karnataka

ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆರ್. ದಿಲೀಪ್ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಅನಾರೋಗ್ಯದಿಂದ ಬಳಲುತ್ತಿದ್ದ ಐಪಿಎಸ್​ ಅಧಿಕಾರಿ ಆರ್.ದಿಲೀಪ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಪಿ ಆಗಿದ್ದ ದಿಲೀಪ್ ರವರು, ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿ ಇವರ ಯಕೃತ್ತು ಕಸಿ  ಮಾಡಿಸಲಾಗಿತ್ತು. ಚಿಕಿತ್ಸೆಯ ಬಳಿಕ ದಿಲೀಪ್ ಅವರು ಮತ್ತೆ ಕರ್ತವ್ಯಕ್ಕೆ ಮರಳಿದ್ದರು. ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿಇ ಪದವೀಧರರಾಗಿದ್ದ ಇವರು 2005ರಲ್ಲಿ ಪೊಲೀಸ್ […]

ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆರ್. ದಿಲೀಪ್ ಇನ್ನಿಲ್ಲ..! Read More »

ಕರ್ನಾಟಕ
crime, arrest, suspected

ಹೊಸ ವರ್ಷಾಚರಣೆಯ ಹಿನ್ನೆಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ➤ 6.30 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಭರ್ಜರಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಬರೋಬ್ಬರಿ 6.30 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಕುರಿತು ಬೆಂಗಳೂರಿನಲ್ಲಿ ವರದಿಯಾಗಿದೆ. ಹೊಸವರ್ಷಾಚರಣೆಯ ಹಿನ್ನೆಲೆ ಡ್ರಗ್ಸ್ ಸಪ್ಲ್ಗೈ ಆಗುತ್ತಿರುವ ಮಾಹಿತಿಯಂತೆ ಕಾರ್ಯಾಚರಣೆಗಿಳಿದ ಸಿಸಿಬಿ ಆಧಿಕಾರಿಗಳು ಎಂಡಿಎಂಎ, ಚರಸ್, ಗಾಂಜಾ ಸೇರಿ ವಿವಿಧ ಮಾದರಿಯ ಸುಮಾರು 6.30 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಹೊಸ ವರ್ಷಾಚರಣೆಯ ಹಿನ್ನೆಲೆ ಸಿಸಿಬಿ ಪೊಲೀಸರ ಕಾರ್ಯಾಚರಣೆ ➤ 6.30 ಕೊಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ Read More »

ಕರ್ನಾಟಕ

ಆನೆ ದಾಳಿ- ಮಹಿಳೆ ಮೃತ್ಯು..!

(ನ್ಯೂಸ್  ಕಡಬ) newskadaba.com ಹುಣಸೂರು, ಡಿ. 30. ಮಹಿಳೆಯ ಮೇಲೆ ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿ ಚಿಕ್ಕಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಯಜಮಾನ ಸಿದ್ದೇಗೌಡರ ಪತ್ನಿ ಚಿಕ್ಕಮ್ಮ (57) ಎಂದು ಗುರುತಿಸಲಾಗಿದೆ. ಇವರು ಜಮೀನಿನಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ವೇಳೆ ಆನೆ ದಾಳಿ ಮಾಡಿದೆ ಎನ್ನಲಾಗಿದೆ. ಸ್ಥಳಕ್ಕೆ ಶಾಸಕ ಜಿ.ಟಿ.ದೇವೆಗೌಡ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಆನೆಯನ್ನು ಶೀಘ್ರವಾಗಿ ಹಿಡಿಯುಂತೆ

ಆನೆ ದಾಳಿ- ಮಹಿಳೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..!

(ನ್ಯೂಸ್  ಕಡಬ) newskadaba.com ಉಳ್ಳಾಲ, ಡಿ. 30. ತಲೆನೋವು ಹಾಗೂ ಜ್ವರದಿಂದ ಬಳಲುತ್ತಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಆಶ್ವಿತ್ ಎಂದು ಗುರುತಿಸಲಾಗಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮದಲ್ಲಿ ಆರನೇ ತರಗತಿ ಓದುತ್ತಿದ್ದ ಬಾಲಕ ಮೆದುಳು ಜ್ವರದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತ ಬಾಲಕನ ತಂದೆ ಎರಡು ವರ್ಷಗಳ ಹಿಂದೆ ಅವಘಡವೊಂದರಲ್ಲಿ ಮೃತಪಟ್ಟಿದ್ದರು. ಆಶ್ವಿನ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿಗೆ ಪಾತ್ರನಾಗಿದ್ದ ಎಂದು ತಿಳಿದು ಬಂದಿದೆ.  

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇನ್ನೂ 15,000 ಶಿಕ್ಷಕರ ನೇಮಕ ➤ ಸಿಎಂ ಬೊಮ್ಮಾಯಿ

(ನ್ಯೂಸ್  ಕಡಬ) newskadaba.com ಬೆಳಗಾವಿ, ಡಿ. 30. ಪ್ರಸ್ತುತ ಈ ವರ್ಷ 15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಚಾಲನೆ ನೀಡಲಾಗಿದ್ದು, ಇನ್ನೂ 15 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಕುರಿತು ಪರಿಷತ್‌ನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆ ವೇಳೆ ಉತ್ತರಿಸಿದ ಅವರು, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಿಸಲು ಚಾಲನೆ ನೀಡಲಾಗಿದೆ. ಇನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ಕಳುಹಿಸಲು

ಇನ್ನೂ 15,000 ಶಿಕ್ಷಕರ ನೇಮಕ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಕಲ್ಲು ಎತ್ತಿ ಹಾಕಿ ಯುವಕನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸರೋಜ ಎಂದು ಗುರುತಿಸಲಾಗಿದೆ. ಆಕೆ ಮತ್ತು ಆಕೆಯ ಕುಟುಂಬಸ್ಥರು ಮಂಜುನಾಥ್ ಬಾಳಪ್ಪ ಎಂಬಾತನ ಮೇಲೆ ಕಲ್ಲು ಎತ್ತಿಹಾಕಿ ಕ್ರೂರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಪ್ಪ, ಅಕ್ಕಮಹಾದೇವಿ, ಮಂಜುನಾಥ್, ಕಿರಣ್, ಚೆನ್ನಪ್ಪ ಹಾಗೂ ಕಾಶಿನಾಥ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಆದರೆ ಪ್ರಮುಖ

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ದರ ಇಳಿಕೆ ಮಾಡಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಇನ್ನೇನು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ, ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿದೆ. ಇದೀಗ ರಾಜ್ಯ ಬಿಜೆಪಿ ಸರ್ಕಾರವು ಚುನಾವಣೆ ಹಿನ್ನೆಲೆ ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು, ಇಂಧನ ದರ ಇಳಿಕೆಗೆ ಮುಂದಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನೀಲ್ ಕುಮಾರ್, ಬೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ

ವಿದ್ಯುತ್ ದರ ಇಳಿಕೆ ಮಾಡಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ Read More »

ಕರ್ನಾಟಕ

ಬಿಸಿ ಸಾಂಬಾರ್ ಬಿದ್ದು ಮೂವರು ಶಾಲಾ ಮಕ್ಕಳು ಅಸ್ವಸ್ಥ

(ನ್ಯೂಸ್  ಕಡಬ) newskadaba.com ಯಾದಗಿರಿ, ಡಿ. 30. ಮೈ ಮೇಲೆ ಬಿಸಿ ಸಾಂಬಾರ್ ಬಿದ್ದು ಮೂವರು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿಯ ಜಿಲ್ಲೆಯ ಸುರಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೊಮ್ಮನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ನೀಡುವ ಸಂದರ್ಭ  ಬಿಸಿ ಸಾಂಬಾರ್ ಮೈಮೇಲೆ ಬಿದ್ದಿದ್ದು, ತಕ್ಷಣವೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಶಾಲಾ ಸಿಬ್ಬಂದಿಗಳ ನಿರ್ಲಕ್ಷತನದಿಂದ ಈ ಘಟನೆ ನಡೆದಿದೆ ಎಂದು ಪೋಷಕರು

ಬಿಸಿ ಸಾಂಬಾರ್ ಬಿದ್ದು ಮೂವರು ಶಾಲಾ ಮಕ್ಕಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 30. ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಮೃತರನ್ನು ವಂಸತ ರೈ (52) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಡುತ್ತಿದ್ದ ಇವರ ಮೃತದೇಹವು ಇಂದು ಬೆಳಗ್ಗೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.

ವಿಟ್ಲ: ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಹಳೆನೋಟುಗಳ ಚಲಾವಣೆ ➤ ಆರೋಪಿಗಳ ಬಂಧನ

(ನ್ಯೂಸ್  ಕಡಬ) newskadaba.com ಬೆಂಗಳೂರು, ಡಿ. 30. ಹಳೆಯ ನೋಟುಗಳನ್ನು ಅಕ್ರಮವಾಗಿ ಚಲಾವಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಯೋಗಾನಂದ, ವೆಂಕಟ ಹಾಗೂ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 500 ರೂ. ಮುಖಬೆಲೆಯ 88 ಲಕ್ಷ ಮೊತ್ತದ ಹಳೆಯ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಮೊದಲು 40 ಲಕ್ಷ ರೂಗಳ ಚಲಾವಣೆಗೆ ತಂದಿರುವುದಾಗಿ ಹೇಳಿದ್ದು, ತನಿಖೆಯ ವೇಳೆ ಮತ್ತೆ 48 ಲಕ್ಷ ರೂ. ಮೊತ್ತದ ಹಳೆಯ ನೋಟಿನ ಬಗ್ಗೆ ಬಾಯ್ಬಿಟ್ಟಿದ್ದಾರೆ. ಆದರೆ ಈ

ಅಕ್ರಮ ಹಳೆನೋಟುಗಳ ಚಲಾವಣೆ ➤ ಆರೋಪಿಗಳ ಬಂಧನ Read More »

ಕರ್ನಾಟಕ
Scroll to Top