karnataka

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ನಿಯಂತ್ರಣದಲ್ಲಿದೆ ➤ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.26: ರಾಜ್ಯದಲ್ಲಿ ಪ್ರಸ್ತುತ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್-19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದಲ್ಲಿ ಡೆಲ್ಟಾ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿದ್ದು, ವೈರಸ್ ಬಗ್ಗೆ ತೀವ್ರ ನಿಗಾ ಇಡುವಂತೆಯೂ […]

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ನಿಯಂತ್ರಣದಲ್ಲಿದೆ ➤ ಸಿಎಂ ಯಡಿಯೂರಪ್ಪ Read More »

ಕರಾವಳಿ

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba,ಈಶ್ವರಮಂಗಲ ಜೂ.24: ಈಶ್ವರಮಂಗಲದ ನೇರೊಲ್ತಡ್ಕ ನಿವಾಸಿ ಶರತ್(20) ಎಂಬುವವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೂ 24 ರ ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ಮನೆಯಾಗಿದ್ದ ಶರತ್ ಅವರನ್ನು ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದಲ್ಲಿದ್ದ ರಬ್ಬರ್ ತೋಟವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ Read More »

ಕರಾವಳಿ

ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!?

(ನ್ಯೂಸ್ ಕಡಬ) newskadaba,ಮಂಗಳೂರು ಜೂ.24: ಪಶ್ಚಿವ ಘಟ್ಟದ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಟ್ಟಕಡೆಯ ಹಳ್ಳಿಯಾದ ಬಾಂಜಾರು ಮಲೆಯಲ್ಲಿ 180ಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕೇಂದ್ರದಿಂದ ಸುಮಾರು 40 ಕಿ. ಮೀ. ದೂರವಿರುವ ಬಾಂಜಾರುಮಲೆಯಲ್ಲಿ ಎರಡೂ ಅಲೆಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಕಾಣಿಸಿಕೊಂಡಿಲ್ಲ.ಊರಿಗೆ ಬೇಕಾದ ಅಗತ್ಯ ಸಾಮಾನುಗಳನ್ನು ಊರಿನ ಇಬ್ಬರು ವಾರದ ಒಂದು ದಿನ ಪೇಟೆಯಿಂದ ತಂದು ಕೊಡುತ್ತಾರೆ. ಊರಿಂದ ಯಾರೂ ಹೊರಗೆ ಹೋಗದೆ, ಊರಿಗೆ ಹೊರಗಿನಿಂದ ಯಾರೂ ಬರದ ಹಾಗೆ ಅಖಿಲಿತ ನಿಯಮ

ದಕ್ಷಿಣ ಕನ್ನಡದ ಈ ಗ್ರಾಮಾದಲ್ಲಿಒಂದೇ ಒಂದು ಕೊರೊನಾ ಪ್ರಕರಣ ವರದಿಯಾಗಿಲ್ಲ..!? Read More »

ಕರಾವಳಿ

ಎಸ್​ಎಸ್​ಎಲ್​ಸಿ ಪರೀಕ್ಷೆ ➤ ಕೋವಿಡ್ ಕರ್ತವ್ಯದಿಂದ ಶಿಕ್ಷಕರಿಗೆ ಬಿಡುಗಡೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24:  ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಾದ ಶಿಕ್ಷಕರು ಕೋವಿಡ್ ಲಸಿಕೆ ಪಡೆಯುವುದು ಮತ್ತು ಪರೀಕ್ಷಾ

ಎಸ್​ಎಸ್​ಎಲ್​ಸಿ ಪರೀಕ್ಷೆ ➤ ಕೋವಿಡ್ ಕರ್ತವ್ಯದಿಂದ ಶಿಕ್ಷಕರಿಗೆ ಬಿಡುಗಡೆ Read More »

ಕರ್ನಾಟಕ

ಬೆಳ್ತಂಗಡಿ: ಪತ್ನಿ ಸಾವನ್ನಪ್ಪಿದ ಕೆಲವೇ ಗಂಟೆಗಳಲ್ಲಿ ಕೊರೊನಾಗೆ ಪತಿಯೂ ಬಲಿ

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.24: ಕೋವಿಡ್ ಮಹಾಮಾರಿಗೆ ತುತ್ತಾಗಿ ಪತ್ನಿ ಕೊನೆಯುಸಿರೆಳೆದ ಕೇವಲ 18 ಗಂಟೆಗಳ ಅಂತರದಲ್ಲೇ ಪತಿಯೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆರಿಯ ಗ್ರಾಮದಲ್ಲಿ‌ ನಡೆದಿದೆ. ನೆರಿಯ ಗ್ರಾಮದ ಪರಂದಾಡಿ‌ ನಿವಾಸಿ ಸಾರಮ್ಮ (58) ಅವರು ಮಂಗಳೂರಿನ‌ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಜೂನ್ 22 ನೇ ಮಂಗಳವಾರ ಮೃತಪಟ್ಟರೆ, ಅವರ ಪತಿ ಇಬ್ರಾಹಿಂ(68) ಅವರು ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಲ್ಲದೆ ಇದೀಗ ದಂಪತಿ ಪುತ್ರ ಅಬ್ದುಲ್ ಖಾದರ್

ಬೆಳ್ತಂಗಡಿ: ಪತ್ನಿ ಸಾವನ್ನಪ್ಪಿದ ಕೆಲವೇ ಗಂಟೆಗಳಲ್ಲಿ ಕೊರೊನಾಗೆ ಪತಿಯೂ ಬಲಿ Read More »

ಕರಾವಳಿ

ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು

(ನ್ಯೂಸ್ ಕಡಬ) newskadaba,ಬಾಗಲಕೋಟೆ ಜೂ.24: ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹಾವನ್ನು ಹಿಡಿದಿದ್ದ ಉರಗ ರಕ್ಷರೊಬ್ಬರು ತಾನು ಹಿಡಿದ ಹಾವಿನಿಂದಲೇ ಕಚ್ಚಿಸಿಕೊಂಡು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಸಮೀಪ ಕಳಸಕೊಪ್ಪ ಗ್ರಾಮದಲ್ಲಿ ನಡೆದಿದೆ.   0 ವರ್ಷ ಪ್ರಾಯದ ಸದಾಶಿವ ನಿಂಗಪ್ಪ ಕರಣಿ ಸಾವನ್ನಪ್ಪಿದ ದುರ್ದೈವಿ. ಬುಧವಾರ ರಾತ್ರಿ ಗ್ರಾಮದಲ್ಲಿ ಹಾವು ಕಾಣಿಸಿಕೊಂಡಿತ್ತು, ನಂತರ ವಿಷಯ ತಿಳಿದ ಸದಾಶಿವ ಕರಣಿ, ಅಲ್ಲಿಗೆ ತೆರಳಿ ಹಾವನ್ನು ಹಿಡಿದಿದ್ದರು. ಹಾವನ್ನು ಹಿಡಿಯುವ ವೇಳೆ ಸದಾಶಿವ ಅವರಿಗೆ ಕಚ್ಚಿತ್ತು. ಬಳಿಕ ಸದಾಶಿವ ಅವರು

ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು Read More »

ಕರಾವಳಿ

ಉಡುಪಿ:ನಿರುದ್ಯೋಗ ಸಮಸ್ಯೆಯಿಂದ ನೊಂದ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba,ಉಡುಪಿ ಜೂ.24: ನಿರುದ್ಯೋಗ ಸಮಸ್ಯೆಯಿಂದ ಮನನೊಂದ ಯುವಕನೊಬ್ಬ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕುಕ್ಕಿಕಟ್ಟೆ- ಇಂದಿರಾನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಇಂದಿರಾನಗರ ನಿವಾಸಿ ಧನಂಜಯ್ ಎಸ್(36 ) ಎಂದು ಗುರುತಿಸಲಾಗಿದೆ. ಲಾಕ್‌ಡೌನ್ ತುರ್ತು ಸಂದರ್ಭದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ:ನಿರುದ್ಯೋಗ ಸಮಸ್ಯೆಯಿಂದ ನೊಂದ ಯುವಕ ಆತ್ಮಹತ್ಯೆ Read More »

ಕರಾವಳಿ

ಮಂಗಳೂರು : ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ಪದವೀಧರ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.24:ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (3೦) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ. ಸಂಜೆ ರುದ್ರಪಾದೆಯ ಮೇಲಿಂದ ಏಕಾಏಕಿ ಸಮುದ್ರಕ್ಕೆ ಜಿಗಿದದ್ದನ್ನ ಸ್ಥಳೀಯರು ಕಂಡಿದ್ದಾರೆ. ಪವನ್

ಮಂಗಳೂರು : ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ಪದವೀಧರ ಯುವಕ ಆತ್ಮಹತ್ಯೆ Read More »

ಕರಾವಳಿ

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: ಮಹಾನಗರ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯೇ ಪಾಲಿಕೆಯ ಮಾಜಿ ಸದಸ್ಯೆಯ ಹತ್ಯೆಯಾಗಿದೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಒಳಗಿದ್ದ ರೇಖಾ ಕದಿರೇಶ್ ಅವರನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿದ್ದಾರೆ. ರಕ್ತಸ್ರಾವವಾಗಿ ಕೆಳಗೆ ಬಿದ್ದ ಅವರನ್ನು ಸ್ಥಳದಲ್ಲಿದ್ದವರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ರೇಖಾ ಅವರು

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ Read More »

ಕ್ರೈಮ್ ನ್ಯೂಸ್

ಬೆಂಗಳೂರಲ್ಲೂ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: 3ನೇ ಅಲೆಗೆ ಕಾರಣವಾಗಬಹುದು ಎಂಬ ಆತಂಕ ಹುಟ್ಟುಹಾಕಿರುವ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ. ಡೆಲ್ಟಾ ಪ್ಲಸ್ ವೈರಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿತ್ತು. ಇದೀಗ ಬೆಂಗಳೂರಿನಲ್ಲಿಯೂ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ದೃಢಪಡಿಸಿದ್ದಾರೆ.  ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಮಂಗಳವಾರ ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಬುಧವಾರ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಕಂಡುಬಂದಿದೆ. ಬೆಂಗಳೂರಿನಲ್ಲಿ ರೋಗಿಯನ್ನು ಪ್ರತ್ಯೇಕಿಸಿ ಚಿಕಿತ್ಸೆ

ಬೆಂಗಳೂರಲ್ಲೂ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ Read More »

ಕರ್ನಾಟಕ
Scroll to Top