karnataka

ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್…? ➤ ಸಚಿವ ಕೋಟಾ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.07. ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ತ್ವರಿತಗೊಳಿಸುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.   ಈ ಕುರಿತು ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಪ್ರತಿ ತಿಂಗಳು ಉಚಿತ ವಿದ್ಯುತ್  ಒದಗಿಸುವುದು ಸರ್ಕಾರದ ಗುರಿ. ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದ್ದಾರೆ. ಯೋಜನೆಯ ಜಾರಿಗೆ ಎದುರಾಗುವ ಅಡೆತಡೆ ನಿವಾರಿಸಲು ನಿಯಮಗಳನ್ನು ರೂಪಿಸಬೇಕೆಂದು ಅವರು ಸೂಚಿಸಿದರು. […]

ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್…? ➤ ಸಚಿವ ಕೋಟಾ Read More »

ಕರ್ನಾಟಕ

ಜಾಗತಿಕ ಹೂಡಿಕೆದಾರರ ಸಮಾವೇಶದ ಯೋಜನೆಗಳು 5 ವರ್ಷಗಳಲ್ಲಿ 75% ಜಾರಿಗೆ ➤ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.07. ರಾಜ್ಯದಲ್ಲಿ ಕಳೆದ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳನ್ನು ಮುಂದಿನ ಐದು ವರ್ಷಗಳಲ್ಲಿ ಶೆ.75 ರಷ್ಟು ಅನುಷ್ಠಾನ ಮಾಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಭರವಸೆ ನೀಡಿದ್ದಾರೆ. ಅವರು ಮಂಗಳವಾರದಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, ಯೋಜನೆಗಳನ್ನು ಆರಂಭಿಸುವವರಿಗೆ ಮಾತ್ರ ನಾವು ಅನುಮೋದನೆ ನೀಡಿದ್ದು, ಕೇವಲ ಅಂಕಿ ಅಂಶಗಳನ್ನು ತೋರ್ಪಡಿಸಲು ನಾವು ಸಮಾವೇಶಗಳನ್ನು ನಡೆಸಿಲ್ಲ. ಮುಂದಿನ 5

ಜಾಗತಿಕ ಹೂಡಿಕೆದಾರರ ಸಮಾವೇಶದ ಯೋಜನೆಗಳು 5 ವರ್ಷಗಳಲ್ಲಿ 75% ಜಾರಿಗೆ ➤ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ Read More »

ಕರ್ನಾಟಕ

ದತ್ತಪೀಠದಲ್ಲಿ ಇಂದಿನಿಂದ ದತ್ತಜಯಂತಿ ಕಾರ್ಯಕ್ರಮ ➤ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 06. ದತ್ತಪೀಠದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದತ್ತಜಯಂತಿ ನಡೆಯಲಿದ್ದು, ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಹೇರಲಾಗಿದೆ. ದತ್ತಜಯಂತಿ ಪ್ರಯುಕ್ತ ಚಿಕ್ಕಮಗಳೂರಿನ ಎಂಜಿ ರಸ್ತೆ, ಐಜಿ ರಸ್ತೆ, ಬಸವನಹಳ್ಳಿ ರಸ್ತೆಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ವಿವಿಧ ಜಿಲ್ಲೆಗಳಿಂದ ಚಿಕ್ಕಮಗಳೂರಿಗೆ 4500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.   ಮೂರು ದಿನ ನಡೆಯುವ ದತ್ತ ಜಯಂತಿ ಕಾರ್ಯಕ್ರಮದಂದು ಸಂಚಾರ ವ್ಯವಸ್ಥೆಯಲ್ಲಿ ಕೆಲವು ಮಾರ್ಪಡುಗಳನ್ನು ಮಾಡಲಾಗಿದೆ. ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ

ದತ್ತಪೀಠದಲ್ಲಿ ಇಂದಿನಿಂದ ದತ್ತಜಯಂತಿ ಕಾರ್ಯಕ್ರಮ ➤ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ Read More »

ಕರ್ನಾಟಕ
Death, deadbody, Waterfall

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 05. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿ.ಸಿ.ರೋಡ್: ಆಟೋ ರಿಕ್ಷಾ ಪಲ್ಟಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 05. ಆಟೋರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿಸಿರೋಡು ತಲಪಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಆಟೋ ತಲಪಾಡಿಯಲ್ಲಿ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಘಟನೆಯ ವೇಳೆ ಆಟೋದಲ್ಲಿ ಇಬ್ಬರೇ ಇರುವುದಾಗಿ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರ ಗಾಯಗೊಂಡರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಿ.ಸಿ.ರೋಡ್: ಆಟೋ ರಿಕ್ಷಾ ಪಲ್ಟಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಭಾರೀ ಮಳೆ ➤ ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.20. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮುಂದುವರಿಯಲಿದೆ. ಇದರ ಜೊತೆಗೆ ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 5

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಭಾರೀ ಮಳೆ ➤ ಹವಾಮಾನ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 12. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆಗೆ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಬೆನ್ನಲ್ಲೇ ಕೊಣಾಜೆ ಗ್ರಾ.ಪಂ. ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಂಚಲಾಕ್ಷಿ ಅವರು ಮಮತಾ ಶೈನಿ ಡಿಸೋಜಾ ಎಂಬವರಿಗೆ ಮೂರು ಲಕ್ಷ ರೂ.ಗಳ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೊಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಜ. 06ರಂದು ಕೇಸು ದಾಖಲಾಗಿದ್ದು, ಆ ಬಳಿಕ ಒಂಬತ್ತು ಬಾರಿ ವಾದ ವಿವಾದಗಳು ನಡೆದಿದ್ದು, ಇದೀಗ

ಚೆಕ್ ಬೌನ್ಸ್ ಪ್ರಕರಣ ➤ ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 12. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಉರುಳಿಬಿದ್ದು, 22 ಮಂದಿ ಗಾಯಗೊಂಡ ಘಟನೆ ಕೊಲ್ಲೂರುನಲ್ಲಿ ನಡೆದಿದೆ. 22 ಮಂದಿಯ ಪೈಕಿ ಸಂಕ್ರಪ್ಪ, ರೂಪಾ, ಶ್ಯಾಮಲಮ್ಮ, ರತ್ನಮ್ಮ, ವೆಂಕಟರಮಣ ಹಾಗೂ ಚಂದ್ರಕಲಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಾಪು, ಜ. 12. ಅಡಿಕೆ ಸಾಗಾಟದ ಟೆಂಪೋ ವಾಹನವೊಂದು ರಾ.ಹೆ 66ರ ಫ್ಲೈ ಓವರ್ ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಸಿದ್ದಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಟೆಂಪೋದ ಟಯರ್ ಬ್ಲಾಸ್ಟ್ ಆಗಿದ್ದು, ಪರಿಣಾಮ ನಿಯಂತ್ರಣ ತಪ್ಪಿದ ಟೆಂಪೋ ಮಗುಚಿಬಿದ್ದಿದೆ. ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಘಟನೆಯಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಕೆಮಿಕಲ್ ಸೋರಿಕೆಯಾಗಿ ಇಪ್ಪತ್ತು ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರ ಪೈಕಿ 20 ಜನರು ಅಸ್ವಸ್ಥಗೊಂಡಿದ್ದು ಇವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಣಂಬೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.    

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top