karnataka

ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 31. ಮೂಗಿನ ಸಮಸ್ಯೆ ಅಂತ ಆಸ್ಪತ್ರೆಗೆ ದಾಖಲಾದ ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಶನಿವಾರದಂದು ವರದಿಯಾಗಿದೆ. ಮೃತ ಯುವತಿಯನ್ನು ರಾಯಚೂರು ನಗರದ ರಾಜೇಶ್ವರಿ (18)  ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಮೃತಪಟ್ಟಿದ್ದಾಳೆ ಅಂತ ಆರೋಪಿಸಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ.  

ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ದ್ವಿಚಕ್ರ ವಾಹನಕ್ಕೆ ಸೀಬರ್ಡ್ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಬಾಲಕಿ ತಂದೆಗೆ ಗಂಭೀರ ಗಾಯಗೊಂಡ ಘಟನೆ ಕಾರವಾರದ ಬಿಣಗಾದಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಲವಿಟಾ ಜಾರ್ಜ್ ಫೆರ್ನಾಂಡೀಸ್ (13) ಹಾಗೂ ಗಾಯಗೊಂಡ ತಂದೆಯನ್ನು ಜಾರ್ಜ್ ಫೆರ್ನಾಂಡೀಸ್‌ (41) ಎಂದು ಗುರುತಿಸಲಾಗಿದೆ. ಬಟ್ಟೆ ಖರೀದಿಸುವ ಉದ್ದೇಶದಿಂದ ತಂದೆ- ಮಗಳು ಕಾರವಾರಕ್ಕೆ ಬರುತ್ತಿದ್ದ ವೇಳೆ‌ ಬೆಂಗಳೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಬಸ್, ಆ್ಯಕ್ಟಿವಾದ ಹಿಂಬದಿಗೆ ಢಿಕ್ಕಿ ಹೊಡೆದ

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ ಎಂದು ವರದಿ ತಿಳಿಸಿದೆ. ತಮ್ಮ ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡುಬಂದರೆ ಅಥವಾ ಲವ್ ಜಿಹಾದ್ ಗೆ ಬಲಿಯಾದ್ರೆ ತುರ್ತಾಗಿ ಸಂಪರ್ಕಿಸಲು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಜೊತೆಗೆ ಇಮೇಲ್ ಐಡಿಯನ್ನು ನೀಡಲಾಗಿದೆ. ಕರೆ ಮಾಡಿದವರ ಮಾಹಿತಿ ಗೌಪ್ಯವಾಗಿ ಇಡಲಾಗುತ್ತದೆ ಎಂದು ಸಂಘಟನೆಗಳ ಪ್ರಮುಖರು ಹೇಳಿದ್ದಾರೆ.

ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆ Read More »

ಕರಾವಳಿ, ಕರ್ನಾಟಕ

ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟ ➤ ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 31. ಮನೆಯೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಚೆನ್ನೈನ ನಾಮಕ್ಕಲ್ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ತಿಲ್ಲೈ ಕುಮಾರ್, ಅವರ ತಾಯಿ ಸೆಲ್ವಿ (57) ಮತ್ತು ಪತ್ನಿ ಪ್ರಿಯಾ (27) ಎಂದು ಗುರುತಿಸಲಾಗಿದೆ. ಪರವಾನಗಿ ಹೊಂದಿರುವ ತಿಲ್ಲೈ ಕುಮಾರ್ (37) ಎಂಬಾತ ತನ್ನ ಮನೆಯಲ್ಲಿ ಪಟಾಕಿಯನ್ನು ಸಂಗ್ರಹಿಸಿಟ್ಟಿದ್ದ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದವರು ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಮಾಡಿ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟ ➤ ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಪು ಹಲ್ಲೆ- ಯುವಕ ಮೃತ್ಯು  ➤ ಆರೋಪಿಯ ಬಂಧನ        

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೆಲದಿನಗಳ ಹಿಂದೆ ನಡೆದಿದ್ದ ಬಾಗಲಕೋಟೆ ಮೂಲದ ಮಂಜುನಾಥ್ ಬಾಳಪ್ಪ ಜಮಖಂಡಿ (21) ಕೊಲೆ ಪ್ರಕರಣದಲ್ಲಿ ಆತನ ಗೆಳತಿ ಸರೋಜಾ ದೇಸಾಯಿ (29) ಯನ್ನು ಕೆಂಪಾಪುರ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮಧ್ಯರಾತ್ರಿ ಮಾಗಡಿ ರಸ್ತೆಯ ಮನೆಯೊಂದರ ಮುಂಭಾಗ ಅಪರಿಚಿತ ಯುವಕ ರಕ್ತದ ಮಡುವಿನಲ್ಲಿ ಕೊಲೆಯಾಗಿ ಬಿದ್ದಿದ್ದ. ಆರಂಭದಲ್ಲಿ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿರಲಿಲ್ಲ. ನಂತರ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ

ಗುಂಪು ಹಲ್ಲೆ- ಯುವಕ ಮೃತ್ಯು  ➤ ಆರೋಪಿಯ ಬಂಧನ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುಡಿಸಲಿಗೆ ಬೆಂಕಿ ➤ ಓರ್ವ ಸಜೀವ ದಹನ

(ನ್ಯೂಸ್ ಕಡಬ) newskadaba.com ಬೀದರ್, ಡಿ. 31. ಪಾರ್ಟಿ ಮಾಡಿದ ನಂತರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಓರ್ವ ವ್ಯಕ್ತಿ ಸಜೀವ ದಹನಗೊಂಡ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಜಗನಾಥ ಹಲಗೆ (60) ಎಂದು ಗುರುತಿಸಲಾಗಿದೆ. ಮೃತ ಜಗನಾಥ ಹಲಗೆ ಹಾಗೂ ಮಾರುತಿ ಗೊರನೆ ಎಂಬಿಬ್ಬರು ಪಾರ್ಟಿ ಮಾಡಿ ನಿದ್ದೆಗೆ ಜಾರಿದ್ದು, ಈ ವೇಳೆ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಜಗನಾಥ ಹಲಗೆಯನ್ನು ರಕ್ಷಿಸಲು ಮುಂದಾಗಿದ್ದ ಮಾರುತಿ ಎಂಬಾತನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು

ಗುಡಿಸಲಿಗೆ ಬೆಂಕಿ ➤ ಓರ್ವ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಡಿ. 31. ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿಯೋರ್ವರು ಕೆಳಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ವರದಿಯಾಗಿದೆ. ಮೃತರನ್ನು ಬೆಂಗಳೂರು ಕುಂಬಾರಪೇಟೆಯ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆ ಮುಗಿಸಿ ಬಂದು ನಿಲ್ಲಿಸಿದ್ದ ಬಸ್ಸಿನ ಮೇಲೆ ಮಲಗಿದ್ದ ಶ್ರೀನಾಥ್ ಟಾಪ್ ಮೇಲಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ

ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲೆಗಳಲ್ಲಿ ಮೊಬೈಲ್ ನಿಷೇಧಕ್ಕೆ ಚಿಂತನೆ  ➤ ಸಚಿವ ಎಂ.ಟಿ.ಬಿ ನಾಗರಾಜ್         

(ನ್ಯೂಸ್ ಕಡಬ) newskadaba.com ಹೊಸಕೋಟೆ, ಡಿ. 31. ಸರ್ಕಾರಿ ಶಾಲಾ ಆವರಣದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದ್ದಾರೆ. ನಂದಗುಡಿ ಹೋಬಳಿಯ ಕೆಪಿಎಸ್ ಶಾಲೆಗೆ ತಮ್ಮ ವೈಯುಕ್ತಿಕ ಹಣದಿಂದ 25 ಡೆಸ್ಕ್ ಹಸ್ತಾಂತರಿಸಿದ ಬಳಿಕ ಮಾತನಾಡಿದ ಅವರು ಮೊಬೈಲ್ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಪರಿಣಾಮ ಬೀರುತ್ತಿದ್ದು, ಫಲಿತಾಂಶ ಕುಂಠಿತಕ್ಕೆ ಕಾರಣವಾಗುತ್ತಿದೆ. ಈ ಕುರಿತು ಶಿಕ್ಷಣ ಸಚಿವರು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು

ಶಾಲೆಗಳಲ್ಲಿ ಮೊಬೈಲ್ ನಿಷೇಧಕ್ಕೆ ಚಿಂತನೆ  ➤ ಸಚಿವ ಎಂ.ಟಿ.ಬಿ ನಾಗರಾಜ್          Read More »

ಕರ್ನಾಟಕ

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಪಲ್ಟಿ ಹೊಡೆದು ಕಾಲುವೆಗೆ ಬಿದ್ದ ಪರಿಣಾಮ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲದ ಸೊಂಡೆಕೊಪ್ಪ ಬಳಿ ವರದಿಯಾಗಿದೆ. ಮೃತಪಟ್ಟಿರುವರನ್ನು ಬಿಜಾಪುರ ಜಿಲ್ಲೆಯ ಅಂಬಳನೂರು ಗ್ರಾಮದ ಸಿದ್ದಪ್ಪ (31) ಮತ್ತು ರಾಯಚೂರಿನ ಮಿಟೆಕೇಲೂರು ಗ್ರಾಮದ ಮುತ್ತು (25) ಎಂದು ಗುರುತಿಸಲಾಗಿದೆ. ಮಲ್ಲಾಪುರ ಗ್ರಾಮದ ಕಾಂಕ್ರೀಟ್ ಮಿಸ್ಕ್ ಪ್ಲಾಂಟ್’ನಲ್ಲಿ ಕೆಲಸ ಮಾಡುತ್ತಿದ್ದ ಇವರು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾಲುವೆಗೆ ಬಿದ್ದು

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 31. ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಅಜಿತೇಶ್ ಇವರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿ.ಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ, ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಫಾರೆಸ್ಟರಿಯಲ್ಲಿ ಬಿ.ಎಸ್ ಸಿ ಪದವಿಯನ್ನು ಪಡೆದಿದ್ದಾರೆ. ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಯಾದ ಇವರು, ಸುಬ್ರಹ್ಮಣ್ಯ ಕುಮಾರಸ್ವಾಮಿ

ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ Read More »

ಕರಾವಳಿ
Scroll to Top