karnataka

ಸೈನಿಕ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ರಕ್ಷಣಾ ಸಚಿವಾಲಯದೊಂದಿಗೆ ಸಂಯೋಜಿತವಾಗಿರುವ ನಗರದ ಸೈನಿಕ ಶಾಲೆಯೊಂದಕ್ಕೆ ಬುಧವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತದ ನಂತರ ಶಾಲಾ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಲಾಯಿತು. ಮಧ್ಯಾಹ್ನ 12.30 ರ ಸುಮಾರಿಗೆ ಶಾಲಾ ಆವರಣದಲ್ಲಿ ಸ್ಪೋಟಕ ಇಡಲಾಗಿದೆ ಎಂದು ಶಾಲೆಗೆ ಅನಾಮಧೇಯ ಇಮೇಲ್ ಬಂದಿದೆ. ಇದರಿಂದ ಆತಂಕಕ್ಕೀಡಾದ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ […]

ಸೈನಿಕ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ

ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್ ದಾಖಲು Read More »

ಕರ್ನಾಟಕ

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ರಾಜ್ಯಾದ್ಯಂತ ಹೆಚ್ಚಾಗಿರುವ ಮಾದಕ ವಸ್ತುಗಳ ಹಾವಳಿಯನ್ನು ಮಟ್ಟಹಾಕಲು ರಾಜ್ಯಮಟ್ಟದಲ್ಲಿ ವಿಶೇಷವಾದ ಕಾರ್ಯಪಡೆ ರಚನೆಯ ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕವಸ್ತುಗಳ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯಮಟ್ಟದ ಉನ್ನತಾಧಿಕಾರಿಗಳ ಸಮಿತಿ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ

ಡ್ರಗ್ಸ್ ಹಾವಳಿ ಮಟ್ಟಹಾಕಲು ಟಾಸ್ಕ್ ಫೋರ್ಸ್ ರಚನೆ- ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ-  ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ಪರಿಶಿಷ್ಟ ಜಾತಿ ನಿಂದನೆ, ಮಹಿಳೆಯರನ್ನು ಗುರಿಯಾಗಿಸಿ ಅವಾಚ್ಯ ಶಬ್ದಗಳಿಂದ ಬೈದ ಹಾಗೂ ಗುತ್ತಿಗೆದಾರರಿಗೆ ಲಂಚಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಸೆ.19ಕ್ಕೆ ಕಾಯ್ದಿರಿಸಿದೆ. ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಇಂದು ವಿಚಾರಣೆ ನಡೆಸಿದರು. ವಿಚಾರಣೆ

ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ-  ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್ Read More »

ಕರ್ನಾಟಕ

ನ.20ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ನಿಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇನ್ನೂ ಅಳವಡಿಕೆ ಮಾಡಿಲ್ಲವೇ ಹಾಗಾದರೆ ನಿಮಗಿದೋ ಗುಡ್ ನ್ಯೂಸ್. ಹೈಕೋರ್ಟ್‌ನಿಂದ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವುನ್ನು ನ.20ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲ ಮೋಟಾರು ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (High Security Registration Plate- HSRP)  ಅಳವಡಿಕೆ ಮಾಡಿಸಿಕೊಳ್ಳಲು ನಾಲ್ಕು ಬಾರಿ ಗಡುವು ನೀಡಿತ್ತು. ಕೊನೆಯ ಬಾರಿ ಸೆ.14ರಂದು ಈ ನಂಬರ್

ನ.20ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ Read More »

ಕರ್ನಾಟಕ

ರಾಜ್ಯದಲ್ಲಿ ಡ್ರಗ್ಸ್ ದಂಧೆ:  ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ‌ ಮಾಡಿದ್ದೇವೆ.ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ‌ ಎಂದರು. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ

ರಾಜ್ಯದಲ್ಲಿ ಡ್ರಗ್ಸ್ ದಂಧೆ:  ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಯಾಂಡಲ್ ವುಡ್ ನಿರ್ಮಾಪಕ ಕೋಡಳ್ಳಿ ಶಿವರಾಂ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದ ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ವಿಧಿವಶರಾಗಿದ್ದಾರೆ. ಕೋಡಳ್ಳಿ ಶಿವರಾಮ್ ಅವರು ಕನ್ನಡದ ಚಲನಚಿತ್ರಗಳಾದ ಗ್ರಹಣ, ಬೆಳ್ಳಿ ಬೆಳಕು ಸೇರಿದಂತೆ ಇತರೆ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದರು.

ಸ್ಯಾಂಡಲ್ ವುಡ್ ನಿರ್ಮಾಪಕ ಕೋಡಳ್ಳಿ ಶಿವರಾಂ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯ ಪ್ರಿಯರಿಗೆ ಮತ್ತೆ ಶಾಕ್ – ಅ.1ರಿಂದ ಪರಿಷ್ಕೃತ ದರ ಜಾರಿಗೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದ ಸರ್ಕಾರ ಈಗ ಮತ್ತೊಮ್ಮೆ ಶಾಕ್ ಕೊಡಲು ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಏರಿಕೆ ಮಾಡಿ ಸರ್ಕಾರ ಶಾಕ್ ನೀಡಿತ್ತು. ಇದೀಗ ಮತ್ತೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಇನ್ನೂ ಸರ್ಕಾರದ

ಮದ್ಯ ಪ್ರಿಯರಿಗೆ ಮತ್ತೆ ಶಾಕ್ – ಅ.1ರಿಂದ ಪರಿಷ್ಕೃತ ದರ ಜಾರಿಗೆ ಸಾಧ್ಯತೆ..! Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾವೇರಿ, ಸೆ. 18. ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮುಂಜಾನೆ ನಡೆದಿದೆ. ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಸರ್ವೀಸ್ ರಸ್ತೆಗೆ ಉರುಳಿಬಿದ್ದಿದೆ. ಇದರಿಂದ 15ಕ್ಕೂ ಅಧಿಕ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.  

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 18. ಅಡುಗೆ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿದ್ದ ಮದ್ಯವನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ನಿಟ್ರೆ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕು ನಿಟ್ರೆ ಗ್ರಾಮದ ಹಲವೆಡೆ ಅಬ್ಕಾರಿ ಅಧಿಕಾರಿಗಳು ಸಾಮೂಹಿಕ ದಾಳಿ ನಡೆಸಿದಾಗ ಗ್ರಾಮದ ಮಂಜು ಎಂಬ ಮನೆಯಲ್ಲಿ ಅಡುಗೆ ಕೋಣೆಯಲ್ಲಿ ನಿರ್ಮಿಸಿಕೊಂಡಿದ್ದ ರಹಸ್ಯ ಗೂಡಿನಲ್ಲಿ ಮದ್ಯ ಹಾಗೂ ಬಿಯರ್ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಮಂಜುರವರ ಮನೆಯ ಅಡುಗೆ ಮನೆಯ ರಹಸ್ಯಗೂಡಿನಲ್ಲಿ 8 ಲೀಟರ್

ಅಕ್ರಮ ಮದ್ಯ ಶೇಖರಣೆ: ಓರ್ವ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top