಲ್ದಾಣಗಳಿಂದ

ಹೊಸ ವರ್ಷದಿಂದ ಮೆಟ್ರೋ ಟಿಕೆಟ್‌ ಮೇಲೆ ಭಾರೀ ರಿಯಾಯಿತಿ                     Read More »

ಕರ್ನಾಟಕ

ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಮನಬಂದಂತೆ ಥಳಿಸಿದ ಬೈಕ್ ಸವಾರ 

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನೋರ್ವ ಕೆ.ಎಸ್.ಆರ್.ಟಿ.ಸಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಮನಬಂದಂತೆ ಥಳಿಸಿ ಹಲ್ಲೆ ನಡೆಸಿರುವ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕಾಸರಗೋಡು ಟೊಂಕಾ ಬಳಿ ಸಂಭವಿಸಿದೆ. ಹಲ್ಲೆಗೊಳಗಾದವರನ್ನು ಬಸ್ ಚಾಲಕ ಕೃಷ್ಣ ನಾಯ್ಕ ಹಾಗೂ ನಿರ್ವಾಹಕ ಮರಿಯಪ್ಪ ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದ ಬೈಕ್ ಸವಾರನ ಕುರಿತು ಮಾಹಿತಿ ತಿಳಿದುಬಂದಿಲ್ಲ. ಕುಮಟಾದಿಂದ ಭಟ್ಕಳಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಕಾಸರಗೋಡು ಬಳಿ ಪ್ರಯಾಣಿಕರು

ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಮನಬಂದಂತೆ ಥಳಿಸಿದ ಬೈಕ್ ಸವಾರ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ ➤ ಚಾಲಕನ ವಿರುದ್ಧ FIR

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 31. ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಚಾಲಕನ ಮೇಲೆ ಎಫ್ಐಆರ್ ದಾಖಲಿಕೊಂಡಿದ್ದಾರೆ. ಡಿ. 27ರಂದು ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಟಕೋಳದಲ್ಲಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದರು. ಈ ಅಪಘಾತಕ್ಕೆ ಸಂಬಂಧಿಸಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣವೆಂದು ಚಾಲಕ ಎನ್.ಸತ್ಯನಾರಾಯಣ ವಿರುದ್ಧ ಐಪಿಸಿ ಕಲಂ

ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ ➤ ಚಾಲಕನ ವಿರುದ್ಧ FIR Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 31. ತನಗೆ ಮದುವೆ ಆಗೋಕೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಗೆ ಯತ್ನಿಸಿದ ಯುವಕನನ್ನು ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಸಂತೋಷ್ ಎಂದು ಗುರುತಿಸಲಾಗಿದೆ. ಊರಲ್ಲಿ ಹೊಲ-ಮನೆ ಕೆಲಸ ಮಾಡಿಕೊಂಡಿದ್ದ ಈತನಿಗೆ ಮದುವೆ ಆಗೋಕೆ ಹೆಣ್ಣು ಸಿಗದೇ ಇದ್ದುದರಿಂದ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.  

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top